ಕಿರಿಕ್‌ ಹುಡುಗಿಯ ಲೆಕ್ಕ ಇಲ್ಲ ಪಕ್ಕಾ


Team Udayavani, Jan 26, 2020, 4:51 AM IST

ras-1

ಅದೇನೋ ಗೊತ್ತಿಲ್ಲ ಕಿರಿಕ್‌ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ನಟಿ ರಶ್ಮಿಕಾ ಮಂದಣ್ಣ ಆರಂಭದಿಂದಲೂ ತಮ್ಮ ಸಿನಿಮಾಗಳಿಗಿಂತ, ಬೇರೆ ಬೇರೆ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. ನಟ ಕಂ ನಿರ್ದೇಶಕ ರಕ್ಷಿತ್‌ ಶೆಟ್ಟಿ ಜೊತೆಗಿನ ಬ್ರೇಕಪ್‌, ಅದಾದ ಬಳಿಕ ತೆಲುಗಿನಲ್ಲಿ ನಟ ವಿಜಯ ದೇವರಕೊಂಡ ಜೊತೆಗಿನ ಗಾಸಿಪ್‌, ಸಂಭಾವನೆ ವಿಚಾರದಲ್ಲಿ ನಿರ್ಮಾಪಕರ ಜೊತೆ ಕ್ಯಾತೆ ತೆಗೆದಿದ್ದು, ಕೆಲ ಚಿತ್ರಗಳ ಚಿತ್ರೀಕರಣಕ್ಕೆ ಚಿತ್ರತಂಡದ ಜೊತೆ ಸರಿಯಾಗಿ ಸಹಕರಿಸದಿರುವುದು, “ಕನ್ನಡ ಬರಲ್ಲ’ ಅಂಥ ಸಂದರ್ಶನದಲ್ಲಿ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ಹೀಗೆ ಸದ್ಯ ಚಿತ್ರರಂಗದಲ್ಲಿ ಅನೇಕರಿಂದ ಕಿರಿಕ್‌ ಹುಡುಗಿ ಅಂತಾನೇ ಕರೆಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ, ಇದೀಗ ಐಟಿ ವಿಷಯಕ್ಕೆ ಮತ್ತೆ ಕಳೆದ ಕೆಲ ದಿನಗಳಿಂದ ಸುದ್ದಿಯಾಗಿದ್ದಾರೆ.

ಕನ್ನಡದ ಜೊತೆ ತೆಲುಗು ಚಿತ್ರರಂಗದಲ್ಲೂ ಸ್ಟಾರ್‌ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ, ಕೆಲ ದಿನಗಳ ಹಿಂದಷ್ಟೇ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ತಾನು ಪಡೆಯುತ್ತಿರುವ ಸಂಭಾವನೇ ತೀರಾ ಕಡಿಮೆಯಿದ್ದು, ನನ್ನ ಬಳಿ ಉಳಿತಾಯದ ಹಣವೇ ಇಲ್ಲ’ ಎಂದು ಹೇಳಿಕೆ ನೀಡಿ ಅನೇಕರ ಹುಬ್ಬೇರುವಂತೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ರಶ್ಮಿಕಾ ಮಂದಣ್ಣ ಅವರ ನಿವಾಸ ಮತ್ತು ಅವರ ಕುಟುಂಬದ ಒಡೆತನದಲ್ಲಿರುವ ಕಟ್ಟಡಗಳ ಮೇಲೆ ಲಗ್ಗೆ ಇಟ್ಟಿದೆ. ಸುಮಾರು ಒಂದಿಡೀ ದಿನ ರಶ್ಮಿಕಾ ಮಂದಣ್ಣ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿ-ಪಾಸ್ತಿ, ಆದಾಯದ ಮೂಲಗಳ ಮಾಹಿತಿಯನ್ನು ಕಲೆ ಹಾಕಿರುವ ಆದಾಯ ತೆರಿಗೆ ಅಧಿಕಾರಿಗಳು, ಒಂದಷ್ಟು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡು ಮುಂದಿನ ವಿಚಾರಣೆಗೆ ಹಾಜರಾಗುವಂತೆ ರಶ್ಮಿಕಾ ಮತ್ತು ತಂದೆ ಮದನ್‌ ಮಂದಣ್ಣ ಅವರಿಗೆ ಸಮನ್ಸ್‌ ನೀಡಿ ತೆರಳಿದ್ದರು.

