ಹಲಸಿನ ಮರ


Team Udayavani, Jan 29, 2017, 3:45 AM IST

halasu.jpg

ಮತ್ತೊಂದು ಹಲಸಿನ ಮರದಲ್ಲಿ ಕಾಯಿ ಬಿಟ್ಟಿದೆ” ಎಂದುಕೊಂಡು ರಾಜೇಶ್ವರಿ ಚಾವಡಿಯಿಂದಲೇ ಕೂಗಿಕೊಂಡು ಬಂದಳು. “”ನೀನು ಕಿರುಚುವುದು ಇಡೀ ಊರಿಗೆ ಕೇಳಿಸುತ್ತೆ. ಸ್ವಲ್ಪ ಮೆತ್ತಗೆ ಹೇಳು. ನಂಗೆ ಕೇಳಿದ್ರೆ ಸಾಕು” ಗೋಪಿನಾಮವನ್ನು ಹಣೆಗೆ ತಿಕ್ಕಿಕೊಳ್ಳುತ್ತ ವೆಂಕಣ್ಣ ಹೆಂಡತಿಯ ಮೇಲೆ ರೇಗಿದ. ಗಂಡನ ಮಾತು ಕೇಳಿ ರಾಜೇಶ್ವರಿ ಮುಖ ತಿರುವಿದಳು. “”ಅಲ್ಲ, ಮೊನ್ನೆ ತಾನೆ ನೂರು ಹಲಸಿನ ಹಣ್ಣು ಮಾರಿ ಬಂದದ್ದು ಅಲ್ವಾ… ಇದನ್ನು ಎಂಥ ಮಾಡುದು” ರಾಜೇಶ್ವರಿ ಗಂಡನ ಮುಂದೆ ಪ್ರಶ್ನೆಯೊಂದನ್ನು ಇಟ್ಟಳು. “”ಜನ ಇ¨ªಾರೆ ಮಾರಾಯ್ತಿ ತಗೋತಾರೆ” ಸಂಕಲ್ಪ ಮಾಡುತ್ತಿದ್ದ ವೆಂಕಣ್ಣ ರೇಗಿದನು.

“”    ವೆಂಕಣ್ಣಯ್ಯ… ವೆಂಕಣ್ಣಯ್ಯ…” ಹೊರಗಿನಿಂದ ಯಾವುದೋ ಪರಿಚಿತ ಸ್ವರ ಕೇಳಿಬಂತು. “”ಯಾರು ನೋಡು” ಎಂಬಂತೆ ಹೆಂಡತಿಗೆ ಕಣ್ಣುಸನ್ನೆ ಮಾಡಿದ ವೆಂಕಣ್ಣ. “”ವೆಂಕಣ್ಣಯ್ಯ ಇಲ್ವಾ ರಾಜಕ್ಕ?” ರಾಜೇಶ್ವರಿ ದೇವರ ಕೋಣೆಯಿಂದ ಹೊರಗೆ ಬರುತ್ತಲೇ ಕೇಳಿದನು ಶ್ರೀನಿವಾಸ. “”ಓ… ಸೀನಣ್ಣ ಬನ್ನಿ ಕೂರಿ” ಎನ್ನುತ್ತ ಕುರ್ಚಿಯೊಂದನ್ನು ಶ್ರೀನಿವಾಸನ ಬಳಿಗೆ ದೂಡಿದಳು ರಾಜಕ್ಕ. “”ಇರಲಿ, ರಾಜಕ್ಕ ಕೆಳಗೆ ಕೂರುತ್ತೇನೆ” ಎನ್ನುತ್ತ ತಣ್ಣಗಿನ ಕೆಂಪು ಹಾಸಿನ ನೆಲದ ಮೇಲೆ ಕುಳಿತ  ಶ್ರೀನಿವಾಸ.

