ಜೆಡಿಎಸ್‌

 • ಮೈಸೂರು ಮೇಯರ್‌ ಆಗಿ ಜೆಡಿಎಸ್‌ನ ತಸ್ಲೀಮಾ ಆಯ್ಕೆ

  ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಜೆಡಿಎಸ್‌ನ ತಸ್ಲೀಮಾ, ಉಪ ಮೇಯರ್‌ ಆಗಿ ಕಾಂಗ್ರೆಸ್‌ನ ಶ್ರೀಧರ್‌ ಸಿ.ಆಯ್ಕೆಯಾಗಿದ್ದಾರೆ. ಪಾಲಿಕೆಯ ಮೇಯರ್‌ ಹಾಗೂ ಉಪ ಮೇಯರ್‌ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಿತು. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಕೂಟದ ಅಭ್ಯರ್ಥಿಯಾಗಿ ತಸ್ಲೀಮಾ…

 • ಪಾಲಿಕೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಮುಂದುವರಿಕೆ

  ಮೈಸೂರು: ಮೈಸೂರು ಮಹಾ ನಗರಪಾಲಿಕೆಯ ಎರಡನೇ ಅವಧಿಯ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮುಂದುವರಿಸಲು ಎರಡೂ ಪಕ್ಷಗಳ ಮುಖಂಡರು ನಿರ್ಧರಿಸಿದ್ದಾರೆ. ನಗರದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ ಕಾಂಗ್ರೆಸ್‌ನ…

 • ಕೇರಳದಲ್ಲಿ ರಸ್ತೆ ಅಪಘಾತ: ಚಿತ್ರದುರ್ಗದ ಇಬ್ಬರು ಜೆಡಿಎಸ್ ಮುಖಂಡರ ದುರ್ಮರಣ

  ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಚಿತ್ರದುರ್ಗದ ಇಬ್ಬರು ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ಮಲಪುರಂ ಬಳಿ ನಡೆದಿದೆ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು , ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಪಾಂಡುರಂಗ…

 • ಪಕ್ಷ ಪುನಶ್ಚೇತನಕ್ಕೆ ಅಖಾಡಕ್ಕಿಳಿದ ದೇವೇಗೌಡರು

  ಬೆಂಗಳೂರು: ಉಪ ಚುನಾವಣೆ ಸೋಲಿನ ಅನಂತರವೂ ಎಚ್ಚೆತ್ತುಕೊಳ್ಳದ ಬಗ್ಗೆ ಪಕ್ಷದ ವಲಯದಲ್ಲಿ ವ್ಯಕ್ತವಾಗುತ್ತಿರುವ ಆಕ್ರೋಶದಿಂದ ಆತಂಕಗೊಂಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ರಾಜ್ಯದಲ್ಲಿ ಜೆಡಿಎಸ್‌ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ “ರಂಗಪ್ರವೇಶ’ಕ್ಕೆ ಮುಂದಾಗಿದ್ದಾರೆ. ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಮಧು ಬಂಗಾರಪ್ಪ,…

 • ಸಿಎಎ, ಎನ್‌ಆರ್‌ಸಿ ವಿರುದ್ಧ ಜೆಡಿಎಸ್‌ ಬೃಹತ್‌ ಪ್ರತಿಭಟನೆ

  ಹಾಸನ: ಪೌರತ್ವ ತಿದ್ದುಪಡಿ ಕಾನೂನು (ಸಿಎಎ)ವಾಪಸ್‌ ಪಡೆಯುವಂತೆ ಹಾಗೂ ಎನ್‌ಆರ್‌ಸಿ ಜಾರಿ ಮಾಡಬಾರದು ಎಂದು ಒತ್ತಾಯಿಸಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಆವರಣದಕ್ಕೆ ಆಗಮಿಸಿ…

