ಕೃಷ್ಣ ಬರ್ತ್ಡೇಗೆ ಶುಗರ್ ಫ್ಯಾಕರಿ ಟೀಸರ್ ಬಿಡುಗಡೆ
Team Udayavani, Jun 4, 2021, 8:28 AM IST
ನಟ ಡಾರ್ಲಿಂಗ್ ಕೃಷ್ಣ ಕೈಯಲ್ಲಿ ಒಂದಷ್ಟು ಸಿನಿಮಾಗಳಿವೆ. ಅದರಲ್ಲೊಂದು “ಶುಗರ್ ಫ್ಯಾಕ್ಟರಿ’. ಈ ಚಿತ್ರದ ಟೀಸರ್ ಜೂ.12ರಂದು ಬಿಡುಗಡೆಯಾಗಲಿದೆ. ಅದಕ್ಕೆಕಾರಣ ಕೃಷ್ಣ ಹುಟ್ಟುಹಬ್ಬ. ಹೌದು, ಜೂನ್ 12ರಂದು ಕೃಷ್ಣ ಹುಟ್ಟುಹಬ್ಬವಿದ್ದು, ಆ ದಿನ ಚಿತ್ರದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ರಾನ್ ಮಾಡಿಕೊಂಡಿದೆ.
ಅಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ನಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ಡೌನ್ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ.
ಡಾರ್ಲಿಂಗ್ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಗಿರೀಶ್.ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಟೀಸರ್ನಲ್ಲಿ ಸಾಮಾನ್ಯವಾಗಿ ಪೋಸ್ಟರ್ಗಳನ್ನು ಬಳಸಿಕೊಳ್ಳಲಾಗುತ್ತದೆ.
ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ಮಾಡಿದ್ದೇವೆ ಎನ್ನುವುದು ಚಿತ್ರದ ನಿರ್ದೇಶಕ ದೀಪಕ್ ಅರಸ್ ಮಾತು. ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ,ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ಧನಂಜಯ್ ಅವರ ನೃತ್ಯ ನಿರ್ದೇಶನವಿರುವ “ಶುಗರ್ ಫ್ಯಾಕ್ಟರಿ’ ಗೆ ಚೇತನ್ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