ರೈತರ ಸುತ್ತ ರಣಂ

ಹೋರಾಟದ ಹಾದಿಯಲ್ಲಿ ಭರ್ಜರಿ ಆ್ಯಕ್ಷನ್‌

Team Udayavani, May 10, 2019, 6:10 AM IST

‘ರಣಂ’ ಚಿತ್ರೀಕರಣ ಸಾಹಸ ದೃಶ್ಯದ ವೇಳೆ ದುರಂತವೊಂದು ಸಂಭವಿಸಿದ್ದು ನಿಮಗೆ ನೆನಪಿರಬಹುದು. ಆ ಮೂಲಕ ಚಿತ್ರ ದೊಡ್ಡ ಸುದ್ದಿಗೆ ಗ್ರಾಸವಾಯಿತು. ಈಗ ಚಿತ್ರತಂಡ ಚಿತ್ರದ ಪ್ರಮೋಶನ್‌ ಕಾರ್ಯಗಳಲ್ಲಿ ನಿರತವಾಗಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಪೋಸ್ಟರ್‌ ಬಿಡುಗಡೆ ನಡೆಯಿತು. ಚೇತನ್‌ ಹಾಗೂ ಚಿರಂಜೀವಿ ಸರ್ಜಾ ನಾಯಕರಾಗಿರುವ ಈ ಚಿತ್ರವನ್ನು ಕನಕಪುರ ಶ್ರೀನಿವಾಸ್‌ ನಿರ್ಮಿಸುತ್ತಿದ್ದು, ಸಮುದ್ರ ಅವರ ನಿರ್ದೇಶನವಿದೆ.

‘ರಣಂ’ ಚಿತ್ರ ಇಂದಿನ ಯುವಕರು ಮತ್ತು ರೈತರ ಕುರಿತಾದ ಚಿತ್ರ ಎಂಬುದು ಚಿತ್ರತಂಡದ ಮಾತು. ಚಿತ್ರದಲ್ಲಿ ರೈತ ಕುಟುಂಬದಿಂದ ಬಂದ ನಾಲ್ವರು ಸಾಮಾನ್ಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು ಏನೇನು ತೊಂದರೆಗಳನ್ನು ಅನುಭವಿಸುತ್ತಾರೆ. ರೈತ ಕುಟುಂಬಗಳ ನೋವುಗಳೇನು, ಅದಕ್ಕೆ ಪರಿಹಾರಗಳೇನು ಎನ್ನುವುದೇ ಚಿತ್ರದ ಕಥಾಹಂದರ. ಹಾಗಾಗಿ ಇದು ಇಂದಿನ ಯುವಕರಿಂದ ಹಿಡಿದು ಪೋಷಕರವರೆಗೆ ಎಲ್ಲರಿಗೂ ಕನೆಕ್ಟ್ ಆಗುವ ಚಿತ್ರ ಎನ್ನುತ್ತದೆ ಚಿತ್ರತಂಡ.

ನಾಯಕ ಚೇತನ್‌ ಈ ಚಿತ್ರದ ಪಾತ್ರ ತುಂಬಾ ಖುಷಿ ಕೊಟ್ಟಿದೆಯಂತೆ. ನಿಜ ಜೀವನಕ್ಕೆ ತುಂಬಾ ಹತ್ತಿರವಾದ ಪಾತ್ರ ಎಂಬುದು ಅವರ ಪಾತ್ರ. ಚಿತ್ರದಲ್ಲಿ ತೆಲುಗು ನಟಿ ವರಲಕ್ಷ್ಮೀ ನಾಯಕಿಯಾಗಿ ನಟಿಸಿದ್ದು, ಅವರಿಲ್ಲಿ ಸಿಬಿಐ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರಂತೆ. ಇನ್ಸ್‌ಪೆಕ್ಟರ್‌ ಆಗಿ ಚಿರಂಜೀವಿ ಸರ್ಜಾ, ಕಾಲೇಜು ವಿದ್ಯಾರ್ಥಿನಿ ಪಾತ್ರದಲ್ಲಿ ಹಾಸನದ ನೀತೂಗೌಡ ನಟಿಸಿದ್ದಾರೆ. ಉಳಿದಂತೆ ತೆಲುಗು ನಟರಾದ ದೇವಗಿಲ್‌, ಮಧು ಖಳನಟರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಉಳಿದಂತೆ ಸಾಧುಕೋಕಿಲ ಮತ್ತಿತರ ಕಲಾವಿದರು ಚಿತ್ರ ಇತರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಚೇತನ್‌ಕುಮಾರ್‌. ಎ.ಪಿ.ಅರ್ಜುನ್‌ ಸಾಹಿತ್ಯವಿದೆ. ಚಿತ್ರಕ್ಕೆ ರವಿವರ್ಮ, ಥ್ರಿಲ್ಲರ್‌ ಮಂಜು ಸಾಹಸವಿದ್ದು, ನಿರಂಜನ್‌ ಬಾಬು ಛಾಯಾಗ್ರಹಣವಿದೆ. ಸದ್ಯಕ್ಕೆ ಕನ್ನಡ ಮತ್ತು ತೆಲುಗಿನಲ್ಲಿ ಮಾತ್ರ ಚಿತ್ರವನ್ನು ನಿರ್ಮಿಸುತ್ತಿದ್ದು, ತಮಿಳಿಗೆ ಚಿತ್ರವನ್ನು ಡಬ್‌ ಮಾಡುವ ಬಗ್ಗೆ ಯೋಚಿಸುತ್ತಿದೆ.


