ಲಾಕ್‌ಡೌನ್‌ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ‌ಶಿವಪ್ಪನಾದ ಶಿವಣ್ಣ

Team Udayavani, Nov 20, 2020, 4:21 PM IST

ಲಾಕ್‌ಡೌನ್‌ ಬಳಿಕ ಹೊಸ ಚಿತ್ರದತ್ತ ಸೆಂಚುರಿ ಸ್ಟಾರ್ : ‌ಶಿವಪ್ಪನಾದ ಶಿವಣ್ಣ

ಲಾಕ್‌ಡೌನ್‌ ನಂತರ ಶಿವರಾಜ್‌ ಕುಮಾರ್‌ ಅವರ ಹೊಸ ಚಿತ್ರಕ್ಕೆ ಮುಹೂರ್ತ ನಡೆದಿದೆ. ಗುರುವಾರ ಅವರ ಹೊಸ ಚಿತ್ರ ಸೆಟ್ಟೇರಿದ್ದು,ಈ ಚಿತ್ರಕ್ಕೆ “ಶಿವಪ್ಪ’ ಎಂದು ಹೆಸರಿಡಲಾಗಿದೆ. ಚಿತ್ರಕ್ಕೆಕಾಯೋ ತಂದೆ ಎಂಬ ಟ್ಯಾಗ್‌ಲೈನ್‌ ಇದೆ. ಇದು ಶಿವರಾಜ್‌ ಕುಮಾರ್‌ ಅವರ 123ನೇ ಸಿನಿಮಾವಾಗಿದ್ದು, ತಮಿಳಿನ ಖ್ಯಾತ ಛಾಯಾಗ್ರಾಹಕ, ನಿರ್ದೇಶಕ ವಿಜಯ್‌ ಮಿಲ್ಟನ್‌ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರದಲ್ಲಿ ಧನಂಜಯ್‌, ಪೃಥ್ವಿ ಅಂಬರ್‌ ನಟಿಸುತ್ತಿದ್ದಾರೆ. ನಟಿ ಉಮಾಶ್ರೀ ದೊಡ್ಡ ಗ್ಯಾಪ್‌ನ ನಂತರ ಮತ್ತೆನಟನೆಗೆ ಮರಳಿದ್ದಾರೆ. ಚಿತ್ರದಲ್ಲಿ ಶಶಿಕುಮಾರ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದು,10 ವರ್ಷಗಳ ನಂತರ ಶಿವಣ್ಣ ಜೊತೆ ನಟಿಸುತ್ತಿದ್ದಾರೆ.

ತಪ್ಪು ಮಾಡಲು ಹೊರಡೋದೇ ದೊಡ್ಡ ತಪ್ಪು ಎಂಬ ಸಂದೇಶದೊಂದಿಗೆ ಈ ಸಿನಿಮಾ ಮಾಡಲಾಗುತ್ತಿದೆ. ಶಿವರಾಜ್‌ಕುಮಾರ್‌ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲಾಕ್‌ಡೌನ್‌ ಮುಂಚೆ ಒಪ್ಪಿಕೊಂಡ ಸಿನಿಮಾ ಇದಾಗಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿರುವುದರಿಂದ ಶಿವಣ್ಣ ಖುಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡುವ ಅವರು, “ಕಥೆ ಚೆನ್ನಾಗಿದೆ. ಯಾವಾಗ ಚಿತ್ರೀಕರಣ ಆರಂಭವಾಗುತ್ತದೋ ಎಂದು ನಾನು ಕಾಯುತ್ತಿದ್ದೆ. ಇದು ಪಕ್ಕಾ ವಿಜಯ್‌ ಮಿಲ್ಟನ್‌ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎನ್ನುತ್ತಾರೆ.

