Udayavni Special

ಮಿಸ್‌ ಮಾಡದೇ ಬರಬೇಕು…

ಒಂದೇ ದಿನ ಮೂರು ಪ್ರೋಗ್ರಾಮು ಯಾರಿಗೇಳಣ ನಮ್ಮ ಪ್ರಾಬ್ಲಮ್ಮು...

Team Udayavani, Feb 12, 2020, 5:30 AM IST

sds-16

ಎಲ್ಲರೂ ಧಾವಂತದ ಜೀವನ ನಡೆಸುತ್ತಿರುವಾಗ ಸಂಬಂಧಗಳನ್ನು ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ಒಂದು ಕಾರ್ಯಕ್ರಮಕ್ಕಾದರೂ ಕಡ್ಡಾಯ ಹಾಜರಿ ಹಾಕುವುದನ್ನು ಹೆಚ್ಚಿನವರು ರೂಢಿಸಿದ್ದಾರೆ. ಒಂದೇ ದಿನ, ಎರಡು ಮೂರು ಕಾರ್ಯಕ್ರಮಗಳಿದ್ದರೆ, ಮೊದಲಿನ ಸಮಾರಂಭದಲ್ಲಿ ಮುಖ ತೋರಿಸಿ ಕೊನೆಯ ಜಾಗದಲ್ಲಿ ಉದರಂಭರಣ ಮಾಡಬೇಕಾಗುತ್ತದೆ.

ಬೆಳಗ್ಗಿನಿಂದ ಮೂವರು ಪರಿಚಿತರ/ಸಂಬಂಧಿಕರ ಕರೆ. ಒಬ್ಬರ ಮನೆಯಲ್ಲಿ ಮದುವೆ, ಇನ್ನೊಬ್ಬರ ಮನೆಯಲ್ಲಿ ಸತ್ಯನಾರಾಯಣ ಪೂಜೆ, ಮತ್ತೂಬ್ಬರ ಮಗಳ ನೃತ್ಯದ ಆರಂಗೇಟ್ರಂ ಕಾರ್ಯಕ್ರಮವಂತೆ. ಒಂದು ಬುಧವಾರದಂದು, ಮತ್ತೆರಡು ಕಾರ್ಯಕ್ರಮಗಳು ಅದರ ಮರುದಿವಸವೇ. ಆ ಎರಡು ಜಾಗಗಳ್ಳೋ, ಬೆಂಗಳೂರಿನ ಎರಡು ವಿರುದ್ಧ ಮೂಲೆಗಳಲ್ಲಿವೆ. ಈ ಟ್ರಾಫಿಕ್‌ ಅನ್ನು ದಾಟಿಕೊಂಡು, ಎಲ್ಲ ಕಾರ್ಯಕ್ರಮಗಳನ್ನೂ ಅಟೆಂಡ್‌ ಮಾಡಬೇಕೆಂದರೆ, ಎರಡು ದಿವಸಗಳ ರಜಾ ಹಾಕಬೇಕು. ಅಷ್ಟೇ ಅಲ್ಲ, ಬಾಸ್‌ ಕೈಲಿ ಉಗಿಸಿಕೊಳ್ಳಬೇಕು, ಸಹೋದ್ಯೋಗಿಗಳ ಕೆಂಗಣ್ಣಿಗೆ ಗುರಿಯಾಗಬೇಕು. ಇದರ ಮಧ್ಯೆ, ಮನೆಯಲ್ಲಿರುವ ಹಿರಿಯರ ಉಪಚಾರ, ಮಕ್ಕಳ ಪರೀಕ್ಷೆಯ ತಯಾರಿ…

