ಬಹಳ ದೊಡ್ಡ ಜನ ಸಂಜನ

Team Udayavani, Jun 9, 2019, 6:00 AM IST

ಕನ್ನಡ ಚಿತ್ರರಂಗದಲ್ಲಿ ಸಂಜನಾ ಗಲ್ರಾನಿ, ಸಂಜನಾ ಗಾಂಧಿ, ಸಂಜನಾ ಬುರ್ಲಿ ಹೀಗೆ ಸಂಜನಾ ಎಂಬ ಹೆಸರಿನಿಂದ ಶುರುವಾಗುವ ಹಲವು ನಾಯಕ ನಟಿಯರನ್ನು ನೋಡಿದ್ದೀರಿ. ಈಗ ಇದೇ ಸಂಜನಾ ಎನ್ನುವ ಹೆಸರಿನಲ್ಲಿರುವ ನಾಯಕಿಯರ ಸಾಲಿಗೆ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ. ಅವರೇ ಸಂಜನಾ ಆನಂದ್‌.

ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾದ ಕೆಮಿಸ್ಟ್ರಿ ಆಫ್ ಕರಿಯಪ್ಪ ಕಾಮಿಡಿ ಚಿತ್ರ ನಿಮಗೆ ನೆನಪಿರಬಹುದು. ಈ ಚಿತ್ರದಲ್ಲಿ ನಾಯಕ ನಟಿಯಾಗಿ ಬೆಳ್ಳಿತೆರೆಗೆ ಪರಿಚಯವಾದ ಹುಡುಗಿಯೇ ಸಂಜನಾ ಆನಂದ್‌. ಅಭಿನಯಿಸಿದ್ದು ಒಂದೇ ಚಿತ್ರವಾದರೂ ಆ ಚಿತ್ರ ಸಂಜನಾ ಆನಂದ್‌ಗೆ ಸಾಕಷ್ಟು ಹೆಸರು ಮತ್ತು ಜನಪ್ರಿಯತೆಯನ್ನು ತಂದುಕೊಟ್ಟಿತು. ಇನ್ನು ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ ಕೂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತವ ಮುನ್ನುಗ್ಗುತ್ತಿದೆ. ಇತ್ತೀಚೆಗೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಯಶಸ್ವಿಯಾಗಿ 75 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದೆ. ಇದರ ನಡುವೆಯೇ ಚಿತ್ರದಲ್ಲಿ ಭಾಗಿಯಾದ ಕಲಾವಿದರು, ತಂತ್ರಜ್ಞರಿಗೂ ಚಿತ್ರರಂಗದಲ್ಲಿ ನಿಧಾನವಾಗಿ ಒಳ್ಳೆಯ ಆಫ‌ರ್ ಬರುತ್ತಿವೆ. ಅದರಲ್ಲೂ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ನಾಯಕ ನಟಿ ಸಂಜನಾ ಆನಂದ್‌ ಚಿತ್ರರಂಗದಲ್ಲಿ ಭರ್ಜರಿಯಾಗಿಯೇ ಡಿಮ್ಯಾಂಡ್‌ ಪಡೆದುಕೊಳ್ಳುತ್ತಿದ್ದಾರೆ. ಸಂಜನಾ ನಾಯಕಿಯಾಗಿ ಅಭಿನಯಿಸುತ್ತಿರುವ ಮುಂಬರುವ ಸಾಲು ಸಾಲು ಚಿತ್ರಗಳು ಒಂದರ ಹಿಂದೊಂದರಂತೆ ಅನೌನ್ಸ್‌ ಆಗುತ್ತಿದೆ.

