Udayavni Special

ಜನತಾ ಬಜಾರ್‌ನಲ್ಲಿ ಹೊಸಬರ ಕನಸು

Team Udayavani, Feb 14, 2020, 6:00 AM IST

Janata-bazar

“ಜನತಾ ಬಜಾರ್‌’ ಮಳಿಗೆಗಳ ಬಗ್ಗೆ ನಿಮಗೆ ಗೊತ್ತಿರಬಹುದು. ಗ್ರಾಹಕರು ಮತ್ತು ವರ್ತಕರನ್ನು ಒಂದೇ ಸೂರಿನಡಿ ತಂದು ವ್ಯಾಪಾರ-ವಹಿವಾಟು ನಡೆಸುವ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ “ಜನತಾ ಬಜಾರ್‌’ ಈಗ ಚಿತ್ರವೊಂದರ ಶೀರ್ಷಿಕೆಯಾಗಿ ತೆರೆಮೇಲೆ ಬರುತ್ತಿದೆ. ಇತ್ತೀಚೆಗೆ ಕನ್ನಡದಲ್ಲಿ ಆಡು ಭಾಷೆಯ ಪದಗಳು, ಊರಿನ ಹೆಸರು, ಜಾಗಗಳ ಹೆಸರು ಚಿತ್ರಗಳ ಶೀರ್ಷಿಕೆಯಾಗುತ್ತಿರುವ ಸಮಯದಲ್ಲಿ ಅಂಥದ್ದೇ ಸಾಲಿಗೆ ಈಗ “ಜನತಾ ಬಜಾರ್‌’ ಚಿತ್ರ ಕೂಡ ಸೇರ್ಪಡೆಯಾಗುತ್ತಿದೆ. ಇನ್ನು ಸಂಪೂರ್ಣ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ಈ ಚಿತ್ರ ಶೇಕಡ 80ರಷ್ಟು ಕಥೆ ಮಾರ್ಕೇಟ್‌ನಲ್ಲಿಯೇ ನಡೆಯುವುದರಿಂದ ಚಿತ್ರತಂಡ ತಮ್ಮ ಚಿತ್ರಕ್ಕೆ “ಜನತಾ ಬಜಾರ್‌’ ಎಂದು ಹೆಸರಿಟ್ಟಿದೆಯಂತೆ.

ಸದ್ಯ ಪ್ರೀ-ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ತನ್ನ ಮುಹೂರ್ತವನ್ನು ನೆರವೇರಿಸಿಕೊಂಡು ಚಿತ್ರೀಕರಣಕ್ಕೆ ಹೊರಟಿದೆ. ಹಲವು ರಾಜಕೀಯ ಮುಖಂಡರು ಮತ್ತು ಚಿತ್ರರಂಗದ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಈಗಾಗಲೇ ಹಲವು ಚಿತ್ರ ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವವಿರುವ ಮಂಗಳೂರು ಮೂಲದ ಆರ್‌.ಜೆ ಪ್ರದೀಪ್‌ “ಜನತಾ ಬಜಾರ್‌’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ಚಿತ್ರತಂಡ, “ಇಡೀ ಚಿತ್ರದ ಬಹುಭಾಗ ಮಾರ್ಕೇಟ್‌ನಲ್ಲಿ ನಡೆಯುತ್ತದೆ. ವಿಧವೆಯೊಬ್ಬಳು ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ಒಂದು ಮಾರ್ಕೇಟ್‌ನಲ್ಲಿ ವ್ಯಾಪಾರ ನಡೆಸಿಕೊಂಡು ಹೋಗುತ್ತಿರುವಾಗ, ಒಮ್ಮೆ ಒಬ್ಬ ವ್ಯಕ್ತಿಯಿಂದ ಅವಳ ಕುಟುಂಬ ತೊಂದರೆಗೆ ಸಿಲುಕಿಕೊಳ್ಳುತ್ತದೆ. ಇದನ್ನು ಆ ಮಹಿಳೆ ಮತ್ತು ಆಕೆಯ ಮಕ್ಕಳು ಹೇಗೆ ಎದುರಿಸುತ್ತಾರೆ? ಅದರಿಂದ ಯಾವ ರೀತಿಯಲ್ಲಿ ಹೊರಗೆ ಬರುತ್ತಾರೆ ಎಂಬುದು ಚಿತ್ರದ ಕಥೆಯ ಒಂದು ಎಳೆ. ಇದನ್ನು ಹೇಗೆ ಅನ್ನೋದನ್ನ ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ತೋರಿಸಲಿದ್ದೇವೆ. ಚನ್ನರಾಯಪಟ್ಟಣದ ಮಾರ್ಕೇಟ್‌ನಲ್ಲಿ ಚಿತ್ರದ ಬಹುಭಾಗ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ. ಉಳಿದಂತೆ ಹಾಸನ, ಸಕಲೇಶಪುರ, ಶ್ರವಣಬೆಳಗೊಳ, ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ ಸುಮಾರು 35 ದಿನಗಳ ಚಿತ್ರೀಕರಣ ನಡೆಸಲಾಗಿದೆ’ ಎಂದು ವಿವರಣೆ ಕೊಟ್ಟಿತು.