“”ಏನು ಶೆಕೆ ಅಕ್ಕಾ… ತಡೀಲಿಕ್ಕೆ ಸಾಧ್ಯವಿಲ್ಲ… ವೆಂಕಣ್ಣಯ್ಯ ಇಲ್ವಾ…?” ಎಂದು ಮತ್ತೆ ಕೇಳಿದ ಶ್ರೀನಿವಾಸ. ತನ್ನ ಕೈಯಲ್ಲಿದ್ದ ತಣ್ಣಗಿನ ನೀರನ್ನು ಶ್ರೀನಿವಾಸನಿಗೆ ಕೊಡುತ್ತ, ಚಿಕ್ಕ ತಟ್ಟೆಯಲ್ಲಿದ್ದ ಬೆಲ್ಲವನ್ನು ಅವನೆಡೆಗೆ ಸರಿಸುತ್ತ ಪೂಜೆಗೆ ಕೂತಿ¨ªಾರೆ. ಇನ್ನೇನು, ಮಂಗಳಾರತಿಗೆ ಸಮಯ ಆಯ್ತು ಎನ್ನುತ್ತಿದ್ದಂತೆ “ಗಂಟೆ’ ಎಂದು ವೆಂಕಣ್ಣನ ಸ್ವರ ಬಂದಿತು. ಚಾವಡಿಯಿಂದ ದೇವರ ಕೋಣೆಗೆ ಬಂದು ಜಾಗಟೆಯನ್ನು ಬಾರಿಸಿದಳು. ತೋಟದಲ್ಲಿ ಆಡುತ್ತಿದ್ದ ಮಕ್ಕಳಿಬ್ಬರು ನೈವೇದ್ಯಕ್ಕೆ ಇಟ್ಟಿದ್ದ ಬೆಲ್ಲದ ಆಸೆಗೆ ಒಳಗೆ ಓಡಿ ಬಂದವು. 

“”ಏನೋ ಸೀನ… ಆರಾಮ ಇದ್ದೀಯಾ?” ಕೈಯಲ್ಲಿ ತಂಬಿಗೆಯನ್ನು ಹಿಡಿದು ತುಳಸಿಕಟ್ಟೆಯ ಬಳಿ ಓಡುತ್ತ  ವೆಂಕಣ್ಣ ಕೇಳಿದ. “”ಆರಾಮ್‌ ಇದ್ದೇನೆ ವೆಂಕಣ್ಣ… ನೀವು?” ಎಂದು ಉತ್ತರದ ಜೊತೆಗೊಂದು ಪ್ರಶ್ನೆ. “”ಏನೋ ಮಾರಾಯ… ದೇವರು ನಡೆಸಿ ಹೀಗಿದ್ದೇನೆ ನೋಡು” ಎಂದು ತನ್ನ ಸುಖದ ಜೀವನಕ್ಕೆ ದೇವರ ಕೃಪೆ ಕಾರಣ ಎಂದು ತಿಳಿಸಿದನು ವೆಂಕಣ್ಣ. “”ಯಾವಾಗ ಬಂದದ್ದು ಸೀನಣ್ಣ… ಎಂತ ಆದ್ರು ವಿಶೇಷ ಉಂಟಾ? ಅಲ್ಲ, ನೀವು ಹಾಗೆÇÉಾ ಸುಮ್ಮನೆ ಊರಿಗೆ ಬರುವವರಲ್ಲ ಅಲ್ಲವಾ ಹಾಗಾಗಿ ಕೇಳುತ್ತಿದ್ದೇನೆ” ಸೀನನ ಆಗಮನದ ಕಾರಣವನ್ನು ತಿಳಿದುಕೊಳ್ಳಲು ಮಾರ್ಮಿಕವಾಗಿ ಕೇಳಿದಳು ರಾಜಕ್ಕ.

    ಶ್ರೀನಿವಾಸ ನಸುನಕ್ಕು , “”ಹೌದು ರಾಜಕ್ಕ… ನಾಡಿದ್ದು ಅಪ್ಪಯ್ಯನ ಶ್ರಾದ್ಧ. ಹಾಗೆ ಅದರ ಮರುದಿನ ರಾತ್ರಿ ದುರ್ಗಾನಮಸ್ಕಾರ ಪೂಜೆ. ಹೇಳಿಕೆ ಕೊಟ್ಟು , ಹಾಗೇ 10 ಹಲಸಿನ ಹಣ್ಣು ಬೇಕಿತ್ತು, ಅದನ್ನು ಹೇಳಿ ಹೋಗುವ ಅಂತ ಬಂದದ್ದು”

“”    ಈ ಹಲಸಿನ ತೋಟಕ್ಕೆ ನಿನ್ನ ಅಪ್ಪನೆ ಒಂದು ರೀತಿ ಕಾರಣ. ಹತ್ತಲ್ಲ, ಹದಿನೈದು ಬೇಕಾದರೂ ಕೊಂಡುಹೋಗು. ಕುಹಕ ನುಡಿದನು ವೆಂಕಣ್ಣ. ಮತ್ತೆ ಬೊಂಬಾಯಿ ಬದುಕು ಹೇಗೆ ಉಂಟು?” ಎಂದು ವೆಂಕಣ್ಣನ ಪ್ರಶ್ನೆ.