ಚಿತ್ರ ಸಹಜವಾಗಿ ಬರಲು ಏಕಕಾಲದಲ್ಲಿ ಮೂರು ಕ್ಯಾಮರಾ ಇಟ್ಟು ಚಿತ್ರೀಕರಿಸಿಕೊಳ್ಳುವ ಪ್ಲ್ರಾನ್‌ ಚಿತ್ರತಂಡಕ್ಕಿದೆ. ಚಿತ್ರದಲ್ಲಿ ಏಳು ಫೈಟ್‌ ಇದ್ದು, ವಿಭಿನ್ನವಾಗಿ ಚಿತ್ರೀಕರಿಸುವ ಯೋಚನೆ ಚಿತ್ರತಂಡದ್ದು. ಒಂದು ವಾರ ಬೆಂಗಳೂರಿನಲ್ಲಿ ಹಾಗೂ ಉಳಿದಂತೆ ಗೋಕರ್ಣದಲ್ಲಿ ಶೂಟಿಂಗ್‌ನಡೆಯಲಿದೆ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಆಯ್ಕೆ ಇನ್ನಷ್ಟೇ ಆಗಬೇಕಿದೆ. ಚಿತ್ರವನ್ನುಕೃಷ್ಣ ಕ್ರಿಯೇಶನ್ಸ್‌ನಡಿ ಕೃಷ್ಣ ಸಾರ್ಥಕ್‌ ನಿರ್ಮಿಸುತ್ತಿದ್ದಾರೆ. ಚಿತ್ರ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಎಂಟು ತಿಂಗಳ ನಂತರ ಹೊಸ ಸಿನಿಮಾ ತೆರೆಗೆ

ಸದ್ಯಕ್ಕಿಲ್ಲ ಎಸ್‌ಆರ್‌ಕೆ, ಆರ್‌ಡಿಎಕ್ಸ್‌ : ಶಿವರಾಜ್‌ಕುಮಾರ್‌ಈ ಹಿಂದೆ “ಎಸ್‌ಆರ್ ಕೆ’ ಹಾಗೂ”ಆರ್‌ಡಿಎಕ್ಸ್‌’ ಎಂಬ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಆದರೆ, ಸದ್ಯಕ್ಕೆ ಆ ಸಿನಿಮಾಗಳು ಆರಂಭವಾಗುತ್ತಿಲ್ಲ. ಬೇರೆಬೇರೆ ಕಾರಣಗಳಿಂದ ಆ ಚಿತ್ರಗಳ ಚಿತ್ರೀಕರಣಮುಂದೆ ಹೋಗಿವೆ. ಸದ್ಯ ಶಿವಣ್ಣ “ಶಿವಪ್ಪ’ನಲ್ಲಿ ಬಿಝಿ. “ಭಜರಂಗಿ-2′ ನಂತರ “ಶಿವಪ್ಪ’ ಚಿತ್ರವೇ ತೆರೆಗೆ ಬರಲಿದೆ.

ಕೋವಿಡ್ ಬಳಿಕ ಆರು ಸಿನಿಮಾಗಳಿಗೆ ಗ್ರೀನ್‌ ಸಿಗ್ನಲ್‌ : ಶಿವರಾಜ್‌ಕುಮಾರ್‌ ಕೋವಿಡ್ ಲಾಕ್‌ಡೌನ್‌ ವೇಳೆ ಸುಮ್ಮನೆ ಮನೆಯಲ್ಲಿಕುಳಿತಿಲ್ಲ. ಸಾಕಷ್ಟು ಸಿನಿಮಾ, ವೆಬ್‌ ಸೀರಿಸ್‌ಗಳನ್ನು ನೋಡಿದ್ದಾರೆ. ಜೊತೆಗೆ ಹೊಸಕಥೆಗಳನ್ನು ಕೇಳಿದ್ದಾರೆ. ಫೋನ್‌ನಲ್ಲೇ ಕಥೆ ಕೇಳಿ ಇಷ್ಟಪಟ್ಟ ಶಿವಣ್ಣ, ಆರು ಸಿನಿಮಾಗಳಿಗೆ ಗ್ರೀನ್‌ ಸಿಗ್ನಲ್‌ಕೊಟ್ಟಿದ್ದಾರೆ. ಹಾಗಾಗಿ, ಹೊಸದಾಗಿ ಶಿವಣ್ಣಕೈಯಲ್ಲಿ ಆರು ಸಿನಿಮಾಗಳಿವೆ. ಈ ಬಗ್ಗೆ ಮಾತನಾಡುವ ಶಿವಣ್ಣ, “ಕೋವಿಡ್ ಸಮಯದಲ್ಲಿ ನನಗೇನು ಮನೆಯಲ್ಲಿದ್ದು, ಬೇಸರವಾಗಿಲ್ಲ. ನಾನು ಸಾಕಷ್ಟು ಕಥೆ ಕೇಳಿದೆ. ಹೊಸದಾಗಿ ಆರು ಸಿನಿಮಾ ಒಪ್ಪಿಕೊಂಡಿದ್ದೇನೆ. ಆ ಸಿನಿಮಾಗಳ ಬಗ್ಗೆ ಆಯಾ ಸಮಯ ಬಂದಾಗ ಹೇಳುತ್ತೇನೆ’ ಎನ್ನುತ್ತಾರೆ.

