Udayavni Special

ಈಗ ನಿಮ್ಮ ಟೈಮ್‌ ಶುರು


Team Udayavani, Jan 14, 2020, 6:00 AM IST

19

ಪರೀಕ್ಷೆ ಸಂದರ್ಭದಲ್ಲಿ ಸಮಯವೇ ದೇವರು. ಅದನ್ನು ಒಲಿಸಿಕೊಳ್ಳುವುದೂ ಕಲೆ. ಕಷ್ಟದ ಸಬೆjಕ್ಟ್ಗಳು, ಸುಲಭದ ವಿಷಯಗಳಿಗೆ ಇದನ್ನು ಹಂಚುವುದು ನಿಜಕ್ಕೂ ಪ್ರತಿಭೆಯೇ. ಇದನ್ನು ಪೂರೈಸಿದರೆ ಪರೀಕ್ಷೆಯನ್ನು ಅರ್ಧ ಗೆದ್ದಂತೆ. ಹೀಗಾಗಿ, ಸಮಯ ಎಂಬ ದೇವರನ್ನು ಒಲಿಸಿಕೊಳ್ಳುವ ಬಗೆ ಇಲ್ಲಿದೆ.

ವಿನ್ನರ್ ಡೋಂಟ್‌ ಡು ಡಿಫ‌ರೆಂಟ್‌ ಥಿಂಗ್ಸ್‌, ದೇ ಡು ದ ಥಿಂಗ್ಸ್‌ ಡಿಫ‌ರೆಂಟ್ಲೀ- ಅಂತಾರೆ ಮ್ಯಾನೇಜಮೆಂಟ್ ಗುರು ಶಿವ ಖೇರಾ. ಗೆಲ್ಲುವವರು ಆ ವಿಧಾನ ಈ ವಿಧಾನ ಅಂತ ಸಮಯಹರಣ ಮಾಡುವುದಿಲ್ಲವಂತೆ, ಅವರು ಮಾಡುವುದನ್ನೇ ಉಳಿದವರಿಗಿಂತ ವಿಭಿನ್ನವಾಗಿ ಮಾಡುತ್ತಾರಂತೆ. ಪರೀಕ್ಷೆಗೆ ಸಿದ್ಧವಾಗುವವರೂ ಈ ಮಾತನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೀಗೆ ಓದಿದರೆ ಸರಿಯೋ, ಹಾಗೆ ಓದಿದರೆ ಸರಿಯೋ ಎಂದು ಅಳೆದು ಸುರಿಯುವುದರಲ್ಲೇ ಸಮಯ ಕಳೆಯುವುದು ಜಾಣತನವಲ್ಲ. ಪರೀಕ್ಷಾ ತಯಾರಿಯಲ್ಲಿ ತೊಡಗಿರುವವರಿಗೆ ಸಮಯ ಬಹಳ ಮುಖ್ಯ; ಪರೀಕ್ಷೆ ಸಮೀಪಿಸಿದಾಗಲಂತೂ ಒಂದೊಂದು ನಿಮಿಷವೂ ಅಮೂಲ್ಯ.