“”    ಪರವಾಗಿಲ್ಲ ವೆಂಕಣ್ಣ. ನೆಮ್ಮದಿ ಇದೆ. ಆದರೆ, ತೃಪ್ತಿ ಇಲ್ಲ” ಹೀಗೆ, ಒಂದಿಷ್ಟು ಹೊತ್ತು ಮಾತುಕತೆಯ ನಂತರ ಶ್ರೀನಿವಾಸ ಹೊರಟ. “”ಅಣ್ಣ , ನಾಡಿದ್ದು ತಪ್ಪಿಸಬೇಡಿ ಬನ್ನಿ” ಊಟಕ್ಕೆ ಮತ್ತೂಮ್ಮೆ ಆಹ್ವಾನ ಕೊಟ್ಟನು ಶ್ರೀನಿವಾಸ. ಅವನನ್ನು ಕಳುಹಿಸಿಕೊಟ್ಟು ವೆಂಕಣ್ಣ ಚಾವಡಿಯ ಕಂಬಕ್ಕೆ ಒರಗಿ ಕುಳಿತನು. ಹಿಂದಿನದೆಲ್ಲ ನೆನಪಿಗೆ ಬಂದಂತೆ ಆಯಿತು. ಸಾಮಾನ್ಯನಾಗಿದ್ದ ವೆಂಕಣ್ಣ “ಹಲಸಿನ ವೆಂಕಣ್ಣ’ ಆದ ಕಥೆ ಅದು.
.
    ಆಗ ವೆಂಕಣ್ಣನಿಗೆ ಸುಮಾರು ಹದಿನೆಂಟು ವರ್ಷ ಬದುಕಿನಲ್ಲಿ ನಷ್ಟ ತುಂಬಿ ಹೋಗಿತ್ತು. ಓದುವ ಮನಸ್ಸಿದ್ದರೂ ಓದಲು ಹಣವಿಲ್ಲದ ಕಾರಣ ಏಳನೆಯ ತರಗತಿಗೆ ಓದು ಮೊಟಕುಗೊಂಡಿತ್ತು. ಅಸ್ತಮಾದ ಕಾರಣದಿಂದ ವೆಂಕಣ್ಣನ ಅಪ್ಪ ಬೇಗನೆ ತೀರಿಕೊಂಡಿದ್ದರು. ಎರಡು ತಂಗಿಯರ ಜವಾಬ್ದಾರಿ ಹೊತ್ತ ವೆಂಕಣ್ಣ  ಅದು ಇದು ಕೆಲಸ ಮಾಡಿಕೊಂಡು ಕುಟುಂಬದ ಪಾಲನೆ ಮಾಡುತ್ತಿದ್ದನು. ಅದು ಯಾಕೋ ಒಂದು ದಿನ ಹಲಸಿನ ಹಣ್ಣಿನ ಕಡುಬು ತಿನ್ನುವ ಆಸೆಯಾಯಿತು. ತನ್ನ ಮನೆಯಲ್ಲಿ ಹಲಸಿನ ಮರ ಇಲ್ಲದ ಕಾರಣ ಆ ಪ್ರಾಂತ್ಯದಲ್ಲಿ ಹಲಸಿನ ಹಣ್ಣು ರುಚಿಯಾಗಿದ್ದ  ಕೃಷ್ಣಣ್ಣರ ಮನೆಗೆ ಹೋಗಿ ಕೇಳಿದನು. ಆದರೆ ಕೃಷ್ಣಣ್ಣ ಹಣ್ಣು ಕೊಡದೆ, ಅವಮಾನ ಮಾಡಿ ಕಳುಹಿಸಿದ್ದ. ಮೊದಲಿನಿಂದಲೂ ಕೃಷ್ಣಣ್ಣನಿಗೆ ಬಡವರನ್ನು ಕಂಡರೆ ತಾತ್ಸಾರ. ಅದೇ ಕೃಷ್ಣಣ್ಣನ ಮೇಲಿನ ಹಗೆಗೆ ಬಿಸಿರಕ್ತದ ವೆಂಕಣ್ಣ ಕಷ್ಟಪಟ್ಟು ಹಗಲು ರಾತ್ರಿ ಎನ್ನದೆ ದುಡಿದು ಹಲಸಿನ ತೋಟ ಮಾಡಿದ್ದ. ಆತನ ತೋಟದ ಹಲಸು ಅದೆಷ್ಟು ಜನಜನಿತವಾಯಿತು ಎಂದರೆ, ಆ ಪ್ರಾಂತ್ಯದಲ್ಲಿ ಹಲಸಿನ ವೆಂಕಣ್ಣ ಎಂದೇ ಹೆಸರುವಾಸಿಯಾಗಿದ್ದ. ಯಾರ ಮನೆಯಲ್ಲಿ ವಿಶೇಷವಾದರೂ ಈತನ ಮನೆಯ ಹಲಸಿನಿಂದ ಮಾಡಿದ ಖಾದ್ಯ ಇದ್ದೇ ಇರುತ್ತಿತ್ತು. ಮದುವೆ, ಸೀಮಂತ, ಉಪನಯನದಿಂದ ಹಿಡಿದು ವೈಕುಂಠ, ಶ್ರಾದ್ಧ ಮುಂತಾದ ಸಮಾರಂಭಗಳಿಗೂ ವೆಂಕಣ್ಣನ ಹಲಸು ಇರಲೇಬೇಕು ಎಂಬಂತೆ ಆಯಿತು. ಹಲಸಿನ ತೋಟದಿಂದಲೇ ವೆಂಕಣ್ಣನ ಸುಖ, ನೆಮ್ಮದಿ ಶ್ರೀಮಂತಿಕೆ. ಅದಕ್ಕಾಗಿಯೇ ಆ ತೋಟವನ್ನು ವೆಂಕಣ್ಣ ಸನ್ನಿಧಾನ ಎನ್ನುತ್ತಿದ್ದನು. ಅದೇ ಕೃಷ್ಣಣ್ಣರ ಮಗ ಶ್ರೀನಿವಾಸ. ಕೃಷ್ಣಣ್ಣ ಸತ್ತು ಸುಮಾರು ಐದು ವರ್ಷಗಳಾಗಿತ್ತು.

