ಪ್ರಿಯಾಮಣಿ ಹ್ಯಾಪಿ ಸಿನಿಜರ್ನಿ

Team Udayavani, Jan 12, 2020, 5:01 AM IST

1

ಮದುವೆಯ ಬಳಿಕ ಚಿತ್ರರಂಗದಿಂದ ಕೊಂಚ ಅಂತರ ಕಾಯ್ದುಕೊಂಡಿರುವ ಕನ್ನಡ ಮೂಲದ ಬಹುಭಾಷಾ ನಟಿ ಪ್ರಿಯಾಮಣಿ, ವರ್ಷದ ಆರಂಭದಲ್ಲಿಯೇ ಈ ವರ್ಷವನ್ನು ಹೊಸ ಹುರುಪಿನೊಂದಿಗೆ ಆರಂಭಿಸುವ ಸುಳಿವನ್ನು ನೀಡಿದ್ದಾರೆ. ಹೌದು, ವರ್ಷದ ಆರಂಭದಲ್ಲಿಯೇ ಈ ವರ್ಷದ ತಮ್ಮ ಬಣ್ಣದ ಬದುಕಿನ ಪ್ಲಾನಿಂಗ್‌ ಕುರಿತು ಮಾತನಾಡಿರುವ ಪ್ರಿಯಾಮಣಿ, ಕಳೆದ ವರ್ಷಕ್ಕಿಂತ ಈ ವರ್ಷ ಸಿನಿ ದುನಿಯಾದಲ್ಲಿ ಇನ್ನಷ್ಟು ಬ್ಯುಸಿಯಾಗಿರುವ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡು ಸೂಪರ್‌ ಹಿಟ್‌ ಆಗಿ, ಬಾಕ್ಸಾಫೀಸ್‌ನಲ್ಲಿ ದೊಡ್ಡ ಗೆಲುವು ಕಂಡಿದ್ದ ಅಸುರನ್‌ ಚಿತ್ರ ವಿಮರ್ಶಕರಿಂದಲೂ ಮೆಚ್ಚುಗೆ ಪಡೆದುಕೊಂಡಿತ್ತು. ಧನುಷ್‌ ಮತ್ತು ಮಂಜು ವಾರಿಯರ್‌ ನಟನೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿತ್ತು. ಇದೀಗ ಆ ಚಿತ್ರ ವರ್ಷದ ಆರಂಭದಲ್ಲಿಯೇ ತೆಲುಗಿಗೆ ರಿಮೇಕ್‌ ಆಗಿ ಸೆಟ್ಟೇರುತ್ತಿರುವ ಸುದ್ದಿ ಹೊರಬಿದ್ದಿದೆ. ಇನ್ನು ವಿಕ್ಟರಿ ವೆಂಕಟೇಶ್‌ ನಾಯಕನಾಗಿ ಅಭಿನಯಿಸುತ್ತಿರುವ ಅಸುರನ್‌ ತೆಲುಗು ರಿಮೇಕ್‌ನಲ್ಲಿ ವಿಕ್ಟರಿ ವೆಂಕಟೇಶ್‌ಗೆ, ಪ್ರಿಯಾಮಣಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರಕ್ಕೆ ಶ್ರೇಯಾ ಶರಣ್‌, ಅನುಷ್ಕಾ ಶೆಟ್ಟಿ ಮೊದಲಾದವರು ನಾಯಕಿಯಾಗಲಿದ್ದಾರೆ ಎನ್ನಲಾಗುತ್ತಿದ್ದರೂ, ಅಂತಿಮವಾಗಿ ಪ್ರಿಯಾಮಣಿ ನಾಯಕಿಯ ಪಟ್ಟ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.

ಇದಾದ ಬಳಿಕ ಪ್ರಿಯಾಮಣಿ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಯೋಪಿಕ್‌ ತಲೈವಿ ಚಿತ್ರದಲ್ಲೂ ಬಣ್ಣ ಹಚ್ಚುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ತಲೈವಿ ಚಿತ್ರದಲ್ಲಿ ಕಂಗನಾ ರಣಾವತ್‌ ಜಯಲಲಿತಾ ಪಾತ್ರ ನಿರ್ವಹಿಸುತ್ತಿದ್ದು, ಪ್ರಿಯಾಮಣಿ ಶಶಿಕಲಾ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಮತ್ತೂಂದೆಡೆ ದಿ ಫ್ಯಾಮಿಲಿ ಮ್ಯಾನ್‌ ಎಂಬ ವೆಬ್‌ ಸೀರಿಸ್‌ನಲ್ಲೂ ಅವರಿದ್ದಾರೆ. ಇನ್ನಷ್ಟು ಪ್ರಾಜೆಕ್ಟ್ ಮಾತುಕತೆಯ ಹಂತದಲ್ಲಿದೆ. ಈ ಬಗ್ಗೆ ಮಾತನಾಡುವ ಪ್ರಿಯಾಮಣಿ, “ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆರಂಭ ಆಶಾದಾಯಕವಾಗಿದೆ. ನಾನೊಬ್ಬಳು ನಟಿಯಾಗಿದ್ದು, ನಟನೆಯಿಂದ ಯಾವತ್ತೂ ನಿವೃತ್ತಿ ತೆಗೆದುಕೊಳ್ಳಲು ಬಯಸಲಾರೆ. ಕೇವಲ ನಾಯಕಿಯಾಗಿದ್ದರೆ ಮಾತ್ರ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವುದು ಎಂಬ ಭಾವನೆ ತಪ್ಪು. ಇತ್ತೀಚೆಗೆ ನನಗೆ ನಾಯಕಿ ಪಾತ್ರಕ್ಕಿಂತ ಖಳನಾಯಕಿ ಪಾತ್ರಗಳು ಹೆಚ್ಚು ಇಷ್ಟವಾಗುತ್ತಿವೆ’ ಎಂದಿದ್ದಾರೆ. ಹೊಸ ಜೋಶ್‌ನೊಂದಿಗೆ, ಹೊಸವರ್ಷದ ಸಿನಿ ಜರ್ನಿ ಶುರು ಮಾಡಿರುವ ಪ್ರಿಯಾಮಣಿ ಈ ವರ್ಷ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ ಅನ್ನೋದು ಚಿತ್ರಗಳು ಬಿಡುಗಡೆಯಾದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Mamatha

West Bengal: ಬಾಂಗ್ಲಾ ಜೊತೆ ನೀರು ಹಂಚಿಕೆ ಮಾತುಕತೆಗೆ ಸಿಎಂ ಮಮತಾ ಆಕ್ಷೇಪ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

Rabkavi-Banhatti; ಉದ್ಘಾಟನೆಗೆ ಕಾಯುತ್ತಿರುವ ಬಸ್ ನಿಲ್ದಾಣ: ಪ್ರಯಾಣಿಕರ ಪರದಾಟ

1-dd

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

School Days: ವ್ಯಾನ್‌ ಬಂತು ಓಡೂ..! ಸ್ಕೂಲ್‌ ಶುರುವಾಗಿದೆ; ಮಕ್ಕಳಿಗೆ, ಅಮ್ಮಂದಿರಿಗೆ..

H. S. Venkateshamurthy: ಎಚ್ಚೆಸ್ವಿ 80 ತುಂಬಿದ ಕಾವ್ಯತಪಸ್ವಿ

H. S. Venkateshamurthy: ಎಚ್ಚೆಸ್ವಿ 80 ತುಂಬಿದ ಕಾವ್ಯತಪಸ್ವಿ

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.