ಒಂದು ಫಿಶ್‌ ಫ್ರೈ ಪಾಠ


Team Udayavani, Mar 12, 2019, 12:30 AM IST

m-4.jpg

ಹಸಿದ ಹೊಟ್ಟೆ, ಖಾಲಿ ಜೇಬು ಬದುಕಿನಲ್ಲಿ ಅನೇಕ ಪಾಠಗಳನ್ನು ಕಲಿಸುತ್ತದೆ ಎಂಬ ಮಾತಿದೆ. ಆದರೆ, ಅಂದು ನನ್ನ ಹೊಟ್ಟೆಯೂ ಹಸಿದಿರಲಿಲ್ಲ. ಜೇಬೂ ಖಾಲಿಯೂ ಆಗಿರಲಿಲ್ಲ. ಆದರೂ ಒಂದು ತುಂಡು ಫಿಶ್‌ ಫ್ರೈ, ಶಿಸ್ತು ಎನ್ನುವ ಬಹುದೊಡ್ಡ ಪಾಠ ಕಲಿಸಿತ್ತು…

ಕೆಲವೊಮ್ಮೆ ಚಿಕ್ಕ ಚಿಕ್ಕ ವಿಷಯಗಳು ಕೂಡ ಬದುಕಿನಲ್ಲಿ ಅತಿ ದೊಡ್ಡ ಪಾಠ ಕಲಿಸುತ್ತವೆ. ಅದರಲ್ಲೂ ಈ ವಿದ್ಯಾರ್ಥಿ ಜೀವನವೆಂದರೆ ಕೇಳಬೇಕಾ? ಶಿಲ್ಪಿ ಕೆತ್ತುತ್ತಿರುವ ಕಲ್ಲಿನಂತೆ ವಿದ್ಯಾರ್ಥಿಗಳು. ಕಲ್ಲು ಒಂಚೂರು ಹೆಚ್ಚು ಕಮ್ಮಿಯಾದರೂ ಮೂರ್ತಿ ಭಗ್ನವಾಗುವುದು ಗ್ಯಾರೆಂಟಿ. ನಾವು ಯಾವಾಗ, ಯಾರೊಂದಿಗೆ, ಯಾವ ರೀತಿ ನಡೆದುಕೊಳ್ಳಬೇಕು ಎಂದು ನನಗೆ ನಡವಳಿಕೆಯ ಪಾಠ ಕಲಿಸಿದ ಉಳಿಪೆಟ್ಟಿನ ಕಥೆ ಇದು. ಒಂದೇ ಒಂದು ಫಿಶ್‌ ಫ್ರೈ ತುಂಡು ನನ್ನ ಯೋಚನೆಯ ದಿಕ್ಕನ್ನೇ ಬದಲಿಸುತ್ತೆ ಎಂದು ಯಾವತ್ತೂ ಎಣಿಸಿರಲಿಲ್ಲ. 

ಅಂದ ಹಾಗೆ, ಈ ಇಡೀ ಸಿನಿಮಾ ಚಿತ್ರೀಕರಣಗೊಂಡಿದ್ದು ನಮ್ಮ ಬಿ.ಎಡ್‌. ಕ್ಲಾಸ್‌ರೂಮ್‌ನ ಸಿಸಿ ಕ್ಯಾಮೆರಾದಲ್ಲಿ! ನಾನು ಕಾಲೇಜಿಗೆ ಕಾಲಿಟ್ಟು ಸರಿಯಾಗಿ ಒಂದು ವಾರವೂ ಕಳೆದಿರಲಿಲ್ಲ. ಆಗಲೇ ನನ್ನಿಂದ ಬಹುದೊಡ್ಡ ರಾದ್ಧಾಂತವೊಂದು ನನಗರಿವಿಲ್ಲದೇ ಘಟಿಸಿ ಹೋಗಿತ್ತು. ಒಂದು ಮಧ್ಯಾಹ್ನದ ಊಟದ ಬ್ರೇಕ್‌ನ ಸಮಯದಲ್ಲಿ ಹಾಸ್ಟೆಲ್‌ನಲ್ಲಿ ಬೇಗ ಊಟ ಮುಗಿಸಿಕೊಂಡು ಕಾಲೇಜಿಗೆ ಬಂದೆ. ನನ್ನ ಸೀನಿಯರ್‌ ಗುಂಪೊಂದು ಅವರ ಕ್ಲಾಸ್‌ರೂಮ್‌ನಲ್ಲಿ ಕುಳಿತು ಊಟ ಮಾಡುತ್ತಿದ್ದದನ್ನು ಕಂಡು ಒಳಗೆ ಹೋದೆ. ಪ್ರೀತಿಯಿಂದ ಮಾತನಾಡಿಸಿದ ಅವರು, ಊಟ ಮಾಡುವಂತೆ ಹೇಳಿದರು. ಸೀನಿಯರ್‌ ಒಬ್ಬರು ತಮ್ಮ ಮನೆಯಿಂದ ತಂದಿದ್ದ ಫಿಶ್‌ ಫ್ರೈ ಕೊಡಲು ಮುಂದಾದರು. ಆಗ ತಾನೇ ಊಟ ಮುಗಿಸಿ ಬಂದಿದ್ದ ನಾನು ಸಹಜವಾಗಿಯೇ “ಬೇಡ’ ಎಂದೆ. ಆದರೆ, ಅವರು ಜೂನಿಯರ್‌ ಎನ್ನುವ ಆತ್ಮೀಯತೆಯಿಂದ ಒಂದು ಸಣ್ಣ ಫ್ರೈ ಪೀಸನ್ನು ತಿನ್ನಿಸಿದರು. ಇಷ್ಟೇ ಸಾಕಾಗಿತ್ತು ನೋಡಿ ನನ್ನ ಗ್ರಹಚಾರ ಕೆಡಲು. 

