ಹುಣಸೆಹಣ್ಣು ಸಿಪ್ಪೆ ತೆಗೆಯುವ ಯಂತ್ರ

Team Udayavani, Dec 9, 2019, 6:00 AM IST

hunase-hannu

ಬಯಲುಸೀಮೆ ಜಿಲ್ಲೆಗಳಲ್ಲಿ ಹುಣಸೆ ಕೃಷಿ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ರೈತರು, ಹೊಲಗಳ ಬಳಿ ಹುಣಸೆಮರಗಳನ್ನು ಬೆಳೆದಿರುತ್ತಾರೆ. ಮನೆಗಳ ಆವರಣ ದೊಡ್ಡದಾಗಿದ್ದರೆ ಅಲ್ಲಿಯೂ ಒಂದೆರಡು ಮರಗಳಿರುತ್ತವೆ. ಹುಣಸೆ ತೋಪುಗಳ ನಿರ್ವಹಣೆ ಮಾಡುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತಾರೆ. ಇದು ಕಷ್ಟಕಾಲದಲ್ಲಿಯೂ ಆರ್ಥಿಕ ನೆರವಿಗೆ ಬರುವ ಬೆಳೆ ಎಂಬ ಭಾವನೆ ಇದೆ. ಸಾಂಪ್ರದಾಯಿಕ ರೀತಿಯಲ್ಲಿ ಹುಣಸೆಹಣ್ಣಿನ ಸಿಪ್ಪೆ ತೆಗೆಯುವ ಕಾರ್ಯ ಬಹುದೊಡ್ಡ ಪ್ರಕ್ರಿಯೆ. ಮರಗಳ ಸಂಖ್ಯೆ ಹೆಚ್ಚಿದ್ದಷ್ಟೂ ಸಿಪ್ಪೆ ಬಿಡಿಸುವ ಕೈಗಳ ಸಂಖ್ಯೆಯೂ ಹೆಚ್ಚು.

ಆದರೆ ಇತ್ತೀಚಿನ ವರ್ಷಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಇದೆ. ಇದರಿಂದ ತ್ವರಿತವಾಗಿ ಸಿಪ್ಪೆ ಬಿಡಿಸಿ, ಅಗತ್ಯ ಪ್ರಕ್ರಿಯೆಗಳನ್ನು ಪೂರೈಸಿ ಸಕಾಲದಲ್ಲಿ ಮಾರುಕಟ್ಟೆಗೆ ಕಳಿಸುವುದು ಕಷ್ಟವಾಗುತ್ತದೆ. ಈ ವಿಷಯವನ್ನು ಗಮನಿಸಿದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಇಂಜಿನಿಯರಿಂಗ್‌ ವಿಭಾಗದ ತಜ್ಞರು ಎರಡು ರೀತಿಯ ಹುಣಸೆಹಣ್ಣು ಸಿಪ್ಪೆ ತೆಗೆಯುವ ಯಂತ್ರಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಇದರಲ್ಲಿ ಒಂದು ಕನಿಷ್ಠ ಸಾಮರ್ಥ್ಯದ್ದು, ಇನ್ನೊಂದು ಗರಿಷ್ಠ ಸಾಮರ್ಥ್ಯದ ಯಂತ್ರ. ಮೊದಲನೆಯದರಲ್ಲಿ 2 ಹೆಚ್‌.ಪಿ. ಸಾಮರ್ಥ್ಯದ ಮೋಟಾರ್‌ ಅಳವಡಿಸಲಾಗಿದೆ.

ಇದರ ಮುಖಾಂತರ, ಒಂದು ತಾಸಿಗೆ 600 ಕೆ.ಜಿ. ಹುಣಸೆ ಸಿಪ್ಪೆ, 45 ಕೆ.ಜಿ. ಹುಣಸೆಬೀಜಗಳನ್ನು ಪ್ರತ್ಯೇಕಿಸುತ್ತದೆ. ಮೋಟಾರ್‌ ರಹಿತ ಯಂತ್ರದ ಅಂದಾಜು ಬೆಲೆ 40,000 ರೂ. ಇದನ್ನು ಸಿಂಗಲ್‌ ಫೇಸ್‌ ವಿದ್ಯುತ್‌ ಬಳಸಿಯೂ ಚಾಲನೆ ಮಾಡಬಹುದು. ಎರಡನೆಯ ಯಂತ್ರದ ಮುಖಾಂತರ ಒಂದು ತಾಸಿಗೆ 1,000 ಕೆ.ಜಿ. ಹುಣಸೆ ಸಿಪ್ಪೆ ಬಿಡಿಸುತ್ತದೆ. ಇದರಲ್ಲಿ 5 ಹೆಚ್‌.ಪಿ. ಮೋಟಾರ್‌ ಅಳವಡಿಸಲಾಗಿದೆ. ಇದನ್ನು ತ್ರೀ ಫೇಸ್‌ ವಿದ್ಯುತ್‌ ಬಳಸಿಯೇ ಚಾಲನೆ ಮಾಡಬೇಕು. ಇದು ಶೇಕಡ 90ರಷ್ಟು ಕಾರ್ಯಕ್ಷಮತೆ ಹೊಂದಿದೆ. ಇದರ ಬೆಲೆ ಒಂದು ಲಕ್ಷ ರೂಪಾಯಿ.

ಹೆಚ್ಚಿನ ಮಾಹಿತಿಗೆ: 080-23545640

* ಕುಮಾರ ರೈತ

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.