ಕಾರ್ಗಿಲ್‌ನಲ್ಲಿ ಕಾದಾಟಕ್ಕಿಳಿದ ಶ್ರೀದೇವಿ ಪುತ್ರಿ


Team Udayavani, Sep 6, 2019, 5:21 AM IST

b-25

ದಢಕ್‌ ಚಿತ್ರದ ಮೂಲಕ ನಾಯಕ ನಟಿಯಾಗಿ ಬಾಲಿವುಡ್‌ ಅಂಗಳಕ್ಕೆ ಕಾಲಿಟ್ಟ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್‌, ಮೊದಲ ಚಿತ್ರದಲ್ಲೇ ಒಂದಷ್ಟು ಭರವಸೆ ಮೂಡಿಸುವಲ್ಲಿ ಯಶಸ್ವಿಯಾದ ನಟಿ. ಬಳಿಕ ತಖ್‌¤ ಚಿತ್ರದಲ್ಲೂ ಚಿಕ್ಕ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದ ಜಾಹ್ನವಿ ಕಪೂರ್‌, ಈಗ ಮತ್ತೂಂದು ನಿರೀಕ್ಷಿತ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಜಾಹ್ನವಿ ಅಭಿನಯದ ಮುಂಬರುವ ಚಿತ್ರಕ್ಕೆ ಗುಂಜನ್‌ ಸಕ್ಸೇನಾ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಫ‌ಸ್ಟ್‌ಲುಕ್‌ ಅಧಿಕೃತವಾಗಿ ಬಿಡುಗಡೆಯಾಗಿದೆ.

1999ರಲ್ಲಿ ನಡೆದ ಕಾರ್ಗಿಲ್‌ ಯುದ್ಧದಲ್ಲಿ ಗಾಯಗೊಂಡಿದ್ದ ಹಲವಾರು ಮಂದಿ ಸೈನಿಕರನ್ನು, ಶತ್ರುಗಳ ಸತತ ದಾಳಿಗಳ ನಡುವೆಯೂ ಮಹಿಳಾ ಪೈಲಟ್‌ ಗುಂಜನ್‌ ಸಕ್ಸೇನಾ ತನ್ನ ವಿಮಾನದಲ್ಲಿ ಸುರಕ್ಷಿತ ಪ್ರದೇಶಕ್ಕೆ ರವಾನಿಸಿ ಪರಾಕ್ರಮ ಮೆರೆದಿದ್ದರು. ಇವರ ಧೈರ್ಯ-ಸಾಹಸಗಳನ್ನು ಮೆಚ್ಚಿದ ಕೇಂದ್ರ ಸರಕಾರ ಗುಂಜನ್‌ ಸಕ್ಸೇನಾ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಅನೇಕ ಮಹಿಳೆಯರಿಗೆ ಸ್ಫೂರ್ತಿಯಾಗಬಲ್ಲ ಗುಂಜನ್‌ ಸಕ್ಸೇನಾ ಅವರ ಜೀವನಗಾಥೆ ಈಗ ಗುಂಜನ್‌ ಸಕ್ಸೇನಾ ಎನ್ನುವ ಹೆಸರಿನಲ್ಲೇ ಸಿನಿಮಾವಾಗಿ ತೆರೆಗೆ ಬರುತ್ತಿದ್ದು, ಚಿತ್ರಕ್ಕೆ ದಿ ಕಾರ್ಗಿಲ್‌ ಗರ್ಲ್ ಎನ್ನುವ ಟ್ಯಾಗ್‌ ಲೈನ್‌ ನೀಡಲಾಗಿದೆ.

ಇನ್ನು ಗುಂಜನ್‌ ಸಕ್ಸೇನಾ ಬಯೋಪಿಕ್‌ನಲ್ಲಿ ವಾಯುಪಡೆಯ ಮಹಿಳಾ ಅಧಿಕಾರಿ ಗುಂಜನ್‌ ಸಕ್ಸೇನಾ ಅವರ ಪಾತ್ರದಲ್ಲಿ ನಟಿ ಜಾಹ್ನವಿ ಕಪೂರ್‌ ಅಭಿನಯಿಸುತ್ತಿದ್ದಾರೆ. ಚಿತ್ರದಲ್ಲಿ ಜಾಹ್ನವಿ ಕಪೂರ್‌ ತಂದೆ ಪಾತ್ರದಲ್ಲಿ ಪಂಕಜ್‌ ತ್ರಿಪಾಠಿ, ತಾಯಿ ಪಾತ್ರದಲ್ಲಿ ನೀನಾ ಗುಪ್ತಾ, ಸಹೋದರನಾಗಿ ನಟ ಅಂಗದ್‌ ಬೇಡಿ ಕಾಣಿಸಿಕೊಳ್ಳುತ್ತಿ¨ªಾರೆ. ಚಿತ್ರದ ಪಾತ್ರಕ್ಕಾಗಿ ಜಾಹ್ನವಿ ಕಪೂರ್‌ ಸಾಕಷ್ಟು ಕಸರತ್ತು ನಡೆಸಿದ್ದು, ಇಂಡಿಯನ್‌ ಏರ್‌ಫೋರ್ಸ್‌ನಲ್ಲಿ ತರಬೇತಿಯನ್ನೂ ಪಡೆದುಕೊಂಡಿದ್ದಾರೆ. ಕಳೆದ ವರ್ಷದ ಕೊನೆಗೆ ಸದ್ದಿಲ್ಲದೆ, ಗುಂಜನ್‌ ಸಕ್ಸೇನಾ ಬಯೋಪಿಕ್‌ ಶೂಟಿಂಗ್‌ ಪ್ರಾರಂಭವಾಗಿದ್ದು, ಮುಂದಿನ ವರ್ಷ 2020ರ ಮಾರ್ಚ್‌ 13ಕ್ಕೆ ಚಿತ್ರ ತೆರೆಗೆ ಬರಲಿದೆ.

“ಧರ್ಮ ಪ್ರೊಡಕ್ಷನ್‌’ ಮತ್ತು “ಜೀ ಸ್ಟುಡಿಯೋಸ್‌’ ಜಂಟಿಯಾಗಿ ನಿರ್ಮಿಸುತ್ತಿರುವ ಗುಂಜನ್‌ ಸಕ್ಸೇನಾ ಚಿತ್ರವನ್ನು ಶರಣ್‌ ಶರ್ಮಾ ನಿರ್ದೇಶಿಸುತ್ತಿದ್ದಾರೆ.

ಸದ್ಯ ಬಿಡುಗಡೆಯಾಗಿರುವ ಗುಂಜನ್‌ ಸಕ್ಸೇನಾ ಚಿತ್ರದ ಫ‌ಸ್ಟ್‌ಲುಕ್‌ಗೆ ಪ್ರೇಕ್ಷಕರು ಮತ್ತು ಚಿತ್ರೋದ್ಯಮದಿಂದ ದೊಡ್ಡ ಪ್ರತಿಕ್ರಿಯೆ ಸಿಗುತ್ತಿದ್ದು, ಜಾಹ್ನವಿ ಲುಕ್‌ಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಟಾಪ್ ನ್ಯೂಸ್

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.