ಬಳ್ಳಾರಿ: Bellary:

 • ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚು!

  ಬಳ್ಳಾರಿ: ಕೇಂದ್ರ ಚುನಾವಣಾ ಆಯೋಗದ ಆದೇಶದ ಮೇರೆಗೆ ಗಣಿನಾಡು ಜಿಲ್ಲೆಯಲ್ಲಿನ ಮತದಾರರ ಪಟ್ಟಿಯನ್ನು ಕಳೆದ ಫೆ.7 ರಂದು ಅಂತಿಮಗೊಳಿಸಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿ ಒಟ್ಟು 21,90,858 ಮತದಾರರಿದ್ದಾರೆ ಎಂದು ಘೋಷಿಸಿದೆ. ಇದರಲ್ಲಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಗಮನಾರ್ಹ. ಭಾರತೀಯ…

 • ಗೃಹರಕ್ಷಕರ ಸೇವೆ ಶ್ಲಾಘನೀಯ

  ಬಳ್ಳಾರಿ: ಜಿಲ್ಲೆಯಲ್ಲಿ ಅಲ್ಲದೇ ವಿವಿಧ ಜಿಲ್ಲೆಗಳಲ್ಲಿಯು ಸಹ ಪ್ರವಾಹ ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಗೃಹರಕ್ಷಕರ ಸೇವೆ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಹೇಳಿದರು. ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಗೃಹರಕ್ಷಕರ…

 • ಸರ್ವರ್‌ ಸಮಸ್ಯೆಗೆ ಸಾರ್ವಜನಿಕರು ಹೈರಾಣ!

  ಬಳ್ಳಾರಿ: ನಗರದ ಹೃದಯ ಭಾಗದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ವಾರದಿಂದ ಸರ್ವರ್‌ ಸಮಸ್ಯೆ ಎದುರಾಗಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಕಚೇರಿಯಲ್ಲಿ ಅವಧಿ ಮುಗಿದಿರುವ ಕಂಪ್ಯೂಟರ್‌ ಸೇರಿ ಇತರೆ ತಾಂತ್ರಿಕ ವಸ್ತುಗಳನ್ನು ಬಳಸುತ್ತಿರುವುದೇ ಸರ್ವರ್‌ ಸಮಸ್ಯೆ ಎದುರಾಗಲು ಕಾರಣವಾಗಿದೆ. ನಗರದ ಉಪನೋಂದಣಾಧಿಕಾರಿಗಳ…

 • ಟಿಬಿ ಡ್ಯಾಂನಿಂದ ದಾಖಲೆ ನೀರು ಬಳಕೆ

  ಬಳ್ಳಾರಿ: ಕರ್ನಾಟಕ-ಆಂಧ್ರಪ್ರದೇಶ ಜನರ ಜೀವನಾಡಿ ತುಂಗಭದ್ರಾ ಜಲಾಶಯದಿಂದ ಈ ಬಾರಿ ದಾಖಲೆ ಪ್ರಮಾಣದ ನೀರು ಬಳಕೆ ಮಾಡಿಕೊಳ್ಳಲಾಗಿದೆ. ಕೃಷಿ, ಕುಡಿಯುವ ನೀರು ