ಚಂದನವನದಲ್ಲಿ ಶ್ರೀಧರ್‌ ಸಂಗೀತ ಸಂಭ್ರಮ: ಕೈ ತುಂಬಾ ಸಿನಿಮಾ, ವಿಭಿನ್ನ ಹಾಡು


Team Udayavani, Dec 10, 2021, 11:02 AM IST

shridhar-sambram

ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳಿಗೆ ತನ್ನ ವಿಭಿನ್ನ ಸಂಗೀತ ಸಂಯೋಜನೆಯ ಮೂಲಕ ಗುರುತಿಸಿಕೊಂಡಿರುವ ಸಂಗೀತ ನಿರ್ದೇಶಕ ಶ್ರೀಧರ್‌ ವಿ. ಸಂಭ್ರಮ್‌. 2008ರಲ್ಲಿ ತೆರೆಕಂಡ ಕಿಚ್ಚ ಸುದೀಪ್‌ ಅಭಿನಯದ “ಮುಸ್ಸಂಜೆ ಮಾತು’ ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪರಿಚಯವಾದ ಶ್ರೀಧರ್‌ ಸಂಭ್ರಮ್‌, ಬಳಿಕ “ಕೃಷ್ಣನ್‌ ಲವ್‌ ಸ್ಟೋರಿ’, “ಕೃಷ್ಣನ್‌ ಮ್ಯಾರೇಜ್‌ ಸ್ಟೋರಿ’, “ಜೈಲಲಿತ’, “ಬೆಳ್ಳಿ’, “ಕೃಷ್ಣಲೀಲಾ’, “ಕೃಷ್ಣ ರುಕ್ಕು’, “ಉಪೇಂದ್ರ ಮತ್ತೆ ಬಾ’, “ಕೃಷ್ಣ ಟಾಕೀಸ್‌’, “ಮುಗಿಲ್‌ಪೇಟೆ’ ಹೀಗೆ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಸೂಪರ್‌ ಹಿಟ್‌ ಹಾಡುಗಳನ್ನು ನೀಡುವ ಮೂಲಕ ಸಿನಿ ಸಂಗೀತ ಲೋಕದಲ್ಲಿ ತನ್ನದೇ ಛಾಪು ಮೂಡಿಸಿದವರು.

ಸದ್ಯ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕನಾಗಿ ಒಂದು ದಶಕದ ಸಿನಿಯಾನ ಪೂರೈಸಿರುವ ಶ್ರೀಧರ್‌ ಸಂಭ್ರಮ್‌, ಈಗಿನ ತಲೆಮಾರಿನ ಸಂಗೀತ ಪ್ರಿಯರ ಅಭಿರುಚಿಗೆ ತಕ್ಕಂತೆ ಸಂಗೀತ ಸಂಯೋಜಿಸುವುದರಲ್ಲಿ ಸಿದ್ಧಹಸ್ತ ಎನಿಸಿಕೊಂಡಿರುವ ಸಂಗೀತ ನಿರ್ದೇಶಕ.

