ನಾನೂ ವಿದ್ಯುತ್‌ ತಯಾರಿಸಿದೆ !


Team Udayavani, Sep 28, 2018, 6:00 AM IST

d-14.jpg

ಈಚೆಗೆ ಕೊಡಗಿನಲ್ಲಿ ಸುರಿದ ಭಾರೀ ಮಳೆ ಹಾಗೂ ಭೂಕುಸಿತದಿಂದ ಆದ ಹಾನಿ ಎಲ್ಲರಿಗೂ ತಿಳಿದಿರುವಂಥದ್ದೇ. ಎಲ್ಲೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದು ನಾನಿರುವ ಚೆಂಬು ಗ್ರಾಮವೂ ಸೇರಿದಂತೆ ನೂರಾರು ಗ್ರಾಮಗಳು ಕತ್ತಲಲ್ಲಿ ಮುಳುಗಿದವು. ಊರಿಗೆ ಊರೇ ಹಳೆ ಕಾಲಕ್ಕೆ ಹಿಂದಿರುಗಿತು. ಆಗಾಗ ರಿಂಗಣಿಸುವ ಮೊಬೈಲ್‌ಗ‌ಳು ಸ್ತಬ್ಧ. ಮಿಕ್ಸಿ-ಗ್ರೈಂಡರ್‌ಗಳಿಗೂ ವಿಶ್ರಾಂತಿ. ಸಂತ್ರಸ್ತರಲ್ಲದ ಹೆಣ್ಣುಮಕ್ಕಳು ಒಂದು ದಿನ ಉಪ್ಪಿಟ್ಟು ಮಾಡಿದರು. ಮರುದಿನ ಚಿತ್ರಾನ್ನ ಮಾಡಿದರು. ಊಟಕ್ಕೆ ಬೇಳೆ ಸಾರು ಮಾಡಿದರು. ಎಷ್ಟು ದಿನ ಅಂತ ಇವುಗಳನ್ನೇ ಮಾಡುವುದು? ದೋಸೆ, ಇಡ್ಲಿ, ತೆಂಗಿನಕಾಯಿ ಹಾಕಿ ಸಾಂಬಾರ್‌ ಮಾಡಬೇಕಾದರೆ ರುಬ್ಬಲೇ ಬೇಕು. ಈಗ ಎಲ್ಲರ ಮನೆಯ ಮೂಲೆಯಲ್ಲಿದ್ದ ಕಡೆಯುವ ಕಲ್ಲುಗಳೂ ಹೊರಬಂತು. ಆಧುನಿಕ ಸ್ತ್ರೀಯರೂ ರುಬ್ಬುವ ಕಲ್ಲಿಗೆ ಶರಣಾಗದೆ ಬೇರೆ ದಾರಿ ಇರಲಿಲ್ಲ. ಪರಿಸ್ಥಿತಿ ಹೀಗಿದ್ದರೂ, ವಿದ್ಯುತ್‌ ಕಂಬ ಧರಾಶಾಯಿಯಾಗಿದ್ದರೂ ನನ್ನ ಮನೆಯಲ್ಲಿ ಮಾತ್ರ ವಿದ್ಯುತ್‌ ದೀಪ ಇರುಳೂ, ಹಗಲೂ ಉರಿಯುತ್ತಿತ್ತು. ಮಿಕ್ಸಿ ಓಡುತ್ತಿತ್ತು. ಇದು ಹೇಗೆ ಸಾಧ್ಯ ಎಂದು ಆಶ್ಚರ್ಯವೇ? ಹೇಳುತ್ತೇನೆ ಕೇಳಿ.

