ದೇವರಾಜ್‌ ಕುಮಾರನ ಪ್ರೀತಿಯ ಕುಮಾರಿ

Team Udayavani, Dec 29, 2017, 10:32 AM IST

29-8.jpg

ದೇವರಾಜ್‌ ಪುತ್ರ ಪ್ರಣವ್‌ “ಕುಮಾರಿ 21′ ಎಂಬ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಕಳೆದ ಹದಿನೆಂಟು ತಿಂಗಳ ಹಿಂದೆಯೇ ಮುಹೂರ್ತ ಕಂಡಿದ್ದ ಆ ಚಿತ್ರದ ಕೆಲಸ ಇನ್ನೂ ಬಾಕಿ ಇದೆ. ಚಿತ್ರೀಕರಣದಲ್ಲಿ ಇದುವರೆಗೆ ಆದಂತಹ ಅನುಭವ ಕುರಿತು ಒಂದಷ್ಟು ಹೇಳಿಕೊಳ್ಳಲೆಂದೆ ಚಿತ್ರತಂಡ ಪತ್ರಕರ್ತರ ಎದುರು ಬಂದಿತ್ತು. “ಕುಮಾರಿ 21′ ಚಿತ್ರ ಬೆಂಗಳೂರು ಮತ್ತು ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಮುಗಿಸಿದ್ದು, ಈಗ ಬಿಡುಗಡೆಯ ಕೆಲಸಗಳಲ್ಲಿ ನಿರತವಾಗಿದೆ.

ಪ್ರಣವ್‌ ದೇವರಾಜ್‌ ಅವರಿಗೆ ಇದು ಮೊದಲ ಚಿತ್ರ. ಚಿತ್ರದ ಬಗ್ಗೆ ಸಾಕಷ್ಟು ಭರವಸೆ ಇಟ್ಟುಕೊಂಡಿರುವ ಪ್ರಣವ್‌, ಹೇಳಿದ್ದಿಷ್ಟು. “ಇಲ್ಲಿ ತಂದೆ -ತಾಯಿಯ ಬಾಂಧವ್ಯ, ಪ್ರೀತಿ, ವಾತ್ಸಲ್ಯ, ಗೆಳೆತನ, ಪ್ರಣಯ, ಕೋಪ, ದ್ವೇಷ ಎಲ್ಲವೂ ಇದೆ. ಕಥೆಗೆ ಪೂರಕವಾಗಿರುವ ಹಾಡುಗಳಿವೆ. ಇದೊಂದು ರೊಮ್ಯಾಂಟಿಕ್‌ ಲವ್‌ಸ್ಟೋರಿಯಾಗಿದ್ದರೂ, ಹೊಸ ನಿರೂಪಣೆಯೊಂದಿಗೆ ಹೇಳಲಾಗಿದೆ. ಅದೇ ಚಿತ್ರದ ವಿಶೇಷ. ಸಾಮಾನ್ಯವಾಗಿ ಲವ್‌ಸ್ಟೋರಿ ಚಿತ್ರದಲ್ಲಿ ಸಾಹಸ ಇದ್ದೇ ಇರುತ್ತೆ. ಇಲ್ಲಿ ಅಂಥದ್ದು ಇಲ್ಲದಿದ್ದರೂ, ಪ್ರತಿಯೊಂದು ದೃಶ್ಯ ಕೂಡ ನೋಡಿಸಿಕೊಂಡು ಹೋಗುತ್ತದೆ’ ಎಂದು ವಿವರಿಸುತ್ತಾರೆ ಪ್ರಣವ್‌.

ಇನ್ನು, ಚಿತ್ರಕ್ಕೆ ನಿಧಿ ನಾಯಕಿ. ಮಾಡೆಲ್‌ ಹುಡುಗಿಯೊಬ್ಬಳು ಮುಂಬೈನಿಂದ ಬೆಂಗಳೂರಿಗೆ ಬಂದಾಗ, ಅಲ್ಲಾಗುವ ಪರಿಚಯ ಪ್ರೇಮಕ್ಕೆ ತಿರುಗಿ, ನಂತರ ಪಡೆದುಕೊಳ್ಳುವ ತಿರುವುಗಳಲ್ಲಿ ಅನೇಕ ಘಟನೆಗಳು ಸಂಭವಿಸಿ, ಅದರಿಂದ ಹೇಗೆ ಹೊರಬರುತ್ತಾಳೆ ಎಂಬ ಪಾತ್ರವನ್ನು ನಿಧಿ ಇಲ್ಲಿ ನಿರ್ವಹಿಸಿದ್ದಾರಂತೆ.