 • ಕಾಂಗ್ರೆಸ್‌, ಜೆಡಿಎಸ್‌ನಿಂದ ಕೋಮು ಗಲಭೆಗೆ ಪ್ರಚೋದನೆ

  ಹಾಸನ: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವೊಬ್ಬ ಮುಸ್ಲಿಮರು, ಯಾವುದೇ ಅಲ್ಪಸಂಖ್ಯಾತರಿಗೆ ತೊಂದರೆಯಿಲ್ಲ ಎಂದು ಶಾಸಕ ಪ್ರೀತಂ ಜೆ.ಗೌಡ ಮತ್ತು ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಹರು ಕಾಲದಿಂದಲೂ…

 • ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ 28 ರಂದು ಜೆಡಿಎಸ್‌ ಪ್ರತಿಭಟನೆ

  ಹಾಸನ: ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೆ ವಿರೋಧಿಸಿ ಹಾಗೂ ಮಂಗಳೂರಿನ ಗೋಲಿಬಾರ್‌ ಘಟನೆಯನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಜೆಡಿಎಸ್‌ ವತಿಯಿಂದ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ.28ರಂದು ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ, ಮಾಜಿ…

 • ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ ಜೆಡಿಎಸ್‌ ಬಿಡ್ತಾರಾ?

  ಮಂಡ್ಯ: ಕೆ.ಆರ್‌.ಪೇಟೆ ಉಪ ಚುನಾವಣೆಯಲ್ಲಿ ಕಮಲ ಅರಳಿದ ಬೆನ್ನ ಹಿಂದೆಯೇ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ನಾಗಮಂಗಲ ಶಾಸಕ ಕೆ.ಸುರೇಶ್‌ಗೌಡ ಅವರು ಜೆಡಿಎಸ್‌ ತೊರೆದು, ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆ.ಸಿ.ನಾರಾಯಣಗೌಡ, ರವೀಂದ್ರ…

 • ವಾರಾಂತ್ಯದಲ್ಲಿ ಜೆಡಿಎಸ್‌ ಆತ್ಮಾವಲೋಕನ ಸಭೆ

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಗೋವಾದಿಂದ ಮಂಗಳವಾರ ಹಿಂತಿರುಗಿದ ಬಳಿಕ ಉಪಚುನಾವಣೆ ಸೋಲಿನ ಬಗ್ಗೆ ಜೆಡಿಎಸ್‌ ಆತ್ಮಾವಲೋಕನ ಸಭೆ ನಡೆಸಲಿದೆ. ವಾರಾಂತ್ಯದಲ್ಲಿ ನಡೆಯಲಿರುವ ಸಭೆಯಲ್ಲಿ 8-10 ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ಎದುರಾಗಲಿದೆ. ಸೋಲಿನ ಕಹಿಯನ್ನು ಬದಿಗೊತ್ತಿ ತಳಮಟ್ಟದಿಂದ…

 • ರಾಜ್ಯದಲ್ಲಿ ಜೆಡಿಎಸ್‌ಗೆ ಭವಿಷ್ಯವಿಲ್ಲ

  ಜಮಖಂಡಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌ಗೆ ಭವಿಷ್ಯ ಇಲ್ಲದಂತಾಗಿದೆ. ಪಕ್ಷದ ಭವಿಷ್ಯ ಕರಾಳವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಆಸೆಗಾಗಿ ಪಕ್ಷ ಬದಲಿಸಲಾರೆ. ಜೆಡಿಎಸ್‌ ಬಿಟ್ಟು ಬೇರೆ…

 • ಜೆಡಿಎಸ್‌ ಬಿಡಲ್ಲ: ಜಿ.ಟಿ.ದೇವೇಗೌಡ ಸ್ಪಷ್ಟನೆ

  ಮೈಸೂರು: “ನಾನು ಜೆಡಿಎಸ್‌ ಶಾಸಕನಾಗಿಯೇ ಮುಂದುವರಿಯುತ್ತೇನೆ. ಕಾಂಗ್ರೆಸ್‌ ಅಥವಾ ಬಿಜೆಪಿ ಸೇರುವ ವಿಚಾರವಿಲ್ಲ’ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಾನು ಜೆಡಿಎಸ್‌ ಬಿಟ್ಟು ಹೋಗುವುದಿಲ್ಲ. ಈ ಪಕ್ಷದಲ್ಲೇ ಮುಂದುವರಿಯುತ್ತೇನೆ. ಕಾಂಗ್ರೆಸ್‌ನತ್ತಲೂ ಮುಖ…

