ಚಂದನವನದಲ್ಲಿ ಚಂದದ ಭಾವನ!

Team Udayavani, Apr 21, 2019, 6:00 AM IST

ನಟ ಪುನೀತ್‌ ರಾಜಕುಮಾರ್‌ ಅಭಿನಯದ ಜಾಕಿ ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಪರಿಚಯವಾದ ಮಲೆಯಾಳಿ ಕುಟ್ಟಿ ಭಾವನಾ ಮೆನನ್‌. ಜಾಕಿ ಚಿತ್ರದ ಸೂಪರ್‌ ಹಿಟ್‌ ಸಕ್ಸಸ್‌ ನಂತರ ಕನ್ನಡ ಚಿತ್ರರಂಗದಲ್ಲಿ ಜಾಕಿ ಭಾವನಾ ಎಂದೇ ಜನಪ್ರಿಯವಾದ ಈ ಚೆಲುವೆ ನಂತರ ವಿಷ್ಣುವರ್ಧನ, ರೋಮಿಯೋ, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್‌, ಮೈತ್ರಿ, ಮುಕುಂದಾ – ಮುರಾರಿ, ಚೌಕ ಹೀಗೆ ಹಲವು ಚಿತ್ರಗಳಲ್ಲಿ ಅಭಿನಯಿಸಿ ತನ್ನದೇ ಆದ ಅಭಿಮಾನಿ ವರ್ಗವನ್ನು ಗಳಿಸಿಕೊಂಡಾಕೆ.

ಕನ್ನಡ, ಮಲೆಯಾಳ ಚಿತ್ರರಂಗದಲ್ಲಿ ಬಹುಬೇಡಿಕೆಯ ನಾಯಕ ನಟಿಯಾಗಿ ಯಶಸ್ಸಿನಲ್ಲಿರುವಾಗಲೇ ಭಾವನಾ ಅವರನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಈ ಘಟನೆಯಲ್ಲಿ ಮಲೆಯಾಳ ಚಿತ್ರರಂಗದ ಖ್ಯಾತ ನಟನೊಬ್ಬನ ಕೈವಾಡವಿರುವುದಾಗಿ ಹೇಳಲಾಗಿದ್ದು, ಇಡೀ ಮಲೆಯಾಳ ಚಿತ್ರರಂಗ ಭಾವನಾ ಅವರ ಬೆನ್ನಿಗೆ ಬೆಂಬಲವಾಗಿ ನಿಂತಿತ್ತು. ಈ ಘಟನೆ ಭಾವನಾ ಅವರ ಚಿತ್ರ ಬದುಕಿನಲ್ಲಿ ಮತ್ತು ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ತಲ್ಲಣವನ್ನೇ ಸೃಷ್ಟಿಸಿತು. ಈ ಘಟನೆಯ ಬಳಿಕ ಕೆಲಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಭಾವನಾ, ತಮ್ಮ ಬಹುಕಾಲದ ಗೆಳೆಯ ಬೆಂಗಳೂರು ಮೂಲದ ನಿರ್ಮಾಪಕ ನವೀನ್‌ ಎಂಬುವವರನ್ನು ವರಿಸುವ ಮೂಲಕ ವೈವಾಹಿಕ ಬದುಕಿಗೆ ಕಾಲಿಟ್ಟರು.