“ಜೋಶ್‌’ನ ಅಕ್ಷಯ್‌ ಇಲ್ಲಿ ಗೆಳೆಯನ ಪಾತ್ರ ಮಾಡಿದ್ದಾರಂತೆ. ಕ್ಲೈಮ್ಯಾಕ್ಸ್‌ನಲ್ಲಿ ನೆಗೆಟಿವ್‌ ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾಗಿ ಹೇಳುತ್ತಾರೆ ಅಕ್ಷಯ್‌. ಇನ್ನುಳಿದಂತೆ ಚಿತ್ರದಲ್ಲಿ ನಾಯಕನ ಅಮ್ಮನಾಗಿ ಸಂಗೀತ ಕಾಣಿಸಿಕೊಂಡರೆ, ಗೆಳೆಯರಾಗಿ ಮನೋಜ್‌, ರಿತೇಶ್‌ ನಟಿಸಿದ್ದಾರೆ.

ನಿರ್ದೇಶಕ ವೇಮುಲ ಅವರು ಕಥೆ ಬರೆದು ಮೊದಲ ಸಲ ನಿರ್ದೇಶಿಸುತ್ತಿರುವ ಚಿತ್ರವಿದು. “ಈ ಚಿತ್ರಕ್ಕೆ ಯಾಕೆ “ಕುಮಾರಿ 21′ ಎಂಬ ಹೆಸರನ್ನಿಡಲಾಗಿದೆ ಎಂಬುದಕ್ಕೆ ಸಿನಿಮಾ ನೋಡಬೇಕು. ಆಗ ಮಾತ್ರ ಶೀರ್ಷಿಕೆ ಇಟ್ಟಿದ್ದರ ಬಗ್ಗೆ ಗೊತ್ತಾಗುತ್ತೆ. ಇದೊಂದು ಹೊಸಬಗೆಯ ಕಥೆ. ಹೊಸ ಶೈಲಿಯ ನಿರೂಪಣೆ ಇದೆ’ ಅನ್ನುತ್ತಾರೆ ವೇಮುಲ.

ಸುಮಾರು 200  ತೆಲುಗು ಚಿತ್ರಗಳನ್ನು ವಿತರಣೆ ಮಾಡಿರುವ ಎ. ಸಂಪತ್‌ಕುಮಾರ್‌ ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಜನವರಿಯಲ್ಲಿ ಆಡಿಯೋ ಬಿಡುಗಡೆ ಮಾಡಿ, ಫೆಬ್ರವರಿಯಲ್ಲಿ ಚಿತ್ರವನ್ನು ತೆರೆಗೆ ತರುವ ಯೋಚನೆ ನಿರ್ಮಾಪಕರದ್ದು.

ಟಾಪ್ ನ್ಯೂಸ್

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

critical keerthanegalu

ಬೆಟ್ಟಿಂಗ್‌ ಸುತ್ತ ‘ಕ್ರಿಟಿಕಲ್ ಕೀರ್ತನೆಗಳು’ ಇಂದು ತೆರೆಗೆ

Kannada movie Kasthuri Mahal releasing today

‘ಕಸ್ತೂರಿ ಮಹಲ್’; ಭಯಪಡಿಸಲು ಶಾನ್ವಿ ರೆಡಿ

ಇದು ಆ ‘ಕಟ್ಟಿಂಗ್‌ ಶಾಪ್‌’ ಅಲ್ಲ!

ಇದು ಆ ‘ಕಟ್ಟಿಂಗ್‌ ಶಾಪ್‌’ ಅಲ್ಲ!

shivaraj kumar bairagi song

ಸೌಂಡು ಮಾಡುತ್ತಿದೆ ‘ಬೈರಾಗಿ’ ಸಾಂಗ್‌

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

Mehbooba Mufti,

ಜಮ್ಮು ಕಾಶ್ಮೀರ ಹಿಂಸಾಚಾರಕ್ಕೆ ದಿ ಕಾಶ್ಮೀರ ಫೈಲ್ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

thumb 2

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.