ಮಹಿರ ಆಟ ಶುರು

ಲಂಡನ್‌ ಹುಡುಗರ ಥ್ರಿಲ್ಲರ್‌ ಕಥೆ

Team Udayavani, Jul 26, 2019, 5:00 AM IST

ಇಡೀ ತಂಡದ ಮೊಗದಲ್ಲಿ ಮಂದಹಾಸ ಮೂಡಿತ್ತು. ಕೊನೆಗೂ ತಮ ಶ್ರಮ ಪ್ರೇಕ್ಷಕರ ಮುಂದೆ ಬರುತ್ತದೆ ಹಾಗೂ ಶ್ರಮಕ್ಕೆ ತಕ್ಕ ಫ‌ಲ ಸಿಗುತ್ತದೆ ಎಂಬ ವಿಶ್ವಾಸ ಕೂಡಾ ಇದೆ. ಎಲ್ಲಾ ಓಕೆ, ಯಾವ ಚಿತ್ರದ ಬಗ್ಗೆ ಹೇಳುತ್ತಿದ್ದಾರೆಂದು ನೀವು ಕೇಳಬಹುದು. “ಮಹಿರ’ ಎಂಬ ಚಿತ್ರದ ಬಗ್ಗೆ ನೀವು ಕೇಳಿರಬಹುದು. ಆ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಮೂಲಕ ಗಾಂಧಿನಗರಕ್ಕೆ ಮತ್ತೂಂದು ಹೊಸಬರ ತಂಡ ಎಂಟ್ರಿಕೊಟ್ಟಂತಾಗುತ್ತದೆ.

ಮಹೇಶ್‌ ಗೌಡ ಈ ಚಿತ್ರದ ನಿರ್ದೇಶಕರು. ಇವರ ಸ್ನೇಹಿತ ವಿವೇಕ್‌ ಕೊಡಪ್ಪ ನಿರ್ಮಾಪಕರು. ಮಹೇಶ್‌ ಅವರು ಹೇಳಿದ ಕಥೆ ಇಷ್ಟವಾಗಿ ಈ ಸಿನಿಮಾ ಮಾಡಿದ್ದಾಗಿ ಹೇಳಿಕೊಂಡರು ವಿವೇಕ್‌. ಕನ್ನಡಕ್ಕೆ ಇದೊಂದು ಹೊಸ ಬಗೆಯ ಸಿನಿಮಾವಾಗಿ ಮೆಚ್ಚುಗೆ ಪಡೆಯುತ್ತದೆ ಎಂಬ ವಿಶ್ವಾಸ ಕೂಡಾ ಚಿತ್ರತಂಡಕ್ಕಿದೆ. ನಿರ್ದೇಶಕ ಮಹೇಶ್‌ ಗೌಡ ತುಂಬು ವಿಶ್ವಾಸದಿಂದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಇಷ್ಟು ವರ್ಷಗಳ ಕಾಯುವಿಕೆ ಮುಕ್ತಿ ಸಿಗುವ ಸಮಯ ಬಂದಿದೆ ಎನ್ನುವುದು ಮಹೇಶ್‌ ಅವರ ಮಾತು. ಚಿತ್ರದ ಬಗ್ಗೆ ಮಾತನಾಡುವ ಮಹೇಶ್‌, “ಮಹಿರ ಹೊಸ ಸಿನಿಮಾ ಮೇಕರ್ಗಳಿಗೆ ಪ್ರೇರಣೆಯಾಗಬಹುದೆಂಬ ಭರವಸೆಯೂ ಇದೆ. ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾ. ತಾಯಿ ಮಗಳ ಸುತ್ತ ಸಾಗುತ್ತದೆ. ಚಿತ್ರದಲ್ಲಿ ತನಿಖಾಧಿಕಾರಿಯ ಪಾತ್ರವೂ ಪ್ರಮುಖವಾಗಿದೆ. ಸಾಕಷ್ಟು ಟ್ವಿಸ್ಟ್‌ಗಳೊಂದಿಗೆ ಸಾಗುವ ಚಿತ್ರ ಕ್ಷಣ ಕ್ಷಣಕ್ಕೂ ಪ್ರೇಕ್ಷಕರಿಗೆ ರೋಚಕ ಅನುಭವ ಕೊಡುತ್ತದೆ’ ಎಂದರು. ಖುಷಿಯಾಗಿದ್ದ ತಾಯಿ-ಮಗಳ ನಡುವೆ ಘಟನೆಯೊಂದು ನಡೆದು ಅದು ಯಾವ ರೀತಿ ಅವರನ್ನು ತೊಂದರೆಗೆ ಸಿಲುಕಿಸುತ್ತದೆ ಮತ್ತು ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾರೆಂಬುದೇ ಚಿತ್ರದ ಕಥಾಹಂದರ. ಈ ಕಥೆಯನ್ನು ತುಂಬಾ ಸಾಹಸಮಯವಾಗಿ ಹೇಳಲಾಗಿದೆಯಂತೆ. ಅಂದಹಾಗೆ, ಲಂಡನ್‌ನಲ್ಲಿ ಉದ್ಯೋಗದಲ್ಲಿದ್ದ ಮಹೇಶ್‌ ಸಿನಿಮಾ ಮೇಲಿನ ಆಸಕ್ತಿಯಿಂದ ಲಂಡನ್‌ ಫಿಲಂ ಅಕಾಡೆಮಿಯಿಂದ ನಿರ್ದೇಶನದ ತರಬೇತಿ ಪಡೆದು ಬಂದು “ಮಹಿರ’ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಚಿತ್ರದಲ್ಲಿ ನಟಿಸಿದ ಮಂಗಳೂರು ಮೂಲದ ವರ್ಜಿನಿಯ ರಾಡ್ರಿಗಸ್‌, ಚೈತ್ರಾ, ರಾಜ್‌ ಬಿ ಶೆಟ್ಟಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸಿದ್ದರಿಂದ ಚಿತ್ರೀಕರಣದ ವೇಳೆ ನಟಿಸಲು ಕಷ್ಟವಾಗಲಿಲ್ಲ ಎನ್ನುವುದು ವರ್ಜಿನಿಯ ಅವರ ಮಾತು. ಚಿತ್ರಕ್ಕೆ ಚೇತನ್‌ ಸಾಹಸ ಸಂಯೋಜಿಸಿದ್ದು, ನೈಜವಾದ ಫೈಟ್‌ಗಳನ್ನು ಕಾಣಬಹುದಂತೆ. ಯಾವುದೇ ಬಿಲ್ಡಪ್‌ ಇಲ್ಲದೇ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾಗಿ ಹೇಳಿಕೊಂಡರು.

