Udayavni Special

ಆತ್ಮವಿಶ್ವಾಸ ತುಂಬುವ ತ್ರಿಚಕ್ರ


Team Udayavani, Mar 20, 2020, 4:30 AM IST

ಆತ್ಮವಿಶ್ವಾಸ ತುಂಬುವ ತ್ರಿಚಕ್ರ

ಇಪ್ಪತ್ತು ವರ್ಷಗಳ ಹಿಂದೆ ಹಿರಿಯಡ್ಕ ಬಳಿಯ ಪೆರ್ಣಂಕಿಲದ ಸುತ್ತಮುತ್ತ ಹೀಗೆ ಆಟೋರಿಕ್ಷಾ ಓಡಿಸುವ ಕಾಯಕ ಕೈಗೆತ್ತಿಕೊಳ್ಳುವಾಗ ನನಗೆ ಬೆಂಬಲವಾಗಿ ನಿಂತವರು ನನ್ನ ಪತಿ ರಘುಚಂದ್ರ ನಾಯಕ್‌ ಅವರು. ಮನೆಗೊಂದು ಬೈಕ್‌ತೆಗೆದುಕೊಳ್ಳೋಣ ಎಂದು ಅವರು ಹೇಳಿದಾಗ, ನಾನು, “ಆಟೋ ತೆಗೆದುಕೊಂಡರೆ, ನಮ್ಮ ಮನೆ ಬಳಕೆಗೂ ದುಡಿಮೆಗೂ ಆಗುತ್ತದಲ್ಲ’ ಎಂದು ಹೇಳಿದೆ. ಅವರಿಗೂ ಸರಿ ತೋರಿತೇನೋ. ಹಾಗೆ ನಮ್ಮ ಮನೆಗೆ ಬಂದ ಆಟೋ ಈಗಲೂ ದುಡಿಮೆಯ ಸಂಗಾತಿ ಆಗಿದೆ.

ನಾನು ಆಟೋ ಓಡಿಸಲು ಶುರುಮಾಡಿದಾಗ ಈ ಭಾಗದಲ್ಲಿ ಬಸ್ಸಿನ ಸೌಕರ್ಯ ಇರಲಿಲ್ಲ. ಹಾಗಾಗಿ, ಇತರರಿಗೆ ಸಹಾಯವಾದಂತಾಯಿತು, ನನ್ನ ಬದುಕಿಗೂ ಆಧಾರವಾದಂತಾಯಿತು ಎಂಬ ಧೋರಣೆಯಲ್ಲಿ ಈ ಕಾಯಕಕ್ಕೆ ಕಾಲಿರಿಸಿದೆ. ಈಗ ನಾನು ಆಟೋ ಚಾಲಕಿ ಮಾತ್ರವಲ್ಲ, ಆಶಾ ಕಾರ್ಯಕರ್ತೆಯಾಗಿಯೂ ದುಡಿಯುತ್ತಿದ್ದೇನೆ. ಈ ಭಾಗದ ಮಹಿಳೆಯರಿಗೆ ಹೆರಿಗೆನೋವು ಕಂಡುಬಂದರೆ, ರಾತ್ರಿಯಾಗಲಿ ಹಗಲಾಗಲಿ ನಾನು ಆಟೋ ಹತ್ತಿಬಿಡುತ್ತೇನೆ. ಒಮ್ಮೆ ಮಹಿಳೆಯೊಬ್ಬರಿಗೆ ಹೆರಿಗೆನೋವು ಬಂದಾಗ 108 ಆ್ಯಂಬುಲೆನ್ಸ್‌ ಗೆ ಫೋನ್‌ ಮಾಡಿದ್ದರು. ಆ್ಯಂಬುಲೆನ್ಸ್‌ ಬರುವುದು ತಡವಾದಾಗ, ನಾನೇ ಆಟೋದಲ್ಲಿ ಅವರನ್ನು ಕರೆದೊಯ್ದೆ. ತುಸು ದೂರ ಚಲಿಸುವಾಗ ಎದುರಿನಿಂದ ಆ್ಯಂಬುಲೆನ್ಸ್‌ಬಂತು. ಗರ್ಭಿಣಿಯನ್ನು ಆ್ಯಂಬುಲೆನ್ಸ್‌ ಹತ್ತಿಸಿ ಮತ್ತೈದು ನಿಮಿಷದಲ್ಲಿಯೇ ಹೆರಿಗೆ ಆಯಿತು. ಈ ಘಟನೆ ಪತ್ರಿಕೆಗಳಲ್ಲಿಯೂ ವರದಿಯಾಗಿತ್ತು. ಆ ಮಗು ಈಗ ನಾನು ಕೆಲಸ ಮಾಡುವ ಅಂಗನವಾಡಿಗೆ ಬರುತ್ತಿದೆ. ಮಗುವಿನ ಮುಖ ನೋಡುವಾಗ ಬಹಳ ಖುಷಿ ಆಗುತ್ತದೆ.