ನನ್ನ ಮನೆಯಲ್ಲಿ ಮೊದಲು ಅಂದರೆ 2010ನೇ ಇಸವಿಯವರೆಗೂ ಕರೆಂಟ್‌ ಇರಲಿಲ್ಲ. ತೊಂಬತ್ತರ ದಶಕದ ಕೊನೆಯವರೆಗೂ ಚಿಮಣಿ ದೀಪವೊಂದೇ ಬೆಳಕಿಗೆ ಆಧಾರವಾಗಿತ್ತು. ಸಾಯಂಕಾಲವಾಗುತ್ತಿದ್ದಂತೆ ಲ್ಯಾಂಪ್‌ ಉರಿಸುವ ಮೊದಲು ಅದರ ಮಸಿ ಹಿಡಿದ ಗಾಜಿನ ಬುರುಡೆಯನ್ನು ತೊಳೆಯಲು ನಾನೂ, ಗಂಡನೂ ಜಗಳವಾಡುತ್ತಿದ್ದೆವು. “ನೀನು ತೊಳೆ’ ಎಂದು ಅವರು, “ದಿನಾ ನಾನೇ ತೊಳೆಯಬೇಕು. ಇಂದು ನೀವು ತೊಳೆಯಿರಿ’ ಎಂದು ನಾನು ವಾದ ಮಾಡುತ್ತಿದ್ದೆವು. ಅದರ ಮಿಣಿಮಿಣಿ ಮಂದ ಬೆಳಕಲ್ಲಿ ರಾತ್ರಿ ಓದುವುದು, ಬರೆಯುವುದು ಬಿಡಿ ಪೇಪರ್‌, ಪುಸ್ತಕ ಹಿಡಿದ ತಕ್ಷಣ ನಿದ್ರಾದೇವಿ ಆವರಿಸುತ್ತಿದ್ದಳು. 1998ರಲ್ಲಿ ನನ್ನ ಮನೆಗೆ ಸೋಲಾರ್‌ ಲೈಟ್‌ ಬಂತು. ಮಳೆಗಾಲದಲ್ಲಿ ನಮ್ಮೂರಿನಲ್ಲಿ ಸೂರ್ಯನ ಬೆಳಕು ಕಡಿಮೆ ಇರುವುದರಿಂದ ಆ ಸಮಯದಲ್ಲಿ ಸೀಮೆಎಣ್ಣೆ ದೀಪ ಉರಿಸಲೇ ಬೇಕಾಗಿತ್ತು. ನನ್ನ ಮಕ್ಕಳು ದೀಪದ ಹೊಗೆಯಲ್ಲೇ ಓದಿ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದರು. 