ಚಿತ್ರಕ್ಕೆ ಕೀರ್ತನ್‌ ಪೂಜಾರಿ ಛಾಯಾಗ್ರಹಣ, ರಾಕ್‌-ನೀಲ್‌ ಸಂಗೀತ, ನೀಲ್‌ ಮುಕುಂದನ್‌ ಹಿನ್ನೆಲೆ ಸಂಗೀತವಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • "ಮೊದಲು ಕನ್ನಡ ಸಿನಿಮಾಗಳನ್ನು ನೋಡಿ, ಆ ನಂತರ ಬೇರೆ ಭಾಷೆಯಲ್ಲಿ ಆ ತರಹ ಮಾಡ್ತಾರೆ, ಈ ತರಹ ಮಾಡ್ತಾರೆ ಅಂತ ಮಾತನಾಡಿ ....' -ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್‌...

  • ಕಳೆದ ಎರಡು ವಾರಗಳಿಂದ ಸೂಕ್ಷ್ಮವಾಗಿ ಗಮನಿಸಿದರೆ, ಐದಾರು ಚಿತ್ರಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅಂತಹ ಚಿತ್ರಗಳು ನಿಧಾನಗತಿಯಲ್ಲೇ ನೋಡುಗರನ್ನು ಆಕರ್ಷಿಸುತ್ತವೆ....

  • ರಮೇಶ್‌ ಅರವಿಂದ್‌ ನಾಯಕಾಗಿರುವ "ಶಿವಾಜಿ ಸುರತ್ಕಲ್‌' ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್‌ ಬಿಡುಗಡೆಯ ಜೊತೆಗೆ ಚಿತ್ರತಂಡ ವಿಶಿಷ್ಟವಾಗಿ...

  • ಈ ಬಾರಿಯ ಮಹಾಶಿವರಾತ್ರಿ ಹಬ್ಬಕ್ಕೆ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿವೆ. ಈ ಚಿತ್ರಗಳ ಸಾಲಿನಲ್ಲಿ ಬಹುತೇಕ ಹೊಸಬರ "ಶಿವ' ಎನ್ನುವ ಚಿತ್ರವೂ...

  • ಯಾವುದಾದರೂ ವ್ಯಕ್ತಿಯ ದೈಹಿಕ ಎತ್ತರವನ್ನು ಅಳೆಯುವಾಗ ಅಡಿ-ಅಂಗುಲ ಪದಗಳನ್ನು ಬಳಕೆ ಮಾಡುವುದನ್ನು ನೋಡಿದ್ದೇವೆ. ಈಗ ಅಡಿ-ಅಂಗುಲ ಪದಗಳನ್ನೇ ಇಟ್ಟುಕೊಂಡು ಇಲ್ಲೊಂದು...

ಹೊಸ ಸೇರ್ಪಡೆ