ದ್ರೋಣನ ಹಾಡು ಮತ್ತು ಖುಷಿ ಮಾಸ್ಟರ್‌ ಶಿವಣ್ಣ

Team Udayavani, Feb 28, 2020, 5:18 AM IST

ego-36

ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ “ದ್ರೋಣ’ ಚಿತ್ರದ ಮೂಲಕ ಈ ವರ್ಷದ ಸಿನಿ ಇನ್ನಿಂಗ್ಸ್‌ ಶುರು ಮಾಡಲು ರೆಡಿಯಾಗಿದ್ದಾರೆ. ಹೌದು, ಈ ವರ್ಷ ಶಿವಣ್ಣ ಅಭಿನಯದ ಮೊದಲ ಚಿತ್ರ “ದ್ರೋಣ’ ಮಾರ್ಚ್‌ 6ರಂದು ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಸದ್ಯ ಚಿತ್ರದ ಅಂತಿಮ ಹಂತದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಟ್ರೇಲರ್‌ ಮತ್ತು ಹಾಡುಗಳ ಮೂಲಕ “ದ್ರೋಣ’ನ ಝಲಕ್‌ ಅನ್ನು ಸಿನಿಪ್ರಿಯರ ಮುಂದೆ ತಂದಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ “ದ್ರೋಣ’ ಚಿತ್ರದ ಟ್ರೇಲರ್‌ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ನಟ ಪುನೀತ್‌ ರಾಜಕುಮಾರ್‌, “ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳು ಚೆನ್ನಾಗಿ ಮೂಡಿ ಬಂದಿದ್ದು, ಸ್ಕ್ರೀನ್‌ ಮೇಲೆ ನೋಡಿದಾಗ, ಇದೊಂದು ಶಿಕ್ಷಣದ ಕುರಿತಾದ ಕಥಾಹಂದರವಿರುವ ಸಿನಿಮಾ ಅಂಥ ಗೊತ್ತಾಗುತ್ತದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ನಟ ಶಿವರಾಜಕುಮಾರ್‌, “ಎಲ್ಲರಿಗೂ ಶಿಕ್ಷಣ ಸಿಗಬೇಕು ಅಂಥ ಈ ಸಿನಿಮಾ ಹೇಳುತ್ತದೆ. ಇಲ್ಲಿ ಒಂದಷ್ಟು ಗಂಭೀರ ವಿಷಯಗಳನ್ನು ಹೇಳಲಾಗಿದೆ. ಇದರ ಶೂಟಿಂಗ್‌ ಸಮಯದಲ್ಲಿ ನನ್ನ ಶಾಲಾ-ಕಾಲೇಜು ದಿನಗಳು ಕೂಡ ನೆನಪಿಗೆ ಬಂದವು. ಇಡೀ ತಂಡ ತುಂಬಾ ಎನರ್ಜಿಟಿಕ್‌ ಆಗಿ ಈ ಸಿನಿಮಾವನ್ನು ಮಾಡಿದೆ. ಮೊದಲ ಬಾರಿಗೆ ಇದರಲ್ಲಿ ಶಿಕ್ಷಕನ ಪಾತ್ರ ಮಾಡಿದ್ದು, ಖುಷಿ ನೀಡಿದೆ. ಎಲ್ಲರಿಗೂ ಸಿನಿಮಾ ಇಷ್ಟವಾಗಲಿದೆ’ ಎಂಬ ಭರವಸೆ ವ್ಯಕ್ತಪಡಿಸಿದರು.