ತಾಂತ್ರಿಕತೆ ಮುಂದುವರಿದಂತೆಲ್ಲ,ಆಮಂತ್ರಣ ಕಳಿಸುವ ವಿಧಾನಗಳು ಬಹಳ ಸುಲಭವಾಗಿವೆ. ಕೆಲವರು ಕರೆ ಮಾಡಿ ತಿಳಿಸಿದರೆ, ವಾಟ್ಸಾಪ್‌ನಲ್ಲೋ, ಇಮೇಲ್‌ನಲ್ಲೋ ಆಮಂತ್ರಣ ಪತ್ರಿಕೆ ಕಳಿಸುವವರೂ ಇದ್ದಾರೆ. ಕೆಲವರಿಗೆ ಸ್ನೇಹಿತರ, ಬಂಧುಗಳ, ಸಹೋದ್ಯೋಗಿಗಳ ಸಂಖ್ಯೆ ಎಷ್ಟಿರುತ್ತದೆಂದರೆ ಹುಟ್ಟೂರಿನಲ್ಲಿ ಮದುವೆ ಕಾರ್ಯಕ್ರಮ ಇಟ್ಟುಕೊಂಡರೆ, ಸದ್ಯ ನೆಲೆಸಿರುವ ಸ್ಥಳದಲ್ಲಿ ಮತ್ತೂಂದು ಭರ್ಜರಿಯ ಆರತಕ್ಷತೆ ಹಮ್ಮಿಕೊಳ್ಳಲೇಬೇಕು. ಒಂದೇ ಆಹ್ವಾನಪತ್ರಿಕೆಯಲ್ಲಿ, ಬೇರೆ ಬೇರೆ ಜಾಗಗಳಲ್ಲಿ ನಡೆಯುವ ಸಮಾರಂಭಕ್ಕೆ ಕರೆ ನೀಡಿ, ಮುಗಿಸಿಬಿಡುತ್ತಾರೆ. ಆಮಂತ್ರಿತರಿಗೆ ಮಾತ್ರ ಯಾವ ಸಮಾರಂಭಕ್ಕೆ ಹೋಗುವುದು, ಯಾವುದನ್ನು ಬಿಡುವುದು ಎಂಬ ಪೀಕಲಾಟ. ಅದರಲ್ಲೂ, ಬಂಧುಗಳ ಮನೆಯಲ್ಲಿ ನಡೆಯುವ ಸಮಾರಂಭಕ್ಕೆ ಮಹಿಳೆಯರು ಗೈರಾಗುವಂತಿಲ್ಲ.

ಎಲ್ಲರೂ ಧಾವಂತದ ಜೀವನ ನಡೆಸುತ್ತಿರುವಾಗ ಸಂಬಂಧಗಳನ್ನು ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ಒಂದು ಕಾರ್ಯಕ್ರಮಕ್ಕಾದರೂ ಕಡ್ಡಾಯ ಹಾಜರಿ ಹಾಕುವುದನ್ನು ಹೆಚ್ಚಿನವರು ರೂಢಿಸಿದ್ದಾರೆ. ವಧೂ-ವರರನ್ನೋ, ಬ್ರಹ್ಮೋಪದೇಶದ ವಟುವನ್ನೋ ಕಂಡು ಹರಸಿ ಸಾಧ್ಯವಾದರೆ ಊಟವನ್ನೂ ಮುಗಿಸಿ ಹೊರಡುವುದು ಸಾಮಾನ್ಯ. ಒಂದೇ ಬಾರಿ ಎರಡು ಮೂರು ಕಾರ್ಯಕ್ರಮಗಳ ಆಮಂತ್ರಣವಿದ್ದರೆ, ಮೊದಲಿನ ಸಮಾರಂಭದಲ್ಲಿ ಮುಖ ತೋರಿಸಿ ಕೊನೆಯ ಜಾಗದಲ್ಲಿ ಉದರಂಭರಣ ಮಾಡಬೇಕಾಗುತ್ತದೆ.