ಈ ವಿಭಾಗದಿಂದ ಇನ್ನಷ್ಟು

  • "ನಾನು ಏನು ಅಂದುಕೊಂಡಿದ್ದೆನೋ ಹಾಗೇ ಆಗಿದೆ...' - ಹೀಗೆ ಹೇಳಿ ಹಾಗೊಂದು ಸ್ಮೈಲ್‌ ಕೊಟ್ಟರು ನಿರ್ಮಾಪಕ ಶ್ರೀನಿವಾಸ್‌. ಅವರು ಹೀಗೆ ಹೇಳಿದ್ದು ತಮ್ಮ ನಿರ್ಮಾಣದ...

  • "ಈ ಸಿನಿಮಾದ ನಿಜವಾದ ಹೀರೋ ನಿರ್ಮಾಪಕ ಮುನಿರತ್ನ' - ಹೀಗೆ ಹೇಳಿ ಪಕ್ಕದಲ್ಲಿ ಕುಳಿತಿದ್ದ ನಿರ್ಮಾಪಕ ಮುನಿರತ್ನ ಅವರತ್ತ ನೋಡಿದರು ನಿರ್ದೇಶಕ ನಾಗಣ್ಣ. ಅವರು ಹೀಗೆ...

  • ಈಗಾಗಲೇ ಶೀರ್ಷಿಕೆ, ಫ‌ಸ್ಟ್‌ಲುಕ್‌ ಹಾಗೂ ಟೀಸರ್‌ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ "ಕಮರೊಟ್ಟು ಚೆಕ್‌ಪೋಸ್ಟ್‌' ಇದೀಗ ರಿಲೀಸ್‌ಗೆ ರೆಡಿಯಾಗಿದೆ. ಚಿತ್ರದಲ್ಲಿ...

  • ಮುಹೂರ್ತದ ಬಳಿಕ ಎಲ್ಲಿಯೂ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿರದ "ಅಮರ್‌' ಚಿತ್ರತಂಡ, ಚಿತ್ರದ ಬಿಡುಗಡೆಗೂ ಮುನ್ನ ಪತ್ರಿಕಾಗೋಷ್ಟಿಯನ್ನು ನಡೆಸಿ "ಅಮರ್‌' ಸಿನಿ...

  • ಶಾದಿ ಕೆ ಆಫ್ಟರ್‌ ಎಫೆಕ್ಟ್...! - ಇದು ಬಾಲಿವುಡ್‌ನ‌ಲ್ಲಿ ಬಂದ ಸಿನಿಮಾದ ಹೆಸರು. ಈಗ ಇಲ್ಲೇಕೆ ಈ ಹೆಸರಿನ ಪ್ರಸ್ತಾಪ ಎಂಬ ಸಣ್ಣದ್ದೊಂದು ಪ್ರಶ್ನೆ ಕಾಡಬಹುದು. ಹಾಗಂತ,...

ಹೊಸ ಸೇರ್ಪಡೆ