ನಿಷ್ಠೆ ಅಂದರೆ ಇದು !

Team Udayavani, Nov 12, 2019, 5:45 AM IST

ಅವರ ಜೊತೆಗಾರ ರಾಜಕಾರಣಿಗಳ ಬಳಿ ಎರಡು ಮೂರು ಕಾರುಗಳಿದ್ದವು. ಆದರೆ ಗೃಹಸಚಿವ ಅನ್ನಿಸಿಕೊಂಡ ನಂತರವೂ ಇವರು ಸ್ವಂತದ ಕಾರು ಖರೀದಿಸಲಿಲ್ಲ. ಆಗ ಕೂಡ ಮಕ್ಕಳನ್ನು ಮಧ್ಯಮ ವರ್ಗದ ಮಕ್ಕಳು ಹೋಗುತ್ತಿದ್ದ ಕುದುರೆ ಬಂಡಿಯಲ್ಲೇ ಶಾಲೆಗೆ ಕಳಿಸುತ್ತಿದ್ದರು.

ಕೇಂದ್ರ ಸಚಿವ ಎಂದು ಕರೆಸಿಕೊಂಡ ಮೇಲಾದರೂ ಓಡಾಡಲು ಒಂದು ಕಾರು ಬೇಡವೆ ಎಂಬುದು ಹೆಂಡತಿ ಹಾಗೂ ಮಕ್ಕಳ ವಾದವಾಗಿತ್ತು. ಈಗ ಓಡಾಡಲು ಸರಕಾರದ ಕಾರು ಇದೆ. ಇನ್ನೊಂದು ಕಾರಿನ ಅಗತ್ಯವಾದರೂ ಏನು ಎಂದು ಪ್ರಶ್ನಿಸಿ ಎಲ್ಲರ ಬಾಯಿ ಮುಚ್ಚಿಸಿದ್ದರು. ಆದರೆ, ವರ್ಷಗಳ ನಂತರ ಪ್ರಧಾನಿ ಪಟ್ಟಕ್ಕೇ ಬಂದು ಕೂತರಲ್ಲ? ಆಗ ಅವರ ಮಕ್ಕಳೆಲ್ಲ ಒಟ್ಟಾಗಿ ಹೋಗಿ ಸ್ವಂತ ಕಾರು ತಗೋಬೇಕು ಎಂಬ ಆಸೆಯನ್ನು ಈಗಲಾದರೂ ಈಡೇರಿಸಿ’ ಎಂದರು.

ಅದಕ್ಕೆ ಒಪ್ಪಿದ ಪ್ರಧಾನಿಗಳು, ಅವತ್ತೇ ಸಂಜೆ ತಮ್ಮ ಆಪ್ತ ಕಾರ್ಯದರ್ಶಿಯನ್ನು ಕರೆದು ತಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಎಷ್ಟಿದೆ ಹಾಗೂ ಒಂದು ಹೊಸ ಕಾರಿನ ಬೆಲೆ ಎಷ್ಟಾಗುತ್ತದೆ ಎಂದು ವಿಚಾರಿಸಿ ತಿಳಿಸುವಂತೆ ಆದೇಶಿಸಿದರು. ಮರುದಿನ ಬೆಳಗ್ಗೆ ಸಂಕೋಚದಿಂದಲೇ ಅವರ ಮುಂದೆ ನಿಂತ ಆಪ್ತಕಾರ್ಯದರ್ಶಿ ಸಾರ್‌, ನಿಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ನಾಲ್ಕು ಸಾವಿರ ರೂ.ಗಳಿದೆ ಹಾಗೂ ಹೊಸ ಕಾರಿನ ಬೆಲೆ ಹನ್ನೆರಡು ಸಾವಿರ ರೂ. ಆಗುತ್ತದೆ’ ಎಂದರು!