    ನನಗೆ ಆಗ ನನಗಿಂತ ದೊಡ್ಡದಾದ ರುಬ್ಬುವ ಕಲ್ಲಿನ ಮುಂದೆ ಕುಳಿತು ಬೆಳಗಿನ ಉಪಾಹಾರಕ್ಕೆ, ಮಧ್ಯಾಹ್ನದ ಭೋಜನಕ್ಕೆ ಮತ್ತೆ ರಾತ್ರಿಯ ಊಟಕ್ಕೆ ರುಬ್ಬುವ ಕೆಲಸ. ಏಳು-ಎಂಟು ಕೂಲಿಯಾಳುಗಳು ದಿನಾ ಊಟಕ್ಕೆ. ಅಷ್ಟು ಮಾತ್ರವಲ್ಲ, ನನ್ನ ತವರಿನ ಕಡೆಯಿಂದ ಬಂದ ಇಬ್ಬರು ಕೆಲಸಗಾರರು ಮನೆಯಲ್ಲೇ ಇರುತ್ತಿದ್ದರು. ಅವರಿಗೆ ರಾತ್ರಿಯೂ ಬೇಯಿಸಿ ಹಾಕುವ ಕೆಲಸ ನನ್ನದಾಗಿತ್ತು. ನೆಂಟರು ಬಂದರೆ ಕೇಳುವುದೇ ಬೇಡ. ಒಟ್ಟಿನಲ್ಲಿ ನನ್ನ ಬದುಕೇ ರುಬ್ಬುವುದರಲ್ಲಿ ಕಳೆದುಹೋಗುತ್ತಿತ್ತು. “ಇದರಿಂದ ನನಗೆ ಬಿಡುಗಡೆ ಯಾವಾಗ? ಎಲ್ಲರ ಮನೆಯಲ್ಲಿ ಇರುವಂತೆ ನನ್ನ ಮನೆಯಲ್ಲೂ ಕರೆಂಟ್‌ ಇರುತ್ತಿದ್ದರೆ…’ ಎಂದು ಅನಿಸಿ ದುಃಖ ವೆನಿಸುತ್ತಿತ್ತು. ನಮ್ಮ ಊರಿಗೆ ಸುಮಾರು ಐದು ಕಿ. ಮೀ. ದೂರದಿಂದ ವಿದ್ಯುತ್‌ ಕಂಬಗಳನ್ನು ನೆಟ್ಟು ಲೈನ್‌ ಎಳೆಯಬೇಕಿತ್ತು. ದಟ್ಟ ಅರಣ್ಯ ಪ್ರದೇಶದಲ್ಲಿ ನಮ್ಮ ಊರು ಇರುವುದರಿಂದಲೋ ಏನೋ ನಾವು ಹಲವು ಬಾರಿ ಬೇಡಿಕೆ ಸಲ್ಲಿಸಿದರೂ ಸರ್ಕಾರ ನಮಗೆ ವಿದ್ಯುತ್ಛಕ್ತಿ ಒದಗಿಸಲಿಲ್ಲ. ಇದಕ್ಕೆ ಪರ್ಯಾಯ ಏನು ಎಂದು ನಾನು ಚಿಂತಿಸತೊಡಗಿದೆ. ಆಗ ನಮ್ಮೂರಿನ ಸಮೀಪ ಇರುವ ಉಂಬಳೆ ಸದಾಶಿವ ಭಟ್‌ ಎಂಬವರು ತನ್ನ ಮನೆ ಸಮೀಪ ಹರಿಯುವ ಹಳ್ಳದ ನೀರಿನಿಂದ ಸ್ವತಃ ಕರೆಂಟ್‌ ತಯಾರಿಸಿ ಬಳಸಲು ಶುರುಮಾಡಿದ್ದರು. ನಾನು ಮತ್ತು ಗಂಡ ಅದನ್ನು ನೋಡಿ ಬಂದೆವು. ಆದರೆ, ಅದು ತುಂಬ ಖರ್ಚಿನ ಬಾಬತ್ತಾಗಿತ್ತು. ನೀರಿನ ರಭಸಕ್ಕೆ  ಚಕ್ರ ತಿರುಗುವಾಗ ಅದಕ್ಕೆ ಅಳವಡಿಸಿದ ಬೆಲ್ಟ್ ಆಗಾಗ ತುಂಡಾಗುತ್ತಿತ್ತು. ಯಂತ್ರವೂ ಕೆಡುತ್ತಿತ್ತು. ಅದನ್ನು ರಿಪೇರಿ ಮಾಡಬೇಕಾದರೆ, ಬಿಡಿ ಭಾಗಗಳನ್ನು ತರಬೇಕಾದರೆ ತಮಿಳುನಾಡಿನ ಕೊಯಮತ್ತೂರಿಗೆ ಹೋಗಬೇಕಿತ್ತು. ಇದೆಲ್ಲ ಆಗುವ ಕೆಲಸವಲ್ಲ ಎಂದು ನಮಗೆ ಅನಿಸಿತು. ಆದರೆ ಮನೆಗೆ ವಿದ್ಯುತ್‌ ತರಿಸಲೇಬೇಕು ಎಂಬ ಹಠವಂತೂ ಇತ್ತು. ಅದೇ ಸಮಯದಲ್ಲಿ, “ಶಿವಮೊಗ್ಗದ ನಿಸರ್ಗ ಎನ್ವಿರಾನ್‌ಮೆಂಟ್‌ ಟೆಕ್ನಾಲಜೀಸ್‌ನವರು ಹರಿಯುವ ನೀರು ಇರುವ ಕಡೆ ಕಿರುಜಲ ವಿದ್ಯುತ್‌ ಘಟಕ ಸ್ಥಾಪಿಸಿ ಕೊಡುತ್ತಾರೆ. ಇದಕ್ಕೆ ಕೇಂದ್ರ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂಎನ್‌ಆರ್‌ಇ) ಧನ ಸಹಾಯವನ್ನೂ ಒದಗಿಸಿಕೊಡುತ್ತದೆ’ ಎಂಬ ಮಾಹಿತಿ ಸಿಕ್ಕಿತು. ನಮ್ಮ ಮನೆ ಸಮೀಪವೇ ಎತ್ತರದಿಂದ ಧುಮುಕುವ ಜಲಪಾತ ಇದೆ. ಬೇಸಿಗೆಯಲ್ಲಿ ನೀರು ಬತ್ತಿದರೂ ಮಳೆಗಾಲದಲ್ಲಾದರೂ ಕರೆಂಟು ಉತ್ಪಾದಿಸಬಹುದಲ್ಲ ಎಂದು ಅವರನ್ನು ಸಂಪರ್ಕಿಸಿದೆವು. ಅವರು ವಿದ್ಯುತ್‌ ಉತ್ಪಾದಿಸುವ ಯಂತ್ರವನ್ನು ತಂದು ಅಳವಡಿಸಿಕೊಟ್ಟರು. 