    “”ಊಟಕ್ಕೆ ಬನ್ನಿ… ತಟ್ಟೆ ಇಟ್ಟಿದ್ದೇನೆ…” ರಾಜೇಶ್ವರಿ ಸ್ವರ ಬಂದಾಗಲೇ ಕಂಬಕ್ಕೆ ಒರಗಿ ಕುಳಿತ ವೆಂಕಣ್ಣನಿಗೆ ಎಚ್ಚರವಾದಂತಾಗಿ ಅಡುಗೆ ಮನೆಯೆಡೆಗೆ ಊಟ ಮಾಡಲು ಹೆಜ್ಜೆ ಹಾಕಿದನು.
.
    ವೆಂಕಣ್ಣನಿಗೆ ಮುಪ್ಪು ಬಂದಿತು. ಹೆಂಡತಿಯ ವಿಯೋಗವಾಗಿ ನಾಲ್ಕು ವರ್ಷಗಳಾಗಿತ್ತು. ಮಕ್ಕಳಿಬ್ಬರೂ ಮದುವೆಯಾಗಿ ವಿದೇಶದಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದರು. ಆದ್ದರಿಂದ ಮನೆಯಲ್ಲಿ ವೆಂಕಣ್ಣನೊಬ್ಬನೇ ಇದ್ದ. ಇತ್ತೀಚೆಗೆ ಆತನಿಗೂ ವಯಸ್ಸಿನ ಕಾಯಿಲೆ ಬಾಧಿಸುತ್ತಿತ್ತು. ಒಬ್ಬನೆ ಮಗನಾದ ಕಾರಣ ಮಗ ಊರಿಗೆ ಬಂದು ತನ್ನೊಡನೆ ಇರಬಹುದು ಎಂಬ ಕಾರಣದಿಂದ ಮಗನ ಹೆಸರಿಗೆ ತನ್ನ ಎಲ್ಲ ಆಸ್ತಿಯನ್ನು ಬರೆದು ಹಾಕಿದ್ದ. ಆದರೆ, ಮಗನ ವಿದೇಶದ ವ್ಯಾಮೋಹ ಅವನನ್ನು ಊರಿಗೆ ಬರಲು ಬಿಡಲಿಲ್ಲ. ಮಗಳನ್ನಂತೂ ಕರೆಯುವ ಹಾಗೆ ಇಲ್ಲ. ಹೇಗೋ ಇದ್ದಷ್ಟು ದಿನ ಈ ನನ್ನ ಸನ್ನಿಧಾನದಲ್ಲಿಯೇ ಕಳೆಯುತ್ತೇನೆ ಎಂದು ಯಾರಾದರೂ ಕೇಳಿದರೆ ಹೇಳುತ್ತಿದ್ದ.

