ಒಂದು ಸಿನಿಮಾ ಐದು ಕಥೆ 

Team Udayavani, Mar 8, 2019, 12:30 AM IST

ಒಂದೇ ಸಿನಿಮಾದಲ್ಲಿ ಐದು ಹಾಗೂ ಐದಕ್ಕಿಂತ ಹೆಚ್ಚು ಕಥೆಗಳನ್ನು ಹೇಳುವ ಸಿನಿಮಾಗಳು ಕನ್ನಡದಲ್ಲಿ ಈಗಾಗಲೇ ಬಂದಿವೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ಒಂದ್‌ ಕಥೆ ಹೇಳ್ಳಾ. ಹೀಗೊಂದು ಹೆಸರಿನ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಒಂದು ಮುಖ್ಯ ಕಥೆ ಹಾಗೂ ನಾಲ್ಕು ಉಪಕಥೆಗಳೊಂದಿಗೆ ಈ ಸಿನಿಮಾ ನಿರ್ದೇಶಿಸಿದ್ದಾರೆ ಗಿರೀಶ್‌ ಜಿ. ಈ ಚಿತ್ರದ ವಿಶೇಷವೆಂದರೆ ಎಲ್ಲವೂ ಹಾರರ್‌ ಕಥೆಗಳು. ಹಾಗಾಗಿ, ಚಿತ್ರತಂಡ ಇದನ್ನು “ಹಾರರ್‌ ಅಂತೋಲಾಜೀ’ ಎಂದು ಹೇಳುತ್ತಿದೆ. ಚಿತ್ರದಲ್ಲಿ ಬರುವ ನಾಲ್ಕು ಉಪಕಥೆಗಳು ಕೂಡ ಅಂತಿಮವಾಗಿ ಒಂದಕ್ಕೊಂದು ಸೇರುತ್ತವೆಯಂತೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಿರೀಶ್‌, “ಚಿತ್ರದಲ್ಲಿ ಮೂವರು ಹುಡುಗರು, ಇಬ್ಬರು ಹುಡುಗಿಯರು ಬೆಂಗಳೂರಿನಿಂದ ಸಕಲೇಶಪುರಕ್ಕೆ ಪ್ರಯಾಣ ಮಾಡುವಾಗ ಅವರುಗಳಲ್ಲೆ ಒಂದೊಂದು ಕಥೆಗಳು ಹುಟ್ಟಿಕೊಳ್ಳುತ್ತವೆ. ಆ ಎಲ್ಲಾ ಕಥೆಗಳಲ್ಲೂ ಶೇಕಡಾ 60ರಷ್ಟು ಹಾರರ್‌ ಅಂಶಗಳು ಬರುತ್ತವೆ. ಒಂದು ಕಥೆಯಲ್ಲಿ ಭಕ್ತಪ್ರಹ್ಲಾದ ನಾಟಕವನ್ನು ಯಾಕಾಗಿ ಮಾಡುವುದಿಲ್ಲವೆಂದು ಹೇಳಲಾಗಿದೆ. ಹೋಂ ಸ್ಟೇಗಳಲ್ಲಿ ನಡೆದ ಕೆಲವು ಘಟನೆಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದಲ್ಲಿ ಕೋಳಿಯೊಂದು ಮುಖ್ಯ ಪಾತ್ರವಹಿಸುತ್ತದೆ. ಹೊಸ ಬಗೆಯ ಚಿತ್ರವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬ ವಿಶ್ವಾಸವಿದೆ ಎಂದರು. ಅಂದಹಾಗೆ, ಇದೊಂದು ಕ್ರೌಡ್‌ ಫ‌ಂಡಿಂಗ್‌ ಸಿನಿಮಾವಾಗಿದ್ದು, ಸುಮಾರು 20 ಮಂದಿ ನಿರ್ಮಾಪಕರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ.

“ಒಂದ್‌ ಕಥೆ ಹೇಳ್ಳಾ’ ಚಿತ್ರದಲ್ಲಿ ಪ್ರತೀಕ್‌, ದೀಪಕ್‌, ತಾರಾ, ತಾಂಡವ್‌, ಸೌಮ್ಯಾ, ರಮಾಕಾಂತ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರತಿಯೊಬ್ಬರು ತಮ್ಮ ಪಾತ್ರಗಳ ಅನುಭವ ಹಂಚಿಕೊಂಡರು. ಚಿತ್ರಕ್ಕೆ ಕೀರ್ತನ್‌ ಪೂಜಾರಿ ಛಾಯಾಗ್ರಹಣ, ಬಕ್ಕೇಶ್‌, ಕಾರ್ತಿಕ್‌ ಸಂಗೀತ, ಪ್ರತೀಕ್‌ ಸಂಕಲನವಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • "ಮೊದಲು ಕನ್ನಡ ಸಿನಿಮಾಗಳನ್ನು ನೋಡಿ, ಆ ನಂತರ ಬೇರೆ ಭಾಷೆಯಲ್ಲಿ ಆ ತರಹ ಮಾಡ್ತಾರೆ, ಈ ತರಹ ಮಾಡ್ತಾರೆ ಅಂತ ಮಾತನಾಡಿ ....' -ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್‌...

  • ಕಳೆದ ಎರಡು ವಾರಗಳಿಂದ ಸೂಕ್ಷ್ಮವಾಗಿ ಗಮನಿಸಿದರೆ, ಐದಾರು ಚಿತ್ರಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅಂತಹ ಚಿತ್ರಗಳು ನಿಧಾನಗತಿಯಲ್ಲೇ ನೋಡುಗರನ್ನು ಆಕರ್ಷಿಸುತ್ತವೆ....

  • ರಮೇಶ್‌ ಅರವಿಂದ್‌ ನಾಯಕಾಗಿರುವ "ಶಿವಾಜಿ ಸುರತ್ಕಲ್‌' ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್‌ ಬಿಡುಗಡೆಯ ಜೊತೆಗೆ ಚಿತ್ರತಂಡ ವಿಶಿಷ್ಟವಾಗಿ...

  • ಈ ಬಾರಿಯ ಮಹಾಶಿವರಾತ್ರಿ ಹಬ್ಬಕ್ಕೆ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿವೆ. ಈ ಚಿತ್ರಗಳ ಸಾಲಿನಲ್ಲಿ ಬಹುತೇಕ ಹೊಸಬರ "ಶಿವ' ಎನ್ನುವ ಚಿತ್ರವೂ...

  • ಯಾವುದಾದರೂ ವ್ಯಕ್ತಿಯ ದೈಹಿಕ ಎತ್ತರವನ್ನು ಅಳೆಯುವಾಗ ಅಡಿ-ಅಂಗುಲ ಪದಗಳನ್ನು ಬಳಕೆ ಮಾಡುವುದನ್ನು ನೋಡಿದ್ದೇವೆ. ಈಗ ಅಡಿ-ಅಂಗುಲ ಪದಗಳನ್ನೇ ಇಟ್ಟುಕೊಂಡು ಇಲ್ಲೊಂದು...

ಹೊಸ ಸೇರ್ಪಡೆ