ಸೈನಿಕರಿಗೆ ಸಲಾಂ

Team Udayavani, Sep 6, 2019, 5:00 AM IST

ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬಂದಂಥ ದೃಶ್ಯ ನಿಜಕ್ಕೂ ಎಲ್ಲರ ಮನಮುಟ್ಟುವಂತಿತ್ತು. ಪ್ರವಾಹದಲ್ಲಿ ಸಿಲುಕಿದ್ದ ಮಹಿಳೆಯೋರ್ವರು ತಮ್ಮನ್ನು ರಕ್ಷಿಸಿದ ಯೋಧರ ಪಾದ ಮುಟ್ಟಿ ನಮಸ್ಕರಿಸಿ ಕೃತಜ್ಞತಾಭಾವವನ್ನು ಮೆರೆದ ದೃಶ್ಯ ಅದಾಗಿತ್ತು.

ಯುದ್ಧ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪದಂತಹ ತುರ್ತು ಪರಿಸ್ಥಿತಿಗಳಲ್ಲಿಯೂ ಜನರ, ಮೂಕ ಜೀವಿಗಳ ರಕ್ಷಣೆಗೆ ಸದಾ ಸಿದ್ಧರಾಗಿರುತ್ತಾರೆ ನಮ್ಮ ಯೋಧರು. ಇದಕ್ಕೆ ಪೂರಕವೆಂಬಂತೆ ನಮ್ಮ ರಾಜ್ಯದಲ್ಲಿ ಹಾಗೂ ನೆರೆಯ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಸಂಭವಿಸಿದ ಪ್ರವಾಹದಿಂದ ಅದೆಷ್ಟೋ ಜನರ ಜೀವನವೇ ಅಸ್ತವ್ಯಸ್ತವಾಯಿತು. ಈ ಸಂದರ್ಭದಲ್ಲಿ ಬಿಎಸ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಯೋಧರ ತಂಡವು ನೆರೆಪೀಡಿತ ಪ್ರದೇಶಗಳಿಗೆ ಆಗಮಿಸಿ ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಿ ಅವರ ಬಾಳಿಗೆ ಬೆಳಕಾದರು.

ನಮ್ಮ ಯೋಧರ ಬಗ್ಗೆ ಹೇಳಲು ಪದಗಳೇ ಸಾಲವು. ಶ್ರದ್ಧೆ, ದೇಶಪ್ರೇಮ, ಕರ್ತವ್ಯನಿಷ್ಠೆಗೆ ಮತ್ತೂಂದು ಹೆಸರು ಯೋಧ ಎಂದರೆ ತಪ್ಪಾಗಲಾರದು.

ಇಂದು ನಾವು ನೆಮ್ಮದಿಯಿಂದ ನಿದ್ರೆ, ನಮ್ಮ ಸಂಬಂಧಿಕರೊಡನೆ ಖುಷಿಯಿಂದ ಕಾಲಕಳೆಯುತ್ತಿದ್ದೇವೆಂದರೆ ಅದಕ್ಕೆ ಮೂಲಕಾರಣ ತಮ್ಮವರಿಂದ ದೂರವಿದ್ದು, ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ವೀರಯೋಧರು !

ಯಶಸ್ವಿ ಕೆ.,
ದ್ವಿತೀಯ ಪಿಯುಸಿ,
ಕಪಿತಾನಿಯೋ ಪದವಿಪೂರ್ವ ಕಾಲೇಜು, ಮಂಗಳೂರು


ಈ ವಿಭಾಗದಿಂದ ಇನ್ನಷ್ಟು

  • ಬರೋಬ್ಬರಿ ಒಂದು ತಿಂಗಳಿನಿಂದ ನೆಗಡಿಯ ಕಾಟ. ಅದೆಷ್ಟೋ ವೈದ್ಯ ಮಹಾಶಯರನ್ನೂ ಕಂಡರೂ, ಬಗೆ ಬಗೆಯ ಗುಳಿಗೆ ನುಂಗಿದರೂ ನನಗೆ ನೆಗಡಿಯಿಂದ ಮುಕ್ತಿ ದೊರಕಲಿಲ್ಲ. ಹೀಗಿರಲು...

  • ಜೀವನದಲ್ಲಿ ಮೊದಲ ಬಾರಿಗೆ ಮೊಬೈಲನ್ನು ಬಿಟ್ಟು ಒಂದು ವಾರ ಕಳೆದ ಅನುಭವ ಈ ರಜೆಯಲ್ಲಿ ನನ್ನದಾಗಿತ್ತು. ಇಂದು ಒಂದು ಸಣ್ಣ ಕಲ್ಲನ್ನು ಈ ಕಡೆಯಿಂದ ಆಕಡೆ ಇಟ್ಟರೂ ಫೋಟೋ...

  • ನಾನು ನೋಡಿದ ಮೊದಲ ವೀರ ಅಂತಾರಲ್ಲ, ಹಾಗೆಯೇ ನನ್ನ ಜೀವನದಲ್ಲಿ ನಾನು ಕಂಡ ಮೊದಲನೆಯ ಧೀರ ನನ್ನ ಅಪ್ಪ. ಎಲ್ಲರ ಜೀವನದಲ್ಲಿ ಒಬ್ಬೊಬ್ಬರು ಆದರ್ಶ ವ್ಯಕ್ತಿಗಳಿರುತ್ತಾರೆ....

  • ಮಳೆ ಒಂದೇ ಸಮನೆ ಸುರಿಯುತ್ತಿತ್ತು. ನಾನು ನನ್ನ ಗೆಳತಿಯರೊಂದಿಗೆ ಬ್ಯಾಗ್‌ ಅನ್ನು ಎದೆಗವಚಿಕೊಂಡು ಒಂದು ಕೊಡೆಯಲ್ಲಿ ಇಬ್ಬರು ಎಂಬಂತೆ ನಾಲ್ಕು ಜನ ಬರುತ್ತಿದ್ದೆವು....

  • ಸ್ಪಿಸ್‌ (SPYSS-Shri Pathanjali Yoga Shikshana Samithi) ಎಂದ ಮೇಲೆ ಎಲ್ಲರಿಗೂ ನೆನಪಾಗುವುದು ಪತಂಜಲಿ ಯೋಗ ಸೇವಾ ಸಮಿತಿ. ನನಗೆ ಕೂಡ ಯೋಗ ಕಲಿಯಬೇಕೆಂಬ ಆಸೆ ಇತ್ತು. ಈ ಆಸೆಯ ಈಡೇರಿಕೆ ಆದದ್ದು...

ಹೊಸ ಸೇರ್ಪಡೆ