ಬಜಾರ್‌ನತ್ತ ಮೀನಾ ಯಾನ

ಡಾಟ್‌ ಕಾಮಾ ಹಿಂದಿನ ಸಸ್ಪೆನ್ಸ್‌!

Team Udayavani, Oct 4, 2019, 4:11 AM IST

“ಮೀನಾ ಬಜಾರ್‌ ಡಾಟ್‌ ಕಾಮಾ’ – ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಮೋಶನ್‌ ಪೋಸ್ಟರ್‌ ಹಾಗೂ ಟೀಸರ್‌ ಬಿಡುಗಡೆಯಾಗಿದೆ. ಈ ಚಿತ್ರವನ್ನು ರಾಣಾ ಸುನೀಲ್‌ ಕುಮಾರ್‌ ಸಿಂಗ್‌ ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಹಲವು ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿ, ಆ ನಂತರ “ಮದುವೆ ಮನೆ’ ಚಿತ್ರ ನಿರ್ದೇಶಿಸಿರುವ ಸುನೀಲ್‌ ಕುಮಾರ್‌ ಈಗ “ಮೀನಾ ಬಜಾರ್‌’ ಮೇಲೆ ನಂಬಿಕೆ ಇಟ್ಟಿದ್ದಾರೆ. ಅಂದಹಾಗೆ, ಸಾಮಾನ್ಯವಾಗಿ ಡಾಟ್‌ ಕಾಮ್‌ ಎಂದು ಬರುತ್ತದೆ. ಆದರೆ, ಇದು “ಮೀನಾ ಬಜಾರ್‌ ಡಾಟ್‌ ಕಾಮಾ’ ಎಂದಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಸುನೀಲ್‌, “ಇಲ್ಲಿ ಡಾಟ್‌ ಕಾಮಾ ಎಂದಿದೆ. ಕಾಮ ಎಂದರೆ ಸೆಕ್ಸ್‌ ಇರಬಹುದು, ಬಯಕೆ ಇರಬಹುದು ಅಥವಾ ಮುಂದುವರೆದ ಭಾಗವಾದರೂ ಆಗಬಹುದು. ಸುಖಾಸುಮ್ಮನೆ ಈ ಶೀರ್ಷಿಕೆ ಇಟ್ಟಿಲ್ಲ. ಸಿನಿಮಾ ಕಥೆಗೆ ತುಂಬಾ ಚೆನ್ನಾಗಿ ಹೊಂದಿಕೆಯಾಗುತ್ತದೆ’ ಎಂದು ವಿವರ ನೀಡಿದರು ಸುನೀಲ್‌. ಅವರು ಹೇಳುವಂತೆ, ಇದು ಹೊಸ ಬಗೆಯ ಸಿನಿಮಾ. ಅದಕ್ಕಿಂತ ಹೆಚ್ಚಾಗಿ ಇದು ಸಂಪೂರ್ಣ ನಿರ್ದೇಶಕನ ಸಿನಿಮಾ. ಇಲ್ಲಿನ ಪಾತ್ರ, ಸನ್ನಿವೇಶಗಳೇ ಹೀರೋ ಎನ್ನುತ್ತಾರೆ ಸುನೀಲ್‌. ಅಂದಹಾಗೆ, ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ತಯಾರಾಗಿದೆ. ನಾಗೇಂದ್ರ ಸಿಂಗ್‌ ಈ ಚಿತ್ರದ ನಿರ್ಮಾಪಕರು.

