ಶಿವರಾತ್ರಿಗೆ ಥ್ರಿಲ್ಲರ್ ಶಿವಾಜಿ

ರಮೇಶ್‌ ಅರವಿಂದ್‌ ವರ್ಷದ ಮೊದಲ ಸಿನಿಮಾ

Team Udayavani, Feb 14, 2020, 6:30 AM IST

ರಮೇಶ್‌ ಅರವಿಂದ್‌ ನಾಯಕಾಗಿರುವ “ಶಿವಾಜಿ ಸುರತ್ಕಲ್‌’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್‌ ಬಿಡುಗಡೆಯ ಜೊತೆಗೆ ಚಿತ್ರತಂಡ ವಿಶಿಷ್ಟವಾಗಿ ತಮ್ಮ ಸಿನಿಮಾದ ಬಿಡುಗಡೆಯ ದಿನಾಂಕವನ್ನು ಕೂಡಾ ಘೋಷಿಸಿತು. ಚಿತ್ರ ಫೆ.21 ರಂದು ತೆರೆಕಾಣುತ್ತಿದೆ. ಆಕಾಶ್‌ ಶ್ರೀವತ್ಸ ನಿರ್ದೇಶನದ ಈ ಸಿನಿಮಾದಲ್ಲಿ ರಮೇಶ್‌ ಅರವಿಂದ್‌ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಕೊಲೆಯ ರಹಸ್ಯವನ್ನು ಹುಡುಕಿ ಹೊರಟ ಚಿತ್ರವಾಗಿದ್ದು, ಪ್ರೇಕ್ಷಕನಿಗೆ ಹೊಸ ಅನುಭವ ನೀಡಲಿದೆ ಎಂಬುದು ಚಿತ್ರತಂಡ ಮಾತು. ರೇಖಾ ಕೆ.ಎನ್‌ ಹಾಗೂ ಅನುಪ್‌ ಗೌಡ ರವರು ಈ ಚಿತ್ರವನ್ನು ಅಂಜನಾದ್ರಿ ಸಿನಿ ಕ್ರಿಯೇಷನ್ಸ್‌ನಡಿ ನಿರ್ಮಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಆಕಾಶ್‌, “ಶಿವಾಜಿ ಅಂದ್ರೇನೆ ಅದೊಂದು ಪವರ್‌ಫ‌ುಲ್‌ ಪದ. ಸುರತ್ಕಲ್‌ ಅಂದ್ರೆ ಮೆದುಳು ಅಂಥ ಅರ್ಥವಿದೆ. ಇವೆರಡು ಸೇರಿಕೊಂಡು ಒಂದು ಕೊಲೆಯ ರಹಸ್ಯವನ್ನು ಹೇಗೆ ಭೇದಿಸುತ್ತಾರೆ ಅನ್ನೋದೆ ಚಿತ್ರದ ಕಥೆಯ ಎಳೆ. ಚಿತ್ರದ ಟೈಟಲ್‌ಗೆ ದಿ ಕೇಸ್‌ ಆಫ್ ರಣಗಿರಿ ರಹಸ್ಯವೆಂದು ಅಡಬರಹದಲ್ಲಿ ಹೇಳಲಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳು ಇರಲಿದೆ’ ಎನ್ನುತ್ತಾರೆ. ಚಿತ್ರದ ಬಗ್ಗೆ ಮಾತನಾಡುವ ರಮೇಶ್‌ ಅರವಿಂದ್‌, “ಈ ಚಿತ್ರ ನನಗೆ ಹೊಸ ಅನುಭವ ನೀಡಿದೆ. ಸುಮಾರು 100ಕ್ಕೂ ಹೆಚ್ಚು ಮಂದಿ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಸಿನಿಮಾ ನೋಡುತ್ತಿದ್ದಂತೆ.

