ಜ.24ರಂದು ಜಗ್ಗೇಶ್ ನಟನೆಯ ತೋತಾಪುರಿ ಆಡಿಯೋ ಟೀಸರ್ ಬಿಡುಗಡೆ
Team Udayavani, Jan 21, 2022, 2:27 PM IST
“ತೋತಾಪುರಿ’- ಸದ್ಯ ಕನ್ನಡ ಚಿತ್ರರಂಗ ದಲ್ಲಿ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ. ಜಗ್ಗೇಶ್ ನಾಯಕರಾಗಿರುವ ಈ ಸಿನಿಮಾವನ್ನು ವಿಜಯ ಪ್ರಸಾದ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಈ ಜೋಡಿ “ನೀರ್ದೋಸೆ’ ಚಿತ್ರ ಹಿಟ್ ಆಗಿರುವ ಮೂಲಕ “ತೋತಾಪುರಿ’ ಮೇಲೆ ನಿರೀಕ್ಷೆ ಹೆಚ್ಚಿದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಕೋವಿಡ್ ಕಡಿಮೆಯಾಗಿ ಚಿತ್ರರಂಗ ಸಹಜ ಸ್ಥಿತಿಗೆ ಬಂದ ಕೂಡಲೇ “ತೋತಾಪುರಿ’ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಪಕರು ಸಿದ್ಧತೆ ನಡೆಸುತ್ತಿದ್ದಾರೆ. ಮೊದಲ ಹಂತವಾಗಿ ಜ.24ರಂದು ಚಿತ್ರದ ಆಡಿಯೋ ಟೀಸರ್ ಬಿಡುಗಡೆ ಮಾಡಲಿದೆ ಚಿತ್ರತಂಡ.
ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಇದು ಕೂಡಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಇದೇ ಮಾದಲ ಬಾರಿಗೆ ಕನ್ನಡ ಕಾಮಿಡಿ ಸಿನಿಮಾವೊಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ.
ಇದನ್ನೂ ಓದಿ:ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ವಿಡಿಯೋ ನೋಡಿ
ಸದಭಿರುಚಿಯ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಕೆ.ಎ.ಸುರೇಶ್ ಈ ಬಾರಿಯೂ ತಮ್ಮ “ಮೋನಿಪ್ಲಿಕ್ಸ್ ಸ್ಟುಡಿಯೋಸ್’ ಬ್ಯಾನರ್ನಡಿ ತೋತಾಪುರಿ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ತಾರಾಗಣ ಹಾಗೂ ಮೇಕಿಂಗ್ನಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ.
ಚಿತ್ರದಲ್ಲಿ ಜಗ್ಗೇಶ್, ಡಾಲಿ ಧನಂಜಯ್, ದತ್ತಣ್ಣ, ಸುಮನ್ ರಂಗನಾಥ್, ಅದಿತಿ ಪ್ರಭುದೇವ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಚಿತ್ರದ ತಾರಾಬಳಗದಲ್ಲಿ ಸುಮಾರು 80ಕ್ಕೂ ಅಧಿಕ ಪ್ರಖ್ಯಾತ ಕಲಾವಿದರಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿ ವಿಜಯಪ್ರಸಾದ್ ವಹಿಸಿಕೊಂಡಿದ್ದಾರೆ. ಸಂಗೀತಕ್ಕೆ ರಾಗನಿಧಿ ಅನೂಪ್ ಸೀಳಿನ್, ಕ್ಯಾಮೆರಾ ಹಿಂದೆ ನಿರಂಜನ್ ಬಾಬು ಇದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್