ರಾಂಧವ ಎಂಟ್ರಿಗೆ ಮುಹೂರ್ತ ಫಿಕ್ಸ್‌

ಭುವನ್‌ ನಟನೆಯ ಚೊಚ್ಚಲ ಚಿತ್ರ

Team Udayavani, Aug 2, 2019, 5:00 AM IST

“ಬಿಗ್‌ಬಾಸ್‌’ ರಿಯಾಲಿಟಿ ಶೋ ಮೂಲಕ ಖ್ಯಾತಿ ಗಳಿಸಿದ್ದ ನಟ ಭುವನ್‌ ಪೊನ್ನಣ್ಣ ಅಭಿನಯದ ಚೊಚ್ಚಲ ಚಿತ್ರ “ರಾಂಧವ’ ತೆರೆಗೆ ಬರಲು ರೆಡಿಯಾಗಿದೆ. ಈಗಾಗಲೇ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿದ್ದು, “ರಾಂಧವ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿದೆ. ಇದೇ ಖುಷಿಯಲ್ಲಿರುವ “ರಾಂಧವ’ ಚಿತ್ರತಂಡ ಆಗಸ್ಟ್‌ 15ರಂದು ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ.

ಸದ್ಯ ಭರ್ಜರಿಯಾಗಿ ಚಿತ್ರದ ಪ್ರಮೋಶನ್‌ ಕೆಲಸಗಳಲ್ಲಿ ನಿರತವಾಗಿರುವ “ರಾಂಧವ’ ಚಿತ್ರತಂಡ ಚಿತ್ರದ ಪ್ರಚಾರದ ಭಾಗವಾಗಿ ಈಗಾಗಲೇ ಆಡಿಯೋ ಮತ್ತು ಟ್ರೇಲರ್‌ಗಳನ್ನು ಬಿಡುಗಡೆ ಮಾಡಿದೆ. “ರಾಂಧವ’ ನ ಆಡಿಯೋ ಮತ್ತು ಟ್ರೇಲರ್‌ಗಳಿಗೆ ಚಿತ್ರರಂಗದಿಂದ ಮತ್ತು ಸಿನಿಪ್ರಿಯರಿಂದ ಮೆಚ್ಚುಗೆಯ ಮಾತುಗಳು ವ್ಯಕ್ತವಾಗುತ್ತಿವೆ.

“ರಾಂಧವ’ ಚಿತ್ರಕ್ಕೆ ಯುವ ನಿರ್ದೇಶಕ ಸುನೀಲ್‌ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ತಮ್ಮ ಚೊಚ್ಚಲ ಚಿತ್ರಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದ ಸುನೀಲ್‌ ಸುಮಾರು ಎರಡೂವರೆ ವರ್ಷಗಳ ಪರಿಶ್ರಮದ ಬಳಿಕ “ರಾಂಧವ’ನನ್ನು ತೆರೆಗೆ ತರುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟ ಭುವನ್‌ ರಾಜರ ಕಾಲದ ಪಾತ್ರದಿಂದ ಹಿಡಿದು ಇಂದಿನ ಆಧುನಿಕ ಕಾಲದವರೆಗೆ ಮೂರು ಡಿಫ‌ರೆಂಟ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅಪೂರ್ವ ಶ್ರೀನಿವಾಸ್‌ ನಾಯಕಿಯ ಪಾತ್ರಕ್ಕೆ ಬಣ್ಣ ಹಚ್ಚಿ¨ªಾರೆ. ಶಶಾಂಕ್‌ ಶೇಷಗಿರಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡುವ “ರಾಂಧವ’ ಚಿತ್ರತಂಡ, “ಆಗಸ್ಟ್‌ ತಿಂಗಳಿನಲ್ಲಿ ಸಾಕಷ್ಟು ದೊಡ್ಡ ದೊಡ್ಡ ಚಿತ್ರಗಳ ಅಬ್ಬರವಿದೆ. ಅದರ ನಡುವೆಯೇ ಸುಮಾರು 200ಕ್ಕು ಹೆಚ್ಚು ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರವನ್ನು ರಿಲೀಸ್‌ ಮಾಡುವ ಪ್ಲಾನ್‌ನಲ್ಲಿದ್ದೇವೆ. ಈಗಾಗಲೆ ಚಿತ್ರದ ಹಾಡುಗಳು ಮತ್ತು ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹಾಗಾಗಿ ಚಿತ್ರದ ಮೇಲೆ ನಿರೀಕ್ಷೆ ಇದೆ’ ಎಂದಿದೆ.

