ರವಿಚಂದ್ರನ್ ಪುತ್ರನ ‘ತ್ರಿವಿಕ್ರಮ’ ಹಾಡಿಗೆ ಸೆಲೆಬ್ರಿಟಿಗಳ ಸಾಥ್‌


Team Udayavani, Jun 10, 2022, 11:45 AM IST

trivikrama kannada movie song released

ನಟ ಕಂ ನಿರ್ದೇಶಕ ಕ್ರೇಜಿಸ್ಟಾರ್‌ ರವಿಚಂದ್ರನ್‌ ದ್ವಿತೀಯ ಪುತ್ರ ವಿಕ್ರಮ್‌ ನಟನೆಯ ಚೊಚ್ಚಲ ಚಿತ್ರ ಇದೇ ಜೂನ್‌ 24ರಂದು ಬಿಡುಗಡೆಯಾಗುತ್ತಿದೆ. ಸದ್ಯ ಬಿಡುಗಡೆಗೂ ಮುನ್ನ ತನ್ನ ಹಾಡುಗಳ ಮೂಲಕ ಸಿನಿ ಪ್ರಿಯರ ಗಮನ ಸೆಳೆಯಲು ಮುಂದಾಗಿರುವ ಚಿತ್ರತಂಡ, ರವಿಚಂದ್ರನ್‌ ಹುಟ್ಟುಹಬ್ಬದ ಪ್ರಯುಕ್ತ “ಮಮ್ಮಿ ಪ್ಲೀಸ್‌ ಮಮ್ಮಿ…’ ಎಂಬ ವೀಡಿಯೋ ಸಾಂಗ್‌ ರಿಲೀಸ್‌ ಮಾಡಿತ್ತು. ಇದೀಗ ಚಿತ್ರತಂಡ ಚೇತನ್‌ ಕುಮಾರ್‌ ಸಾಹಿತ್ಯವಿರುವ “ತ್ರಿವಿಕ್ರಮ’ನ “ಹನಿ ಬನಿ ಫೀಲ್‌ ಮೈ ಲವ್‌…’ ಎಂಬ ಮತ್ತೂಂದು ಹಾಡನ್ನು ಬಿಡುಗಡೆ ಮಾಡಿದೆ.

ಸುಮಾರು 20ಕ್ಕೂ ಹೆಚ್ಚು ಸೆಲೆಬ್ರಿಟಿಗಳು ವರ್ಚುವಲ್‌ ರಿಲೀಸ್‌ ಮಾಡುವ ಮೂಲಕ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್‌ ನೀಡಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯ ಈ ಹಾಡಿಗೆ ಸಂಜಿತ್‌ ಹೆಗ್ಡೆ ದನಿಯಾಗಿದ್ದಾರೆ.

ನೃತ್ಯ ನಿರ್ದೇಶಕ ಭೂಷಣ್‌ ಈ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಬ್ಯಾಂಕಾಕ್‌ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿರುವ, ಕಲರ್‌ಫ‌ುಲ್‌ ಆಗಿ ಮೂಡಿಬಂದಿರುವ ಈ ಹಾಡು ಬಿಡುಗಡೆಯಾಗುತ್ತಿದ್ದಂತೆ, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ:777 ಚಾರ್ಲಿ ಚಿತ್ರ ವಿಮರ್ಶೆ: ಭಾವ-ಜೀವದ ನವನವೀನ ಪಯಣ

ಸಿನಿಪ್ರಿಯರು ಮಾತ್ರವಲ್ಲದೆ ಪ್ರೇಮ್, ರಕ್ಷಿತಾ, ಗಣೇಶ್‌, ಸೃಜನ್‌ ಲೋಕೇಶ್‌, ಚಂದನ್‌ ಶೆಟ್ಟಿ, ನವೀನ್‌ ಸಜ್ಜು, ಮೇಘಾ ಶೆಟ್ಟಿ ಹಾಗೂ ಅನುಪಮಾ ಗೌಡ ಸೇರಿದಂತೆ ಸಾಕಷ್ಟು ತಾರೆಯರು ಹಾಡನ್ನು ಕೇಳಿ, ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಹಿಂದೆ “ರೋಸ್‌’, “ಮಾಸ್‌ ಲೀಡರ್‌’ ಸಿನಿಮಾಗಳಿಗೆ ಆ್ಯಕ್ಷನ್‌-ಕಟ್‌ ಹೇಳಿರುವ ಸಹನಾ ಮೂರ್ತಿ “ತ್ರಿವಿಕ್ರಮ’ನಿಗೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. “ಸೋಮಣ್ಣ ಟಾಕೀಸ್‌’ ಬ್ಯಾನರ್‌ ಅಡಿಯಲ್ಲಿ ರಾಮ್ಕೋ ಸೋಮಣ್ಣ “ತ್ರಿವಿಕ್ರಮ’ನಿಗೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್‌, ಸಾಧುಕೋಕಿಲ, ರೋಹಿತ್‌ ರಾಯ್,  ಜಯಪ್ರಕಾಶ್‌, ಶಿವಮಣಿ, ಆದಿ ಲೋಕೇಶ್‌, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು “ತ್ರಿವಿಕ್ರಮ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.