ಸದ್ಯ ಕೆ. ಪಿ. ಶ್ರೀಕಾಂತ್‌ ನಿರ್ಮಾಣದಲ್ಲಿ ನಟ ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸುತ್ತಿರುವ ಸಲಗ ಚಿತ್ರಕ್ಕೆ ಸಂಜನಾ ಆನಂದ್‌ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದ್ದು, ಜೂನ್‌ ಎರಡನೇ ವಾರದಿಂದ ಸಲಗ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಇದರೊಂದಿಗೆ ಕಿರುತೆರೆಯ ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಖ್ಯಾತಿಯ ನಟ ಚಂದು ಅಭಿನಯದ ಕುಷ್ಕಾ ಚಿತ್ರದಲ್ಲೂ ಸಂಜನಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಇದರೊಂದಿಗೆ ಚಿರಂಜೀವಿ ಸರ್ಜಾ ಅಭಿನಯದ ಹೊಸಚಿತ್ರ ಕ್ಷತ್ರಿಯಕ್ಕೂ ಸಂಜನಾ ಆನಂದ್‌ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಇನ್ನೂ ಹೆಸರಿಡದ ಮೂರ್‍ನಾಲ್ಕು ಚಿತ್ರಗಳಿಗೆ ಕೂಡ ನಾಯಕಿಯಾಗಿ ಸಂಜನಾ ಆನಂದ್‌ ಹೆಸರು ಕೇಳಿ ಬರುತ್ತಿದ್ದು, ಆ ಚಿತ್ರಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ಒಟ್ಟಾರೆ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿ ಪ್ರೇಕ್ಷಕರ ಮತ್ತು ಚಿತ್ರರಂಗದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುವ ಅಪ್ಪಟ ಕನ್ನಡದ ಹುಡುಗಿ ಸಂಜನಾ ಆನಂದ್‌, ಕನ್ನಡ ಚಿತ್ರ ರಂಗದಲ್ಲಿ ಇನ್ನಷ್ಟು ಬೆಳೆಯಲಿ ಅನ್ನೋದು ಕನ್ನಡ ಸಿನಿ ಪ್ರಿಯರ ಆಶಯ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಚಿಮೂ ಎಂದೇ ಖ್ಯಾತರಾಗಿದ್ದ ಎಂ. ಚಿದಾನಂದ ಮೂರ್ತಿ ಇತ್ತೀಚೆಗೆ ನಮ್ಮನ್ನಗಲಿದ್ದಾರೆ. ಅವರ ಪ್ರಕಾರ ಸಂಶೋಧನೆ ಎಂದರೆ ಸತ್ಯಶೋಧನೆ! ತಮ್ಮ ನಿಲುವನ್ನು ಪ್ರಕಟಿಸುವಲ್ಲಿ...

  • ಹಕ್ಕಿ ಒಂದು ರೂಪಕ, ಕಾವ್ಯ-ಶಾಸ್ತ್ರಗಳೆರಡರಲ್ಲಿಯೂ. ಮಾಂಡುಕ್ಯ ಉಪನಿಷತ್ತಿನಲ್ಲಿ ಎರಡು ಹಕ್ಕಿಗಳ ಕತೆ ಬರುತ್ತದೆ. ಒಂದು ಹಣ್ಣನ್ನು ತಿನ್ನುವ ಹಕ್ಕಿ, ಇನ್ನೊಂದು...

  • "ಹಾಯ್‌ ಹೌ ಆರ್‌ ಯೂ?' ಅವನಿಂದ ಬಂದಿದ್ದ ಮೆಸೇಜ್‌ ಇವಳ ಮೊಬೈಲ್‌ನಲ್ಲಿ ಅರ್ಧಗಂಟೆಯಿಂದ ತಣ್ಣಗೆ ಕುಳಿತಿತ್ತು. ಹರ್ಷಿಣಿ ಯಾವುದೋ ನಂಬರ್‌ ಸರ್ಚ್‌ ಮಾಡಲಿಕ್ಕೆ...

  • ಆರ್‌. ಕೆ. ಶ್ರೀಕಂಠನ್‌ ಕರ್ನಾಟಕ ಸಂಗೀತದ ಮೇರು ವಿದ್ವಾಂಸರು. ಅವರು ಇದ್ದಿದ್ದರೆ ಈ ಹೊತ್ತಿಗೆ 100 ವರ್ಷ. ಹೀಗಾಗಿ, ಆರ್‌. ಕೆ. ಶ್ರೀಕಂಠನ್‌ ಟ್ರಸ್ಟ್‌ ಒಂದು ವಾರ...

  • ಚಿಕ್ಕಂದಿನಿಂದ ನನಗೆ ಬಂಗಾಲವೆಂದರೆ ಒಂದು ರೀತಿಯ ಹುಚ್ಚು ಒಲವು. ಅಲ್ಲಿಯ ಭಾಷೆ, ಸಾಹಿತ್ಯ, ಸಂಗೀತ, ಚಲನಚಿತ್ರ, ಜನ- ಏನೇ ಬಂಗಾಲಿ ಇದ್ದರೂ ಅವೆಲ್ಲವೂ. ಮೂಲಕಾರಣ, ಶಾಲೆಯಲ್ಲಿದ್ದಾಗಲೇ,...

ಹೊಸ ಸೇರ್ಪಡೆ