ಸಾಮಾನ್ಯವಾಗಿ ಮದುವೆಯ ಬಳಿಕ ಬಹುತೇಕ ನಾಯಕ ನಟಿಯರು ತೆರೆಮರೆಗೆ ಸರಿಯುತ್ತಾರೆ ಎಂಬ ಮಾತುಗಳಿಗೆ ಅಪವಾದ ಎನ್ನುವಂತೆ, ಮದುವೆಯ ನಂತರ ಭಾವನಾ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗುತ್ತಿದ್ದಾರೆ. ಮದುವೆಯ ಬಳಿಕ ಟಗರು ಚಿತ್ರದ ಮೂಲಕ ಮತ್ತೆ ಸ್ಯಾಂಡಲ್‌ವುಡ್‌ ಭರ್ಜರಿಯಾಗಿ ರೀ ಎಂಟ್ರಿ ಕೊಟ್ಟ ಭಾವನಾ, ಈಗ ಕನ್ನಡದಲ್ಲಿ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಗೋಲ್ಡನ್‌ಸ್ಟಾರ್‌ ಗಣೇಶ್‌ ಅಭಿನಯದ 99, ಪ್ರಜ್ವಲ್‌ ದೇವರಾಜ್‌ ನಾಯಕನಾಗಿರುವ ಇನ್ಸ್‌ಪೆಕ್ಟರ್‌ ವಿಕ್ರಂ, ಶಿವರಾಜಕುಮಾರ್‌ ಅಭಿನಯದ ಮೈ ನೇಮ್‌ ಈಸ್‌ ಆಂಜಿ, ಇನ್ನೂ ಹೆಸರಿಡದ ಎರಡು ಚಿತ್ರಗಳು ಸೇರಿದಂತೆ ಸುಮಾರು ಐದಾರು ಚಿತ್ರಗಳಲ್ಲಿ ಭಾವನಾ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಭಾವನಾ ಕನ್ನಡ ಚಿತ್ರರಂಗದಲ್ಲಿ ಹತ್ತು ವರ್ಷಗಳ ಜರ್ನಿಯನ್ನು ಪೂರ್ಣಗೊಳಿಸುವ ಉತ್ಸಾಹದಲ್ಲಿದ್ದಾರೆ. ಭಾವನಾ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಸಮಯದಲ್ಲೇ, ಚಿತ್ರರಂಗಕ್ಕೆ ಕಾಲಿಟ್ಟ ಅನೇಕ ನಾಯಕ ನಟಿಯರು ಸದ್ಯ ತೆರೆಮರೆಗೆ ಸರಿದಿರುವಾಗ, ಬದುಕಿನಲ್ಲಿ ಅನೇಕ ಏಳು-ಬೀಳುಗಳನ್ನು ಕಂಡ ಭಾವನಾ ಮತ್ತೆ ಹೊಸ ಹುರುಪಿನೊಂದಿಗೆ ಚಿತ್ರರಂಗದಲ್ಲಿ ಸಕ್ರಿಯರಾಗುತ್ತಿರುವುದು ನಿಜಕ್ಕೂ ಗಮನಾರ್ಹ ಸಂಗತಿ. ಈ ವರ್ಷ ಭಾವನಾ ಕನ್ನಡದಲ್ಲಿ ಅಭಿನಯಿಸಿರುವ ಕನ್ನಿಷ್ಟ ಎರಡು-ಮೂರು ಚಿತ್ರಗಳು ಬಿಡುಗಡೆಯಾಗಲಿದ್ದು, ಭಾವನ ಸೆಕೆಂಡ್‌ ಇನ್ನಿಂಗ್ಸ್‌ ಚಿತ್ರಗಳಿಗೆ ಸಿನಿಪ್ರಿಯರ ರೆಸ್ಪಾನ್ಸ್‌ ಹೇಗಿರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.


ಈ ವಿಭಾಗದಿಂದ ಇನ್ನಷ್ಟು

 • ಜಯಂತ್‌ ಕಾಯ್ಕಿಣಿಯವರ ಬೊಗಸೆಯಲ್ಲಿ ಮಳೆಯಲ್ಲಿನ ಲೇಖನಗಳನ್ನು ದಿನಕ್ಕೊಂದು ಓದುತ್ತಿದ್ದೆ. ಸಮಯವಿರಲಿಲ್ಲ ಅಂತಲ್ಲ, ಎರಡು-ಮೂರು ದಿನಕ್ಕೆ ಮುಗಿದು ಬಿಟ್ಟರೆ...

 • ಆತ ಬಿ.ಎಸ್‌ಸಿ ಮಾಡುತ್ತಿದ್ದರೂ ಹೆಚ್ಚಾಗಿ ಇರುತ್ತಿದ್ದುದು ಅಡಿಕೆ ವಕಾರಿಯಲ್ಲಿ. ಅದು ಕುಟುಂಬದ ದಂಧೆ. ಅಲ್ಲದೆ, ಆತನಿಗೆ ಪ್ರೀತಿಯ ಕೆಲಸ ಅದು. ಅಡಿಕೆ ಕತ್ತರಿಸಿ...