    ಮಗನಿಗಂತೂ ತಂದೆ ಒಬ್ಬರೇ ಇರುವುದು ಸುತರಾಂ ಇಷ್ಟವಿರಲಿಲ್ಲ. ತಾಯಿಯ ವರ್ಷದ ಕಾರ್ಯಕ್ಕೆ ಬಂದವನೇ ಅಪ್ಪನನ್ನು ತನ್ನೊಡನೆ ವಿದೇಶಕ್ಕೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದನು.ಆದರೆ, ತಂದೆಗೆ ಒಪ್ಪಿಗೆ ಇರಲಿಲ್ಲ. ಪ್ರತಿಸಲ ಬಂದಾಗಲೂ ತಂದೆಯನ್ನು ಒಪ್ಪಿಸಲು ಎಲ್ಲ ಪ್ರಯತ್ನ ಮಾಡಿ ವಿಫ‌ಲನಾಗುತ್ತಿದ್ದ. ತಾನು ಬೆಳೆಸಿದ ಹಲಸಿನ ಮರಗಳ ನಡುವೆಯೇ ಇದ್ದು ಸಾಯಬೇಕು ಎಂಬುದೊಂದೇ ವೆಂಕಣ್ಣನ ಹಠ. ಆದರೆ, ಈ ಬಾರಿ ವೆಂಕಣ್ಣನ ಮಗ ತಾಯಿಯ ಶ್ರಾದ್ಧಕ್ಕೆ ಬಂದವನು ತಂದೆಗೆ ತಿಳಿಯದಂತೆ ಮಾರಿಬಿಟ್ಟಿದ್ದ. ಅದು ಯಾವುದೋ ರಿಯಲ್‌ ಎಸ್ಟೇಟ್‌ ಕಂಪೆನಿಗೆ. ಹಾಗಾದರೂ ಅಪ್ಪ ತನ್ನೊಡನೆ ಬರುತ್ತಾನೆ ಎಂಬುದು ಮಗನ ಆಲೋಚನೆಯಾಗಿತ್ತು. ಆದರೆ, ಇದನ್ನು ಅಪ್ಪನಿಗೆ ತಿಳಿಸುವ ಧೈರ್ಯ ಬರಲಿಲ್ಲ. ತಾನು ವಾಪಸು ಹೋಗುವ ಒಂದೆರಡು ದಿನಗಳ ಹಿಂದೆ ತಿಳಿಸಿ ಅಪ್ಪನನ್ನು ಒಪ್ಪಿಸುವ ವಿಚಾರ ಮಾಡಿದ್ದನು. ಆದರೆ ಒಂದು ದಿನ ತೋಟದೊಳಕ್ಕೆ ದೊಡ್ಡ ದೊಡ್ಡ ಮರ ಕೊರೆಯುವ ಮಿಷನ್‌ಗಳು ಬಂದವು. ಕಣ್ಣಿಗೆ ಅಡ್ಡವಾಗಿ ಕೈಯನ್ನು ಇಟ್ಟುಕೊಳ್ಳುತ್ತ ಹಲಸಿನ ವೆಂಕಣ್ಣ ಅಂಗಳಕ್ಕೆ ಬಂದು ನೋಡಿದನು.

