ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ


Team Udayavani, Sep 18, 2020, 5:08 PM IST

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ’, ಹೆಣ್ಮಕ್ಕಳ ಪಾಲಿಗೆ “ಬಂಧನ’ದ ಭಗ್ನಪ್ರೇಮಿ, “ಬಿಳಿಗಿರಿಯ ಬನ’ದ ಬಂಡಾಯಗಾರ, “ಹೊಂಬಿಸಿಲು’ ಚಿತ್ರದ ನಿಷ್ಪಾಪಿ, “ಸಿಡಿದೆದ್ದ ಸಹೋದರ’, “ಬಂಗಾರದ ಜಿಂಕೆ’ಯ ಬೆನ್ನಟ್ಟಿದ ಪ್ರೇಮಿ, “ಇಂದಿನ ರಾಮಾಯಣ’ದ ನ್ಯಾಯವಂತ, ದೆವ್ವಕ್ಕೆ ಸಡ್ಡು ಹೊಡೆದ “ಆಪ್ತಮಿತ್ರ’- ಹೀಗೆ ಎಲ್ಲ ಪಾತ್ರಗಳಲ್ಲೂ ನಟಿಸಿ ಗೆದ್ದ ಸಾಹಸ ಸಿಂಹ ಡಾ.ವಿಷ್ಣು ವರ್ಧನ್‌ ಅವರ 70ನೇ ಹುಟ್ಟುಹಬ್ಬ ಇಂದು (ಸೆ.18).ಅಪಾರ ಹಾಸ್ಯಪ್ರಜ್ಞೆ, ತುಂಬು ಮಾನವೀಯತೆ, ಸರಳ ಸಜ್ಜನಿಕೆಯ ವಿಷ್ಣು ಅವರ 70ನೇ ಹುಟ್ಟುಹಬ್ಬ ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿದೆ.

ಪ್ರೀತಿ, ಒಂಚೂರು ಸಿಟ್ಟು, ಅಪಾರ ವಿನಯ, ಕಿಂಚಿತ್‌ ಸಂಕೋಚ, ಮುಚ್ಚುಮರೆಯಿಲ್ಲದ ಮಾತು, ಮನಗೆಲ್ಲುವ ಮಂದಹಾಸ- ಇವೆಲ್ಲದರ ಮೊತ್ತವಾಗಿದ್ದವರು ವಿಷ್ಣುವರ್ಧನ್‌. ಸಂಪತ್‌ ಕುಮಾರ್‌ ಆಗಿ ಚಿತ್ರರಂಗಕ್ಕೆ ಬಂದು “ವಂಶವೃಕ್ಷ’ದಲ್ಲಿ ಪುಟ್ಟ ಪಾತ್ರ ಮಾಡಿ, ರಾಮಾಚಾರಿಯಾಗಿ ಎದ್ದು ನಿಂತ ವಿಷ್ಣುವರ್ಧನ್‌ ಮತ್ತೆ ತಿರುಗಿ ನೋಡಲಿಲ್ಲ. ಇನ್ನೂರು ಚಿತ್ರಗಳ ಗಡಿ ದಾಟಿದ ವಿಷ್ಣುವರ್ಧನ್‌ ಚಾರಿತ್ರಿಕ, ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ನಟಿಸಿ ಗೆದ್ದವರು. ಅಭಿಮಾನಿಗಳ ಪಾಲಿಗೆ “ಸಾಹಸ ಸಿಂಹ’, ಹೆಣ್ಮಕ್ಕಳ ಪಾಲಿಗೆ “ಬಂಧನ’ದ ಭಗ್ನಪ್ರೇಮಿ, “ಬಿಳಿಗಿರಿಯ ಬನ’ದ ಬಂಡಾಯಗಾರ, “ಹೊಂಬಿಸಿಲು’ ಚಿತ್ರದ ನಿಷ್ಪಾಪಿ, “ಸಿಡಿದೆದ್ದ ಸಹೋದರ’, “ಬಂಗಾರದ ಜಿಂಕೆ’ಯ ಬೆನ್ನಟ್ಟಿದ ಪ್ರೇಮಿ, “ಇಂದಿನ ರಾಮಾಯಣ’ದ ನ್ಯಾಯವಂತ, ದೆವ್ವಕ್ಕೆ ಸಡ್ಡು ಹೊಡೆದ “ಆಪ್ತಮಿತ್ರ’- ಹೀಗೆ ವಿಷ್ಣು ಎಲ್ಲ ಪಾತ್ರಗಳಲ್ಲೂ ನಟಿಸಿ ಗೆದ್ದವರು. ಅಪಾರ ಹಾಸ್ಯಪ್ರಜ್ಞೆ, ತುಂಬು ಮಾನವೀಯತೆ, ಸರಳ ಸಜ್ಜನಿಕೆಯ ವಿಷ್ಣು 70ನೇ ಹುಟ್ಟುಹಬ್ಬ ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿದೆ.