ಟೈಂಟೇಬಲ್‌ ಇರಲಿ
ಹೀಗಾಗಿ ಯಾವ ಸಬ್ಜೆಕ್ಟನ್ನು ಎಷ್ಟೆಷ್ಟು ಹೊತ್ತು ಓದಬೇಕು, ಹೇಗೆ ಪ್ಲಾನ್‌ ಮಾಡಿಕೊಳ್ಳಬೇಕು ಎಂದು ಅರ್ಥ ಮಾಡಿಕೊಳ್ಳದೇ ಹೋದರೆ ಸಂಕಷ್ಟ ಕಟ್ಟಿಟ್ಟ ಬುತ್ತಿ. ಎಲ್ಲರಿಗೂ ಎಲ್ಲ ಸಬೆjಕೂr ಒಂದೇ ಥರ ಇರುವುದಿಲ್ಲ. ಕೆಲವರಿಗೆ ವಿಜ್ಞಾನ ಕಷ್ಟ, ಇನ್ನು ಕೆಲವರಿಗೆ ಗಣಿತ ಕಷ್ಟ. ಹೀಗಾಗಿ ಎಲ್ಲರಿಗೂ ಸರಿ ಬರುವಂತಹ ಒಂದು ಕಾಮನ್‌ ವೇಳಾಪಟ್ಟಿ ಹಾಕಿಕೊಳ್ಳಲಾಗದು. ಒಬ್ಬೊಬ್ಬರೂ ತಮ್ಮ ಪರಿಸ್ಥಿತಿಯನ್ನು ಗಮನಿಸಿಕೊಂಡು ಅದಕ್ಕೆ ತಕ್ಕುದಾದ ವೇಳಾಪಟ್ಟಿ ಮಾಡಿಕೊಳ್ಳಬೇಕು. ಅಂತೂ ಟೈಮ್‌ಟೇಬಲ್‌ ಹಾಕಿಕೊಳ್ಳದೆ ಓದುವುದೆಂದರೆ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗೆಯೇ ಸರಿ. ಎರಡು ರೀತಿಯ ವೇಳಾಪಟ್ಟಿ ಮಾಡಿಕೊಳ್ಳಬಹುದು. ಒಂದು ತರಗತಿಗಳು ನಡೆಯುತ್ತಿರುವಾಗ ಓದಿಕೊಳ್ಳುವುದಕ್ಕೆ; ಇನ್ನೊಂದು ಪರೀಕ್ಷೆಗಾಗಿಯೇ ಕೊಡುವ ರೀಡಿಂಗ್‌ ಹಾಲಿಡೇಸ್‌ನಲ್ಲಿ ಅಥವಾ ವಾರಾಂತ್ಯದಲ್ಲಿ ಓದಿಕೊಳ್ಳುವುದಕ್ಕೆ. ತರಗತಿಗಳಿನ್ನೂ ನಡೆಯುತ್ತಿರುವಾಗ ಓದುವುದಕ್ಕೆ ತಮ್ಮತಮ್ಮ ಶಾಲಾ/ಕಾಲೇಜು ಅವಧಿಯನ್ನು ಗಮನಿಸಿಕೊಂಡು ಟೈಮ್‌ ಟೇಬಲ್‌ ಸಿದ್ಧಪಡಿಸಿಕೊಳ್ಳಬೇಕು. ಉದಾಹರಣೆಗೆ, ಬೆಳಗ್ಗೆ 5ರಿಂದ 8ಗಂಟೆಯವರೆಗೆ, ಸಂಜೆ 8ರಿಂದ 11 ಗಂಟೆಯವರೆಗೆ ಓದುವ ಸಮಯ ಅಂತ ಮೀಸಲಿಡಬಹುದಾದರೆ, ಒಟ್ಟು ಐದು ಗಂಟೆ ಸಿಕ್ಕಹಾಗಾಯ್ತು.