ಕಷ್ಟಪಟ್ಟು ಬಿಡುವು ಮಾಡಿಕೊಂಡು ಸಮಾರಂಭಕ್ಕೆ ಹೋದೆವು ಅಂತಿಟ್ಟುಕೊಳ್ಳಿ, ಅಲ್ಲಿನ ಜನಜಂಗುಳಿ ತಲೆ ಕೆಡಿಸಿಬಿಡುತ್ತದೆ. ಊಟದ ಪಂಕ್ತಿ ಹಿಡಿಯುವಲ್ಲಿ, ಬಫೆ ಊಟ ನೀಡುವಲ್ಲಿ ಜನ ಕಿಕ್ಕಿರಿದು ಸೇರಿರುತ್ತಾರೆ. ಕೆಲವೆಡೆ, ಒಂದು ಪಂಕ್ತಿಯ ಊಟ ಮುಗಿದು, ಎಂಜಲೆಲೆಗಳನ್ನು ಎತ್ತುವ ಮೊದಲೇ, ಸೀಟು ಹಿಡಿಯಬೇಕಾದ ಅನಿವಾರ್ಯ ಬಂದಾಗ ಯಾಕಾದರೂ ಆಹ್ವಾನಿಸುತ್ತಾರೋ ಅನಿಸುವುದೂ ಉಂಟು. ಅತಿಥಿಗಳನ್ನು ವೈಯಕ್ತಿಕವಾಗಿ ಹೋಗಿ ಆಹ್ವಾನಿಸಬೇಕಾದ ಸಂದರ್ಭವಿರುತ್ತಿದ್ದರೆ ಇಷ್ಟೊಂದು ಜನಜಂಗುಳಿ ಒಟ್ಟಾಗುವುದು ಅಸಾಧ್ಯವಿತ್ತು ಎನ್ನಿಸಿ, ಆಧುನಿಕ ತಂತ್ರಜ್ಞಾನದ ಮೇಲೆ ಸ್ವಲ್ಪ ಅಸಮಾಧಾನವಾಗುತ್ತದೆ.

ಕಳೆದ ವಾರ ಸಂಬಂಧಿಕರೊಬ್ಬರ ಆರತಕ್ಷತೆಗೆ ಹೋಗಬೇಕಾಯಿತು. ಹತ್ತು ದಿನಗಳ ಹಿಂದೆ ಹಳ್ಳಿಯಲ್ಲಿ ಮದುವೆ ನಡೆದಿತ್ತು. ಕಾರಣಾಂತರಗಳಿಂದ ಮದುವೆಗೆ ಹೋಗಲಾಗಿರಲಿಲ್ಲ. ಹಾಗಾಗಿ, ಆರತಕ್ಷತೆಗೆ ಹೋಗಲೇಬೇಕೆಂದು ನಿರ್ಧರಿಸಿ, ಪ್ರೀತಿವಿಶ್ವಾಸಗಳನ್ನು ಹೃನ್ಮನಗಳಲ್ಲಿ ತುಂಬಿಕೊಂಡು ಒಂದೂವರೆ ಗಂಟೆಯ ಪ್ರಯಾಣದ ನಂತರ ಗುರಿ ತಲುಪಿದೆ. ಯಥಾವತ್ತಾಗಿ ಸಾಲಿನಲ್ಲಿ ನಿಂತು, ಯುವ ಜೋಡಿಗೆ ವಿಶ್‌ ಮಾಡಲು ಕಾಯುತ್ತಿದ್ದೆ. ಇನ್ನೇನು ಕೈ, ಕುಲುಕಿ ಶುಭಾಶಯ ಕೋರಬೇಕು ಅನ್ನುವಷ್ಟರಲ್ಲಿ, ಮದುಮಗಳ ತಾಯಿಯ ಆಕ್ಷೇಪಣೆ ಬಂತು. ಎಲ್ಲರೆದುರಿಗೆ, “ಮದುವೆಗೆ ಬರಲೇ ಇಲ್ಲವಲ್ಲ…’ ಅಂತ ಕುಹಕದಿಂದ ಕೇಳಿದರು. ಯಾಕೋ ನನಗೆ ತಡೆದುಕೊಳ್ಳುವುದು ಕಷ್ಟವೆನಿಸಿತು. “ನೋಡಿ, ನಿಮ್ಮ ಕರೆಯೋಲೆ ಬೇರೆಯವರ ಮುಖಾಂತರ ಹಾಗೂ ಮೊಬೈಲ್‌ನಲ್ಲಿ ತಲುಪಿದರೂ, ವಿಶ್ವಾಸ ಉಳಿಸಿಕೊಳ್ಳಲು ಇಲ್ಲಿ ವೈಯಕ್ತಿಕ ಹಾಜರಿ ಹಾಕಿದ್ದೇನೆ. ಆರತಕ್ಷತೆಗೆ ಬಂದದ್ದಕ್ಕೆ ಸಂತೋಷ ವ್ಯಕ್ತಪಡಿಸುವುದನ್ನು ಬಿಟ್ಟು, ಮದುವೆಗೆ ಬಂದಿಲ್ಲವೆಂದು ಮುಖ ಸಣ್ಣ ಮಾಡಿಕೊಳ್ಳುವುದು ಸರಿಯೇ? ಹಾಗಾದ್ರೆ, ಈಗ ತಿರುಗಿ ಹೋಗಿಬಿಡಲೇ?’- ಬಾಣದಂತೆ ಹೊರಬಂತು ನನ್ನ ಮಾತು. “ಸಾರಿ’ ಎಂಬ ಮಾತು ಆ ಕಡೆಯಿಂದ ಬಂದರೂ, ನನ್ನ ಹೃದಯಾಳದ ಭಾವನೆ ಅವರಿಗೆ ಅರ್ಥವಾದಂತೆ ಕಾಣಲಿಲ್ಲ. “ವಿಲನ್‌’ ಪಟ್ಟ ಹೊತ್ತು ಅಲ್ಲಿಂದ ಹಿಂತಿರುಗಿದೆ.

