ಅಟ್ಟಯ್ಯ ನಿರ್ದೇಶಕನ ಹಾಫ್ ಸ್ಟೋರಿ
Team Udayavani, Nov 27, 2020, 2:55 PM IST
“ಅಟ್ಟಯ್ಯ ವರ್ಸಸ್ ಹಂದಿ ಕಾಯೋಳು’ ಎಂಬ ಸಿನಿಮಾ ಮಾಡಿ,ಭರವಸೆ ಮೂಡಿಸಿದ್ದ ನಿರ್ದೇಶಕ ಲೋಕೇಂದ್ರ ಸೂರ್ಯ ಈಗ ತಮ್ಮ ಎರಡನೇ ಚಿತ್ರದ ನಿರ್ದೇಶನಕ್ಕೆಅಣಿಯಾಗಿದ್ದಾರೆ. ಈ ಚಿತ್ರಕ್ಕೆ”ಹಾಫ್’ ಎಂಬ ಟೈಟಲ್ ಇಡಲಾಗಿದ್ದು,ಕಲರ್‌ಫುಲ್ ಫೋಟೋಶೂಟ್ ಮಾಡಲಾಗಿದೆ.
ಆರ್.ಡಿ.ಎಂಟರ್‌ಪ್ರೈಸಸ್,ರಾಜುಕಲ್ಕುಣಿಅವರ ಬ್ಯಾನರ್ ನಡಿಯಲ್ಲಿ ಡಾ.ಆರ್. ಪವಿತ್ರ ರೆಡ್ಡಿ ನಿರ್ಮಿಸುತ್ತಿರುವ “ಹಾಫ್’ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕ ನಟನಾಗಿಯೂ ಅಭಿನಯಿಸುತ್ತಿದ್ದಾರೆ.
ಇದನ್ನೂ ಓದಿ : ಮಹಿಳಾ ಪ್ರಧಾನ ಅಗ್ನಿಪ್ರವ
ಚಿತ್ರದಲ್ಲಿ ಶೀರ್ಷಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಚಿತ್ರದ ಬಗ್ಗೆ ಮಾತನಾಡುವ ಲೋಕೇಂದ್ರ ಸೂರ್ಯ, “ನನ್ನ ಮೊದಲ ಸಿನಿಮಾ ಕಡಿಮೆ ಬಜೆಟ್ ಹೊಂದಿತ್ತು. ಈ ಬಾರಿ ದೊಡ್ಡ ಬಜೆಟ್ಟಿನಲ್ಲಿ, ಪಕ್ಕಾಕಮರ್ಷಿಯಲ್ ಫಾರ್ಮುಲಾಗಳನ್ನು ಅಳವಡಿಸಿಕೊಂಡು ಸಿನಿಮಾ ರೂಪಿಸುತ್ತಿದ್ದೇನೆ’ ಎನ್ನುವುದು ಅವರ ಮಾತು. ಚಿತ್ರಕ್ಕೆ ಮಲ್ಲಿಕಾರ್ಜುನ್ ಬಿ ಛಾಯಾಗ್ರಹಣ, ಯುಡಿವಿ ವೆಂಕಿ ಸಂಕಲನ, ರಾಕಿ ಸೋನು ಸಂಗೀತ, ಹಿನ್ನೆಲೆ ಸಂಗೀತ, ಥ್ರಿಲ್ಲರ್ ಮಂಜು ಸಾಹಸ, ಋತು ಚೈತ್ರ ಅವರ ವಸ್ತ್ರಾಲಂಕಾರ ಹಾಫ್ ಚಿತ್ರಕ್ಕಿದೆ. ಆಸಿಯಾ, ಅಥಿರಾ, ರಾಜುಕಲ್ಕುಣಿ, ಡಾ. ಆರ್. ಪವಿತ್ರಾ ರೆಡ್ಡಿ, ರಕ್ಷಾ, ರೆಡ್ ಅಂಡ್ ವೈಟ್ ಸವೆನ್ ರಾಜ್, ಸಿವಿಜಿ ಚಂದ್ರು, ರೋಹಿಣಿ ಕೆ. ರಾಜ್ ಮುಂತಾದವರ ತಾರಾಗಣವಿದೆ. ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರು ಇತರ ಸ್ಥಳಗಳಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444