ರಕ್ಷಿತಾ ಸೆಕೆಂಡ್‌ ಇನ್ನಿಂಗ್ಸ್‌

Team Udayavani, Apr 14, 2019, 6:00 AM IST

j-1

ಪುನೀತ್‌ ರಾಜಕುಮಾರ್‌ ಅಭಿನಯದ ಅಪ್ಪು ಚಿತ್ರದ ಮೂಲಕ ನಾಯಕ ನಟಿಯಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾದ ರಕ್ಷಿತಾ ಮೊದಲ ಚಿತ್ರದಲ್ಲೇ ಸಿನಿಪ್ರಿಯರ ಮನಗೆಲ್ಲುವಲ್ಲಿ ಯಶಸ್ವಿಯಾದ ಚೆಲುವೆ. ಅಪ್ಪು ಚಿತ್ರದ ಯಶಸ್ಸಿನ ಬಳಿಕ ಕನ್ನಡ ಚಿತ್ರರಂಗದಲ್ಲಿ ರಕ್ಷಿತಾಗೆ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬಂದವು.

ಪುನೀತ್‌ ರಾಜಕುಮಾರ್‌, ದರ್ಶನ್‌, ಸುದೀಪ್‌, ಉಪೇಂದ್ರ, ಶಿವರಾಜಕುಮಾರ್‌, ಶ್ರೀಮುರಳಿ, ಆದಿತ್ಯ ಹೀಗೆ ಕನ್ನಡ ಹಲವು ಸ್ಟಾರ್‌ ನಟರ ಜೊತೆಗೆ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡ ರಕ್ಷಿತಾ, ಕನ್ನಡದಲ್ಲಿ ತನ್ನದೇ ಆದ ಅಭಿಮಾನಿ ವರ್ಗವನ್ನು ಸಂಪಾದಿಸಿಕೊಂಡಾಕೆ. ಕನ್ನಡದ ಜೊತೆ ಜೊತೆಯಲ್ಲೇ ತೆಲುಗು, ತಮಿಳು ಚಿತ್ರಗಳಲ್ಲೂ ಕಾಣಿಸಿಕೊಂಡ ರಕ್ಷಿತಾ ಅಲ್ಲಿಯೂ ತನ್ನದೇ ಆದ ಛಾಪು ಮೂಡಿಸುವಲ್ಲೂ ಯಶಸ್ವಿಯಾದರು.

ಕನ್ನಡದಲ್ಲಿ ಬಹು ಬೇಡಿಕೆಯಲ್ಲಿರುವಾಗಲೇ ಯಾರೂ ನಿರೀಕ್ಷಿಸಿದ ರೀತಿ ನಿರ್ದೇಶಕ ಪ್ರೇಮ್‌ ಅವರನ್ನು ವರಿಸುವ ಮೂಲಕ ವೈವಾಹಿಕ ಜೀವನಕ್ಕೆ ಅಡಿಯಿಟ್ಟ ರಕ್ಷಿತಾ, ನಂತರ ಹಿರಿತೆರೆಯಿಂದ ಕಿರುತೆರೆಯತ್ತ ಮುಖ ಮಾಡಿದರು. ಆಗಾಗ್ಗೆ ಕನ್ನಡದ ಹಲವು ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ರಕ್ಷಿತಾ ಈಗ ಮತ್ತೆ ಹಿರಿತೆರೆಯಲ್ಲಿ ಸಕ್ರಿಯರಾಗುವ ಸುಳಿವನ್ನು ನೀಡಿದ್ದಾರೆ.

ರಕ್ಷಿತಾ ಮತ್ತೆ ಬಿಗ್‌ ಸ್ಕ್ರೀನ್‌ನತ್ತ ಮುಖ ಮಾಡುತ್ತಿರುವುದೇನೋ ನಿಜ. ಹಾಗಂತ ಅವರು ಯಾವುದೇ ಪಾತ್ರಕ್ಕೆ ಬಣ್ಣ ಹಚ್ಚುತ್ತಿಲ್ಲ. ಬದಲಾಗಿ ನಿರ್ಮಾಣಕ್ಕೆ ಇಳಿಯುತ್ತಿದ್ದಾರೆ. ಹೌದು, ರಕ್ಷಿತಾ ಫಿಲಂ ಫ್ಯಾಕ್ಟರಿ ಎನ್ನುವ ಹೆಸರಿನಲ್ಲಿ ತನ್ನದೇಯಾದ ಪ್ರೊಡಕ್ಷನ್‌ ಹೌಸ್‌ ಪ್ರಾರಂಭಿಸಿರುವ ರಕ್ಷಿತಾ, ತಮ್ಮ ಬ್ಯಾನರ್‌ ಮೂಲಕ ಏಕ್‌ ಲವ್‌ ಯಾ ಎನ್ನುವ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಂದ ಹಾಗೆ, ಈ ಚಿತ್ರದ ಮೂಲಕ ರಕ್ಷಿತಾ ತಮ್ಮ ಸೋದರ ರಾನಾ ಅವರನ್ನು ನಾಯಕ ನಟನಾಗಿ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಇನ್ನು ಈ ಚಿತ್ರವನ್ನು ರಕ್ಷಿತಾ ಪತಿ ಪ್ರೇಮ್‌ ನಿರ್ದೇಶಿಸುತ್ತಿದ್ದು, ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದೆ. ಇದೇ ಯುಗಾದಿಯ ಬಳಿಕ ಚಿತ್ರದ ಶೂಟಿಂಗ್‌ ಆರಂಭವಾಗಲಿದ್ದು, ಎಲ್ಲಾ ಅಂದುಕೊಂಡಂತೆ ನಡೆದರೆ ಇದೇ ವರ್ಷಾಂತ್ಯಕ್ಕೆ ರಕ್ಷಿತಾ ನಿರ್ಮಾಣದ ಚೊಚ್ಚಲ ಚಿತ್ರ ತೆರೆಗೆ ಬರುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಒಟ್ಟಾರೆ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಸೆಕೆಂಡ್‌ ಇನ್ನಿಂಗ್ಸ್‌ ಶುರು ಮಾಡಿರುವ ರಕ್ಷಿತಾ ಅವರನ್ನು ಚಿತ್ರರಂಗ ಮತ್ತು ಪ್ರೇಕ್ಷಕ ಪ್ರಭುಗಳು ಎಷ್ಟರ ಮಟ್ಟಿಗೆ ಕೈ ಹಿಡಿಯಲಿದ್ದಾರೆ ಅನ್ನೋದು ಏಕ್‌ ಲವ್‌ ಯಾ ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jagada-swasthya

ಮತ್ತೆ ಮರಳಲಿ ಜಗದ ಸ್ವಾಸ್ಥ್ಯ

ಹಾವೇರಿಯ ಹೊಕ್ಕುಳ ಬಳ್ಳಿ ಪಾಟೀಲ ಪುಟ್ಟಪ್ಪ  ಸ್ಮತಿ

ಹಾವೇರಿಯ ಹೊಕ್ಕುಳ ಬಳ್ಳಿ ಪಾಟೀಲ ಪುಟ್ಟಪ್ಪ ಸ್ಮತಿ

Suryana-neralu

ಸೂರ್ಯನ ನೆರಳು

ಚಿತ್ರೋತ್ಸವದಲ್ಲಿ ಮೌನದ ಮಾತು

ಚಿತ್ರೋತ್ಸವದಲ್ಲಿ ಮೌನದ ಮಾತು

ಕತೆ: ಸಹಯಾತ್ರಿ

ಕತೆ: ಸಹಯಾತ್ರಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.