ಬಲಗೈಲಿ ಕೊಟ್ಟದ್ದು ಎಡಗೈಗೆ ತಿಳಿಯಬಾರದು ಎಂಬಂತಿದ್ದವರು ವಿಷ್ಣು … ಯಾವತ್ತೂ ಅವರು ತಾವು ಮಾಡಿದ ಸಹಾಯದ ಕುರಿತು ಹೇಳಿಕೊಂಡವರೇ ಅಲ್ಲ. ವಿವಾದಗಳು ಅವರನ್ನು ಬೆನ್ನಟ್ಟಿ ಬಂದಾಗಲೂ ವಿಷ್ಣು ಮೌನಿಯಾಗಿದ್ದರು. ಅಂಬರೀಷ್‌ ಮತ್ತು ಅವರ ಸ್ನೇಹ ಚಿತ್ರರಂಗಕ್ಕೊಂದು ಮಾದರಿ ಎಂಬಂತಿತ್ತು.ವಿಷ್ಣುವರ್ಧನ್‌ ನಟಿಸಿದ ಚಿತ್ರಗಳ ಪೈಕಿ ನೆನಪಲ್ಲಿ ಉಳಿಯುವಂಥ ಚಿತ್ರಗಳ ಪಟ್ಟಿ ಸಾಕಷ್ಟು ದೊಡ್ಡದಿದೆ. “ಮುತ್ತಿನಹಾರ’ ಕನ್ನಡ ಚಿತ್ರರಂಗದಲ್ಲೇ ಒಂದು ಮೈಲಿಗಲ್ಲು. “ಬಂಧನ’, “ಆಪ್ತಮಿತ್ರ’, “ಆಪ್ತರಕ್ಷಕ’ಗಳ ನಡುವೆಯೇ ಅವರು “ಗಂಧರ್ವಗಿರಿ’ಯಂಥ ಸಿನಿಮಾ ಮಾಡಿದವರು. “ಹರಕೆಯ ಕುರಿ’ಯಂಥ ಅರ್ಥಪೂರ್ಣ ಚಿತ್ರದಲ್ಲಿ ನಟಿಸಿದವರು. ಕನ್ನಡದಲ್ಲಷ್ಟೇ ಅಲ್ಲದೇ, ಹಿಂದಿ, ತೆಲುಗು, ತಮಿಳು ಚಿತ್ರಗಳಲ್ಲೂ ನಟಿಸಿದ್ದ ವಿಷ್ಣು, ಯಾವತ್ತೂ ಚಿತ್ರರಂಗದ ನಾಯಕನೆಂದು ತಮ್ಮನ್ನು ಕರೆದುಕೊಂಡವರೇ ಅಲ್ಲ. ನಾನು ತುಂಬ ಚಿಕ್ಕವನು, ನಾನು ಹಿಂದೆಯೇ ಇರಬೇಕು ಅನ್ನುತ್ತಿದ್ದವರು ಅವರು. ಎಲ್ಲರನ್ನೂ ಮುಂದೆ ಬಿಟ್ಟುಕೊಂಡು, “ಸ್ನೇಹಲೋಕ’ ಎಂಬ ತಂಡ ಕಟ್ಟಿ, ಸಮಾನಮನಸ್ಕರನ್ನು ಒಂದಾಗಿಸಿದ ಖ್ಯಾತಿಯೂ ಅವರದ್ದೇ ಧ್ಯಾನಸ್ಥ, ಆಧ್ಯಾತ್ಮ ವಿಷ್ಣು ಕೊನೆಯ ದಿನಗಳಲ್ಲಿ ವಿಷ್ಣುವರ್ಧನ್‌ ಧ್ಯಾನಸ್ಥ ಸ್ಥಿತಿಯಲ್ಲಿದ್ದರು. ಆಧ್ಯಾತ್ಮ ಅವರಿಗೆ ತುಂಬ ಪ್ರಿಯವಾಗಿತ್ತು. ಆಧ್ಯಾತ್ಮ ಪುಸ್ತಕಗಳನ್ನು ಓದುತ್ತಿದ್ದರು. ದೇಶಕ್ಕೇನಾದರೂ ಮಾಡಬೇಕು ಅನ್ನುವ ತುಡಿತ ಇಟ್ಟುಕೊಂಡಿದ್ದರು. ಬನ್ನಂಜೆ ಗೋವಿಂದಾಚಾರ್ಯರ ಉಪನ್ಯಾಸಗಳನ್ನು ಕೇಳುತ್ತಿದ್ದರು.

