8 ಪ್ಯಾಕ್‌ ಶ್ರಮ ಸಾರ್ಥಕ… ವಿನೋದ್‌ ಮೊಗದಲ್ಲಿ ರಗಡ್‌ ಖುಷಿ

Team Udayavani, Apr 5, 2019, 6:00 AM IST

Suchi-Ragad-726

ಕಳೆದ ವಾರವಷ್ಟೇ ನಟ ವಿನೋದ್‌ ಪ್ರಭಾಕರ್‌ ಅಭಿನಯದ ‘ರಗಡ್‌’ ಚಿತ್ರ ತೆರೆಗೆ ಬಂದಿದೆ. ಔಟ್‌ ಆ್ಯಂಡ್‌ ಔಟ್‌ ಮಾಸ್‌ ಎಂಟರ್‌ಟೈನ್ಮೆಂಟ್‌ ಕಥಾಹಂದರದ “ರಗಡ್‌’ ಚಿತ್ರ ಬಿಡುಗಡೆಯ ಬಳಿಕ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತ ಎರಡನೇ ವಾರಕ್ಕೆ ಕಾಲಿಡುತ್ತಿದೆ. ಇದೇ ವೇಳೆ “ರಗಡ್‌’ ಚಿತ್ರದ ಬಿಡುಗಡೆಯ ನಂತರ ಪ್ರೇಕ್ಷಕರಿಂದ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಮಾತನಾಡಲು ಚಿತ್ರತಂಡ ಪ್ರೇಕ್ಷಕರ ಮುಂದೆ ಬಂದಿತ್ತು.

ಚಿತ್ರದ ಬಗ್ಗೆ ಮೊದಲು ಮಾತಿಗಿಳಿದ ನಿರ್ಮಾಪಕ ಎ. ಅರುಣ್‌ ಕುಮಾರ್‌, “ಒಂದು ಒಳ್ಳೆಯ ಚಿತ್ರವನ್ನು ಮಾಡಬೇಕೆಂಬ ಹಲವು ವರ್ಷಗಳ ಕನಸು ಈ ಚಿತ್ರದ ಮೂಲಕ ನನಸಾಗಿದೆ. ಚಿತ್ರ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವನ್ನು ನೋಡಿದವರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಬಿಡುಗಡೆಯಾದ ನಂತರ ನಿಧಾನವಾಗಿ ಚಿತ್ರದ ಗಳಿಕೆಯಲ್ಲೂ ಏರಿಕೆಯಾಗುತ್ತಿದೆ. ಚಿತ್ರದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು’ ಎಂದರು.

ನಾಯಕ ವಿನೋದ್‌ ಪ್ರಭಾಕರ್‌ ಮಾತನಾಡಿ, “ಕನ್ನಡದಲ್ಲಿ ಮೊದಲ ಬಾರಿಗೆ ಈ ಚಿತ್ರದಲ್ಲಿ 8 ಪ್ಯಾಕ್ಸ್‌ ಮಾಡುವ ಐಡಿಯಾ ಬಂದಿತ್ತು. ಅದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾಯಿತು. ಚಿತ್ರದ ಸ್ಟಿಲ್ಸ್‌ ಬಿಡುಗಡೆಯಾದ ನಂತರ ಮುಂಬರುವ “ಫೈಟರ್‌’ ಸೇರಿದಂತೆ ಕೆಲವು ಚಿತ್ರಗಳ ಪಾತ್ರಗಳಲ್ಲಿ ಅದೇ 8 ಪ್ಯಾಕ್‌ ಲುಕ್‌ ಅನ್ನೇ ಮುಂದುವರೆಸುವಂತೆ ಅದರ ನಿರ್ದೇಶಕರು ಹೇಳಿದ್ದಾರೆ. ಚಿತ್ರಕ್ಕಾಗಿ ಹಾಕಿದ ಪರಿಶ್ರಮ ಈಗ ಸಾರ್ಥಕವಾಗಿದೆ. ಮಾಸ್‌ ಆಡಿಯನ್ಸ್‌ ಚಿತ್ರವನ್ನು ನೋಡಿ ಎಂಜಾಯ್‌ ಮಾಡುತ್ತಿದ್ದಾರೆ. ಇಂಥ ಅವಕಾಶವನ್ನು ಕೊಟ್ಟ ನಿರ್ಮಾಪಕರು, ನಿರ್ದೇಶಕರು ಮತ್ತು ಚಿತ್ರಕ್ಕೆ ಥ್ಯಾಂಕ್ಸ್‌’ ಎಂದರು.

ನಿರ್ದೇಶಕ ಶ್ರೀಮಹೇಶ್‌ ಗೌಡ ಮಾತನಾಡಿ, “ಚಿತ್ರ ಏಕಕಾಲಕ್ಕೆ ಸುಮಾರು 187 ಕೇಂದ್ರಗಳಲ್ಲಿ ಬಿಡುಗಡೆಯಾಗಿತ್ತು. ಅದರಲ್ಲೂ ಬಿ ಮತ್ತು ಸಿ ಸೆಂಟರ್‌ಗಳಲ್ಲಿ ಚಿತ್ರಕ್ಕೆ ಭಾರೀ ರೆಸ್ಪಾನ್ಸ್‌ ಸಿಗುತ್ತಿದೆ. ಹುಬ್ಬಳ್ಳಿ, ಮಂಡ್ಯ, ಮೈಸೂರು ಹೀಗೆ ಬಿಡುಗಡೆಯಾಗಿರುವ ರಾಜ್ಯದ ಎಲ್ಲಾ ಕೇಂದ್ರಗಳಲ್ಲೂ ಚಿತ್ರ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿದೆ. ಇಡೀ ಚಿತ್ರತಂಡದ ಪ್ರಯತ್ನಕ್ಕೆ ಒಳ್ಳೆಯ ಫ‌ಲಿತಾಂಶ ಸಿಗುತ್ತಿದೆ. ನಮ್ಮ ಪ್ರಯತ್ನ ಸಾರ್ಥಕವಾಗಿದೆ ಎಂಬ ತೃಪ್ತಿಯಿದೆ’ ಎಂದರು. ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ನಟ ನಾಗರಾಜ್‌ ಸಿದ್ಧಿ ಮತ್ತು ಚಿತ್ರದ ಇತರ ತಂತ್ರಜ್ಞರು ಮತ್ತು ಕಲಾವಿದರು ಚಿತ್ರದ ಅನುಭವಗಳು ಮತ್ತು ಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

1-wqewqewqe

Rae Bareli ಯಲ್ಲಿ ಗೆಲ್ಲಲು ಯತ್ನಿಸಿ: ವಿವಾದ ತಂದ ರಷ್ಯಾದ ಕ್ಯಾಸ್ಪರೋವ್‌ ಸಲಹೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.