ಆಟೋದ ಮೂಲಕ ಮಾಡಿದ ಸಂಪಾದನೆಯಲ್ಲಿಯೇ ಮಕ್ಕಳಿಬ್ಬರೂ ಶಿಕ್ಷಣ ಪೂರೈಸಿದ್ದಾರೆ. ಮಗಳು ರಶ್ಮಿಯ ಮದುವೆಯಾಗಿದೆ. ಈಗ ಮಗ ರವಿಕಿರಣ್‌ ಕೂಡ ದುಡಿಮೆ ಆರಂಭಿಸಿರುವುದರಿಂದ ಬದುಕು ಕೊಂಚ ಹಸನಾಗಿದೆ. ಆದರೆ ಈ ಕಾಯಕಕ್ಕೆ ಪ್ರೋತ್ಸಾಹ ನೀಡಿದ ಅವರು ಅಗಲಿದ್ದಾರೆ ಎನ್ನುವುದೊಂದು ಬೇಸರ.

ಆಟೋರಿಕ್ಷಾದಲ್ಲಿ ದೂರದೂರಿಗೆ ಪ್ರಯಾಣ ಮಾಡಿದ್ದೇನೆ. ನನ್ನ ತವರುಮನೆ ಸುಳ್ಯದಲ್ಲಿದೆ. ನಾವೆಲ್ಲ ರಿಕ್ಷಾದಲ್ಲಿಯೇ ಸುಳ್ಯಕ್ಕೆ ಹೋಗುತ್ತೇವೆ. ಧರ್ಮಸ್ಥಳ, ಬೆಳ್ತಂಗಡಿ ಮುಂತಾದ ಕಡೆಗೂ ಸುಳ್ಯದಲ್ಲಿಯೇ ಪ್ರಯಾಣಿಸಿದ್ದೇನೆ. ದೂರದ ಪ್ರಯಾಣ ಎಂದರೆ ನನಗೆ ಇಷ್ಟವೇ.

ಆಟೋದ ಸಣ್ಣಪುಟ್ಟ ರಿಪೇರಿ ಕೆಲಸಗಳನ್ನು ನಾನು ಕಲಿತಿದ್ದೇನೆ. ಮನೆಯಲ್ಲಿಯೇ ಟಯರು ಬದಲಿಸುವುದು, ಸುಸ್ಥಿತಿಯಲ್ಲಿದೆಯೇ ಎಂದು ನೋಡುವುದು ಗೊತ್ತಿದೆ. ಇದನ್ನೆಲ್ಲ ಕಲಿತದ್ದರಿಂದ ಆತ್ಮವಿಶ್ವಾಸ ಮೂಡುತ್ತದೆ. ಆದರೆ, ಆಟೋ ಚಾಲನೆ ಆರಂಭಿಸಿದಾಗ, ತೊಂದರೆ ಮಾಡಿದವರೂ ಇದ್ದಾರೆ. ಕೆಲವೊಮ್ಮೆ ರಾತ್ರಿ ಹೊತ್ತು ಆಟೋ ಅಡ್ಡಹಾಕಿದ ಘಟನೆಗಳೂ ನಡೆದಿವೆ. ಆದರೆ ನಾನು ರಾತ್ರಿ ಎಲ್ಲಿಯೂ ಆಟೋ ನಿಲ್ಲಿಸುವುದೇ ಇಲ್ಲ. ಎಲ್ಲವನ್ನೂ ಎದುರಿಸಿ ಮುನ್ನುಗ್ಗಿದ ಮೇಲೆ ತೊಂದರೆ ಕೊಡುವವರೆಲ್ಲ ಹಿಮ್ಮೆಟ್ಟಿದ್ದಾರೆ. ಈಗ ಸಮಾಜಮುಖೀಯಾಗಿಯೂ ನಾನು ಕೆಲಸ ನಿರ್ವಹಿಸುತ್ತಿದ್ದೇನೆ. ಪ್ರಧಾನಮಂತ್ರಿಗಳ ಸ್ವತ್ಛತಾ ಅಭಿಯಾನದ ಮಾಸ್ಟರ್‌ ಟ್ರೈನರ್‌ ಆಗಿದ್ದೇನೆ. ಕೊಡಿಬೆಟ್ಟು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ಸಂಗ್ರಹ ಮಾಡುವ ವಿಂಗಡಿಸುವ ಕೆಲಸ ಮಾಡುತ್ತೇನೆ. ಸ್ತ್ರೀಶಕ್ತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆಲಸಗಳಲ್ಲಿ ಸಕ್ರಿಯಳಾಗಿದ್ದೇನೆ. ಹೀಗೆ ಬಹುಮುಖೀಯಾಗಿ ಕೆಲಸಮಾಡಲು ಧೈರ್ಯ ಕೊಟ್ಟಿದ್ದು ಇದೇ ಆಟೋ. ಇನ್ನೊಂದು ಆಟೋ ಖರೀದಿಸಿ, ಅದನ್ನು ಇನ್ನೊಬ್ಬರಿಗೆ ಬಾಡಿಗೆಗೆ ಕೊಟ್ಟಿದ್ದೇನೆ.

ರಾಜೀವಿ, ಪೆರ್ಣಂಕಿಲ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಬನ್‌-ಪ್ರಿಯೆ

ಬನ್‌-ಪ್ರಿಯೆ

ಅಂತರಂಗವೇ ಬಹಿರಂಗ ದೀಪಿಕಾ ಉವಾಚ

ಅಂತರಂಗವೇ ಬಹಿರಂಗ ದೀಪಿಕಾ ಉವಾಚ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ

ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