ಕಷ್ಟದ ವಿಷಯಕ್ಕೆ ಪ್ರಾಖ್ಯತೆ ಕೊಡಿ
ಒಂದೇ ದಿನ ಎಲ್ಲ ಸಬ್ಜೆಕ್ಟಗಳನ್ನೂ ಒಂದಿಷ್ಟಿಷ್ಟು ಓದಿಕೊಳ್ತೀನಿ ಅಂತ ಹೊರಡುವುದಕ್ಕಿಂತ ಎರಡು ದಿನಗಳಲ್ಲಿ ಎಲ್ಲವನ್ನೂ ಕವರ್‌ ಮಾಡಿಕೊಳ್ಳುವುದು ಉತ್ತಮ. ಮೊದಲ ದಿನ ಬೆಳಗ್ಗೆ ದೊರೆಯುವ ಮೂರು ಗಂಟೆಗಳನ್ನು ನಿಮಗೆ ಅತ್ಯಂತ ಕಷ್ಟವೆನಿಸುವ ವಿಷಯಕ್ಕೆ ಮೀಸಲಿಡಿ. ಉದಾ: ಗಣಿತ ಅಥವಾ ವಿಜ್ಞಾನ. ಸಂಜೆಯ ವೇಳೆ, 7ರಿಂದ 8 ಗಂಟೆಯ ನಡುವೆ ಆಯಾ ದಿನ ಮಾಡಬೇಕಾದ ಹೋಂವರ್ಕ್‌ ಇತ್ಯಾದಿಗಳನ್ನು ಪೂರೈಸಿಕೊಳ್ಳಿ. ಆಮೇಲೆ ಒಂದರ್ಧ ಗಂಟೆ ಊಟದ ಬ್ರೇಕ್‌ ತೆಗೆದುಕೊಂಡರೆ 8-30ರಿಂದ 11 ಗಂಟೆಯವರೆಗೆ ಇನ್ನೊಂದು ಗನ್ನು ಓದಿಕೊಳ್ಳಬಹುದು. ಎರಡನೆಯ ದಿನ ಇದೇ ಸಮಯದ ಮಿತಿಯಲ್ಲಿ ಉಳಿದ ನಾಲ್ಕು ಗಳನ್ನು ಓದುವ ಪ್ಲಾನ್‌ ಮಾಡಿಕೊಳ್ಳಬೇಕು. ಅವರವರ ಆದ್ಯತೆಗನುಗುಣವಾಗಿ ಸಮಯವನ್ನು ಒಂದರಿಂದ ಒಂದೂವರೆಗಂಟೆವರೆಗೆ ಒಂದೊಂದು ವಿಷಯಕ್ಕೆ ಹಂಚಿಕೊಳ್ಳಬಹುದು. ಮರುದಿನದಿಂದ ಮತ್ತೆ ಇದೇ ಯೋಜನೆ ಪುನರಾವರ್ತನೆ ಆಗಬೇಕು.

