ಒಬ್ಬ ಹೀರೋ ನಾಲ್ಕು ಲವ್‌ಸ್ಟೋರಿ

Team Udayavani, Sep 6, 2019, 5:54 AM IST

ನಟ ಜಗ್ಗೇಶ್‌ ಪುತ್ರ ಗುರುರಾಜ್‌ ಚಿತ್ರರಂಗಕ್ಕೆ ಬಂದಿರೋದು ನಿಮಗೆ ಗೊತ್ತೇ ಇದೆ. ಈಗ ಅವರ ನಟನೆಯ ಸಿನಿಮಾವೊಂದು ಬಿಡುಗಡೆಗೆ ಅಣಿಯಾಗಿದೆ. ಅದು ‘ವಿಷ್ಣು ಸರ್ಕಲ್’. ತುಂಬಾ ದಿನಗಳಿಂದ ಈ ಚಿತ್ರದ ಹೆಸರು ಕೇಳಿಬರುತ್ತಿದ್ದರೂ, ಚಿತ್ರ ಯಾವಾಗ ಬಿಡುಗಡೆಯಾಗುತ್ತದೆಂಬುದನ್ನು ಚಿತ್ರತಂಡ ಹೇಳಿರಲಿಲ್ಲ. ಈಗ ಚಿತ್ರತಂಡ ಬಿಡುಗಡೆಯ ಸನಿಹಕ್ಕೆ ಬಂದಿದ್ದು, ಚಿತ್ರ ಇಂದು ತೆರೆಕಾಣುತ್ತಿದೆ. ಈ ಹಿಂದೆ ‘ಹಾಫ್ ಮೆಂಟಲ್’ ಚಿತ್ರ ನಿರ್ದೇಶಿಸಿದ್ದ ಲಕ್ಷ್ಮೀ ದಿನೇಶ್‌ ಈ ಚಿತ್ರದ ನಿರ್ದೇಶಕರು. ಈ ಹಿಂದಿನ ಚಿತ್ರಕ್ಕೆ ಹೋಲಿಸಿದರೆ ‘ವಿಷ್ಣು ಸರ್ಕಲ್’ ಹೊಸ ಬಗೆಯ ಕಥೆಯೊಂದಿಗೆ ಸಾಗುತ್ತದೆಯಂತೆ. ಚಿತ್ರದಲ್ಲಿ ನಾಲ್ಕು ಲವ್‌ಸ್ಟೋರಿ ಇದ್ದು, ಮೂರು ಲವ್‌ಸ್ಟೋರಿ ಹೀರೋ ಸುತ್ತವೇ ಸುತ್ತಲಿದೆ ಎಂದು ವಿವರ ನೀಡಿದರು ನಿರ್ದೇಶಕರು. ಈ ಚಿತ್ರವನ್ನು ವಿಷ್ಣುವರ್ಧನ್‌ ಅವರ ಅಭಿಮಾನಿಯಾಗಿರುವ ಆರ್‌.ಭಾಸ್ಕರ್‌ ನಿರ್ಮಿಸಿದ್ದಾರೆ. ನಿರ್ದೇಶಕರು ಮಾಡಿಕೊಂಡಿದ್ದ ಕಥೆಗೆ ವಿಷ್ಣು ಅವರ ಕುರಿತಾದ ಒಂದಷ್ಟು ಅಂಶಗಳನ್ನು ಸೇರಿಸಿ ಈ ಸಿನಿಮಾ ಮಾಡಲಾಯಿತಂತೆ.

