‘ಶೋಕಿವಾಲ’ನ ಕಲರ್ ಫುಲ್ ಎಂಟ್ರಿ
Team Udayavani, Apr 29, 2022, 8:54 AM IST
ಅಜೇಯ್ ರಾವ್ ನಟನೆಯ “ಶೋಕಿವಾಲ’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡು, ಟ್ರೇಲರ್ ಹಿಟ್ ಆಗಿದೆ. ಪಕ್ಕಾ ಫ್ಯಾಮಿಲಿ ಎಂಟರ್ಟೈನರ್ ಆಗಿ ಗಮನ ಸೆಳೆಯುತ್ತಿದೆ.
ಚಿತ್ರದಲ್ಲಿ ಅಜೇಯ್ ರಾವ್ ಲವರ್ ಬಾಯ್ ಹಾಗೂ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟ್ರೇಲರ್ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡದ ಮೊಗದಲ್ಲಿ ನಗುಮೂಡಿದೆ.
ಇನ್ನು, ಚಿತ್ರದ ಹಾಡೊಂದರಲ್ಲಿ ಕನ್ನಡ ಚಿತ್ರರಂಗದ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್, ಹರಿ ಸಂತೋಷ್, ಶಶಾಂಕ್, ವಿ.ನಾಗೇಂದ್ರ ಪ್ರಸಾದ್ ಹೆಜ್ಜೆ ಹಾಕಿದ್ದಾರೆ. ಈ ಹಾಡನ್ನು ಚೇತನ್ ಕುಮಾರ್ ಬರೆದಿದ್ದು, ಶಶಾಂಕ್ ಶೇಷಗಿರಿ ಹಾಡಿದ್ದಾರೆ.
ಇದನ್ನೂ ಓದಿ:ಚಾಕೋಲೇಟ್ನಿಂದಾಗಿ ಹರುಡುತ್ತಿದೆ ಸೋಂಕು!
ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ. ಕುಟುಂಬ ಸಮೇತ ಕುಳಿತು ನೋಡುವ ಸಿನಿಮಾ ವಾಗಿದ್ದು, ಎಲ್ಲರು ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂಬುದು ನಿರ್ಮಾಪಕ ಟಿ.ಆರ್. ಚಂದ್ರಶೇಖರ್ ಮಾತು. ಅಜೇಯ್ ರಾವ್ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಅರುಣಾ ಬಾಲರಾಜ್, ತಬಲಾ ನಾಣಿ, ನಾಗರಾಜ ಮೂರ್ತಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