ಇನ್ನು ರೀಡಿಂಗ್‌ ಹಾಲಿಡೇಸ್‌ನಲ್ಲಿ ಇಡೀ ದಿನಕ್ಕೆ ವೇಳಾಪಟ್ಟಿ ಹಾಕಿಕೊಳ್ಳುವುದು ತುಂಬ ಮುಖ್ಯ. ಇಲ್ಲವಾದರೆ ನಮಗೆ ಗೊತ್ತಿಲ್ಲದಂತೆಯೇ ಅಮೂಲ್ಯ ಸಮಯ ಎಲ್ಲೋ ಕಳೆದುಹೋಗಿಬಿಡಬಹುದು. ಸರಿಯಾಗಿ ಪ್ಲಾನ್‌ ಮಾಡಿಕೊಂಡರೆ ರಜಾದಿನದಲ್ಲಿ ಏನಿಲ್ಲವೆಂದರೂ 10-12 ಗಂಟೆ ಓದಿಗಾಗಿಯೇ ಬಳಸಿಕೊಳ್ಳಬಹುದು. ಉದಾಹರಣೆಗೆ, ಬೆಳಗ್ಗೆ 5ರಿಂದ 8ರವರೆಗೆ ನಿಮ್ಮ ಆಯ್ಕೆಯ ಪ್ರಮುಖ ವಿಷಯವನ್ನು ಅಭ್ಯಾಸ ಮಾಡುವುದು; 8ರಿಂದ 9ರವರೆಗೆ ಒಂದು ಬ್ರೇಕ್‌ ತೆಗೆದುಕೊಂಡು ಸ್ನಾನ, ತಿಂಡಿ ಪೂರೈಸಿಕೊಂಡರೆ 9ರಿಂದ 11ರವರೆಗೆ ಇನ್ನೊಂದು ಗ ತೆಗೆದುಕೊಳ್ಳಬಹುದು. ಆಮೇಲೆ ಒಂದರ್ಧ ಗಂಟೆ ಬ್ರೇಕ್‌ ತೆಗೆದುಕೊಂಡು ರಿಫ್ರೆಶ್‌ ಆದರೆ ಮತ್ತೆ ಮಧ್ಯಾಹ್ನ 1-30ರವರೆಗೂ ಓದಬಹುದು. ಅರ್ಧ ಗಂಟೆ ಲಂಚ್‌ ಬ್ರೇಕ್‌ ಎಂದುಕೊಂಡರೆ, ಇನ್ನೊಂದರ್ಧ ಗಂಟೆ ಸಣ್ಣ ನಿದ್ದೆ ಮಾಡಿ ರಿಫ್ರೆಶ್‌ ಆಗುವುದೂ ತಪ್ಪಲ್ಲ. ಬಳಿಕ 2-30ರಿಂದ 4-30ರವರೆಗೆ ಒಂದು ಸ್ಲಾಟ್‌, 5ರಿಂದ 8ರವರೆಗೆ ಇನ್ನೊಂದು ಸ್ಲಾಟ್‌, 8-30ರಿಂದ 10-30ರವರೆಗೆ ಅಂದಿನ ಕೊನೆಯ ಸ್ಲಾಟ್‌. ಅಂತೂ ಪ್ರತೀ ಸ್ಲಾಟಿನ ನಡುವೆಯೂ ಒಂದಿಷ್ಟು ಗ್ಯಾಪ್‌ ತೆಗೆದುಕೊಳ್ಳವುದು ತುಂಬ ಮುಖ್ಯ. ಇಲ್ಲಿ ಯಾವ ಯಾವ ಸಬೆjಕ್ಟ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ನೀವೇ ನಿರ್ಧರಿಸಿಕೊಳ್ಳಬೇಕು. ಬೆಳಗ್ಗೆ 5ರಿಂದ 8 ಎಷ್ಟು ಪ್ರಮುಖವಾದ ಸಮಯವೋ, ಸಂಜೆ 5ರಿಂದ 8 ಕೂಡ ಅಷ್ಟೇ ಪ್ರಮುಖ ಸಮಯ. ಊಟದ ಬಳಿಕ ಕೆಲವರಿಗೆ ಒಂದಿಷ್ಟು ಬಳಲಿಕೆ ಕಾಡಬಹುದು, ಆದರೆ 5ರಿಂದ 8ರ ಅವಧಿ ಮನಸ್ಸು ತುಂಬ ಆಕ್ಟೀವ್‌ ಆಗಿರುವ ಅವಧಿ.

ತಾಳ್ಮೆ ಮುಖ್ಯ
ಇನ್ನೊಂದು ಪ್ರಮುಖ ಸಂಗತಿ ಎಂದರೆ, ಬೇಸಿಕ್ಸ್‌ ಅನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಗಣಿತದಲ್ಲಿ ಫಾರ್ಮುಲಾ ಬಿಟ್ಟು ಬೇರೆ ಏನನ್ನೂ ಬೈಹಾರ್ಟ್‌ಮಾಡುವುದು ತುಂಬ ಕೆಟ್ಟದು. ಅರ್ಥವಾಗದ ಪ್ರಾಥಮಿಕ ವಿಷಯಗಳನ್ನು ಅಧ್ಯಾಪಕರು ಅಥವಾ ಸ್ನೇಹಿತರ ಸಹಾಯದಿಂದ ಆರಂಭದಲ್ಲೇ ಬಗೆಹರಿಸಿಕೊಳ್ಳಬೇಕು. ಗಣಿತದ ಓದಿನಲ್ಲಿ ತಾಳ್ಮೆ ತುಂಬ ಮುಖ್ಯ. ನಿಮ್ಮ ಮನಸ್ಥಿತಿಗೆ ಹೊಂದಿಕೊಳ್ಳುವ ಒಬ್ಬ ಅಥವಾ ಇಬ್ಬರು ಗೆಳೆಯರಿದ್ದರೆ ಅವರೊಂದಿಗೆ ಅಭ್ಯಾಸ ಮಾಡುವುದರಿಂದ ಅನುಕೂಲವಾಗಬಹುದು. ಅನೇಕ ಸಲ ಗಣಿತ ನಮ್ಮ ನಿಜ ಬದುಕಿಗೆ ತುಂಬ ಹತ್ತಿರವಾಗಿರುತ್ತದೆ. ದಿನನಿತ್ಯದ ಉದಾಹರಣೆಗಳೊಂದಿಗೆ ಅದನ್ನು ಸಮೀಕರಿಸಿಕೊಂಡಾಗ ಬೇಗ ಅರ್ಥವಾಗುತ್ತದೆ ಮತ್ತು ಮರೆತು ಹೋಗುವುದಿಲ್ಲ.