    ಸುಮಾರು 40 ಮೀಟರ್‌ ಎತ್ತರದಿಂದ ಬೀಳುವ ನೀರನ್ನು 500 ಮೀಟರ್‌ ಉದ್ದದ ಎರಡೂವರೆ ಇಂಚಿನ ಪಿವಿಸಿ ಪೈಪ್‌ ಮೂಲಕ ಜಲವಿದ್ಯುತ್‌ ಘಟಕಕ್ಕೆ ಹರಿಸಿದ್ದೇವೆ. ಆಗ ಮೋಟಾರು ತಿರುಗಿ ವಿದ್ಯುತ್‌  ಉತ್ಪಾದನೆಯಾಗುತ್ತದೆ. ಇದರ ಸಾಮರ್ಥ್ಯ ಒಂದು ಕಿಲೋವ್ಯಾಟ್‌. ಹೀಗೆ ಉತ್ಪಾದನೆ ಆದ ವಿದ್ಯುತ್‌ ಅನ್ನು 60 ಮೀಟರ್‌ ಉದ್ದದ ಎರಡು ಕೇಬಲ್‌ಗ‌ಳ ಮೂಲಕ ಅಡಿಕೆ ತೋಟದ ನಡುವೆ ಸಾಗಿಸಿ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಂಡಿದ್ದೇವೆ. 2010ರಲ್ಲಿ ಇದಕ್ಕೆ ಆದ ಖರ್ಚು ಒಂದು ಲಕ್ಷದ ಹತ್ತು ಸಾವಿರ. ಇದರ ಮುಕ್ಕಾಲು ಭಾಗ ಹಣವನ್ನು ಕೇಂದ್ರ ಸರ್ಕಾರ ಭರಿಸಿದೆ. ಈಗ ಈ ಸ್ವಂತ ವಿದ್ಯುತ್‌ನಿಂದಲೇ ನಮ್ಮ ಮನೆಯ ಲೈಟ್‌, ಫ್ರಿಜ್‌, ಟೀವಿ, ಮಿಕ್ಸಿ, ಫ್ಯಾನ್‌, ಮೊಬೈಲ್‌ ಚಾರ್ಜ್‌, ಇಸ್ತ್ರಿ ಪೆಟ್ಟಿಗೆ ನಡೆಯುತ್ತದೆ. 