ಇನ್ನು ಮುಂದೆ ಸಮಾರಂಭಗಳಿಗೆ ಖುದ್ದಾಗಿ ಹೋಗಿ, ಇಲ್ಲಸಲ್ಲದ ಮಾತು ಹೇಳಿಸಿಕೊಳ್ಳುವುದಕ್ಕಿಂತ ತಾಂತ್ರಿಕತೆಯನ್ನು ಉಪಯೋಗಿಸಿ ಆಮಂತ್ರಣ ಬಂದ ರೀತಿಯಲ್ಲೇ ಶುಭ ಸಂದೇಶಗಳನ್ನು ರವಾನಿಸಿ, ಆರಾಮವಾಗಿರುವುದೇ ಕ್ಷೇಮ ಅಂದುಕೊಂಡಿದ್ದೇನೆ…

-ಡಾ. ಉಮಾಮಹೇಶ್ವರಿ ಎನ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

Leopard-climbs-tree

ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

avalu-tdy-6

ಹೇಮಾ ಮಾಲಿನಿ ಥರ ಇದ್ದೀಯ.

avalu-tdy-05

ಜೇಬ್ ಪ್ಲೀಸ್..!

ಲಾಕ್ ಡೌನ್ ಕತೆಗಳು : ಉಪಾಯಂ ಕಾರ್ಯ ಸಾಧನಂ!

ಲಾಕ್ ಡೌನ್ ಕತೆಗಳು : ಉಪಾಯಂ ಕಾರ್ಯ ಸಾಧನಂ!

avalu-tdy-3

ಬದಲಾಗಲಿ ಜನ ಬದಲಾಗಲಿ ಮನ

ದೇವಿ ಮಹಾತ್ಮೆ : ಸ್ತ್ರೀ ಶಕ್ತಿಗೆ ಶರಣು

ದೇವಿ ಮಹಾತ್ಮೆ : ಸ್ತ್ರೀ ಶಕ್ತಿಗೆ ಶರಣು

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

ಸಂಜೆಯೊಳಗೆ ಉಸ್ತುವಾರಿ ಸಚಿವರ ನೇಮಕ: ಇಲ್ಲಿದೆ ಸಂಭಾವ್ಯ ಪಟ್ಟಿ

br-tdy-1

ಸಂಕಷ್ಟದಲ್ಲಿ ರೇಷ್ಮೆ ನೂಲು ತಯಾರಕರು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

09-April-18

ಅಧಿಕಾರಿಗಳ ಕಾರ್ಯವೈಖರಿಗೆ ಬೇಸರ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