ಒಟ್ಟಾರೆ ಇಲ್ಲಿಯವರೆಗೆ ಕಿರುತೆರೆ ನಟನಾಗಿ ಮಿಂಚುವಲ್ಲಿ ಯಶಸ್ವಿಯಾಗಿದ್ದ ಭುವನ್‌ ಪೊನ್ನಣ್ಣ, “ರಾಂಧವ’ನಾಗಿ ಒಂದಷ್ಟು ನಿರೀಕ್ಷೆ ಮೂಡಿಸಿದ್ದು, ನಾಯಕ ನಟನಾಗಿ ಬೆಳ್ಳಿತೆರೆಮೇಲೆ ಎಷ್ಟರ ಮಟ್ಟಿಗೆ ಕಮಾಲ್‌ ಮಾಡಲಿದ್ದಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೆ ಗೊತ್ತಾಗಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • "ಮೊದಲು ಕನ್ನಡ ಸಿನಿಮಾಗಳನ್ನು ನೋಡಿ, ಆ ನಂತರ ಬೇರೆ ಭಾಷೆಯಲ್ಲಿ ಆ ತರಹ ಮಾಡ್ತಾರೆ, ಈ ತರಹ ಮಾಡ್ತಾರೆ ಅಂತ ಮಾತನಾಡಿ ....' -ಕೆಲವು ದಿನಗಳ ಹಿಂದೆಯಷ್ಟೇ ನಟ ದರ್ಶನ್‌...

  • ಕಳೆದ ಎರಡು ವಾರಗಳಿಂದ ಸೂಕ್ಷ್ಮವಾಗಿ ಗಮನಿಸಿದರೆ, ಐದಾರು ಚಿತ್ರಗಳಿಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಅಂತಹ ಚಿತ್ರಗಳು ನಿಧಾನಗತಿಯಲ್ಲೇ ನೋಡುಗರನ್ನು ಆಕರ್ಷಿಸುತ್ತವೆ....

  • ರಮೇಶ್‌ ಅರವಿಂದ್‌ ನಾಯಕಾಗಿರುವ "ಶಿವಾಜಿ ಸುರತ್ಕಲ್‌' ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್‌ ಬಿಡುಗಡೆಯ ಜೊತೆಗೆ ಚಿತ್ರತಂಡ ವಿಶಿಷ್ಟವಾಗಿ...

  • ಈ ಬಾರಿಯ ಮಹಾಶಿವರಾತ್ರಿ ಹಬ್ಬಕ್ಕೆ ಸಾಲು ಸಾಲು ಚಿತ್ರಗಳು ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿವೆ. ಈ ಚಿತ್ರಗಳ ಸಾಲಿನಲ್ಲಿ ಬಹುತೇಕ ಹೊಸಬರ "ಶಿವ' ಎನ್ನುವ ಚಿತ್ರವೂ...

  • ಯಾವುದಾದರೂ ವ್ಯಕ್ತಿಯ ದೈಹಿಕ ಎತ್ತರವನ್ನು ಅಳೆಯುವಾಗ ಅಡಿ-ಅಂಗುಲ ಪದಗಳನ್ನು ಬಳಕೆ ಮಾಡುವುದನ್ನು ನೋಡಿದ್ದೇವೆ. ಈಗ ಅಡಿ-ಅಂಗುಲ ಪದಗಳನ್ನೇ ಇಟ್ಟುಕೊಂಡು ಇಲ್ಲೊಂದು...

ಹೊಸ ಸೇರ್ಪಡೆ