ಗುರುರಾಜ್‌ಗೆ ನಾಯಕಿಯರಾಗಿ, ಸಂಹಿತಾ ವಿನ್ಯಾ, ಡಾ. ಜಾಹ್ನವಿ ಜ್ಯೋತಿ, ದಿವ್ಯಾ ಗೌಡ ಜೋಡಿಯಾಗಿದ್ದಾರೆ. ಉಳಿದಂತೆ ಹಿರಿಯ ನಟ ದತ್ತಣ್ಣ, ಪಟ್ರೆ ನಾಗರಾಜ್‌, ಶಿವಮಂಜು ಮತ್ತಿತರರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ವಿಷ್ಣು ಸರ್ಕಲ್’ ಚಿತ್ರದ ಹಾಡುಗಳಿಗೆ ಶ್ರೇಯಾ ವತ್ಸ ಹಾಗೂ ಪ್ರದೀಪ್‌ ವರ್ಮ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ನಟಿಸಿದವರೆಲ್ಲರೂ ಸಿನಿಮಾದಲ್ಲಿನ ಅನುಭವ ಹಂಚಿಕೊಂಡರು. ಸೆ.18 ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬ. ಅದಕ್ಕಿಂತ ಮುಂಚೆಯೇ ವಿಷ್ಣು ಅವರ ಅಭಿಮಾನದ ಕುರಿತಾದ ಸಿನಿಮಾ ಬಿಡುಗಡೆಯಾಗುತ್ತಿರುವುದರಿಂದ ಚಿತ್ರತಂಡ ಖುಷಿಯಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಯಶಸ್ವಿಯಾಗಿ ನೂರು ಚಿತ್ರಗಳಲ್ಲಿ ಅಭಿನಯಿಸಿ, ಶತಕದ ಸಂಭ್ರಮದಲ್ಲಿರುವ ನಟ ರಮೇಶ್‌ ಅರವಿಂದ್‌, ಈ ವಾರ 101ನೇ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ....

  • ನಾನು ಎಲ್ಲಾ ಬಿಟ್ಟು, ಈ ರಂಗಕ್ಕೆ ಬಂದಿದ್ದೇ ಏನೋ ಮಾಡಬೇಕು ಅಂತ. ಚಾಲೆಂಜ್‌ ತೆಗೆದುಕೊಳ್ಳದಿದ್ದರೆ ಹೇಗೆ? ಕಂಫ‌ರ್ಟ್‌ ಜೋನ್‌ ಬಿಟ್ಟು ಬೇರೆ ಮಾಡಬೇಕು ಅಂದಾಗ,...

  • ಈಗಂತೂ ಮೊಬೈಲ್‌ನದ್ದೇ ಸುದ್ದಿ. ಯಾರ ಕೈ ನೋಡಿದರೂ ಮೊಬೈಲ್‌ ಇದ್ದೇ ಇರುತ್ತೆ. ಅದರಲ್ಲೂ ವಾಟ್ಸಾಪ್‌, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ, ಟ್ವಿಟ್ಟರ್‌...ಹೀಗೆ ಒಂದಾ...

  • ಪ್ರೇಮ್‌ ನಿರ್ದೇಶನದ "ಏಕಲವ್ಯ' ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ದೊಡ್ಡ ಗ್ಯಾಪ್‌ನ ಬಳಿಕ ಲವ್‌ಸ್ಟೋರಿ ಮಾಡುತ್ತಿರುವ ಪ್ರೇಮ್‌, ಈ ಬಾರಿ ಸಖತ್‌ ಬೋಲ್ಡ್‌ ಕಥೆಯನ್ನೇ...

  • ಹಿರಿಯ ಸಾಹಿತಿ ಡಾ.ಬಿ.ಎಲ್‌.ವೇಣು ಅವರ ಐತಿಹಾಸಿಕ ಕಾದಂಬರಿ "ದಳವಾಯಿ ಮುದ್ದಣ' ಈಗ ದೃಶ್ಯರೂಪ ಪಡೆದುಕೊಂಡಿದೆ. "ದಳವಾಯಿ ಮುದ್ದಣ್ಣ' ಕಾದಂಬರಿ ಈಗ ಚಲನಚಿತ್ರಕ್ಕೆ...

ಹೊಸ ಸೇರ್ಪಡೆ