    ಇದು ಪರಿಸರಸ್ನೇಹಿ ವಿದ್ಯುತ್‌. ಈ ಘಟಕ ಸ್ಥಾಪಿಸಲು ಮರ ಕಡಿಯಬೇಕಾಗಿಲ್ಲ. ಹರಿದು ಹೊರ ಹೋಗುವ ನೀರನ್ನು ಬಳಸುವುದರಿಂದ ನೀರಿನ ಅಪವ್ಯಯ ಇಲ್ಲ. ಜಲವಿದ್ಯುತ್‌ ಘಟಕಕ್ಕೆ ಹರಿಸಿದ ನೀರೂ ವ್ಯರ್ಥವಾಗುವುದಿಲ್ಲ. ಅದನ್ನು ತೋಟಕ್ಕೆ, ಗದ್ದೆಗೆ ಬಳಸಬಹುದು. ತಿಂಗಳು ತಿಂಗಳು ಬಿಲ್‌ ಕಟ್ಟಲು ಇಲ್ಲ. ನಿರ್ವಹಣೆ ಅಂತ ಏನೂ ಇರುವುದಿಲ್ಲ. ಆದರೆ, ಜೋರು ಮಳೆ ಬರುವಾಗ ಪೈಪ್‌ನ ಫಿಲ್ಟರ್‌ನಲ್ಲಿ ಕಸಕಡ್ಡಿ ನಿಲ್ಲುತ್ತದೆ. ಅದನ್ನು ತೆಗೆಯಬೇಕು. ಫೆಬ್ರವರಿಯಿಂದ ಮೇ ತನಕ ಜಲಪಾತ ಬತ್ತುವುದರಿಂದ‌ ಈ ಸಮಯದಲ್ಲಿ ನಮಗೆ ನೀರಿನ ಕರೆಂಟ್‌ ಇರುವುದಿಲ್ಲ.

     2014ರಲ್ಲಿ ಸರ್ಕಾರದ ಕರೆಂಟೂ ಬಂತು. ಆದರೇನು? ಮಳೆಗಾಲದಲ್ಲಿ ನಮ್ಮೂರಲ್ಲಿ ಮರ ಮತ್ತು ಅದರ ಕೊಂಬೆಗಳು ವಿದ್ಯುತ್‌ ತಂತಿಯ ಮೇಲೆ ಆಗಾಗ ಬೀಳುತ್ತಲೇ ಇರುವುದರಿಂದ ಸರ್ಕಾರದ ಕರೆಂಟ್‌ ಕೈಕೊಡುವುದೇ ಹೆಚ್ಚು. ಬೇಸಿಗೆಯನ್ನು ಹೊರತು ಪಡಿಸಿ ಉಳಿದ ಸಮಯದಲ್ಲಿ ನಮ್ಮದೇ ನೀರಿನಿಂದ ಉತ್ಪಾದಿಸುವ ಕರೆಂಟ್‌ ನಮ್ಮ ಮನೆಯನ್ನು ಬೆಳಗುತ್ತದೆ. ಅದೂ ಯಾವುದೇ ಖರ್ಚಿಲ್ಲದೆ! ಆಗೆಲ್ಲಾ ಸರ್ಕಾರಕ್ಕೆ  ಮಿನಿಮಮ್‌ ಬಿಲ್‌ ಕಟ್ಟುತ್ತೇವೆ.

    ಮಲೆನಾಡು ಹಾಗೂ ಕರಾವಳಿಯಲ್ಲಿ ಗುಡ್ಡದಿಂದ ಹರಿದು ಬರುವ ತೊರೆಗಳು ಸಾಕಷ್ಟಿವೆ. ಸರಕಾರ ಕಿರುಜಲವಿದ್ಯುತ್‌ ಘಟಕಕ್ಕೆ ಸಬ್ಸಿಡಿ ಕೊಡುವುದರಿಂದ ಹರಿಯುವ ನೀರು ಹೊಂದಿರುವ ರೈತರು ಈ ಘಟಕ ಸ್ಥಾಪಿಸಿ ವಿದ್ಯುತ್‌ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬಹುದು.

ಸಹನಾ ಕಾಂತಬೈಲು

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.