ನಮ್ಮ ಪ್ರಿನ್ಸಿಪಾಲ್‌ ಈ ಘಟನೆಯಿಂದ ಕೆಂಡಾಮಂಡಲರಾಗಿದ್ದರು. ಬಿಗ್‌ಬಾಸ್‌ ಮನೆಯ ಹಾಗೆ ಕ್ಲಾಸ್‌ರೂಮಿನ ಸಿಸಿ ಕ್ಯಾಮೆರಾದಲ್ಲಿ ಕೈತುತ್ತು ತಿನ್ನಿಸಿದ ದೃಶ್ಯವನ್ನು ನೋಡಿ, ಮರುದಿನವೇ ನಮ್ಮನ್ನೆಲ್ಲ ಕನ್ಫೆಷನ್‌ ರೂಮ್‌ಗೆ ಕರೆಸಿಯೇಬಿಟ್ಟರು. ನಮ್ಮೆಲ್ಲ ಲೆಕ್ಚರರ್‌, ಆಫೀಸ್‌ ಬ್ಯಾರಿಯರ್‌ನ ಸಮ್ಮುಖದಲ್ಲಿಯೇ ನಡೆಯಿತು, ಮಹಾಮಂಗಳಾರತಿ ಕಾರ್ಯಕ್ರಮ. ಅರೆ! ಕೈತುತ್ತು ತಿನ್ನಿಸಿದ್ದರಲ್ಲೇನಿದೆ ತಪ್ಪು ಎಂದು ನಿಮಗೆ ಅನಿಸುತ್ತಿರಬಹುದು. ನನಗೂ ಕೂಡ, ಇದರಲ್ಲೇನಿದೆ ಅಂಥ ಅಪರಾಧ. ನಮ್ಮದು 21ನೇ ಶತಮಾನದ 5ಜಿ ಸ್ಪೀಡ್‌ನ‌ಲ್ಲಿ ಓಡುತ್ತಿರುವ ಬದುಕು. ಹೀಗಿರುವಾಗ ಜಸ್ಟ್ ಒಂದು ಕೈತುತ್ತು ತಿಂದಿದ್ದು ತಪ್ಪಾ ಎಂದು ಅನಿಸಿತ್ತು. ಆದರೆ, ನಮ್ಮ ಪ್ರಿನ್ಸಿಪಾಲರ ದೃಷ್ಟಿಕೋನ ಹಾಗೂ ಅವರ ನಿಲುವು ಬೇರೆಯೇ ಆಗಿತ್ತು. ಆಧುನಿಕತೆಯ ಭರಾಟೆಯಲ್ಲಿ ಇಂಥ ವರ್ತನೆ ಅವರಿಗೆ ಕಿಂಚಿತ್ತೂ ಹಿಡಿಸಿರಲಿಲ್ಲ. “ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ’ ಎಂದು ಪ್ರಾರಂಭದಲ್ಲಿಯೇ ತಪ್ಪನ್ನು ನಮ್ಮ ಅರಿವಿಗೆ ತಂದು, ಬುದ್ಧಿ ಹೇಳಿ ವಾರ್ನ್ ಮಾಡಿದ್ದರು. ರುಚಿ ರುಚಿಯಾದ ಮೀನು ಚಪ್ಪರಿಸಿದ್ದ ನನ್ನ ಪರಿಸ್ಥಿತಿ, ಅಂದು ಕಾದ ಬಾಣಲೆಗೆ ಹಾಕಿದ ಮೀನಿನಂತಾಗಿದ್ದಂತೂ ಸತ್ಯ!

