ನಿಲ್ದಾಣ ಪ್ರವೇಶಿಸಿದ ಪ್ರೇಮ ಕಥೆ

Team Udayavani, Aug 16, 2019, 5:55 AM IST

q-38

ಕನ್ನಡದಲ್ಲಿ ಇತ್ತೀಚೆಗೆ ಅಚ್ಚ ಕನ್ನಡದ ಶೀರ್ಷಿಕೆಯ ಮೂಲಕ ಕೆಲವು ಚಿತ್ರಗಳು ಗಮನ ಸೆಳೆದರೆ, ಇನ್ನು ಕೆಲವು ಚಿತ್ರಗಳು ಅಷ್ಟೇ ತಾಜಾ ಕಥೆಯ ಮೂಲಕ ಗಮನ ಸೆಳೆಯುತ್ತವೆ. ಇತ್ತೀಚೆಗೆ ಹಾಗೆ ತನ್ನ ಶೀರ್ಷಿಕೆ ಮತ್ತು ಕಥೆ ಎರಡರ ಮೂಲಕವೂ ಗಮನ ಸೆಳೆಯುತ್ತಿರುವ ಚಿತ್ರ ‘ಮುಂದಿನ ನಿಲ್ದಾಣ’. ಸುಮಾರು ಒಂದೂವರೆ ವರ್ಷಗಳ ಹಿಂದೆ ಶುರುವಾಗಿದ್ದ ಬಹುತೇಕ ಕಡಲತಡಿಯ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ ‘ಮುಂದಿನ ನಿಲ್ದಾಣ’ ಚಿತ್ರ ಸದ್ಯ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ‘ಮುಂದಿನ ನಿಲ್ದಾಣ’ ಚಿತ್ರದ ಮೊದಲ ಪೋಸ್ಟರ್‌ ಮತ್ತು ಟೀಸರ್‌ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿದ ಚಿತ್ರತಂಡ, ಅಕ್ಟೋಬರ್‌ ವೇಳೆಗೆ ‘ಮುಂದಿನ ನಿಲ್ದಾಣ’ವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಟ ಕಂ ನಿರ್ದೇಶಕ ರಿಷಭ್‌ ಶೆಟ್ಟಿ ‘ಮುಂದಿನ ನಿಲ್ದಾಣ’ ಚಿತ್ರದ ಮೊದಲ ಪೋಸ್ಟರ್‌ ಮತ್ತು ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ರಿಷಭ್‌ ಶೆಟ್ಟಿ, ‘ಚಿತ್ರದ ಪೋಸ್ಟರ್‌ ಮತ್ತು ಟೀಸರ್‌ ಚೆನ್ನಾಗಿ ಬಂದಿದ್ದು ನಿರೀಕ್ಷೆ ಮೂಡಿಸುವಂತಿದೆ. ಚಿತ್ರ ಕೂಡ ನಿರೀಕ್ಷೆಯಂತೆಯೇ ಅಷ್ಟೇ ಚೆನ್ನಾಗಿ ಬರಲಿ’ ಎಂಬ ಆಶಯ ವ್ಯಕ್ತಪಡಿಸಿದರು. ಚಿತ್ರದ ಕಥಾಹಂದರದ ಬಗ್ಗೆ ಮಾತಿಗಿಳಿದ ನಿರ್ದೇಶಕ ವಿನಯ್‌ ಭಾರದ್ವಾಜ್‌, ‘ಮುಂದಿನ ನಿಲ್ದಾಣ ಇವತ್ತಿನ ಜನರೇಶನ್‌ಗೆ ಹತ್ತಿರವಾದ ಚಿತ್ರ. ಚಿತ್ರದಲ್ಲಿ ಇಂದಿನ ಜನರೇಶನ್‌ನ ಮೂವರ ಕಥೆ ಇದೆ. ಈಗಿನ 18-40 ರ ವಯಸ್ಸಿನವರಿಗೆ ಚಿತ್ರ ಖಂಡಿತಾ ಇಷ್ಟವಾಗುವುದೆಂಬ ನಂಬಿಕೆ ಇದೆ’ ಎಂಬ ವಿವರಣೆ ನೀಡಿದರು.

‘ಮುಂದಿನ ನಿಲ್ದಾಣ’ ಚಿತ್ರದಲ್ಲಿ ಪ್ರವೀಣ್‌ ತೇಜ್‌, ರಾಧಿಕಾ ನಾರಾಯಣ್‌ ಮತ್ತು ಅನನ್ಯಾ ಕಶ್ಶಪ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರವೀಣ್‌ ತೇಜ್‌ ಚಿತ್ರದಲ್ಲಿ, ಪೋಟೋಗ್ರಫಿಯನ್ನ ಹವ್ಯಾಸವಾಗಿಟ್ಟುಕೊಂಡ, ಇವತ್ತಿನ ಯಂಗ್‌ ಜನರೇಶನ್‌ನ ಸಾಫ್ಟ್ವೇರ್‌ ಇಂಜಿನಿಯರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ರಾಧಿಕಾ ನಾರಾಯಣ್‌, ಮೀರಾ ಶರ್ಮ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮತ್ತೂಬ್ಬ ನಟಿ ಅನನ್ಯಾ ಕಶ್ಯಪ್‌, ಅಹನಾ ಕಶ್ಯಪ್‌ ಎನ್ನುವ ವೈದ್ಯೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಇನ್ನು ಚಿತ್ರದ ಕಲರಿಂಗ್‌ ಕಾರ್ಯಗಳನ್ನು ಪ್ರತಿಷ್ಟಿತ ರೆಡ್‌ ಚಿಲ್ಲೀಸ್‌ ಸಂಸ್ಥೆ ಮಾಡಿದೆ. ಈ ನಿರ್ಮಾಪಕ ತಾರನಾಥ ಶೆಟ್ಟಿ ಮತ್ತಿತರರು ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದು, ಪ್ರೇಕ್ಷಕರ ಮುಂದೆ ತರುವ ಹುಮ್ಮಸ್ಸಿನಲ್ಲಿದ್ದಾರೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.