ನೀರ ನಡುವೆ ನರೇಂದ್ರ

Team Udayavani, Jan 11, 2020, 5:30 AM IST

39

ಹುಬ್ಬಳ್ಳಿಯ ಉಣಕಲ್ಲ ಕೆರೆಯ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನೋಡುವುದೇ ಒಂದು ಪುಳಕ…

ಸುತ್ತಲೂ ನೀಲಿಸಾಗರ. ಆಳೆತ್ತರದ ಅಲೆಗಳು ಬಂಡೆಗಲ್ಲಿಗೆ ಬಡಿಯುವ ನಿರಂತರ ದೃಶ್ಯ. ಆ ಬಂಡೆಯ ಮೇಲಿನ ದಿವ್ಯಮಂದಿರದ ಒಳಗೆ, ವಿವೇಕಾನಂದರ ಧೀರೋದಾತ್ತ ಮೂರ್ತಿ ತನ್ನ ಧ್ಯಾನಾವಸ್ಥೆಯಿಂದಲೇ ರೋಮಾಂಚನ ಹುಟ್ಟಿಸುತ್ತದೆ… ಇದು ಕನ್ಯಾಕುಮಾರಿಯ ನೋಟ. ಹುಬ್ಬಳ್ಳಿಯಲ್ಲಿನ ವಿವೇಕಾನಂದರ ಮೂರ್ತಿ ಇರುವುದೂ, ನೀರಿನ ನಡುವೆಯೇ. ಇಲ್ಲಿ ಅಲೆಗಳಿಲ್ಲ. ಅಂಥ ದೊಡ್ಡ ಬಂಡೆಗಳೂ ಇಲ್ಲ. ಆದರೆ, ಪ್ರವಾಸಿಗರನ್ನು ಸೆಳೆಯುವಲ್ಲಿ ಈ ನರೇಂದ್ರನೂ ಹಿಂದೆ ಬಿದ್ದಿಲ್ಲ.

ಇಲ್ಲಿನ ಉಣಕಲ್ಲ ಕೆರೆಯ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನೋಡುವುದೇ ಒಂದು ಪುಳಕ. ಸುಮಾರು 213 ಎಕರೆ ವಿಸ್ತೀರ್ಣದಲ್ಲಿರುವ ಕೆರೆಯ ಮಧ್ಯ ಭಾಗದಲ್ಲಿ 16 ವರ್ಷಗಳ ಹಿಂದೆ ಪ್ರತಿಷ್ಠಾಪನೆಗೊಂಡಿರುವ ಸ್ವಾಮಿ ವಿವೇಕಾನಂದರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳ.

12ನೇ ಶತಮಾನದಲ್ಲಿ ಉಳವಿ ಚನ್ನಬಸವೇಶ್ವರರು ಪೂಜಿಸಿದ ಸ್ಥಳ ಉಣಕಲ್ಲ ಕೆರೆ. ಅದಾದ ನಂತರ ಸರ್‌ ಎಂ. ವಿಶ್ವೇಶ್ವರಯ್ಯನವರು ಹುಬ್ಬಳ್ಳಿ ಮಹಾನಗರಕ್ಕೆ ಕುಡಿವ ನೀರು ಸರಬರಾಜು ಮಾಡುವ ಯೋಜನೆಗೆ ಉಣಕಲ್ಲ ಕೆರೆಯನ್ನು ಆಯ್ಕೆ ಮಾಡಿ, ನೀಲನಕ್ಷೆ ತಯಾರಿಸಿದ್ದರು. ಆ ಬಳಿಕ ಹುಬ್ಬಳ್ಳಿಯ ಮನೆಗಳಿಗೆ, ಇಲ್ಲಿಂದಲೇ ಕುಡಿವ ನೀರು ಪೂರೈಕೆ ಆಯಿತು.

ಈ ಕೆರೆಗೆ ವಿವೇಕ ಕಳೆ ಬಂದಿದ್ದು, 2004ರಲ್ಲಿ. ಮುಂಬೈಯಿಂದ ತಂದ 14 ಅಡಿ ಎತ್ತರದ ಕಂಚಿನ ಮೂರ್ತಿ, ಉಣಕಲ್ಲ ಜಲರಾಶಿಯ ರೂಪವನ್ನೇ ಬದಲಿಸಿತು. ಪ್ರತಿವರ್ಷ ವಿವೇಕಾನಂದ ಜಯಂತಿ ಬಂದಾಗಲೆಲ್ಲ, ಇಲ್ಲಿ ವಿದ್ಯುತ್‌ ದೀಪಾಲಂಕಾರ, ಈ ಮೌನಮೂರ್ತಿಯನ್ನು ಬೆಳಗುತ್ತವೆ. ಧೀರಸನ್ಯಾಸಿಯನ್ನು ಹತ್ತಿರದಿಂದ ದರ್ಶಿಸಿ ಬರಲು, ಬೋಟಿಂಗ್‌ ವ್ಯವಸ್ಥೆಯೂ ಇಲ್ಲುಂಟು.

– ಬಸವರಾಜ ಹೂಗಾರ

ಟಾಪ್ ನ್ಯೂಸ್

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

ಉದಯವಾಣಿ ಸಂಕೀರ್ಣಕ್ಕೆ ಸೌರಶಕ್ತಿಯ ಬಲ

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

Manipal Health Card; ಕುಟುಂಬದ ಆರೋಗ್ಯ ಸೇವೆಗೆ ಕಾರ್ಡ್‌ ಪೂರಕ: ಡಾ| ಬಲ್ಲಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

ವಿಧಾನಸೌಧ ಹರಾಜು ಹಾಕಿದರೂ ಅಚ್ಚರಿ ಇಲ್ಲ: ಅಶೋಕ್‌ ಕಿಡಿ

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

CM Siddaramaiah ಅನಗತ್ಯವಾಗಿ ಹಾಸಿಗೆ, ಬೆಡ್‌ಶೀಟ್‌ ಖರೀದಿಸಿದರೆ ಸಹಿಸುವುದಿಲ್ಲ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Jagadish Shettar ಸ್ಥಾನಕ್ಕೆ ಜು. 12ಕ್ಕೆ ಚುನಾವಣೆ

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Prajwal Revanna Case ಅಪಹರಣ ಪ್ರಕರಣ: ಭವಾನಿಗೆ ನಿರೀಕ್ಷಣ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.