ಕೆಜಿಎಫ್-2 ಡಬ್ಬಿಂಗ್ ಫೋಟೋ ವೈರಲ್
Team Udayavani, Jun 18, 2021, 9:59 AM IST
ಪ್ಲಾನ್ ಪ್ರಕಾರ ಎಲ್ಲವೂ ನಡೆದಿದ್ದರೆ, ಇಷ್ಟೊತ್ತಿಗಾಗಲೇ ಬಹುನಿರೀಕ್ಷಿತ “ಕೆಜಿಎಫ್-2′ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ಕೋವಿಡ್ ಭಯ, ಅನಿರೀಕ್ಷಿತ ಲಾಕ್ಡೌನ್, ಅನಿರ್ಧಿಷ್ಟವಧಿ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಬಂದ್ ಆಗಿದ್ದರಿಂದ, “ಕೆಜಿಎಫ್-2′ ಅಂದುಕೊಂಡ ಸಮಯಕ್ಕೆ ಅಭಿಮಾನಿಗಳ ಮುಂದೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ಆದರೂ ಸಿನಿಪ್ರಿಯರಿಗೆ “ಕೆಜಿಎಫ್-2′ ಬಗ್ಗೆ ಇರುವ ಕ್ರೇಜ್ ಅಂತೂ ಕಿಂಚಿಂತೂ ಕಡಿಮೆಯಾಗಿಲ್ಲ.
ಅದಕ್ಕೆ ಈಗ ಮತ್ತೂಂದು ಉದಾಹರಣೆ ಅಂದ್ರೆ ನಟಿ ಮಾಳವಿಕಾ ಅವಿನಾಶ್ ಅವರ ಪೋಸ್ಟ್. ಹೌದು, ಬಹುತೇಕರಿಗೆ ಗೊತ್ತಿರುವಂತೆ, ಮಾಳವಿಕಾ ಅವಿನಾಶ್ “ಕೆಜಿಎಫ್-2′ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ತಮ್ಮ ಭಾಗದ ಚಿತ್ರೀಕರಣ ಪೂರ್ಣಗೊಳಿಸಿರುವ ಮಾಳವಿಕಾ ಸದ್ಯ ತಮ್ಮ ಪಾತ್ರಕ್ಕೆ ವಾಯ್ಸ್ ಡಬ್ಬಿಂಗ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ಕಲಾ ಸಂಚಾರಿ ಕಣ್ತುಂಬ ಕನಸು: ಉದಯವಾಣಿ ಜೊತೆಗೆ ಸಂಚಾರಿ ವಿಜಯ್ ಕೊನೆಯ ಮಾತುಕತೆ
ಇದೀಗ ತಮ್ಮ ಪಾತ್ರಕ್ಕೆ ವಾಯ್ಸ್ ಡಬ್ಬಿಂಗ್ ನೀಡುತ್ತಿರುವ ಕೆಲವು ಫೋಟೋಗಳನ್ನು ಮಾಳವಿಕಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, “ಜೀವನವು ಸಾಮಾನ್ಯ ಸ್ಥಿತಿಗೆ ಬರದೇ ಇರಬಹುದು. ಆದರೆ ಅದರ ಕೆಲವು ಹೋಲಿಕೆ, 50 ದಿನಗಳ ನಂತರ ಕೆಲಸ…’ ಎಂದು ಬರೆದುಕೊಂಡಿದ್ದಾರೆ.
ಸದ್ಯ ಈ ಫೋಟೊಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು, ಸಿನಿಪ್ರಿಯರು,ಅಭಿಮಾನಿಗಳು “ಕೆಜಿಎಫ್-2′ ಸಿನಿಮಾದ ಬಗ್ಗೆ, ಬಿಡುಗಡೆಯ ಬಗ್ಗೆ ನಿರೀಕ್ಷೆಯ ಮಾತುಗಳನ್ನಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…