 • ಇತ್ತೀಚೆಗೆ ಸೆಕೆಗೆ ಒಂದು ರಾತ್ರಿಯೂ ಸರಿಯಾಗಿ ನಿದ್ದೆ ಮಾಡಿಲ್ಲ. ಹೊತ್ತಲ್ಲದ ಹೊತ್ತಲ್ಲಿ ಕಣ್ಣು ಕೂರುತ್ತಿತ್ತು. ಇದನ್ನು ತಪ್ಪಿಸಲು ಒಂದು ಅಭ್ಯಾಸವನ್ನು ರೂಢಿಸಿಕೊಂಡಿದ್ದೇನೆ....

 • ಕಲೆ-ಸಂಸ್ಕೃತಿಗೆ ಸಂಬಂಧಿಸಿದ ಯಾವುದೇ ಕ್ಷೇತ್ರದಲ್ಲಿ "ಲೆಜೆಂಡ್‌' ಅನ್ನಿಸಿಕೊಂಡವರ ವ್ಯಕ್ತಿತ್ವದ ಸುತ್ತ ತೀವ್ರ ಅಭಿಮಾನದ ಹಾಗೂ ವಿಸ್ಮಯದ ಮಾಯಾ ಪರಿವೇಶವೊಂದು...

 • ಜಾಗತೀಕರಣ ತನ್ನ ಎಲ್ಲೆಗಳನ್ನು ವಿಸ್ತರಿಸಿಕೊಳ್ಳುತ್ತಿದ್ದ ಹಾಗೆ ಜನಮಾನಸವೂ ತನ್ನ ಅಸ್ಮಿತೆಗಳನ್ನು ಕಾಪಿಟ್ಟುಕೊಳ್ಳಲು ಹಲವು ದಾರಿಗಳನ್ನು ಕಂಡುಕೊಳ್ಳತೊಡಗಿತು....

ಹೊಸ ಸೇರ್ಪಡೆ

 • ಸಂತೆಮರಹಳ್ಳಿ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿರುವ ಪಡಸಾಲೆಯಲ್ಲಿ ಆಧಾರ್‌ ನೋಂದಣಿಯನ್ನು ಪುನಾರಂಭ ಮಾಡಲಾಗಿದೆ. ಈ ಬಗ್ಗೆ ಉದಯವಾಣಿ ಮೇ. 15 ರಂದು ಆಧಾರ್‌...

 • ಚಾಮರಾಜನಗರ: ಬಸವಾದಿ ಶರಣರು ಸ್ಥಾಪನೆ ಮಾಡಿರುವ ವೀರಶೈವ ಲಿಂಗಾಯತ ಧರ್ಮ ಸಂವಿಧಾನ ಕಲಂನಲ್ಲಿ ಪ್ರತ್ಯೇಕ ಧರ್ಮವಾಗುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಸಮಾಜದ ಬಂಧುಗಳು...

 • ಹುಮನಾಬಾದ: ಕ್ಯಾಂಪಸ್‌ ಸಂದರ್ಶನ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ನಾಂದಿಯಾಗುತ್ತದೆ ಎಂದು ತೆಲಂಗಾಣ ಜಹೀರಾಬಾದನ ಮಹೀಂದ್ರಾ ಆ್ಯಂಡ್‌ ಮಹಿಂದ್ರಾ ಆಟೋಮೊಬೈಲ್...

 • ಬೀದರ: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿನ ಹವಾನಿಯಂತ್ರಿತ (ಎಸಿ)ವ್ಯವಸ್ಥೆ ಎರಡು ದಿನಗಳಿಂದ ಕೈ ಕೊಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ...

 • ದೇವನಹಳ್ಳಿ: ಇಲ್ಲಿನ ಪುರಸಭೆ ಚುನಾವಣೆ 29ರಂದು 23 ವಾರ್ಡ್‌ಗಳಿಗೆ ವಿವಿಧ ಪಕ್ಷಗಳಿಂದ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಸೋಮವಾರ ಕಡೆ ದಿನವಾಗಿದ್ದರಿಂದ...

 • ನೆಲಮಂಗಲ: ಕಾರು ಶೋಕಿಗಾಗಿ ಚಾಲಕನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನದ ವೇಳೆ ಪೊಲೀಸರ ಬಂದೂಕುಗಳು ಸದ್ದು ಮಾಡಿರುವ ಘಟನೆ ಮಂಗಳವಾರ ಬೆಳ್ಳಂಬೆಳ್ಳಗ್ಗೆ...