 • ಜೆಡಿಎಸ್‌ ನಾಯಕತ್ವ ಮತ್ತೆ ಎಚ್‌ಡಿಕೆಗೆ ವಹಿಸಿ

  ಬೆಂಗಳೂರು: “ಜೆಡಿಎಸ್‌ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಎಚ್‌.ಡಿ. ಕುಮಾರಸ್ವಾಮಿಯವರು ನಾಯಕತ್ವ ವಹಿಸಿಕೊಳ್ಳಬೇಕು, ಇಲ್ಲವೇ ಪೂರ್ಣ ಪ್ರಮಾಣದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ಇಲ್ಲದಿದ್ದರೆ ಶಾಸಕರಷ್ಟೇ ಅಲ್ಲ, ಜಿಲ್ಲಾ-ತಾಲೂಕು ಮಟ್ಟದಲ್ಲಿ ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವುದು ಕಷ್ಟವಾಗಬಹುದು’ ಎಂದು ನಾಯಕರು ಎಚ್ಚರಿಕೆ ರವಾನಿಸಿದ್ದಾರೆ. ಚುನಾವಣೆ…

 • ಕಾಂಗ್ರೆಸ್‌ – ಬಿಜೆಪಿ ಒಳ ಒಪ್ಪಂದದಿಂದ ಜೆಡಿಎಸ್‌ಗೆ ಸೋಲು

  ಹಾಸನ: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಒಳ ಒಳ ಒಪ್ಪಂದ ಮಾಡಿಕೊಂಡಿದ್ದರಿಂದಾಗಿ ಜೆಡಿಎಸ್‌ ಅಭ್ಯರ್ಥಿಗಳು ಸೋಲು ಅನುಭವಿಸುವಂತಾಯಿತು ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ದೂರಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ಉಪಚುನಾವಣೆ: ಜೆಡಿಎಸ್ ಗಿಂತಲೂ ಹೆಚ್ಚು ಮತ ನೋಟಾಗೆ! ಎಲ್ಲಿಎಷ್ಟು ಗೊತ್ತಾ?

  ಬೆಂಗಳೂರು: ರಾಜ್ಯದ ಹದಿನೈದು ಕ್ಚೇತ್ರಗಳ ಉಪಚುನಾವಣೆಯ ಫಲಿತಾಂಶ ಬಂದಿದೆ.  12 ಸ್ಥಾನಗಳೊಂದಿಗೆ ಆಡಳಿತಾರೂಢ ಬಿಜೆಪಿಗೆ ಮತದಾರರು ಜೈ ಎಂದಿದ್ದರೆ, ಕಾಂಗ್ರೆಸ್ ಗೆ ಕೇವಲ 2 ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಆದರೆ ತೆನೆ ಹೊತ್ತ ಮಹಿಳೆ ಜೆಡಿಎಸ್ ಮಾತ್ರ ಶೂನ್ಯ…

 • ಉಪಸಮರ ಅಖಾಡದಲ್ಲಿ ಜೆಡಿಎಸ್‌ಗೆ ಮರ್ಮಾಘಾತ

  ಬೆಂಗಳೂರು: ಆಪರೇಷನ್‌ ಕಮಲ ಕಾರ್ಯಾಚರಣೆಯಡಿ ಮೂರು ಸ್ಥಾನ ಕಳೆದು ಕೊಂಡು ಐದು ಸ್ಥಾನ ಗೆಲ್ಲುತ್ತೇವೆಂದು ಉಪ ಸಮರದ ಅಖಾಡಗಿಳಿದಿದ್ದ ಜೆಡಿಎಸ್‌ ಶೂನ್ಯ ಸಂಪಾದನೆ ಮೂಲಕ ಪಕ್ಷದ “ಭದ್ರ ಕೋಟೆ’ಯಲ್ಲಿ ಅಸ್ತಿತ್ವಕ್ಕೆ ಧಕ್ಕೆ ತಂದುಕೊಂಡಿದೆ.  ಬಿಜೆಪಿಗೆ ಬಹುಮತ ಬಾರದಿದ್ದರೆ ಕಿಂಗ್‌ ಮೇಕರ್‌ ಆಗಿ…

