ರಿಲೇ ಓಟದಲ್ಲಿ ಶ್ರೀಕಿ ಸ್ಪರ್ಧೆ!

Team Udayavani, Oct 2, 2017, 12:11 PM IST

relay.jpg

ಕನ್ನಡದಲ್ಲಿ ಕ್ರೀಡೆಗೆ ಸಂಬಂಧಿಸಿದ ಹಲವು ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ “ರಿಲೇ’ ಎಂಬ ಹೊಸ ಚಿತ್ರವೂ ಸೇರ್ಪಡೆಯಾಗಿದೆ. ಈ ಚಿತ್ರದ ಮೂಲಕ ಶ್ರೀಕಿ ಪುನಃ ಎಂಟ್ರಿಯಾಗಿದ್ದಾರೆ. “ಗೋವಾ’ ಚಿತ್ರದ ಬಳಿಕ ಶ್ರೀಕಿ ಎಲ್ಲೂ ಸುದ್ದಿಯಾಗಲಿಲ್ಲ. ಆ ಬಳಿಕ ಮದುವೆ ಇತ್ಯಾದಿ ಕೆಲಸಗಳಿಂದ ಬಿಜಿಯಾಗುವ ಮೂಲಕ ಸುದ್ದಿಯಾಗಿದ್ದರಷ್ಟೇ. ಈಗ “ರಿಲೇ’ ಆಡೋಕೆ ಹೊರಟಿದ್ದಾರೆ. 

ಈ ಸಿನಿಮಾ ಮೂಲಕ ಪ್ರಕಾಶ್‌ ಹೆಬ್ಟಾಳ ನಿರ್ದೇಶಕರಾಗಿದ್ದಾರೆ. ದಯಾಳ್‌ ಅವರ ಜತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಅವರು, ಕ್ರೀಡೆ ಕುರಿತ ಕಥೆ ಹೆಣೆದು ನಿರ್ದೇಶಿಸಿದ್ದಾರೆ. ನಿರ್ದೇಶಕ ಪ್ರಕಾಶ್‌ ಹೆಬ್ಟಾಳ ಹೇಳುವಂತೆ, “ಇದೊಂದು ಕ್ರೀಡೆ ಕುರಿತಾದ ಚಿತ್ರ. ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದಲ್ಲಿ ಅಥ್ಲೆಟ್‌ ಆಗಿರುವ ನಾಯಕ, ಅಲ್ಲಿನ ಕೆಟ್ಟ ರಾಜಕೀಯ ವ್ಯವಸ್ಥೆ ಹಾಗೂ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಹೊರಟಾಗ, ಆತ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸುವ ಅವಕಾಶವನ್ನು ತಪ್ಪಿಸಿಕೊಳ್ಳುತ್ತಾನೆ.

ಆ ಬಳಿಕ ಮುಂದೆ ಏನು ಆಗುತ್ತೆ ಅನ್ನೋದನ್ನು ರೋಚಕವಾಗಿ ತೋರಿಸುತ್ತೇನೆ’ ಎನ್ನುತ್ತಾರೆ ನಿರ್ದೇಶಕರು. ಇದು ರಿಲೇ ಕ್ರೀಡೆ ಕುರಿತ ಚಿತ್ರವಾದ್ದರಿಂದ ಅದರ ಬಗ್ಗೆ ಸಾಕಷ್ಟು ಸಮೀಕ್ಷೆ ನಡೆಸಿ, ಎಲ್ಲವನ್ನೂ ತಿಳಿದುಕೊಂಡು, ಅದಕ್ಕೆ ತಕ್ಕಂತಹ ಕಥೆ ಹೆಣೆದು, ಪಾತ್ರಗಳನ್ನು ಪೋಣಿಸಿ ಚಿತ್ರೀಕರಿಸಿದ್ದಾರಂತೆ. ಈಗಾಗಲೇ  ಬೆಂಗಳೂರು ಸುತ್ತಮುತ್ತಲ ಸ್ಥಳಗಳಲ್ಲಿ ಒಂದು ಹಂತದ ಚಿತ್ರೀಕರಣ ಮುಗಿಸಿದ್ದಾರಂತೆ.