ಕಾದಂಬರಿ ಓದಿದಂತೆ ಭಾಸವಾಗುವ ನಿರೂಪಣಾ ಶೈಲಿ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂದರು. ಚಿತ್ರದಲ್ಲಿ ರಾಧಿಕಾ ನಾರಾಯಣ್‌ ಹಾಗೂ ಆರೋಹಿ ನಾಯಕಿಯರಾಗಿ ನಟಿಸಿದ್ದಾರೆ. ರಾಧಿಕಾ ಇಲ್ಲಿ ಲಾಯರ್‌ ಆದರೆ, ಆರೋಹಿ ವೈದ್ಯೆಯಾಗಿ ನಟಿಸಿದ್ದಾರೆ.

ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರ ಸಂಗಿತ ನಿರ್ದೇಶನವಿದೆ. ಮೊದಲನೆಯದಾದ “ಉಸಿರೇ’ ಎಂಬ ಹಾಡಿಗೆ ವಿಜಯ್‌ ಪ್ರಕಾಶ್‌ ಅವರು ಕಂಠದಾನ ಮಾಡಿದ್ದು, ಜಯಂತ್‌ ಕಾಯ್ಕಿಣಿ ಅವರು ಸಾಹಿತ್ಯ ರಚಿಸಿದ್ದಾರೆ. ಎರಡನೆಯದಾಗಿ “ಅಪರಿಚಿತ’ ಎಂಬ ಮತ್ತೂಂದು ಹಾಡಿಗೆ ಜಯಂತ್‌ ಕಾಯ್ಕಿಣಿ ಅವರೇ ಸಾಹಿತ್ಯ ರಚಿಸಿದ್ದು ಇದೊಂದು ಜರ್ನಿ ಹಾಡಾಗಿದ್ದು ಇದಕ್ಕೆ ಶ್ರೇಯಾ ಸುಂದರ್‌ ಅಯ್ಯರ್‌ ಅವರು ಕಂಠದಾನ ಮಾಡಿದ್ದಾರೆ. ಮೂರನೆಯ ಹಾಡಾದ “ಯಾರೋ ನೀ ಯಾರೋ’ ಹಾಡಿಗೆ ಚಿತ್ರದ ನಿರ್ದೇಶಕರಾದ ಆಕಾಶ್‌ ಶ್ರೀವತ್ಸ ರವರೇ ಸಾಹಿತ್ಯ ರಚಿಸಿದ್ದಾರೆ. ಈ ಹಾಡನ್ನು ಜೂಡಾ ಸ್ಯಾಂಡಿ ಹಾಗೂ ಸಂಜಿತ್‌ ಹೆಗ್ಡೆ ಇಬ್ಬರು ಸೇರಿ ಹಾಡಿದ್ದಾರೆ. ಚಿತ್ರರದಲ್ಲಿ ಅವಿನಾಶ್‌,ರಮೇಶ್‌ ಪಂಡಿತ್‌, ಪಿಡಿ ಸತೀಶ್‌, ರಾಘು ರಮಣಕೊಪ್ಪ ನಟಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಯಶಸ್ವಿಯಾಗಿ ನೂರು ಚಿತ್ರಗಳಲ್ಲಿ ಅಭಿನಯಿಸಿ, ಶತಕದ ಸಂಭ್ರಮದಲ್ಲಿರುವ ನಟ ರಮೇಶ್‌ ಅರವಿಂದ್‌, ಈ ವಾರ 101ನೇ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ....

  • ನಾನು ಎಲ್ಲಾ ಬಿಟ್ಟು, ಈ ರಂಗಕ್ಕೆ ಬಂದಿದ್ದೇ ಏನೋ ಮಾಡಬೇಕು ಅಂತ. ಚಾಲೆಂಜ್‌ ತೆಗೆದುಕೊಳ್ಳದಿದ್ದರೆ ಹೇಗೆ? ಕಂಫ‌ರ್ಟ್‌ ಜೋನ್‌ ಬಿಟ್ಟು ಬೇರೆ ಮಾಡಬೇಕು ಅಂದಾಗ,...

  • ಈಗಂತೂ ಮೊಬೈಲ್‌ನದ್ದೇ ಸುದ್ದಿ. ಯಾರ ಕೈ ನೋಡಿದರೂ ಮೊಬೈಲ್‌ ಇದ್ದೇ ಇರುತ್ತೆ. ಅದರಲ್ಲೂ ವಾಟ್ಸಾಪ್‌, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ, ಟ್ವಿಟ್ಟರ್‌...ಹೀಗೆ ಒಂದಾ...