“ದ್ರೋಣ’ ಚಿತ್ರಕ್ಕೆ ಪ್ರಮೋದ್‌ ಚಕ್ರವರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ತೆಲುಗು, ತಮಿಳು ಹಾಗೂ ಮಲೆಯಾಳಂನ ಹಲವು ಚಿತ್ರಗಳಲ್ಲಿ ನಟಿಸಿರುವ ಇನಿಯಾ ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ, ಯುವ ಜೋಡಿಗಳಾದ ಸ್ವಾತಿ ಶರ್ಮಾ, ವಿಜಯ್‌ ಕಿರಣ್‌, ರಾಮಸ್ವಾಮಿ, ಬಾಬು ಹಿರಣ್ಣಯ್ಯ, ರಂಗಾಯಣ ರಘು, ರವಿಕಿಶನ್‌, ಸಾಧುಕೋಕಿಲ, ನಾರಾಯಣ ಸ್ವಾಮಿ, ಲಾವಣ್ಯ, ಶಕ್ತಿ, ಲಿಖೀತ್‌ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಪ್ರಮೋದ್‌ ಚಕ್ರವರ್ತಿ, “ಇದೊಂದು ಕೌಟುಂಬಿಕ ಕಥಾ ಹಂದರದ ಕಥೆ ಆಗಿದ್ದರೂ, ಇಲ್ಲಿ ಸೆಂಟಿಮೆಂಟ್‌-ಹಾಸ್ಯ ಎರಡೂ ಸಮನಾಗಿದೆ. ಶಿವಣ್ಣ ಎರಡು ಶೇಡ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅವರು ಶಿಕ್ಷಕನಾಗಿದ್ದರೂ ಯಂಗ್‌ ಆ್ಯಂಡ್‌ ಎನರ್ಜಿಟಿಕ್‌ ಆಗಿ ಕಾಣುತ್ತಾರೆ. ಇದರಲ್ಲಿ ಇಂದಿನ ಶಿಕ್ಷಣದ ಬಗ್ಗೆ ಚರ್ಚಿಸಲಾಗಿದೆ. ಸರ್ಕಾರಿ ಶಾಲೆಗಳು ಯಾವ ಕಾರಣಕ್ಕೆ ಮುಚ್ಚುತ್ತಿವೆ, ಮಧ್ಯಮ ವರ್ಗದವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಎದುರಿಸುವ ಸಮಸ್ಯೆಗಳೇನು ಎನ್ನುವ ಅಂಶಗಳು ಚಿತ್ರದಲ್ಲಿದೆ’ ಎಂದು ಚಿತ್ರದ ಬಗ್ಗೆ ಒಂದಷ್ಟು ವಿವರಗಳನ್ನು ತೆರೆದಿಟ್ಟರು.

ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಫ‌ೂÉಟ್‌ ನುಡಿಸಿರುವ ರಾಮ್‌ ಕ್ರಿಶ್‌ ಈ ಚಿತ್ರದ ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ನಾಗೇಂದ್ರ ಪ್ರಸಾದ್‌, ಅರಸು ಅಂತಾರೆ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ ಜಗದೀಶ್‌ ವಾಲಿ ಛಾಯಾಗ್ರಹಣವಿದೆ. ಬಸವರಾಜ ಅರಸು ಸಂಕಲನವಿದೆ. “ಡಾಲ್ಫಿನ್‌ ಮಿಡಿಯಾ’ ಸಂಸ್ಥೆಯ ಮೂಲಕ ಮಹದೇವ್‌. ಬಿ, ಸಂಗಮೇಶ್‌. ಬಿ ಮತ್ತು ಶೇಶು ಚಕ್ರವರ್ತಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಸದ್ಯ ಟ್ರೇಲರ್‌ ಮತ್ತು ಹಾಡುಗಳ ಮೂಲಕ ಪ್ರೇಕ್ಷಕರ ಮುಂದೆ ಸಣ್ಣ ದರ್ಶನ ಕೊಟ್ಟಿರುವ “ದ್ರೋಣ’, ಶಿವಣ್ಣ ಅಭಿಮಾನಿಗಳಿಗೆ ದೊಡ್ಡ ಪರದೆ ಮೇಲೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದ್ದಾನೆ ಅನ್ನೋದು ಮಾರ್ಚ್‌ ಮೊದಲ ವಾರ ಗೊತ್ತಾಗಲಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.