ಉಳಿದ ಚಿತ್ರೀಕರಣವನ್ನು ದೆಹಲಿ, ಅಂಡಮಾನ್‌ ಹಾಗು ಕೊಲೊಂಬೋದಲ್ಲಿ ನಡೆಸಲು ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. ಚಿತ್ರಕ್ಕೆ ನಾಯಕಿಯ ಆಯ್ಕೆ ಆಗಿಲ್ಲ. ಕನ್ನಡದ ಹುಡುಗಿಯೊಬ್ಬಳನ್ನು ಆಯ್ಕೆ ಮಾಡಲು ತಂಡ ನಿರ್ಧರಿಸಿದೆ. ಇಷ್ಟರಲ್ಲೇ ಆಯ್ಕೆ ನಡೆಯಲಿದೆ. ಉಳಿದಂತೆ ಚಿತ್ರದಲ್ಲಿ ಖಳನಾಯಕರಾಗಿ ರವಿಶಂಕರ್‌ ನಟಿಸಿದರೆ, ನಾಯಕನ ತಾಯಿಯಾಗಿ ಜೂಲಿ ಲಕ್ಷೀ ಅವರು ಆಯ್ಕೆಯಾಗಿದ್ದಾರೆ.

ಶ್ರೀಕಿ ಅವರು ಒಂದೊಳ್ಳೆಯ ಮಾಸ್‌ ಕಥೆ ಬಂದರೆ, ಸಿನಿಮಾ ಮಾಡಬೇಕು ಅಂತ ನಿರ್ಧರಿಸಿದ್ದರಂತೆ. ಅದೇ ಸಮಯಕ್ಕೆ ಪ್ರಕಾಶ್‌ ಹೆಬ್ಟಾಳ ಅವರು ಈ ಕಥೆ ಹೇಳಿದ ಕೂಡಲೇ, ಶ್ರೀಕಿ ಅವರಿಗೆ ಇಷ್ಟವಾಗಿ, ಗ್ರೀನ್‌ಸಿಗ್ನಲ್‌ ಕೊಟ್ಟರಂತೆ. ಈ ಪಾತ್ರಕ್ಕಾಗಿ ಶ್ರೀಕಿ ಸಾಕಷ್ಟು ತಯಾರಿ ಮಾಡಿಕೊಳ್ಳುವ ಮನಸ್ಸು ಮಾಡಿದ್ದಾರೆ. ಅಂದಹಾಗೆ, ಅವರು ತಮ್ಮ ದೇಹವನ್ನು ದಂಡಿಸಿ ಪಾತ್ರಕ್ಕೆ ಸಿದ್ದವಾಗಿರುವುದುಂಟಂತೆ. ಚಿತ್ರದಲ್ಲಿ ರಾಜಚರಣ್‌ ಎಂಬ ಇನ್ನೊಬ್ಬ ನಟನಿಗೂ ಇಲ್ಲಿ ಪ್ರಮುಖ ಪಾತ್ರವಿದೆ.

ಕೆ.ರವಿವರ್ಮ ಅವರ ಸಾಹಸವಿದೆ. ಪಾಂಡಿಕುಮಾರ್‌ ಅವರು ಕ್ಯಾಮೆರಾ ಹಿಡಿಯುತ್ತಿದ್ದಾರೆ. ಸಂಕೇತ್‌ ರಾಜಪೇಟೆ ಅವರ ಸಂಕಲನವಿದೆ. ಮೋಹನ್‌.ಬಿ. ಕೆರೆ ಕಲಾನಿರ್ದೇಶನ ಮಾಡಿದರೆ, ಗೌತಂ ಶ್ರೀವತ್ಸ ಅವರು ಸಂಗೀತ ನೀಡಿದ್ದಾರೆ. ಇನ್ನು, ಮಂಜುನಾಥ್‌ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರಿಗೆ ಇದು ಮೊದಲ ಅನುಭವ. ಇತ್ತೀಚೆಗೆ ಚಿತ್ರದ ಮೋಷನ್‌ ಪಿಕ್ಚರ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.