ಚಿತ್ರದಲ್ಲಿ ನಿರ್ದೇಶಕ ಸುನೀಲ್‌ ಕುಮಾರ್‌ ಸಿಂಗ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಜೊತೆಗೆ ರಾಜೇಶ್‌ ನಟರಂಗ ಇಲ್ಲೊಂದು ಪಾತ್ರ ಮಾಡಿದ್ದು, ಕೈಯಲ್ಲಿ ಗನ್‌ ಹಿಡಿದು ಡಾನ್‌ ಶೈಲಿಯ ಪಾತ್ರ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ರಾಜೇಶ್‌, “ಗೆಳೆಯ ಸುನೀಲ್‌ ರಂಗಭೂಮಿಯಿಂದ ಬಂದವನು. ಹಾಗಾಗಿ, ಯಾವುದಕ್ಕೂ ಕಾಂಪ್ರಮೈಸ್‌ ಆಗದೇ ಅವನಿಗೆ ಬೇಕಾದ ಹಾಗೆ ಸಿನಿಮಾ ಮಾಡಿದ್ದಾನೆ. ನನಗೂ ಒಂದು ಒಳ್ಳೆಯ ಪಾತ್ರ ಕೊಟ್ಟಿದ್ದಾನೆ’ ಎಂದರು. ಉಳಿದಂತೆ ಚಿತ್ರದಲ್ಲಿ ಅರವಿಂದ್‌, ಶ್ರೀಜಿತ್‌ ಘೋಷ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್‌ ಕದ್ರಿ ಸಂಗೀತ ನೀಡಿದ್ದಾರೆ. ಇದು ನಿರ್ದೇಶಕರ ಹಲವು ವರ್ಷಗಳ ಕನಸು ಎಂದು ಚಿತ್ರದ ಬಗ್ಗೆ ಹೇಳಿದರು. ಈಗಾಗಲೇ ಚಿತ್ರ ಸೆನ್ಸಾರ್‌ ಆಗಿದ್ದು, ಕನ್ನಡದಲ್ಲಿ “ಎ’ ಹಾಗೂ ತೆಲುಗಿನಲ್ಲಿ “ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಯಶಸ್ವಿಯಾಗಿ ನೂರು ಚಿತ್ರಗಳಲ್ಲಿ ಅಭಿನಯಿಸಿ, ಶತಕದ ಸಂಭ್ರಮದಲ್ಲಿರುವ ನಟ ರಮೇಶ್‌ ಅರವಿಂದ್‌, ಈ ವಾರ 101ನೇ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ....

  • ನಾನು ಎಲ್ಲಾ ಬಿಟ್ಟು, ಈ ರಂಗಕ್ಕೆ ಬಂದಿದ್ದೇ ಏನೋ ಮಾಡಬೇಕು ಅಂತ. ಚಾಲೆಂಜ್‌ ತೆಗೆದುಕೊಳ್ಳದಿದ್ದರೆ ಹೇಗೆ? ಕಂಫ‌ರ್ಟ್‌ ಜೋನ್‌ ಬಿಟ್ಟು ಬೇರೆ ಮಾಡಬೇಕು ಅಂದಾಗ,...

  • ಈಗಂತೂ ಮೊಬೈಲ್‌ನದ್ದೇ ಸುದ್ದಿ. ಯಾರ ಕೈ ನೋಡಿದರೂ ಮೊಬೈಲ್‌ ಇದ್ದೇ ಇರುತ್ತೆ. ಅದರಲ್ಲೂ ವಾಟ್ಸಾಪ್‌, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ, ಟ್ವಿಟ್ಟರ್‌...ಹೀಗೆ ಒಂದಾ...

  • ಪ್ರೇಮ್‌ ನಿರ್ದೇಶನದ "ಏಕಲವ್ಯ' ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ದೊಡ್ಡ ಗ್ಯಾಪ್‌ನ ಬಳಿಕ ಲವ್‌ಸ್ಟೋರಿ ಮಾಡುತ್ತಿರುವ ಪ್ರೇಮ್‌, ಈ ಬಾರಿ ಸಖತ್‌ ಬೋಲ್ಡ್‌ ಕಥೆಯನ್ನೇ...

  • ಹಿರಿಯ ಸಾಹಿತಿ ಡಾ.ಬಿ.ಎಲ್‌.ವೇಣು ಅವರ ಐತಿಹಾಸಿಕ ಕಾದಂಬರಿ "ದಳವಾಯಿ ಮುದ್ದಣ' ಈಗ ದೃಶ್ಯರೂಪ ಪಡೆದುಕೊಂಡಿದೆ. "ದಳವಾಯಿ ಮುದ್ದಣ್ಣ' ಕಾದಂಬರಿ ಈಗ ಚಲನಚಿತ್ರಕ್ಕೆ...

ಹೊಸ ಸೇರ್ಪಡೆ