ಮಳೆಯಲ್ಲಿ ಮಿಂದೆದ್ದವರು!

Team Udayavani, Jan 5, 2018, 11:08 AM IST

05-17.jpg

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆಗಿದ್ದು ಗೊತ್ತೇ ಇದೆ. ಅಲ್ಲಿ ಭಾರತೀಯರ ನಿಗೂಡ ಕಣ್ಮರೆ ಆಗಿದ್ದೂ ಉಂಟು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ಆಗಿದ್ದು ನಿಜ. ಅಂಥದ್ದೇ ವಿಷಯ ಇಟ್ಟುಕೊಂಡು ಒಂದು ಚಿತ್ರ ಮಾಡಿ, ಅದನ್ನು ತೆರೆಗೆ ತರಲು ಸಜ್ಜಾಗಿದ್ದಾರೆ ನಿರ್ದೇಶಕ ಜನಾರ್ದನ್‌. ಆ ಚಿತ್ರಕ್ಕೆ ಅವರು ಇಟ್ಟುಕೊಂಡಿರುವ ಹೆಸರು “ನೀನಿಲ್ಲದ ಮಳೆ’. ಜನವರಿ 12 ಕ್ಕೆ ರಾಜ್ಯ ಮತ್ತು ವಿದೇಶದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ, ಚಿತ್ರದ ಟ್ರೇಲರ್‌ ಹಾಗು ವೀಡಿಯೋ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡದೊಂದಿಗೆ ಮಾತುಕತೆಗೆ ಕುಳಿತರು ಜನಾರ್ದನ್‌.

“ಈ ಚಿತ್ರ ಮಾಡೋಕೆ ಸಾಕಷ್ಟು ಕಷ್ಟಪಟ್ಟಿದ್ದೇವೆ. ಅನೇಕ ಅಡಚಣೆಗಳ ನಡುವೆಯೂ ಒಂದೊಳ್ಳೆಯ ಸಿನಿಮಾ ಮಾಡಿದ ತೃಪ್ತಿ ನಮ್ಮದು. ಚಿತ್ರ ತಡವಾಗಿದೆ. ಒಂದಲ್ಲ, ಎರಡಲ್ಲ, ಮೂರಲ್ಲ, ನಾಲ್ಕು ವರ್ಷಗಳ ಕಾಲ ತಡವಾಗಿ ಈ ಚಿತ್ರ ತೆರೆಗೆ ಬರುತ್ತಿದೆ. ತಡವಾಗೋಕೆ ಹಲವು ಕಾರಣಗಳು. ಮೊದಲೇ ಹೇಳಿದಂತೆ ಇದೊಂದು ಭಾರತೀಯ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಹಾಗೂ ನಿಗೂಢ ಕಣ್ಮರೆ ಸುತ್ತ ನಡೆಯುವ ಕಥೆ. ಬಹುತೇಕ ಅಮೆರಿಕದಲ್ಲಿ ಚಿತ್ರೀಕರಿಸಿದ್ದೇವೆ. ವಿಜಯ್‌ಚೆಂಡೂರ್‌ ಮತ್ತು ಇಂದ್ರಸೇನ ನನ್ನೊಂದಿಗೆ ಕಥೆ, ಚಿತ್ರಕಥೆಗೆ ಸಹಾಯ ಮಾಡಿದ್ದಾರೆ. ಅಮೆರಿಕದಲ್ಲಿ ಚಿತ್ರೀಕರಿಸುವ ವೇಳೆ ಪ್ರಿಯಾಭಾರತಿ, ಸತೀಶ್‌ ಅವರು ಸಾಕಷ್ಟು ಸಹಾಯ ಮಾಡಿದ್ದರಿಂದಲೇ ಚಿತ್ರ ಚೆನ್ನಾಗಿ ಮೂಡಿಬರಲು ಸಾಧ್ಯವಾಗಿದೆ. ಮೈನಸ್‌ 10 ಡಿಗ್ರಿಯಲ್ಲಿ ಚಿತ್ರೀಕರಿಸಿದ್ದೇವೆ. 28 ದಿನಗಳ ಕಾಲ ಅಲ್ಲಿನ ವೈಟ್‌ಹೌಸ್‌, ಕ್ಯಾಪಿಟಲ್‌ ಬಿಲ್ಡಿಂಗ್‌ ಸುತ್ತಮುತ್ತ ಚಿತ್ರೀಕರಿಸಿದ್ದೇವೆ. ಅಷ್ಟೊಂದು ಚಳಿ ಇದ್ದರೂ, ಐದೈದು ಜಕೀìನ್‌ ಧರಿಸಿ ಕೆಲಸ ಮಾಡಿದ್ದೇವೆ. ಚಿತ್ರ ನೋಡಿ ಹೊರಬಂದವರಿಗೆ ಒಂದೊಳ್ಳೆಯ ಸಂದೇಶವಂತೂ ಇದೆ. ನಿರ್ಮಾಪಕರ ಪ್ರೋತ್ಸಾಹದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಅಂದರು ಜನಾರ್ದನ್‌.