  • ಪ್ರೇಮ್‌ ನಿರ್ದೇಶನದ "ಏಕಲವ್ಯ' ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ದೊಡ್ಡ ಗ್ಯಾಪ್‌ನ ಬಳಿಕ ಲವ್‌ಸ್ಟೋರಿ ಮಾಡುತ್ತಿರುವ ಪ್ರೇಮ್‌, ಈ ಬಾರಿ ಸಖತ್‌ ಬೋಲ್ಡ್‌ ಕಥೆಯನ್ನೇ...

  • ಹಿರಿಯ ಸಾಹಿತಿ ಡಾ.ಬಿ.ಎಲ್‌.ವೇಣು ಅವರ ಐತಿಹಾಸಿಕ ಕಾದಂಬರಿ "ದಳವಾಯಿ ಮುದ್ದಣ' ಈಗ ದೃಶ್ಯರೂಪ ಪಡೆದುಕೊಂಡಿದೆ. "ದಳವಾಯಿ ಮುದ್ದಣ್ಣ' ಕಾದಂಬರಿ ಈಗ ಚಲನಚಿತ್ರಕ್ಕೆ...

ಹೊಸ ಸೇರ್ಪಡೆ

  • ದರ್ಶನ್‌ ಈಗ "ಗಂಡುಗಲಿ ಮದಕರಿನಾಯಕ' ಸಿನಿಮಾದಲ್ಲಿ ತೊಡಗಿದ್ದಾರೆ. ಅವರ ಅಭಿನಯದ "ಕುರುಕ್ಷೇತ್ರ' ಚಿತ್ರದ ಶತದಿನೋತ್ಸವ ಕೂಡ ಶಿವರಾತ್ರಿ ದಿನ ಅದ್ಧೂರಿಯಾಗಿ ನಡೆದಿದೆ....

  • ತಂದೆಗೆ ಮಗನೇ ಸರ್ವಸ್ವ, ಮಗನಿಗೆ ಅಪ್ಪನೇ ಪ್ರಪಂಚ. ತಾಯಿ ಇಲ್ಲದಿದ್ದರೂ, ಆ ಕೊರಗು ಬಾರದಂತೆ, ಚಿಕ್ಕಂದಿನಿಂದಲೇ ಮಗನ ಬೇಕು-ಬೇಡಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ,...

  • "ಜೋಗಿ' ಚಿತ್ರದ ನಿರ್ಮಾಪಕ, ಅಶ್ವಿ‌ನಿ ರೆಕಾರ್ಡಿಂಗ್‌ ಕಂಪೆನಿಯ ರೂವಾರಿ ಅಶ್ವಿ‌ನಿ ರಾಮ್‌ ಪ್ರಸಾದ್‌ ಈಗ ತಮ್ಮ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸುವ ಸಿದ್ಧತೆ...

  • ಇತ್ತೀಚೆಗಷ್ಟೇ "ರ್‍ಯಾಂಬೋ-2' ಚಿತ್ರದ "ಚುಟು ಚುಟು ಅಂತೈತಿ...' ಅನ್ನೋ ಉತ್ತರ ಕರ್ನಾಟಕ ಶೈಲಿಯ ಜವಾರಿ ಹಾಡು ಯು-ಟ್ಯೂಬ್‌ನಲ್ಲಿ 100 ಮಿಲಿಯನ್‌ ಹಿಟ್ಸ್ ಪಡೆದುಕೊಂಡು...

  • ಪ್ರತಿವರ್ಷದಂತೆ ಈ ವರ್ಷವೂ ನಟ ಶಿವರಾಜ ಕುಮಾರ್‌ ಅಯ್ಯಪ್ಪ ಸ್ವಾಮಿ ದರ್ಶನ ಕೈಗೊಳ್ಳಲಿದ್ದಾರೆ. ಶನಿವಾರ ಎಂ.ಎಸ್‌ ರಾಮಯ್ಯ ಆಸ್ಪತ್ರೆಯ ಹತ್ತಿರವಿರುವ ಅಯ್ಯಪ್ಪ...