ಹೀಗಾಗಿಯೇ, ಈಗಿನ ಅನೇಕ ಯುವ ಸಿನಿಮಾ ನಿರ್ದೇಶಕರಿಗೂ ಶ್ರೀಧರ್‌ ಹಾಟ್‌ ಫೇವರೆಟ್‌ ಮ್ಯೂಸಿಕ್‌ ಡೈರೆಕ್ಟರ್‌ ಎನ್ನಬಹುದು. ಇತ್ತೀಚೆಗಷ್ಟೇ ಶ್ರೀಧರ್‌ ವಿ. ಸಂಭ್ರಮ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ ನಿರ್ದೇಶನದಲಿ ಮೂಡಿಬಂದ “ಮುಗಿಲ್‌ ಪೇಟೆ’ ಚಿತ್ರದ ಹಾಡುಗಳು ದೊಡ್ಡ ಮಟ್ಟಿಗೆ ಹಿಟ್‌ ಆಗಿದ್ದು, ಚಿತ್ರದಲ್ಲಿ ಶ್ರೀಧರ್‌ ಸಂಭ್ರಮ್‌ ಹಿನ್ನೆಲೆ ಸಂಗೀತಕ್ಕೆ ಚಿತ್ರರಂಗ ಮತ್ತು ಸಿನಿಪ್ರಿಯರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈಗಾಗಲೇ ನಲವತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಶ್ರೀಧರ್‌ ಸಂಭ್ರಮ್‌, ಮುಂಬರಲಿರುವ ಮದರಂಗಿ ಕೃಷ್ಣ, ರಚಿತಾ ರಾಮ್‌ ಅಭಿನಯದ “ಲವ್‌ ಮಿ ಆರ್‌ ಹೇಟ್‌ ಮಿ’, ಅಜೇಯ್‌ ರಾವ್‌ ಅಭಿನಯದ “ಶೋಕಿವಾಲಾ’, “ಪುರುಷೋತ್ತಮ’ ಸೇರಿದಂತೆ ಎಂಟಕ್ಕೂ ಹೆಚ್ಚು ನಿರೀಕ್ಷಿತ ಸಿನಿಮಾಗಳಿಗೆ ಬ್ಯಾಕ್‌ ಟು ಬ್ಯಾಕ್‌ ಸಂಗೀತ ನಿರ್ದೇಶನ ಮಾಡುತ್ತಿದ್ದು, ಶೀಘ್ರದಲ್ಲಿಯೇ “ಹಾಫ್ ಸೆಂಚುರಿ’ ಬಾರಿಸುವ ಸಂಭ್ರಮದಲ್ಲಿದ್ದಾರೆ ಶ್ರೀಧರ್‌.

ಇದನ್ನೂ ಓದಿ:ಇಂದು ಬಂಧನ 2 ಚಿತ್ರಕ್ಕೆ ಮುಹೂರ್ತ: ರಾಜೇಂದ್ರ ಸಿಂಗ್‌ ಬಾಬು ನಿರ್ದೇಶನ

ತಮ್ಮ ಸಿನಿಮಾ ಯಾನದ ಬಗ್ಗೆ ಮಾತನಾಡುವ ಶ್ರೀಧರ್‌ ಸಂಭ್ರಮ್‌, “ಸುಮಾರು ಒಂದು ದಶಕಗಳಿಂದ ಸಂಗೀತ ನಿರ್ದೇಶಕನಾಗಿರುವ ನನಗೆ ಸಂಗೀತ ಮತ್ತು ಚಿತ್ರರಂಗ ಎಲ್ಲವನ್ನೂ ಕೊಟ್ಟಿದೆ. ಸಿನಿಮಾದವರು, ಪ್ರೇಕ್ಷಕರು ನನ್ನ ಕೆಲಸವನ್ನು ಮೆಚ್ಚಿಕೊಂಡಿರುವುದರಿಂದಲೇ, ನಾನಿನ್ನೂ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದೇನೆ. ನನಗೆ ಸಂಗೀತ, ಸಿನಿಮಾ ಬಿಟ್ಟು ಬೇರೇನೂ ಗೊತ್ತಿಲ್ಲ. ಪ್ರಾಮಾಣಿಕವಾಗಿ ಕೆಲಸದಲ್ಲಿ ತೊಡಗಿಸಿಕೊಂಡರೆ, ಖಂಡಿತವಾಗಿಯೂ ಸಿನಿಮಾ ನಮ್ಮ ಕೈಹಿಡಿಯುತ್ತದೆ ಎಂಬುದು ನನ್ನ ನಂಬಿಕೆ. ಈ ನಂಬಿಕೆಯೇ ನನ್ನನ್ನು ಇಲ್ಲಿಯವರೆಗೆ ಕರೆದುಕೊಂಡು ಬಂದಿದೆ’ ಎನ್ನುತ್ತಾರೆ.

ಅಂದಹಾಗೆ, ಇಂದು ಶ್ರೀಧರ್‌ ಸಂಭ್ರಮ್‌ ಅವರಿಗೆ ಜನ್ಮದಿನದ ಸಂಭ್ರಮ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಶ್ರೀಧರ್‌ ಅವರಿಂದ ಇನ್ನಷ್ಟು ಸೂಪರ್‌ ಹಿಟ್‌ ಹಾಡುಗಳು ಮುಂಬರುವ ದಿನಗಳಲ್ಲಿ ಹೊರಬರಲಿ ಎಂಬುದು ಸಿನಿಪ್ರಿಯರ ಆಶಯ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.