ಕಲರ್ ಫುಲ್ ಲುಕ್ ನಲ್ಲಿ ‘ಓಲ್ಡ್ ಮಾಂಕ್’: ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾ


Team Udayavani, Apr 9, 2021, 8:35 AM IST

ಕಲರ್ ಫುಲ್ ಲುಕ್ ನಲ್ಲಿ ‘ಓಲ್ಡ್ ಮಾಂಕ್’: ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾ

ತನ್ನ ಟೈಟಲ್‌ ಮೂಲಕ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ಶ್ರೀನಿ ನಟನೆ ಮತ್ತು ನಿರ್ದೇಶನದ “ಓಲ್ಡ್‌ ಮಾಂಕ್‌’ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗಲೇ ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿರುವ “ಓಲ್ಡ್‌ ಮಾಂಕ್‌’ ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಜೂನ್‌ ವೇಳೆಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ. ಇದರ ನಡುವೆಯೇ ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇದೀಗ “ಓಲ್ಡ್‌ ಮಾಂಕ್‌’ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆ ಮಾಡಿದೆ.

ಇದೇ ಏ. 8 ರಂದು “ಓಲ್ಡ್‌ ಮಾಂಕ್‌’ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದ್ದು, ನಟ ರಕ್ಷಿತ್‌ ಶೆಟ್ಟಿ ಮತ್ತು ನಿವಿನ್‌ ಪೌಲಿ “ಓಲ್ಡ್‌ ಮಾಂಕ್‌’ ಫ‌ಸ್ಟ್‌ ಲುಕ್‌ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಟ ಶ್ರೀನಿ ಇಲ್ಲಿಯವರೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದು ರೊಮ್ಯಾಂಟಿಕ್‌ – ಕಾಮಿಡಿ ಚಿತ್ರಗಳಲ್ಲಿ. ಆ ಚಿತ್ರಗಳು ಶ್ರೀನಿ ಅವರಿಗೆ ಸಾಕಷ್ಟು ಹೆಸರು, ಜನಪ್ರಿಯತೆ ಎರಡನ್ನೂ ತಂದುಕೊಟ್ಟಿವೆ. ಇನ್ನು “ಓಲ್ಡ್‌ ಮಾಂಕ್‌’ನಲ್ಲಿಯೂ ಅದೇ ಮ್ಯಾಜಿಕ್‌ ಮುಂದುವರೆಯಲಿದೆಯಂತೆ. “ಇದೊಂದು ರೊಮ್ಯಾಂಟಿಕ್‌ – ಕಾಮಿಡಿ ಸಬ್ಜೆಕ್ಟ್. ಅದರ ಜೊತೆಗೆ ಸಸ್ಪೆನ್ಸ್‌ – ಥ್ರಿಲ್ಲರ್‌, ಎಮೋಶನ್ಸ್‌ ಹೀಗೆ ಎಲ್ಲ ಎಂಟರ್‌ಟೈನ್ಮೆಂಟ್‌ ಅಂಶಗಳು ಇದರಲ್ಲಿ ಹದವಾಗಿ ಬೆರೆತಿದೆ. ಆದ್ರೆ ಯಾರೂ ನಿರೀಕ್ಷಿಸದ ಟ್ವಿಸ್ಟ್‌ ಆ್ಯಂಡ್‌ ಟರ್ನ್ಸ್ ಈ ಸಿನಿಮಾದಲ್ಲಿರಲಿದೆ. ಸ್ಟೋರಿ ಕಂಪ್ಲೀಟ್‌ ಚೇಂಜ್‌ ಆಗಿರಲಿದೆ. ಸ್ಕ್ರೀನ್‌ ಪ್ಲೇ ಮತ್ತು ಪ್ರಸೆಂಟೇಶನ್‌ ಸಿನಿಮಾದ ಹೈಲೈಟ್‌’ ಎನ್ನುತ್ತಾರೆ ಶ್ರೀನಿ.

ಇದನ್ನೂ ಓದಿ:‘ಕಸ್ತೂರ್ ಬಾ’ ಪಾತ್ರದಲ್ಲಿ ಹರಿಪ್ರಿಯಾ: ಬಿಝಿ ನಟಿಯ ಅಕೌಂಟ್‌ಗೆ ಮತ್ತೂಂದು ಸಿನಿಮಾ

“ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಶ್ರೀನಿ ಡಬಲ್‌ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ! ಹೌದು, “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಶ್ರೀನಿ ಅವರದ್ದು ನಿಜವಾಗಿಯೂ ಡಬಲ್‌ ರೋಲ್‌. ಡಬಲ್‌ ರೋಲ್‌ ಅಂದ ಮಾತ್ರಕ್ಕೆ ಶ್ರೀನಿ ತೆರೆಮೇಲೆ ಎರಡೆರಡು ಪಾತ್ರ ಮಾಡುತ್ತಿದ್ದಾರಾ ಅಂದ್ರೆ ಅಲ್ಲ. ಬದಲಾಗಿ ಶ್ರೀನಿ “ಓಲ್ಡ್‌ ಮಾಂಕ್‌’ನಲ್ಲಿ ತೆರೆಮುಂದೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ಎರಡೂ ರೋಲ್‌ ಅನ್ನು ತಾನೇ ತಾನೇ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಶ್ರೀನಿ ಅವರಿಗೆ ಇದರಲ್ಲಿ ಸ್ಕ್ರೀನ್‌ ಮೇಲೆ ಹೀರೋ ಪಾತ್ರವಾದರೆ, ಸ್ಕ್ರೀನ್‌ ಹಿಂದೆ ಡೈರೆಕ್ಟರ್‌ ಪಾತ್ರ. ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿರುವ ಶ್ರೀನಿ ಎರಡೂ ರೋಲ್‌ನಲ್ಲೂ ಬೌಂಡರಿ ಬಾರಿಸುವ ವಿಶ್ವಾಸದಲ್ಲಿದ್ದಾರೆ.

ಲವ್‌ ಕಂ ಕಾಮಿಡಿ ಕಥಾಹಂದರ ಹೊಂದಿರುವ “ಓಲ್ಡ್‌ ಮಾಂಕ್‌’ ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.ಉಳಿದಂತೆ ಹಿರಿಯ ನಟ ಎಸ್‌. ನಾರಾಯಣ್‌, ಕಲಾತಪಸ್ವಿ ರಾಜೇಶ್‌, ಉಮೇಶ್‌, ಆರ್‌.ಟಿ ರಮಾ, ಡಿಂಗ್ರಿ ನಾಗರಾಜ್‌, ಅರುಣಾ ಬಾಲರಾಜ್‌, ಸಿಹಿಕಹಿ ಚಂದ್ರು ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಸಿದ್ಧಿ ಎಂಟರ್‌ಟೈನ್ಮೆಂಟ್ಸ್‌’ ಬ್ಯಾನರ್‌ನಲ್ಲಿ ಪ್ರದೀಪ್‌ ಶರ್ಮಾ, ಸೌರಭ್‌ ವೈಭವ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.