ಇನ್ನು “ಜನತಾ ಬಜಾರ್‌’ ಚಿತ್ರದಲ್ಲಿ ರಾಹುಲ್‌ ಅರ್ಜುನ್‌, ಅದಿತಿ, ಕುಮಾರ್‌, ಅಶ್ವಿ‌ತಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವಿನಯ್‌, ರಘು, ಪ್ರಜ್ವಲ್‌, ಕಿರಣ್‌, ಪವನ್‌ ಮತ್ತಿತರರು ಚಿತ್ರದ ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ನಾಲ್ಕು ಹಾಡುಗಳಿಗೆ ವೈಭವ್‌ ರಾಗ ಸಂಯೋಜಿಸುತ್ತಿದ್ದು, ಸುಪ್ರಿತಾ ಸಂತೋಷ್‌, ಅಂಜನ್‌ ಕುಮಾರ್‌, ಶಿವರಾಜ್‌ ಸಾಹಿತ್ಯವಿದೆ. ಚಿತ್ರಕ್ಕೆ ರಾಜೇಶ್‌ ಗೌಡ ಛಾಯಾಗ್ರಹಣ, ಪವನ್‌ ದೇವ್‌ ಸಂಕಲನವಿದೆ. ವೃತ್ತಿಯಲ್ಲಿ ಬಿಲ್ಡರ್‌ ಆಗಿರುವ ಕೆ.ಎಂ ಮುರಳಿ “ಜನತಾ ಬಜಾರ್‌’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್ 19 ಚರ್ಚೆ: ಪ್ರಣಬ್, ಸೋನಿಯಾ, ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಕೋವಿಡ್-19 ಹಿನ್ನೆಲೆ ಆನ್ ಲೈನ್ ಮೂಲಕ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಪಾಠ ಪ್ರವಚನ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರೀ ಗುಂಡಿನ ಕಾಳಗ; ಐವರು ಉಗ್ರರ ಸಾವು, 3 ಯೋಧರು ಹುತಾತ್ಮ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಕೋವಿಡ್-19 ಗೆದ್ದ 104 ವರ್ಷದ ಸೈನಿಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡದಲ್ಲೂ ತೆರೆಕಾಣಲಿದೆ ಆರ್‌ಆರ್‌ಆರ್‌

ಕನ್ನಡದಲ್ಲೂ ತೆರೆಕಾಣಲಿದೆ ಆರ್‌ಆರ್‌ಆರ್‌

suchitra-tdy-9

ಮನರೂಪ ಚಿತ್ರಕ್ಕೆಪ್ರಶಸ್ತಿ ಖುಷಿ

ಲಾಕ್‌ ಕೇ ಬಾದ್‌… ಸಲಗ ಗ್ರ್ಯಾಂಡ್‌ ರಿಲೀಸ್‌

ಲಾಕ್‌ ಕೇ ಬಾದ್‌… ಸಲಗ ಗ್ರ್ಯಾಂಡ್‌ ರಿಲೀಸ್‌

suchitra-tdy-07

ಡೈರೆಕ್ಟರ್ ಸ್ಪೆಷಲ್‌! : ನಿರ್ದೇಶಕರ ಹೊಸ ಯೋಚನೆಗಳೇನು ಗೊತ್ತಾ?

suchitra-tdy-6

ಮೀನಾ ಬಜಾರ್‌ ನಿರ್ದೇಶಕರ ಕಾಫಿ ಬ್ರೇಕ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ನಿಮಗೆ ಕೋವಿಡ್ 19 ವೈರಸ್ ಅಟ್ಯಾಕ್ ಆಗಿದೆಯೇ ಎಂದು ಇನ್ನು ಮನೆಯಲ್ಲೇ ಪರೀಕ್ಷಿಸಿಕೊಳ್ಳಿ!

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಸಾಮಾಜಿಕ ಅಂತರಕ್ಕೆ ಚೆನ್ನೈ ಎಕ್ಸ್ ಪ್ರೆಸ್ ಐಡಿಯಾ ಬಳಸಿದ ನಾಗ್ಪುರ ಪೊಲೀಸರು

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ಲಾಕ್‌ ಡೌನ್‌ ಅರ್ಧ ಮುಕ್ತಾಯ; ನಿಯಮ ಸಡಿಲಿಕೆ?

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ರಾಜ್ಯದಲ್ಲಿ ಮತ್ತೆ ಐದು ಸೋಂಕು ಪ್ರಕರಣಗಳು: ಐವರಿಗೂ ನಿಜಾಮುದ್ದೀನ್ ನಂಟು

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ  ಆರಂಭ

ಸೋಂಕಿತರ ಪತ್ತೆಗೆ ಆನ್‌ಲೈನ್‌, ದೂರವಾಣಿ ಸಮೀಕ್ಷೆ ಆರಂಭ