ಬದ್ರಿ-ಮಧುಮತಿಯ ಹಾಡು ಹಬ್ಬ

Team Udayavani, Mar 8, 2019, 12:30 AM IST

ನವ ಪ್ರತಿಭೆ ಪ್ರತಾಪವನ್‌ ನಾಯಕನಾಗಿ ಕಾಣಿಸಿಕೊಂಡಿರುವ “ಬದ್ರಿ ವರ್ಸಸ್‌ ಮಧುಮತಿ’ ಚಿತ್ರದ ಆಡಿಯೋ ಇತ್ತೀಚೆಗೆ ಬಿಡುಗಡೆಯಾಗಿದೆ. ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆದ ಸಮಾರಂಭದಲ್ಲಿ ಚಿತ್ರರಂಗದ ಹಲವು ಗಣ್ಯರು ಹಾಜರಿದ್ದು, “ಬದ್ರಿ ವರ್ಸಸ್‌ ಮಧುಮತಿ’ ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. 

ರೊಮ್ಯಾಂಟಿಕ್‌ ಆ್ಯಕ್ಷನ್‌ ಕಥಾಹಂದರವಿರುವ “ಬದ್ರಿ ವರ್ಸಸ್‌ ಮಧುಮತಿ’ ಚಿತ್ರದಲ್ಲಿ ನಾಯಕ ಪ್ರತಾಪವನ್‌ ಯೋಧನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಾಯಕ ಪ್ರತಾಪವನ್‌, “ಸುಮಾರು ಎರಡು ವರ್ಷಗಳ ಸತತ ಪರಿಶ್ರಮದ ಫ‌ಲವಾಗಿ ಉತ್ತಮ ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ವಿಭಿನ್ನ ಕಥೆಯಿದೆ. ಸೆಂಟಿಮೆಂಟ್‌, ಲವ್‌, ಆ್ಯಕ್ಷನ್‌ ಹೀಗೆ ಇಂದಿನ ಪ್ರೇಕ್ಷಕರು ಬಯಸುವ ಎಲ್ಲಾ ಮನರಂಜನಾತ್ಮಕ ಅಂಶಗಳು ಚಿತ್ರದಲ್ಲಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ, ಚಿತ್ರರಂಗದಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಚಿತ್ರ ಪ್ರೇಕ್ಷಕರಿಗೂ ಇಷ್ಟವಾಗುವುದು’ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. 

“ಬದ್ರಿ ವರ್ಸಸ್‌ ಮಧುಮತಿ’ ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದ್ದು, ಎಲ್ವಿನ್‌ ಜೋಶ್ವಾ ಸಂಗೀತ ಸಂಯೋಜನೆಯ ಹಾಡುಗಳಿಗೆ ಜಯಂತ್‌ ಕಾಯ್ಕಿಣಿ ಸಾಹಿತ್ಯವನ್ನು ರಚಿಸಿದ್ದಾರೆ. ಅರ್ಮಾನ್‌ ಮಲ್ಲಿಕ್‌, ಕಾರ್ತಿಕ್‌, ವಿಜಯ್‌ ಯೇಸುದಾಸ್‌ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. 

ಚಿತ್ರದಲ್ಲಿ ನಾಯಕ ಪ್ರತಾಪವನ್‌ಗೆ ನಾಯಕಿಯಾಗಿ ಆಕಾಂಕ್ಷಾ ಗಾಂಧಿ ಜೋಡಿಯಾಗಿದ್ದಾರೆ. ಉಳಿದಂತೆ ಕೆಂಪೇಗೌಡ, ಎಂ.ಎಸ್‌ ಜಹಾಂಗೀರ್‌ ಮೊದಲಾದವರು ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಶಂಕರ ನಾರಾಯಣ ರೆಡ್ಡಿ ಕಥೆ ಬರೆದು ನಿರ್ದೇಶಿಸಿರುವ, ಪ್ರದೀಪ್‌ ಜಿ.ಪಿ ಜೈನ್‌ ಮತ್ತು ಧ್ರುವಜಿತ್‌ ರೆಡ್ಡಿ ಜಂಟಿಯಾಗಿ ನಿರ್ಮಿಸಿದ್ದಾರೆ. ಚಿತ್ರದ ಆಡಿಯೋ ರೈಟ್ಸ್‌ ಅನ್ನು ಆನಂದ್‌ ಆಡಿಯೋ ಖರೀದಿಸಿದ್ದು, ಹಾಡುಗಳನ್ನು ಹೊರತಂದಿದೆ. 

ಸದ್ಯ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಿರುವ “ಬದ್ರಿ ವರ್ಸಸ್‌ ಮಧುಮತಿ’ ಚಿತ್ರತಂಡ ಏಪ್ರಿಲ್‌ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಆಲೋಚನೆಯಲ್ಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • "ಮೊದಲು ಕನ್ನಡ ಸಿನಿಮಾಗಳನ್ನು ನೋಡಿ, ಆ ನಂತರ ಬೇರೆ ಭಾಷೆಯಲ್ಲಿ ಆ ತರಹ ಮಾಡ್ತಾರೆ, ಈ ತರಹ ಮಾಡ್ತಾರೆ ಅಂತ ಮಾತನಾಡಿ ....' -ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್‌...

  • ಕಳೆದ ಎರಡು ವಾರಗಳಿಂದ ಸೂಕ್ಷ್ಮವಾಗಿ ಗಮನಿಸಿದರೆ, ಐದಾರು ಚಿತ್ರಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅಂತಹ ಚಿತ್ರಗಳು ನಿಧಾನಗತಿಯಲ್ಲೇ ನೋಡುಗರನ್ನು ಆಕರ್ಷಿಸುತ್ತವೆ....

  • ರಮೇಶ್‌ ಅರವಿಂದ್‌ ನಾಯಕಾಗಿರುವ "ಶಿವಾಜಿ ಸುರತ್ಕಲ್‌' ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್‌ ಬಿಡುಗಡೆಯ ಜೊತೆಗೆ ಚಿತ್ರತಂಡ ವಿಶಿಷ್ಟವಾಗಿ...

  • ಈ ಬಾರಿಯ ಮಹಾಶಿವರಾತ್ರಿ ಹಬ್ಬಕ್ಕೆ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿವೆ. ಈ ಚಿತ್ರಗಳ ಸಾಲಿನಲ್ಲಿ ಬಹುತೇಕ ಹೊಸಬರ "ಶಿವ' ಎನ್ನುವ ಚಿತ್ರವೂ...

  • ಯಾವುದಾದರೂ ವ್ಯಕ್ತಿಯ ದೈಹಿಕ ಎತ್ತರವನ್ನು ಅಳೆಯುವಾಗ ಅಡಿ-ಅಂಗುಲ ಪದಗಳನ್ನು ಬಳಕೆ ಮಾಡುವುದನ್ನು ನೋಡಿದ್ದೇವೆ. ಈಗ ಅಡಿ-ಅಂಗುಲ ಪದಗಳನ್ನೇ ಇಟ್ಟುಕೊಂಡು ಇಲ್ಲೊಂದು...

ಹೊಸ ಸೇರ್ಪಡೆ