ಅದರಂತೆ ಮೈಸೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಗೆ ಆಗಮಿಸಿದ ರಶ್ಮಿಕಾ ಅವರನ್ನು ಅಧಿಕಾರಿಗಳು 3 ಗಂಟೆಗಳ ಕಾಲ ಸುದೀರ್ಘ‌ ವಿಚಾರಣೆಗೆ ಒಳಪಡಿಸಿದ್ದಾರೆ. ಬಳಿಕ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಗತ್ಯ ಇದ್ದಲ್ಲಿ ಮತ್ತೆ ವಿಚಾರಣೆಗೆ ಆಗಮಿಸಬೇಕು ಎನ್ನುವ ಸೂಚನೆಯೊಂದಿಗೆ ಕಳುಹಿಸಿದ್ದಾರೆ. ಮೂಲಗಳ ಪ್ರಕಾರ ರಶ್ಮಿಕಾ ಮಂದಣ್ಣ ತೋರಿಸಿರುವ ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಸದ್ಯದ ಮಟ್ಟಿಗೆ ಇದು ರಶ್ಮಿಕಾಗೆ ತೂಗುಕತ್ತಿಯಾದಂತಿರುವುದು ಸುಳ್ಳಲ್ಲ. ಒಟ್ಟಾರೆ ರಶ್ಮಿಕಾ ಮಂದಣ್ಣ ಆದಾಯ ವಿಷಯದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jagada-swasthya

ಮತ್ತೆ ಮರಳಲಿ ಜಗದ ಸ್ವಾಸ್ಥ್ಯ

ಹಾವೇರಿಯ ಹೊಕ್ಕುಳ ಬಳ್ಳಿ ಪಾಟೀಲ ಪುಟ್ಟಪ್ಪ  ಸ್ಮತಿ

ಹಾವೇರಿಯ ಹೊಕ್ಕುಳ ಬಳ್ಳಿ ಪಾಟೀಲ ಪುಟ್ಟಪ್ಪ ಸ್ಮತಿ

Suryana-neralu

ಸೂರ್ಯನ ನೆರಳು

ಚಿತ್ರೋತ್ಸವದಲ್ಲಿ ಮೌನದ ಮಾತು

ಚಿತ್ರೋತ್ಸವದಲ್ಲಿ ಮೌನದ ಮಾತು

ಕತೆ: ಸಹಯಾತ್ರಿ

ಕತೆ: ಸಹಯಾತ್ರಿ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ತಯತಯಜಯಜಹಗ್

ಪಾಟೀಲ-ಕಾರಜೋಳ ವಿರುದ್ದ ಟೀಕೆ ನಿಲ್ಲಿಸಲು ಮನವಿ

ಗಜಹಕಹಗ

ನಮ್ಮಲ್ಲಿರುವ ಜ್ಞಾನ ಪರಾಮರ್ಶೆಯೇ ಸಂಶೋಧನೆ: ತುಳಸಿಮಾಲಾ

ರತಯುಇಒಕಜಹಗ್ದಸ

ಪುರಸಭೆ ಅಧ್ಯಕ್ಷೆಯಾಗಿ ಸುನೀತಾ ಆಯ್ಕೆ

ದರತಯುಇತುಕಮಬವಚಷ

ನಿವೃತ್ತ ನೌಕರರಿಗೆ ವಂಚಕರ ಹೊಂಚು!

ದ್ತಯಜಗನಬವ

ಶರಣಬಸವ ವಿವಿಯಲ್ಲಿ ಪ್ರಶಸ್ತಿ ಪುರಸ್ಕೃತರ ಸನ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.