ಅದಾದ ಕೆಲ ದಿನಗಳವರೆಗೆ ನಾನು ಮಾಡಿದ್ದು ತಪ್ಪೇ ಅಲ್ಲ ಎಂದು ಒಳಗೊಳಗೇ ಪ್ರತಿಭಟಿಸಿದೆ. ಆದರೆ, ದಿನಗಳೆದಂತೆ ನಮ್ಮ ಪ್ರಿನ್ಸಿಪಾಲರ ಮಾತು ಅರ್ಥವಾಗತೊಡಗಿತು. ನಾನಿಂದು ಬದಲಾದ ಆಧುನಿಕ ಸಮಾಜದಲ್ಲಿ “ಐ ಡೋಂಟ್‌ ಕೇರ್‌’ ಎನ್ನುವ ವ್ಯಕ್ತಿತ್ವದೊಂದಿಗೆ ಬದುಕುತ್ತಿದ್ದೇನೆ ಎಂದು ಬೀಗಬಹುದು. ಆದರೆ, ಸುಸಂಸ್ಕೃತ ಸಮಾಜದಲ್ಲಿ ಬದುಕುತ್ತಿದ್ದೇನೆ ಎಂಬ ಕನಿಷ್ಠ ಪ್ರಜ್ಞೆಯನ್ನು ಮರೆಯಬಾರದು. ಭವಿಷ್ಯದಲ್ಲಿ ಶಿಕ್ಷಕರಾಗುವ ಹಾದಿಯಲ್ಲಿರುವ ನಾವು ಇಂಥ ಸೂಕ್ಷ್ಮಗಳನ್ನು ಅಗತ್ಯವಾಗಿ ಅರಿತಿರಬೇಕು. ಕ್ಲಾಸ್‌ರೂಮಿನಲ್ಲಿ ಕೈತುತ್ತು ತಿಂದಿದ್ದು, ತಿನ್ನಿಸಿದ್ದು ನಮ್ಮ ಪಾಲಿಗೆ ತಪ್ಪಲ್ಲದಿರಬಹುದು. ಆದರೆ, ಸಮಾಜ ನೋಡುವ ರೀತಿಯೇ ಬೇರೆ. ಅವರಲ್ಲಿ ಶಿಸ್ತು ಮೂಡಿಸುವ, ತಪ್ಪನ್ನು ತಿದ್ದಿ ಸರಿದಾರಿಗೆ ತರಬೇಕಿರುವ ನಾವೇ ಹೀಗೆ ಅಶಿಸ್ತಿನಿಂದ ವರ್ತಿಸಿದರೆ ಹೇಗೆ ಎನ್ನುವುದು ಪ್ರಾಂಶುಪಾಲರ ಕಾಳಜಿಯಾಗಿತ್ತು. 

ಅದೇನೇ ಇರಲಿ ಹಸಿದ ಹೊಟ್ಟೆ, ಖಾಲಿ ಜೇಬು ಬದುಕಿನಲ್ಲಿ ಅನೇಕ ಪಾಠಗಳನ್ನು ಕಲಿಸುತ್ತದೆ ಎಂಬ ಮಾತಿದೆ. ಆದರೆ, ಅಂದು ನನ್ನ ಹೊಟ್ಟೆಯೂ ಹಸಿದಿರಲಿಲ್ಲ. ಜೇಬೂ ಖಾಲಿಯೂ ಆಗಿರಲಿಲ್ಲ. ಆದರೂ ಒಂದು ತುಂಡು ಫಿಶ್‌ ಫ್ರೈ, ಶಿಸ್ತು ಎನ್ನುವ ಬಹುದೊಡ್ಡ ಪಾಠ ಕಲಿಸಿತ್ತು.

ಮಹೇಶ್‌ ಎಂ.ಸಿ., ಉಜಿರೆ

ಟಾಪ್ ನ್ಯೂಸ್

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

incident held at sagara

ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

ಹೊಸ ಸೇರ್ಪಡೆ

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ – ಅಮಿತ್ ಶಾ

ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ  ಉತ್ತಮ ಪ್ರತಿಕ್ರಿಯೆ

ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಯೋಜನೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.