ಇನ್ನು ವಿಜ್ಞಾನಕ್ಕೆ ಬಂದರೆ, ಗೆಳೆಯನೊಬ್ಬನಿಗೆ ಪಾಠ ಮಾಡುವ ವಿಧಾನ ತುಂಬ ಉಪಯುಕ್ತ. ಇದರಿಂದ ವಿಷಯಗಳು ಮನಸ್ಸಿನಲ್ಲಿ ತುಂಬ ಗಟ್ಟಿಯಾಗಿ ನೆಲೆಯಾಗುತ್ತವೆ. ಓದುತ್ತಲೇ ಪಾಯಿಂಟ್ಸ್‌ ಮಾಡಿಕೊಳ್ಳುವುದು, ಈಕ್ವೇಶನ್‌ಗಳನ್ನು ಪ್ರತ್ಯೇಕ ಕಾರ್ಡ್‌ಗಳಲ್ಲಿ ಬರೆದಿಟ್ಟುಕೊಳ್ಳುವುದು, ಬೇಸಿಕ್ಸ್‌ ಯಾವುದನ್ನೂ ಬಿಡದೆ ಅರ್ಥ ಮಾಡಿಕೊಳ್ಳುವುದು, ಓದಿದ್ದನ್ನು ಆಗಾಗ ನೆನಪು ಮಾಡಿಕೊಳ್ಳಲು ಪ್ರಯತ್ನಿಸುವುದು, ಮಾಕ್‌ ಟೆಸ್ಟ್‌ಗಳನ್ನು ಬರೆಯುವುದು ಬಹಳ ಅಗತ್ಯ. ಕೊನೇ ಕ್ಷಣದಲ್ಲಿ ಹೊಸ ಟಾಪಿಕ್‌ ಅನ್ನು ಓದಲು ಹೊರಡದಿರುವುದೇ ಒಳ್ಳೆಯದು.

