ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Sep 12, 2019, 5:29 AM IST

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಈಗಿನ ಅಧ್ಯಕ್ಷ, ಕೆ. ಶಿವನ್‌ ಅವರು “ಚಂದ್ರಯಾನ- 2′ ಯೋಜನೆಯ ರೂವಾರಿ ಕೂಡಾ ಹೌದು .
2. ಅವರನ್ನು ಭಾರತದ “ರಾಕೆಟ್‌ ಮ್ಯಾನ್‌’ ಎಂದೂ ಕರೆಯಲಾಗುತ್ತದೆ.
3. ಶಿವನ್‌ ಅವರು ಹುಟ್ಟಿದ್ದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಸರಕ್ಕಲ್‌ವಿಳೈ ಎಂಬ ಸಣ್ಣ ಹಳ್ಳಿಯಲ್ಲಿ.
4. ಕೃಷಿ ಕುಟುಂಬದಿಂದ ಬಂದ ಅವರು ತಮಿಳು ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಓದಿದರು.
5. ಶಿವನ್‌ರ ತಂದೆ ಮಾವಿನಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಶಾಲೆಗೆ ರಜೆ ಸಿಕ್ಕಿದಾಗೆಲ್ಲಾ ಶಿವನ್‌ ಕೂಡಾ ತಂದೆಯ ವ್ಯಾಪಾರಕ್ಕೆ ಕೈ ಜೋಡಿಸುತ್ತಿದ್ದರಂತೆ.
6. ಅವರಿಗೆ ಎಂಜಿನಿಯರಿಂಗ್‌ ಓದುವ ಆಸೆಯಿತ್ತು. ಆದರೆ, ಹಣಕಾಸಿನ ಅಡಚಣೆಯಿಂದಾಗಿ ತಂದೆ ಅದಕ್ಕೆ ಒಪ್ಪಲಿಲ್ಲವಂತೆ. ಒಂದು ವಾರ ಉಪವಾಸ ಮಾಡಿದರೂ ತಂದೆಯ ನಿರ್ಧಾರ ಬದಲಾಗದಿದ್ದಾಗ ಶಿವನ್‌, ಬಿ.ಎಸ್ಸಿ. (ಗಣಿತ) ಸೇರಿದರು.
7. ಪದವಿಯಲ್ಲಿ ಉತ್ತಮ ಅಂಕ ಪಡೆದ ನಂತರ ಅವರ ತಂದೆಯೇ, ಜಮೀನು ಮಾರಿಯಾದರೂ ನಿನ್ನನ್ನು ಇಂಜಿನಿಯರಿಂಗ್‌ ಓದಿಸುತ್ತೇನೆ ಎಂದಿದ್ದರು. ನಂತರ ಶಿವನ್‌, ಮದ್ರಾಸ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜೀಸ್‌ನಲ್ಲಿ ಎಂಜಿನಿಯರಿಂಗ್‌ ಮಾಡಿದರು.
8. ಇಡೀ ಕುಟುಂಬದಲ್ಲಿ ಅವರೊಬ್ಬರೇ ಪದವಿ ಶಿಕ್ಷಣವನ್ನು ಪೂರೈಸಿದವರು.
9. 1982ರಲ್ಲಿ ಇಸ್ರೋ ಸೇರಿದ ಶಿವನ್‌, ಪಿಎಸ್‌ಎಲ್‌ವಿ ಪ್ರಾಜೆಕ್ಟ್‌ನಲ್ಲಿ ಕೆಲಸ ಆರಂಭಿಸಿದರು.
10. ಡಾ. ವಿಕ್ರಮ್‌ ಸಾರಾಭಾಯ್‌ ಸಂಶೋಧನಾ ಪ್ರಶಸ್ತಿ, ಇಸ್ರೋ ಮೆರಿಟ್‌ ಪ್ರಶಸ್ತಿ, ಡಾ. ಬಿರೆನ್‌ ರಾಯ್‌ ಬಾಹ್ಯಾಕಾಶ ವಿಜ್ಞಾನ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಶಿವನ್‌ರಿಗೆ ಲಭಿಸಿವೆ.

ಸಂಗ್ರಹ: ಪ್ರಿಯಾಂಕ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು ಅನ್ನೋದಕ್ಕೆ ಈ ಜೆಲ್ಲಿ ಮೀನೇ ಉದಾಹರಣೆ. ಈ ಮೀನು ಎಲ್ಲವನ್ನೂ ಕಾಲಿನ ಮೂಲಕವೇ...

  • ಹಿಮಕ್ಕೂ, ಹಿಮಕರಡಿಗಳಿಗೂ ಅವಿನಾಭಾವ ನಂಟು. ಹಿಮ ಇಲ್ಲದೇ ಹೋದರೆ ಹಿಮಕರಡಿ ಭೂಮಿಯಿಂದಲೇ ಇಲ್ಲವಾಗುವವು. ಹಿಮಕರಡಿಗಳು ಉತ್ತರಧೃವದಲ್ಲಿ ವಾಸಿಸುವ ಜೀವಿಗಳು....

  • "ಕುಮಾರ ಬಂದಾಗ, ಸೈನಿಕರು ಮತ್ತು ಸೇವಕರು ಎಲ್ಲರೂ ಸೇರಿಕೊಂಡು ರಾಜನಿಗೆ ಜಯವಾಗಲಿ ಅಂತ ಹೇಳಬೇಕು' ಎಂದು ಶಂಕರ ಹೇಳಿದ. ಎಲ್ಲರೂ ತಲೆಯಲ್ಲಾಡಿಸಿದರು. ಆದರೆ ಒಬ್ಬಳು...

  • ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು... 1. ಮಂಗನಿಂದ ಮಾನವ "ವಿಕಾಸವಾದ ಸಿದ್ಧಾಂತ'ವನ್ನು ಪ್ರತಿಪಾದಿಸಿದ...

  • ಬೇಕಾದ ಪರಿಕರ: ಒಂದು ಕಾರ್ಡಿನ ಮೇಲೆ ಸಂಖ್ಯೆ ಬರೆಯಲಾದ ಮುಳ್ಳಿಲ್ಲದ ಗಡಿಯಾರ. ಪರಿಣಾಮ: ನಿಮ್ಮ ಸಭಿಕರಲ್ಲಿ ಒಬ್ಬರಿಗೆ ಹನ್ನೆರಡಕ್ಕಿಂತ ಕಡಿಮೆ ಸಂಖ್ಯೆಯನ್ನು...

ಹೊಸ ಸೇರ್ಪಡೆ