“ಎಲ್ಲದಕ್ಕೂ ಕಾರಣ ಮೇಲಿರುವ ಆ ಶಕ್ತಿ’ ಎಂದು ಹೇಳುತ್ತಿದ್ದರು. ಯಾವತ್ತೂ ಗೆಲುವು ತನ್ನದಲ್ಲ, ಜನರದ್ದು ಅಂತ ವಿನೀತರಾಗುತ್ತಿದ್ದರು. “ಕೆಲವರಿಗೆ ಯೋಗ ಇರುತ್ತೆ, ಮತ್ತೆ ಕೆಲವರಿಗೆ ಯೋಗ್ಯತೆಇರುತ್ತೆ. ನನಗೆ ಯೋಗವಿತ್ತೇ ಹೊರತು, ಯೋಗ್ಯತೆ ಅಲ್ಲ’ ಅಂತ ತಮ್ಮ ಬಗ್ಗೆ ಅತ್ಯಂತ ವಿನಯದಿಂದ ಮಾತಾಡುತ್ತಿದ್ದರು. ಏಕಾಂತವನ್ನು ನೀಗುವುದಕ್ಕೆ ಡೈರಿ ಬರೆಯುತ್ತಿದ್ದರು. ಮನುಷ್ಯನ ಮನೋವ್ಯಾಪಾರಗಳನ್ನು ಅರ್ಥಮಾಡಿಕೊಳ್ಳಬಲ್ಲವರಾಗಿದ್ದ ಅವರಿಗೆ, ತಮ್ಮೆದುರು ಕೂತ ವ್ಯಕ್ತಿ ಸಾಚಾ ಹೌದೋ ಅಲ್ಲವೋ ಅನ್ನುವುದು ಕ್ಷಣಾರ್ಧದಲ್ಲಿ ಗೊತ್ತಾಗಿ  ಬಿಡುತ್ತಿತ್ತು.”ಮಮಕಾರ ಮತ್ತು ಅಹಂಕಾರ- ಇವೆರಡೇ ಮನುಷ್ಯನನ್ನು ಆಳುವ ಶಕ್ತಿಗಳು. ಮನುಷ್ಯಮನೆಯೊಳಗಿದ್ದಾಗ ಮಮಕಾರ ತುಂಬಿರುತ್ತದೆ. ಹೊರಗೆ ಹೋದ ಕೂಡಲೇ ಅಹಂಕಾರ ಬಂದುಬಿಡುತ್ತದೆ’ ಅನ್ನುತ್ತಿದ್ದರು ವಿಷ್ಣು.

ಡಾ.ವಿಷ್ಣುವರ್ಧನ್‌ ಅವರು ನಮ್ಮೊಂದಿಗಿಲ್ಲ. ಆದರೆ, ಅವರ ಅಪರೂಪದ ಚಿತ್ರಗಳ ಮೂಲಕ ಅವರು ಸದಾ ನಮ್ಮೊಂದಿಗಿದ್ದಾರೆ. ಆ ಖುಷಿಯಲ್ಲೇ ವಿಷ್ಣುವರ್ಧನ್‌ ಅವರ ಅಭಿಮಾನಿಗಳು ಹುಟ್ಟುಹಬ್ಬದ ದಿನದಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅವರನ್ನು ಆರಾಧಿಸುತ್ತಾರೆ. ವಿಷ್ಣುವರ್ಧನ್‌ ಅವರು ತಮ್ಮದೇ ನಟನಾ ಶೈಲಿ ಮೂಲಕ ಎಲ್ಲರ ಮನಸ್ಸಲ್ಲೂ ಮನೆ ಮಾಡಿದ್ದಾರೆ. ಎಲ್ಲಾ ತರಹದ ಪಾತ್ರಗಳಲ್ಲೂ ಸೈ ಎನಿಸಿಕೊಂಡು ಅಭಿಮಾನಿಗಳ ಪಾಲಿನ ಪ್ರೀತಿಯ ಹೀರೋ ಎನಿಸಿಕೊಂಡಿದ್ದಾರೆ. ಅವರಿಲ್ಲದ ಹನ್ನೊಂದು ವರ್ಷಗಳುಕಳೆದುಹೋಗಿವೆ. ಅವರಿಲ್ಲ ಎಂಬ ಭಾವನೆಯನ್ನು ಪಕ್ಕಕ್ಕಿಟ್ಟು ಕಳೆದ ಒಂದು ದಶಕದಿಂದಲೂ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು ಮಿಂದೇಳುತ್ತಿದ್ದಾರೆ. ಆದರೆ, ಈ ಬಾರಿಯ ಹುಟ್ಟುಹಬ್ಬ ಎಂದಿಗಿಂತ ವಿಶೇಷ. ಅದಕ್ಕೆ ಕಾರಣ ವಿಷ್ಣುದಾದನಿಗೆ 70 ತುಂಬುತ್ತದೆ. ಈ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು, ಕುಟುಂಬ ವರ್ಗ ನಿರ್ಧರಿಸಿದೆ.­

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.