ಪ್ರಾಕ್ಟೀಸ್‌, ಪ್ರಾಕ್ಟೀಸ್‌, ಪ್ರಾಕ್ಟೀಸ್‌
ಎಲ್ಲ ಸಬೆjಕ್ಟ್ಗಳಿಗೂ ಒಂದೇ ಅಪೋ›ಚ್‌ನಿಂದ ಅನುಕೂಲವಾಗದು. ಆಯಾ ವಿಷಯಕ್ಕನುಗುಣವಾಗಿ ತಯಾರಿಯ ವಿಧಾನದಲ್ಲೂ ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಗಣಿತವನ್ನೇ ತೆಗೆದುಕೊಳ್ಳಿ. ಅದಕ್ಕೆ ಪ್ರಾಕ್ಟೀಸ್‌, ಪ್ರಾಕ್ಟೀಸ್‌, ಪ್ರಾಕ್ಟೀಸ್‌ ಎಂಬುದೇ ಮೂಲಮಂತ್ರ. ಓದಿ, ಕೇಳಿ ಕಲಿಯುವ ಸಬ್ಜೆಕ್ಟ್ ಅದಲ್ಲ, ಮಾಡಿ ಕರಗತ ಮಾಡಿಕೊಳ್ಳಬೇಕಾದ ಸಬ್ಜೆಕ್ಟ್ ಅದು. ಜಗತ್ತಿನಲ್ಲಿ ಜೀನಿಯಸ್‌ ಎನಿಸಿದ ಐನ್‌ಸ್ಟಿàನ್‌ ಏನು ಹೇಳಿದ್ದಾನೆ ಗೊತ್ತಾ? ನಾನೇನೂ ತುಂಬ ಬುದ್ಧಿವಂತ ಅಲ್ಲ. ಸಮಸ್ಯೆಗಳೊಂದಿಗೆ ಸ್ವಲ್ಪ ಹೆಚ್ಚು ಹೊತ್ತು ಕಳೆಯುತ್ತೇನೆ ಅಷ್ಟೇ ಅಂತ. ಎಷ್ಟೇ ಕಠಿಣ ವಿಷಯವಾದರೂ ನಮ್ಮ ಸಮಯ ಹಾಗೂ ಪ್ರಾಕ್ಟೀಸಿನ ಎದುರು ಸೋಲಲೇ ಬೇಕು. ಈ ಹಂತದಲ್ಲಿ ಮಾಡಬೇಕಾದ ಎರಡನೇ ಕೆಲಸ ಅಂದ್ರೆ ತಪ್ಪುಗಳನ್ನು ಅರ್ಥ ಮಾಡಿಕೊಳ್ಳುವುದು. ಗಣಿತದಲ್ಲಿ ಒಂದು ಸ್ಟೆಪ್‌ನಲ್ಲಿ ತಪ್ಪಾದರೆ ಉಳಿದದ್ದೆಲ್ಲ ತಪ್ಪಾದಂತೆಯೇ ಅಲ್ಲವೇ? ಹಾಗಾಗಿ ಯಾವ ಹಂತದಲ್ಲಿ ತಪ್ಪು ಮಾಡುತ್ತಿದ್ದೇವೆ ಎಂಬುದನ್ನು ಗಮನಿಸಿಕೊಳ್ಳಬೇಕು.

– ಕೊನೇ ಕ್ಷಣದಲ್ಲಿ ಹೊಸ ಟಾಪಿಕ್‌ ಓದುವ ರಿಸ್ಕ್ ಬೇಡ
-ಗಣಿತದಲ್ಲಿ ಫಾರ್ಮುಲಾ ಬಿಟ್ಟು ಬೇರೇನನ್ನೂ ಉರುಹೊಡೆಯ ಬೇಡಿ
– ಕಷ್ಟದ ವಿಷಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಿ

ಸಿಬಂತಿ ಪದ್ಮನಾಭ ಕೆ. ವಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ವಲಸೆ ಕಾರ್ಮಿಕರ ಮಕ್ಕಳಿಗೆ ಇದ್ದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ

ವಲಸೆ ಕಾರ್ಮಿಕರ ಮಕ್ಕಳಿಗೆ ಇದ್ದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಗೆ ಐದನೇ ಬಲಿ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಗೆ ಐದನೇ ಬಲಿ

ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಗಳವಾರ ನಿರ್ಧಾರ: ಎಚ್‌.ಕೆ. ಪಾಟೀಲ್‌

ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಗಳವಾರ ನಿರ್ಧಾರ: ಎಚ್‌.ಕೆ. ಪಾಟೀಲ್‌