“”    ಪುಟ್ಟ… ಓ ಪುಟ್ಟ… ಯಾರೋ ನಮ್ಮ ತೋಟದೊಳಗೆ ಮಿಷನ್ನು ತಂದಿ¨ªಾರೆ… ಪುಟ್ಟ… ಓ ಪುಟ್ಟ…” ವೆಂಕಣ್ಣ ಆತಂಕದಿಂದ ತನ್ನ ಮಗನನ್ನು ಕರೆದನು. ಮಗನಿಗೆ ಹೀಗೆ ಆಗುವುದೆಂಬ ನಿರೀಕ್ಷೆ ಇತ್ತು. ಆದರೂ ಇಷ್ಟು ಬೇಗ ಆ ರಿಯಲ್‌ ಎಸ್ಟೇಟ್‌ನವರು ಸೈಟ್‌ ಮಾಡಲು ಮುಂದಾಗುತ್ತಾರೆ ಎಂದು ತಿಳಿದಿರಲಿಲ್ಲ. ತಂದೆಗೆ ಇರುವ ವಿಷಯವನ್ನು ತಿಳಿಸಿ, ಅದರ ಕಾರಣವನ್ನು ತಿಳಿಸಿದನು.

“”ಪುಟ್ಟಾ… ನೀನು ನನ್ನನ್ನು ಕೇಳಬೇಕಿತ್ತು… ” ವೆಂಕಣ್ಣ ಮಗನ ಮೇಲೆ ಮೃದುವಾಗಿಯೇ ರೇಗಿದ್ದ. ಮಗನಿಗೆ ತನ್ನ ಮೇಲೆ ಇದ್ದ ಅತಿಯಾದ ವ್ಯಾಮೋಹವೇ ಇದಕ್ಕೆಲ್ಲ ಕಾರಣ ಎಂದು ಆತನಿಗೆ ತಿಳಿಯಿತು. ಮತ್ತೇನನ್ನೂ ಹೇಳದೆ ವೆಂಕಣ್ಣ ತನ್ನ ಹಲಸಿನ ತೋಟದ ಕಡೆಯೇ ನೋಡತೊಡಗಿದ. ಒಂದೊಂದೇ ಮರಗಳು ಮಿಷನ್ನಿನ ಆರ್ಭಟಕ್ಕೆ ಸರದಿಯಲ್ಲಿ ಧರೆಗುರುಳತೊಡಗಿತು. ತಾನು ಅದೆಷ್ಟೋ ಕಷ್ಟಪಟ್ಟು ಬೆಳೆಸಿದ ತೋಟ ತನ್ನ ಕಣ್ಣೆದುರೇ ಸಮಾಧಿಯಾಗುತ್ತಿದ್ದದ್ದು ವೆಂಕಣ್ಣನಿಗೆ ನುಂಗಲಾರದ ತುತ್ತಾಯಿತು. ಆತನ ಹೆಸರಿನೊಡನೆ ಮಾತ್ರವಲ್ಲ, ಆತನ ರೋಮ ರೋಮದಲ್ಲಿಯೂ ಹಲಸು ಬೆರೆತು ಹೋಗಿತ್ತು. ಯಾಕೋ ಮೈ ಬೆವರಿದಂತಾಯಿತು. ಚಾವಡಿಯಲ್ಲಿದ್ದ ಕಂಬಕ್ಕೆ ಒರಗಿ ಹಾಗೆ ವಿನಾಶವಾಗುತ್ತಿದ್ದ ತನ್ನ ಸನ್ನಿಧಾನವನ್ನು ನೋಡುತ್ತಾ ಕುಳಿತನು. ಕುಳಿತವನು ಮತ್ತೆ ಏಳಲೇ ಇಲ್ಲ.
.
ಹಲಸಿನ ತೋಟದಲ್ಲಿ ವೆಂಕಣ್ಣನ ಚಿತೆಯ ಬೆಂಕಿ ಉರಿಯುತ್ತಿತ್ತು. ಆ ಚಿತೆಯು ಹಲಸಿನ ಕಟ್ಟಿಗೆಯಿಂದಲೇ ಮಾಡಿದ್ದು ! ತಂದೆಯನ್ನು ಕರೆದುಕೊಂಡು ಹೋಗಲೇಬೇಕು ಎಂದು ಬಂದಿದ್ದ ಮಗನಿಗೆ ಆ ಭಾಗ್ಯ ದಕ್ಕಲಿಲ್ಲ. ಹಲಸಿನ ತೋಟದೊಡನೆಯೇ ಹಲಸಿನ ವೆಂಕಣ್ಣನು ನಾಶವಾಗಿ ಹೋಗಿದ್ದ !

– ರಾಘವೇಂದ್ರ ಟಿ. ಆರ್‌.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.