ಹವಾಲ ಸುತ್ತ: ಮಸ್ಕಲ್‌ ಭಾಯ್‌ vs ನಾಮ

Team Udayavani, Aug 10, 2018, 6:00 AM IST

x-33.jpg

ಹೀರೋ ಆಗೋಕೆ ಬಂದವರು ಅಮಿತ್‌ ರಾಜ್‌. ಯಾಕೋ ಹೀರೋ ಆಗಲಿಲ್ಲ. ಕ್ರಮೇಣ ನೆಗೆಟಿವ್‌ ಪಾತ್ರಗಳಲ್ಲಿ ಕಾಣಿಸಿಕೊಂಡರು. ಇದೀಗ ಅವರು ನಿರ್ದೇಶಕರಾಗಿ ಭಡ್ತಿ ಪಡೆದಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ “ಹವಾಲ’ ಎಂಬ ಚಿತ್ರವನ್ನು ನಿರ್ದೇಶಿಸಿರುವ ಅವರು, ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಯಿತು. ಟೀಸರ್‌ ತೋರಿಸುವ ನೆಪದಲ್ಲಿ ಪತ್ರಿಕಾಗೋಷ್ಠಿಯೂ ನಡೆಯಿತು.

“ಹವಾಲ’ ಪ್ರಮುಖವಾಗಿ ಎರಡು ಪಾತ್ರಗಳ ಸುತ್ತ ಸುತ್ತುವ ಚಿತ್ರವಂತೆ. “ಇಲ್ಲಿ ಎರಡು ಪಾತ್ರಗಳ ಸುತ್ತ ಚಿತ್ರ ಸುತ್ತುತ್ತದೆ. ಒಬ್ಟಾತ ಮಸ್ಕಲ್‌ ಭಾಯ್‌ ಅಂತ. ಇನ್ನೊಬ್ಬನ ಹೆಸರು ನಾಮ. ಒಬ್ಬ ಕಾಂಟ್ರ್ಯಾಕ್ಟ್ ಕಿಲ್ಲರ್‌. ಇನ್ನೊಬ್ಬ ಅಂಡರ್‌ವರ್ಲ್ಡ್ನಲ್ಲಿ ದೊಡ್ಡ ಹೆಸರು ಮಾಡಬೇಕು ಅಂತ ಆಸೆ ಇಟ್ಟುಕೊಂಡಿರುತ್ತಾರೆ. ಇಬ್ಬರೂ ಹವಾಲ ದಂಧೆಗೆ ಕೈಹಾಕುತ್ತಾರೆ. ಆ ನಂತರ ಅವರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಸಾರಾಂಶ. ಇಡೀ ಚಿತ್ರದಲ್ಲಿ ಯಾರೂ ಒಳ್ಳೆಯವರಲ್ಲ. ಎಲ್ಲರೂ ಕೆಟ್ಟವರೇ. ಭೂಗತಲೋಕದ ಕಥೆ ಇರುವ ಚಿತ್ರ ಇದು. ಆದಷ್ಟು ರಿಯಲಾಸ್ಟಿಕ್‌ ಆಗಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರವನ್ನು ಬೆಂಗಳೂರು ಮತ್ತು ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ’ ಎಂದು ಚಿತ್ರದ ಸಾರಾಂಶ ಬಿಚ್ಚಿಟ್ಟರು ಅಮಿತ್‌ ರಾಜ್‌.

ಎಲ್ಲಾ ಸರಿ, ಅಮಿತ್‌ ರಾಜ್‌ ನಿರ್ದೇಶನಕ್ಕೆ ಕೈಹಾಕಿದ್ದೇಕೆ ಎಂಬ ಪ್ರಶ್ನೆ ಸಹಜವಾಗಿಯೇ ಬಂತು. “ಕಳೆದ 15 ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ಹೀರೋ ಆಗಬೇಕು ಅಂತ ಬಂದವನು. ಆದರೆ, ಇಲ್ಲಿ ನೆಲೆ ಕಂಡುಕೊಳ್ಳೋದು ಕಷ್ಟ. ಆ ನಂತರ ಒಂಬತ್ತು ಧಾರಾವಾಹಿಗಳಲ್ಲಿ ಕಾಣಿಸಿಕೊಂಡೆ. ಇಲ್ಲೇ ಬೇರೆ ಏನಾದರೂ ಮಾಡಬೇಕು ಅಂತಿತ್ತು. ಹಾಗಾಗಿ ಇದು ಸೆಕೆಂಡ್‌ ಇನ್ನಿಂಗ್ಸ್‌ ಎಂದರೆ ತಪ್ಪಿಲ್ಲ. ರಾಮ್‌ ಗೋಪಾಲ್‌ ವರ್ಮ ಅವರು ನನ್ನ ಗುರು ತರಹ. ಅವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡದಿದ್ದರೂ, ಅವರ ಸಿನಿಮಾಗಳೆಂದರೆ ನನಗೆ ಬಹಳ ಇಷ್ಟ. ಅದೇ ಮಾದರಿಯಲ್ಲಿ ಒಂದು ಸಿನಿಮಾ ಮಾಡಬೇಕು ಎಂಬ ಆಸೆ ಬಹಳ ದಿನಗಳಿಂದಲೂ ಇತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ’ ಎನ್ನುತ್ತಾರೆ ಅಮಿತ್‌ ರಾಜ್‌.

ಈ ಚಿತ್ರವನ್ನು ಪ್ರವೀಣ್‌ ಕುಮಾರ್‌ ಶೆಟ್ಟಿ ಎನ್ನುವವರು ನಿರ್ಮಿಸಿದ್ದಾರೆ. ಅವರು ಚಿತ್ರರಂಗದವರಲ್ಲ. ಅಮಿತ್‌ ರಾಜ್‌ಗೆ ಸಪೋರ್ಟ್‌ ಮಾಡುವ ಎಂದು ಚಿತ್ರರಂಗಕ್ಕೆ ಬಂದು ಚಿತ್ರ ನಿರ್ಮಾಣ ಮಾಡಿದ್ದಾರೆ. ಇನ್ನು ಚಿತ್ರದಲ್ಲಿ ಶ್ರೀನಿವಾಸ್‌, ಸಹನ, ಸೂರ್ಯೋದಯ್‌ ಮುಂತಾದವರು ನಟಿಸಿದ್ದಾರೆ. “ಉಪ್ಪು ಹುಳಿ ಖಾರ’ ಚಿತ್ರದ ಹಾಡೊಂದಕ್ಕೆ ಸಂಗೀತ ಸಂಯೋಜಿಸಿದ್ದ ಕಿಶೋರ್‌ ಅಕ್ಸ ಸಂಗೀತ ಸಂಯೋಜಿಸಿದ್ದಾರೆ. ಸದ್ಯಕ್ಕೆ ಚಿತ್ರವು ಡಿಟಿಎಸ್‌ ಮತ್ತು ಡಿಐ ಹಂತದಲ್ಲಿದ್ದು, ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ.   

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.