ಶಿವರಾಜ್‌ ಕುಮಾರ್‌ ಅವರನ್ನೊಳಗೊಂಡ ಚಿತ್ರರಂಗದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಆದರೆ, ಈವರೆಗೆ ಸರ್ಕಾರದಿಂದ ಯಾವುದೇ ನೆರವು ಬಿಡುಗಡೆಯಾಗಿಲ್ಲ. ಈ ಬಗ್ಗೆ ಮಾತನಾಡುವ ಶಿವರಾಜ್‌ಕುಮಾರ್‌, “ನಮಗೆ ಸರ್ಕಾರದ ಮೇಲೆ ಭರವಸೆ ಇದೆ. ಸ್ವಲ್ಪ ದಿನ ತಡವಾದರೂ ಚಿತ್ರರಂಗದ ಕಷ್ಟಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವಿದೆ. ಎಲ್ಲರಿಗೂ ಅವರವರದ್ದೇ ಆದ ಸಮಸ್ಯೆಗಳು ಇರುತ್ತವೆ’ ಎನ್ನುತ್ತಾರೆ ಶಿವಣ್ಣ.

ಗಾಜನೂರಿನ ತೋಟದ ಕೆಲಸ :  ಶಿವರಾಜ್‌ಕುಮಾರ್‌ ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಸಿನಿಮಾ ಕೆಲಸದ ಜೊತೆಗೆ ಕೃಷಿ ಕೆಲಸ ಕೂಡಾ ಮಾಡಿದ್ದಾರೆ. ಗಾಜನೂರಿನಲ್ಲಿರುವ ಜಮೀನಿನ ಕೆಲಸವನ್ನು ಮಾಡಿಸಿದ್ದಾರೆ. ಈ ಮೂಲಕ ಕೃಷಿಯತ್ತವೂ ಶಿವಣ್ಣ ಒಲವು ತೋರಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿ

ಐಎನ್‌ಎಸ್‌ ವಿಕ್ರಾಂತ್‌ ; ಭಾರತಕ್ಕೆ ದೇಶೀಯ ಯುದ್ಧನೌಕೆಯ ಶಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No sankranthi Excitement in Kannada film industry

ಮಂಕಾದ ಸಿನಿ ಸಂಕ್ರಾಂತಿ: ಮುಹೂರ್ತ, ಸಿನ್ಮಾ ರಿಲೀಸ್‌ ಮಾಡಲು ಉತ್ಸಾಹವಿಲ್ಲ…

shivanna

ಬೈರಾಗಿ ಮಾತು ಮತ್ತು ಶಕ್ತಿಧಾಮದ ಕನಸು…: ಶಿವಣ್ಣ ಜೊತೆ ಚಿಟ್‌ಚಾಟ್‌

shivanna

ಸ್ಟೈಲಿಶ್‌ ಲುಕ್‌ನಲ್ಲಿ ಶಿವಣ್ಣ: “ಬೈರಾಗಿ’ ಗೆಟಪ್‌ಗೆ ಫ್ಯಾನ್ಸ್‌ ಫಿದಾ

vikrant rona

ವಿಕ್ರಾಂತ್‌ ರೋಣನಿಗೆ ಓಟಿಟಿಯಿಂದ ಭರ್ಜರಿ ಆಫ‌ರ್‌:OTTಯಲ್ಲೇ ರಿಲೀಸ್ ಆಗುತ್ತಾ ಕಿಚ್ಚನ ಚಿತ್ರ

ಮತ್ತೆ ಮೌನ,ಮುಂದುವರಿದ ಆತಂಕ! ರಿಲೀಸ್‌ ಡೇಟ್ಸ್‌ ಅನೌನ್ಸ್‌ ಮಾಡಿದ್ದ ಸಿನಿಮಾಗಳು ಮುಂದಕ್ಕೆ..

ಮತ್ತೆ ಮೌನ,ಮುಂದುವರಿದ ಆತಂಕ! ರಿಲೀಸ್‌ ಡೇಟ್ಸ್‌ ಅನೌನ್ಸ್‌ ಮಾಡಿದ್ದ ಸಿನಿಮಾಗಳು ಮುಂದಕ್ಕೆ..

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.