ತೆರೆಯತ್ತ ಹೊಸಬರ ಆರ್.ಎಚ್. 100
Team Udayavani, Nov 27, 2020, 3:40 PM IST
ಲಾಕ್ ಡೌನ್ ತೆರವಿನ ನಂತರ ಚಿತ್ರಮಂದಿರಗಳು ತೆರೆಯಲು ಅನುಮತಿ ಸಿಗುತ್ತಿದ್ದಂತೆ ಒಂದೊಂದೇ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ಆರ್.ಎಚ್. 100 ಕೂಡಾ ಸೇರುತ್ತದೆ. ಈ ಚಿತ್ರ ಚಿತ್ರಕೂಡ ಡಿಸಂಬರ್18ರಂದುಬಿಡುಗಡೆಯಾಗಲಿದೆ. ಹಾರರ್ ಕಥಾ ಹಂದರ ಹೊಂದಿರುವ ಈ ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಎಸ್. ಎಲ್. ಎಸ್. ಪ್ರೊಡಕ್ಷನ್ಸ್ ನಡಿ ಹರೀಶ್‌ಕುಮಾರ್ ಎಲ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಮಹೇಶ್ ಎಂ ಸಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಮನೋಜ್, ಸಿದ್ದುಕೋಡಿಪುರ್ ಹಾಡುಗಳನ್ನು ಬರೆದಿದ್ದು, ಮೆಲ್ವಿನ್ ಮೈಕಲ್ ಸಂಗೀತ ನೀಡಿದ್ದಾರೆ. ಸಂಜಿತ್ ಹೆಗ್ಡೆ, ಅನುರಾಧ ಭಟ್, ಸಿದ್ದಾರ್ಥ್ ಬೆಲ್ ಮನು ಅವರಕಂಠಸಿರಿಯಲ್ಲಿ ಈ ಚಿತ್ರದ ಹಾಡುಗಳು ಮೂಡಿಬಂದಿದೆ.
ಚಿತ್ರಕ್ಕೆಕೃಷ್ಣ ಛಾಯಾಗ್ರಹಣ, ಸಿ.ರವಿಚಂದ್ರನ್ ಸಂಕಲನ ಹಾಗೂ ಕುಂಫ್ಫು ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಗಣೇಶ್, ಹರ್ಷ, ಚಿತ್ರ,ಕಾವ್ಯ, ಸೋಮ್, ಸುಹಿತ್ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444