ನಾಯಕಿ ವ್ಯಾಲರಿಗೆ ಇದು ಮೊದಲ ಕನ್ನಡ ಚಿತ್ರ. ಈ ಹಿಂದೆ ಅಮೆರಿಕದಲ್ಲಿ ಹಲವು ಶಾರ್ಟ್‌ಫಿಲ್ಮ್ಗಳಲ್ಲಿ ನಟಿಸಿದ ಅನುಭವ ವ್ಯಾಲರಿಗಿದೆ. ಅವರಿಲ್ಲಿ ಗೃಹಮಂತ್ರಿ ಮಗಳ ಪಾತ್ರ ನಿರ್ವಹಿಸಿದ್ದಾರಂತೆ. ಕನ್ನಡ ಸಿನಿಮಾದಲ್ಲಿ ನಟಿಸಿ, ಸಾಕಷ್ಟು ಕಲಿಯೋಕೆ ಸಾಧ್ಯವಾಗಿದೆ ಎಂಬುದು ವ್ಯಾಲರಿ ಮಾತು.
ನಿರ್ಮಾಪಕ ಶೈಲೇಂದ್ರ ಕೆ.ಬೆಲ್ದಾಳ್‌ ಅವರಿಗೆ ಒಳ್ಳೆಯ ಕಥೆ ಅನಿಸಿದ್ದರಿಂದ ಅವರು ನಿರ್ಮಾಣಕ್ಕೆ ಮುಂದಾದರಂತೆ. ಈಗಿನ ಯೂತ್ಸ್ ಹೇಗೆ ವಿದೇಶದಲ್ಲಿ ಶೋಕಿಗೆ ಬಿದ್ದು ಲೈಫ್ ಹಾಳು ಮಾಡಿಕೊಳ್ಳುತ್ತಾರೆ ಅನ್ನೋದನ್ನು ಹೇಳಲಾಗಿದೆ. ಸಂಕ್ರಾಂತಿಗೆ ಚಿತ್ರ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಸಹಕಾರ ಇರಲಿ ಅಂದರು ಅವರು.

ಮತ್ತೂಬ್ಬ ನಿರ್ಮಾಪಕ ದೇವರಾಜ್‌ ಅವರು, ಆರ್‌.ಚಂದ್ರು ಜತೆಗೆ ನಿರ್ದೇಶಕರಾಗಬೇಕು ಅಂತ ಇಲ್ಲಿಗೆ ಬಂದರಂತೆ. ಆದರೆ, ಇವರು ಆಗಿದ್ದು ಮಾತ್ರ ನಿರ್ಮಾಪಕ. “ಚಿತ್ರ ತಡವಾಯ್ತು. ಅದಕ್ಕೆ ಕಾರಣಗಳು ಸಾಕಷ್ಟಿವೆ. ಮೊದಲ ಅನುಭವ ಆಗಿದ್ದರಿಂದ ಇಷ್ಟೆಲ್ಲಾ ತಡವಾಗಿದೆ. ಬಜೆಟ್‌ ಅಂದುಕೊಂಡಿದ್ದಕ್ಕಿಂತ ಜಾಸ್ತಿಯಾಗಿದೆ ಎಂದರು ಅವರು. ತಬಲಾ ನಾಣಿ, ಲಕ್ಕಿ ಶಂಕರ್‌ ಇಲ್ಲಿ ಹೀರೋ ಜತೆಗೆ ಪತ್ರಕರ್ತರಾಗಿ ಕಾಣಿಸಿಕೊಂಡಿದ್ದಾರಂತೆ. ಇಲ್ಲಿ ಸಂದೇಶ ಇರುವುದರಿಂದ ಪ್ರತಿಯೊಬ್ಬರಿಗೂ ಸಲ್ಲುವ ಚಿತ್ರವಿದು ಅಂದರು ಅವರು. ಕ್ಯಾಮೆರಾಮೆನ್‌ ನಿರಂಜನ್‌ಬಾಬು, ಸಂಗೀತ ನಿರ್ದೇಶಕ ಇಂದ್ರಸೇನ ಚಿತ್ರದ ಬಗ್ಗೆ ಹೇಳಿಕೊಳ್ಳುವ ಹೊತ್ತಿಗೆ ಮಾತುಕತೆಗೆ ಬ್ರೇಕ್‌ ಬಿತ್ತು. ಇದಕ್ಕೂ ಮುನ್ನ ಮಾಜಿ ಪೊಲೀಸ್‌ ಅಧಿಕಾರಿ ನಾಗರಾಜ್‌ ಟ್ರೇಲರ್‌ ಬಿಡುಗಡೆ ಮಾಡಿದರೆ, ಗಾಯಕ ಆಲೂರು ನಾಗಪ್ಪ ವೀಡಿಯೋ ಸಾಂಗ್‌ ಬಿಡುಗಡೆ ಮಾಡಿ ಶುಭಕೋರಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.