 • ಜನಾದೇಶಕ್ಕೆ ದ್ರೋಹ ಬಗೆದ ಕಾಂಗ್ರೆಸ್‌-ಜೆಡಿಎಸ್‌ಗೆ ಪಾಠ: ಮೋದಿ

  ಬರ್ಹಿ/ಬೊಕಾರೋ: ಕರ್ನಾಟಕದ ವಿಧಾನಸಭೆಗೆ 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಜನರ ತೀರ್ಪನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ ತಿರುಚಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಏರಿದ್ದವು. ಅಂಥ ಪಕ್ಷಗಳಿಗೆ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ…

 • ಕಮಲ ಅರ್ಭಟಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಧೂಳೀಪಟ

  ಜಿಲ್ಲೆಯ ಜನರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ಸುಗಮವಾಗಿ ನಡೆದು ಫ‌ಲಿತಾಂಶ ಹೊರ ಬಿದ್ದಿದ್ದು, ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಮಲ ತನ್ನ ಖಾತೆ ತೆರೆಯುವ ಮೂಲಕ ಜಿಲ್ಲೆಯ ಭವಿಷ್ಯದ…

 • ಬಿಜೆಪಿ-ಜೆಡಿಎಸ್‌ಗೆ ನನ್ನ ಕಂಡರೆ ಭಯ: ಸಿದ್ದು

  ಬೆಳಗಾವಿ: “ಬಿಜೆಪಿ ಮತ್ತು ಜೆಡಿಎಸ್‌ಗೆ ನನ್ನ ಕಂಡರೆ ಬಹಳ ಭಯ. ಅದೇ ಕಾರಣಕ್ಕೆ ಅವರು ಪದೇಪದೆ ನನ್ನ ಹೆಸರು ಪ್ರಸ್ತಾಪ ಮಾಡುತ್ತಾರೆ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,…

 • “ಕಿಂಗ್‌ ಮೇಕರ್‌’ ಕನಸಿಗೆ ಹಿನ್ನಡೆ!

  ಬೆಂಗಳೂರು: ಮತದಾನೋತ್ತರ ಸಮೀಕ್ಷೆಯಂತೆ ಬಿಜೆಪಿಗೆ ಸುಭದ್ರ ಸರ್ಕಾರದ ಭರವಸೆ ಮೂಡಿಸಿದ್ದು, ಜೆಡಿಎಸ್‌ ನಿರೀಕ್ಷಿತ ಸ್ಥಾನ ಗೆಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸವಾಲು ಎದುರಾಗಬಹುದು. ಜೆಡಿಎಸ್‌ನಲ್ಲಿದ್ದರೆ ಮುಂದಿನ ಮೂರೂವರೆ ವರ್ಷಗಳು ವೈಯಕ್ತಿಕವಾಗಿ ಯಾವುದೇ ರಾಜಕೀಯ ಬೆಳವಣಿಗೆ ಸಾಧ್ಯವಿಲ್ಲ. ಪಕ್ಷ…

 • ಬಿಜೆಪಿ ಮುಖಂಡರ ಮೇಲೆ ಹಲ್ಲೆ: ಎಚ್‌.ಡಿ.ರೇವಣ್ಣ ಪುತ್ರನ ವಿರುದ್ಧ ದೂರು

  ಚನ್ನರಾಯಪಟ್ಟಣ: ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ಉಪ ಚುನಾವಣೆ ವಿಷಯವಾಗಿ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿಯಲ್ಲಿ ಬಿಜೆಪಿ ಮುಖಂಡರ ಮೇಲೆ ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಹಿರಿಯ ಪುತ್ರ, ಜೆಡಿಎಸ್‌…

ಹೊಸ ಸೇರ್ಪಡೆ