ಅನಿವಾಸಿ ಕನ್ನಡಿಗರಿಗೆ ವಿಮಾನ ಸೇವೆ ಕಲ್ಪಿಸಲು ಸಿದ್ದರಾಮಯ್ಯ ಪತ್ರ

ಅನಿವಾಸಿ ಕನ್ನಡಿಗರಿಗೆ ವಿಮಾನ ಸೇವೆ ಕಲ್ಪಿಸಲು ಸಿದ್ದರಾಮಯ್ಯ ಪತ್ರ

ಮದುವೆಗೂ ಮುನ್ನ ಅಪ್ಪನಾಗುತ್ತಿರುವ ಹಾರ್ದಿಕ್‌ ಪಾಂಡ್ಯಾ  

ಮದುವೆಗೂ ಮುನ್ನ ಅಪ್ಪನಾಗುತ್ತಿರುವ ಹಾರ್ದಿಕ್‌ ಪಾಂಡ್ಯ

suresh-kumar

ಮಕ್ಕಳ ಸುರಕ್ಷತೆ, ಆತ್ಮವಿಶ್ವಾಸಕ್ಕೆ  ಮೊದಲ ಆದ್ಯತೆ: ಸುರೇಶ್‌ ಕುಮಾರ್‌

ದಿಲ್ಲಿಯಲ್ಲಿ ಕೋವಿಡ್‌ ಪ್ರಕರಣಗಳು ದಾಖಲೆ ಏರಿಕೆ  

ದಿಲ್ಲಿಯಲ್ಲಿ ಕೋವಿಡ್‌ ಪ್ರಕರಣಗಳು ದಾಖಲೆ ಏರಿಕೆ  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

duty episode

ಮೊದಲ ದಿನದ ಡ್ಯೂಟಿ ಪ್ರಸಂಗ

kot taraha

ಕೈ ಬರಹ ಕೋಟಿ ತರಹ…

lov adjust

ಕೊಂಚ ಹೆಚ್ಚೆನಿಸಿದರೆ ಅಡ್ಜೆಸ್ಟ್‌ ಮಾಡ್ಕೋ…

lati-hidi

ಲಾಠಿ ಹಿಡಿವ ಬದಲು ಬೆತ್ತ ಹಿಡಿದೆ..!

shale-jail

ಶಾಲೆಯೆಂದರೆ ಅದೊಂದು ಜೈಲು ಅನಿಸುತ್ತಿತ್ತು!

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

ವಲಸೆ ಕಾರ್ಮಿಕರ ಮಕ್ಕಳಿಗೆ ಇದ್ದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ

ವಲಸೆ ಕಾರ್ಮಿಕರ ಮಕ್ಕಳಿಗೆ ಇದ್ದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಗೆ ಐದನೇ ಬಲಿ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಗೆ ಐದನೇ ಬಲಿ

ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಗಳವಾರ ನಿರ್ಧಾರ: ಎಚ್‌.ಕೆ. ಪಾಟೀಲ್‌

ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಗಳವಾರ ನಿರ್ಧಾರ: ಎಚ್‌.ಕೆ. ಪಾಟೀಲ್‌

ಅನಿವಾಸಿ ಕನ್ನಡಿಗರಿಗೆ ವಿಮಾನ ಸೇವೆ ಕಲ್ಪಿಸಲು ಸಿದ್ದರಾಮಯ್ಯ ಪತ್ರ

ಅನಿವಾಸಿ ಕನ್ನಡಿಗರಿಗೆ ವಿಮಾನ ಸೇವೆ ಕಲ್ಪಿಸಲು ಸಿದ್ದರಾಮಯ್ಯ ಪತ್ರ

ಒಲಿಂಪಿಕ್‌ ತ್ರಿವಳಿ ಸ್ವರ್ಣ ವಿಜೇತ ಬಾಬಿ ಜೋ ಮೋರೊ ನಿಧನ

ಒಲಿಂಪಿಕ್‌ ತ್ರಿವಳಿ ಸ್ವರ್ಣ ವಿಜೇತ ಬಾಬಿ ಜೋ ಮೋರೊ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.