ಇದನ್ನು ತಿಳಿದ ಅವರ ಮಕ್ಕಳಿಗೆಲ್ಲ ಶಾಕ್‌ ಆಯಿತು. ಆದರೆ, ಪ್ರಧಾನಿಗಳಿಗೆ ಅದೇನೂ ದೊಡ್ಡ ಸಂಗತಿಯಲ್ಲ ಎಂಬಂತೆ ತಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ವಿವರ ಪಡೆದ ನಂತರವೂ ಹಸನ್ಮುಖೀಯಾಗಿಯೇ ಇದ್ದರು. ನಂತರ ಸರಕಾರದಿಂದ ಸಾಲ ಪಡೆದು ಹೊಸ ಕಾರು ಖರೀದಿಸಿ, ಮಕ್ಕಳ ಬಯಕೆಯನ್ನು ಪೂರೈಸಿದರು. ಅವರ ಹೆಸರು ಲಾಲ್‌ ಬಹುದ್ದೂರ್‌ ಶಾಸ್ತ್ರಿ!


ಈ ವಿಭಾಗದಿಂದ ಇನ್ನಷ್ಟು

  • ಗಣಿತ ಸಮ್ಮೇಳನಗಳಲ್ಲಿ ಗಂಭೀರವಾದ ಉಪನ್ಯಾಸವಾದ ಮೇಲೆ ಪ್ರಶ್ನೋತ್ತರ ನಡೆಯುವುದು ರೂಢಿ. ಉಪನ್ಯಾಸದ ತಲೆಬುಡ ಅರ್ಥವಾಗದವರು ಕೂಡ ಆಗ ತಮಗೆಲ್ಲ ಅರ್ಥವಾಗಿದೆ ಎಂದು...

  • ನನ್ನ ಮೊಮ್ಮಗನನ್ನು ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನ ಹಾಸ್ಟೆಲ್‌ಗೆ ಸೇರಿಸುವ ಸಲುವಾಗಿ ಬಾಡಿಗೆ ಕಾರೊಂದರಲ್ಲಿ ಬೆಳಗಿನ ಜಾವ ಐದು ಘಂಟೆಗೆ ಚಿತ್ರದುರ್ಗದಿಂದ...

  • "ನಮ್ಮ ಕುಟುಂಬ' ಅಂತ ಒಂದು ಗ್ರೂಪ್‌ ರಚನೆ ಮಾಡಿದ್ದು ಚಿಕ್ಕಪ್ಪನ ಮಕ್ಕಳು. ಇದರ ಉದ್ದೇಶ, ಊರಲ್ಲಿದ್ದು, ನಗರಗಳಲ್ಲಿ ಚೆಲ್ಲಾಪಿಲ್ಲಿಯಾಗಿದ್ದ ಅಷ್ಟೂ ಸಂಬಂಧಿಕರನ್ನು...

  • ಬಸ್‌ಸ್ಟಾಪ್‌ ನಲ್ಲಿ ಇಳಿದೆ. ಹಸಿವಾಗಿತ್ತು. ನನ್ನ ಬಳಿ ಹೆಚ್ಚು ಹಣವಿರಲಿಲ್ಲ. ಅದೊಂದು ಚಿಕ್ಕ ಅಂಗಡಿ ಬಳಿ ಹೋದೆ. ಪೇಪರ್‌ ಮತ್ತು ಎರಡು ಬಾಳೆ ಹಣ್ಣು ಕೇಳಿ, ನನ್ನ...

  • ಮಳೆ ಎಂದರೆ ಮನುಷ್ಯರಿಗಷ್ಟೇ ಅಲ್ಲ, ಪರಿಸರದ ಜೀವ ಸಂಕುಲಗಳಿಗೆಲ್ಲ ಸಂಭ್ರಮ. ಕಪ್ಪೆಗಳು ನೀರಿನಲ್ಲಿ ಕುಳಿತು ಗಾಳಿಯೊಂದಿಗೆ ರಾಗ ಭಾವವನ್ನು ತೇಲಿ ಬಿಡುತ್ತವೆ....

ಹೊಸ ಸೇರ್ಪಡೆ