ಮುಂದಿನ ನಿಲ್ದಾಣದಲ್ಲಿ ಇಂದಿನ ಮಾತುಕತೆ

Team Udayavani, Nov 23, 2018, 6:00 AM IST

24.jpg

ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ “ಮಾತುಕತೆ ವಿನಯ್‌ ಜೊತೆ’ ಎಂಬ ಹೆಸರಿನ ಕಾರ್ಯಕ್ರಮದ ಮೂಲಕ ಜನಪ್ರಿಯತೆ ಪಡೆದಿದ್ದ, ಸದ್ಯ ಸಿಂಗಪೂರ್‌ನಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗ ನಿರೂಪಕ ವಿನಯ್‌ ಭಾರದ್ವಾಜ್‌ ಈಗ ಚಿತ್ರ ನಿರ್ದೇಶಕನಾಗಿ ಪರಿಚಯವಾಗುತ್ತಿದ್ದಾರೆ. ಸಿಂಗಪೂರ್‌ನಲ್ಲಿ ಕೆಲಸ ಮಾಡುತ್ತಿರುವ ವಿನಯ್‌ ಭಾರದ್ವಾಜ್‌, ಸಮಯ ಸಿಕ್ಕಾಗಲೆಲ್ಲಾ ಕರ್ನಾಟಕಕ್ಕೆ ಬಂದು ಕನ್ನಡಪರ ಕೆಲಸಗಳನ್ನು ಮಾಡುತ್ತಿದ್ದರು. ಇನ್ನು ತಮ್ಮ ಜೊತೆಗಿನ ಸಂದರ್ಶನದಲ್ಲಿ ಚಿತ್ರತಾರೆಯರು, ಕಲಾವಿದರ ಮನದಾಳದ ಕೆಲವು ಮಾತುಗಳನ್ನು ಹೆಕ್ಕಿಕೊಂಡು “ಮುಂದಿನ ನಿಲ್ದಾಣ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ. 

ಈ ಚಿತ್ರಕ್ಕೆ ವಿನಯ್‌ ಭಾರದ್ವಾಜ್‌ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರೇಮ, ಸ್ನೇಹ-ಸಂಬಂಧಗಳು, ವೃತ್ತಿ ಜೀವನ ಮತ್ತು ಭಾವನೆಗಳನ್ನು ಪ್ರಚೋದಿಸುವಂತಹ ಆಧುನಿಕ ಜೀವನದ ಕಥೆ ಈ ಚಿತ್ರದಲ್ಲಿದ್ದು, ಮೂರು ಪಾತ್ರಗಳ ಮೂಲಕ ಚಿತ್ರದ ಕಥೆ ತೆರೆದುಕೊಳ್ಳಲಿದೆಯಂತೆ. “ಈ ಮೂರೂ ಪಾತ್ರಗಳೂ ಒಂದೊಂದು ವರ್ಗವನ್ನು ಪ್ರತಿನಿಧಿಸಲಿದ್ದು, ಅವುಗಳ ಪ್ರಯಾಣ ಹೇಗಿರುತ್ತದೆ? ಇದರಲ್ಲಿ ಯಾವುದು ಸರಿ? ಯಾವುದು ತಪ್ಪು? ಎನ್ನುವುದನ್ನು ನೋಡುಗರ ಯೋಚನೆಗೆ ಬಿಡಲಾಗಿದೆ. ಈಗಿನ ತಲೆಮಾರಿನವರು ಏನು ಮಾಡುತ್ತಿ¨ªಾರೆ ಎಂಬುದನ್ನು ರಿಯಾಲಿಟಿಯಲ್ಲಿ ಹೇಳಲಾಗುವುದು’ ಎನ್ನುತ್ತಾರೆ ವಿನಯ್‌ ಭಾರದ್ವಾಜ್‌. ಇತ್ತೀಚೆಗೆ ಮುಂದಿನ ನಿಲ್ದಾಣ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ಚಿತ್ರದ ಕೆಲವು ವಿಶೇಷತೆಗಳ ಕುರಿತು ಮಾತನಾಡಿತು. 

ಇಂದಿನ ಜನರೇಷನ್‌ಗೆ ಹೊಂದುವ ಸೂಕ್ಷ್ಮ ವಿಷಯ ಈ ಚಿತ್ರದಲ್ಲಿರಲಿದ್ದು, ನೋಡುಗರಿಗೆ ಎಲ್ಲೂ ಬೋರ್‌ ಹೊಡೆಸದಂತೆ ಒಂದಷ್ಟು ಮನರಂಜನಾತ್ಮಕ ಅಂಶಗಳನ್ನು ಇಟ್ಟುಕೊಂಡು,  ಕಮರ್ಷಿಯಲ್‌ ಫಾರ್ಮೆಟ್‌ನಲ್ಲಿಯೇ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರು ಸುತ್ತಮುತ್ತ ಚಿತ್ರದ ಶೂಟಿಂಗ್‌ಗೆ ಪ್ಲಾನ್‌ ಮಾಡಿಕೊಳ್ಳಲಾಗಿದ್ದು, ಮುಂದಿನ ಏಪ್ರಿಲ್‌ ವೇಳೆಗೆ ಚಿತ್ರವನ್ನು ಪ್ರೇಕ್ಷಕರಿಗೆ ತೋರಿಸುವ ಯೋಜನೆ ಹಾಕಿಕೊಂಡಿದೆ. 

“ಮುಂದಿನ ನಿಲ್ದಾಣ’ ಚಿತ್ರದಲ್ಲಿ ನಾಯಕನಾಗಿ ಪ್ರವೀಣ್‌ ತೇಜ್‌ ಮೂರು ಗೆಟಪ್‌ನ ಪಾತ್ರಗಳಲ್ಲಿ ಕಾಣಿಸಿಕೊಂಡರೆ, ನಾಯಕಿ ರಾಧಿಕಾ ಚೇತನ್‌ ಕುಂಚ ಕಲಾವಿದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ನವಪ್ರತಿಭೆ ಅನನ್ಯ ಕಶ್ಯಪ್‌ ಇಂದಿನ ಯುವಜನತೆ ಏನು ಯೋಚನೆ ಮಾಡುತ್ತಾರೆ ಅದನ್ನು ಬಿಂಬಿಸುವ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಐದು ಜನ ಸಂಗೀತ ನಿರ್ದೇಶಕರು ಹಾಡುಗಳಿಗೆ ರಾಗ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಅಭಿಷೇಕ್‌ ಅಯ್ಯಂಗಾರ್‌ ಸಂಭಾಷಣೆ, ಅಭಿಮನ್ಯು ಸದಾನಂದ ಛಾಯಾಗ್ರಹಣ, ಕಿರಣ್‌ ಕಾವೇರಪ್ಪ ಸಾಹಿತ್ಯ ಇದೆ. ಇಂಗ್ಲೆಂಡ್‌ನ‌ಲ್ಲಿರುವ ವೈದ್ಯ ಸುರೇಶ್‌, ದುಬೈ ವಾಸಿ ತಾರನಾಥ ರೈ, ಸಿಂಗಪೂರ್‌ ವಾಸಿ ಶೇಷ್‌ ಮತ್ತು ಬೆಂಗಳೂರು ನಿವಾಸಿ ಮುರಳಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.