ಹಾಲಕ್ಕಿ ನುಡಿತೈತೆ ಹೊಸದೇನೋ ಹೇಳುತೈತೆ…

Team Udayavani, Nov 1, 2019, 3:17 AM IST

Udayavani Kannada Newspaper

ಚಿತ್ರರಂಗವೆಂದರೆ ಹಾಗೆ, ಅದು ಎಲ್ಲಾ ಕ್ಷೇತ್ರದವರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತದೆ. ಡಾಕ್ಟರ್, ಇಂಜಿನಿಯರ್, ಅಡ್ವೋಕೆಟ್ಸ್‌, ಆಡಿಟರ್ಯಿಂದ ಹಿಡಿದು ಟೀಚರ್, ಆಟೋರಿಕ್ಷಾ ಡ್ರೈವರ್ವರೆಗೆ ಹಲವು ಕ್ಷೇತ್ರಗಳಲ್ಲಿರುವವರು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆ ಮಾಡಿದ ನೂರಾರು ಉದಾಹರಣೆಗಳು ಚಂದನವನದಲ್ಲಿ ಸಿಗುತ್ತವೆ. ಈಗ ಆ ಸಾಲಿಗೆ ಲೋಕೇಶ್‌ ಮಾಧು ಎನ್ನುವ ಹೆಚ್‌ಎಎಲ್‌ ಉದ್ಯೋಗಿಯೊಬ್ಬರು ಸೇರ್ಪಡೆಯಾಗುತ್ತಿದ್ದಾರೆ.

ಚಿತ್ರರಂಗದಲ್ಲಿ ನಿರ್ದೇಶಕನಾಗಬೇಕು, ಒಳ್ಳೆಯ ಸಿನಿಮಾ ನಿರ್ದೇಶಿಸಬೇಕು ಎಂಬ ಕನಸನ್ನು ಹೊತ್ತಿರುವ ಹೆಚ್‌ಎಎಲ್‌ ಉದ್ಯೋಗಿ ಲೋಕೇಶ್‌ ಮಾಧು, ಈಗ “ಹಾಲಕ್ಕಿ’ ಎನ್ನುವ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ಸದ್ದಿಲ್ಲದೆ ತಮ್ಮ ಚೊಚ್ಚಲ ಚಿತ್ರ “ಹಾಲಕ್ಕಿ’ಯ ಶೂಟಿಂಗ್‌ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಲೋಕೇಶ್‌ ಮಾಧು ಮತ್ತು ಚಿತ್ರತಂಡ, ಇತ್ತೀಚೆಗೆ ಚಿತ್ರದ ಆಡಿಯೋ ಮತ್ತು ಟೀಸರ್‌ ಅನ್ನು ಹೊರತಂದಿದೆ.

ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌, ನಟ ಅರ್ಜುನ್‌ ಗೌಡ, ನಿರ್ದೇಶಕ ಸಾಯಿ ಸಾಗರ್‌, ಉದ್ಯಮಿ ದೇವರಾಜ್‌, ಜಿ.ಪಂ ಅಧ್ಯಕ್ಷೆ ಜ್ಯೋತಿ ದೇವರಾಜ್‌, ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು “ಹಾಲಕ್ಕಿ’ ಚಿತ್ರದ ಆಡಿಯೋ ಮತ್ತು ಟೀಸರ್‌ ಹೊರತಂದರು.

ಇನ್ನು “ಹಾಲಕ್ಕಿ’ ಚಿತ್ರದಲ್ಲಿ ತಬಲ ನಾಣಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಬಹುತೇಕ ಹೊಸ ಕಲಾವಿದರು ಚಿತ್ರದ ಇತರೆ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ನಟ ತಬಲ ನಾಣಿ “ಹೆಸರೇ ಹೇಳುವಂತೆ ಇದೊಂದು ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಹಳ್ಳಿಯ ಸೊಗಡು ಚಿತ್ರದಲ್ಲಿ ಎದ್ದು ಕಾಣುತ್ತದೆ. ಶಿಕ್ಷಣ, ಬದುಕು ಮತ್ತು ಯೋಚನೆಗಳ ಸುತ್ತ ಚಿತ್ರದ ಕಥೆ ಸಾಗುತ್ತದೆ. ಕುತೂಹಲ ಕಾಯ್ದುಕೊಳ್ಳುವ ಉದ್ದೇಶದಿಂದ, ಚಿತ್ರದ ಬಗ್ಗೆ ಇದ್ದಕ್ಕಿಂತ ಹೆಚ್ಚೇನು ಹೇಳಲಾರೆ’ ಎಂದರು.

“ಸರ್ಕಾರ ಬಡತನ ನಿವಾರಣೆಗೆ, ಶಿಕ್ಷಣ ನೀಡಲು ಹಲವು ಯೋಜನೆಗಳನ್ನು ರೂಪಿಸುತ್ತ ಬಂದಿದೆ. ಆದರೆ ನಿಜವಾಗಿಯೂ ಸರ್ಕಾರದ ಈ ಎಲ್ಲ ಯೋಜನೆಗಳು ಎಷ್ಟರ ಮಟ್ಟಿಗೆ ಹಳ್ಳಿಗಳನ್ನು ತಲುಪಿದೆ ಎಂಬ ಅಂಶವನ್ನು ಇಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಇಲ್ಲಿ ಬಡತನ, ಶಿಕ್ಷಣ, ಜೀವನ, ಹಳ್ಳಿಯ ವಾತಾವರಣ ಹೀಗೆ ಹಲವು ವಿಷಯಗಳಿವೆ. ಸುಮಾರು 8 ತಿಂಗಳು ಚಿತ್ರದ ಪೋಸ್ಟ್‌ ಪ್ರೊಡಕ್ಷನ್ಸ್‌ ಕೆಲಸಗಳಿಗೆ ಸಮಯ ತೆಗೆದುಕೊಂಡಿತು. ಶೀಘ್ರದಲ್ಲಿಯೇ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದ್ದೇವೆ’ ಎಂದರು.

“ಹಾಲಕ್ಕಿ’ ಚಿತ್ರದ ಶೀರ್ಷಿಕೆಗೆ “ನುಡಿತೈತೆ… ಹಸಿವು-ವಿದ್ಯೆ ನಡುವಿನ ಭವಿಷ್ಯ..!’ ಎಂಬ ಅಡಿಬರಹವಿದ್ದು, ಗಿರೀಶ್‌ ಮಾಧು ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ಕಾರ್ತಿಕ್‌ ರಾವ್‌ ಛಾಯಾಗ್ರಹಣವಿದೆ. “ಹಾಲಕ್ಕಿ’ಯ ಹಾಡುಗಳಿಗೆ ಎಸ್‌. ನಾಗು ಸಂಗೀತ ಸಂಯೋಜಿಸಿದ್ದಾರೆ. ಚಿತ್ರತಂಡದ ಪ್ಲಾನ್‌ ಪ್ರಕಾರ ಎಲ್ಲವೂ ನಡೆದರೆ ಇದೇ ವರ್ಷಾಂತ್ಯದೊಳಗೆ “ಹಾಲಕ್ಕಿ’ಯ ಭವಿಷ್ಯ ಏನಾಗಲಿದೆ ಅಂತ ಗೊತ್ತಾಗಲಿದೆ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.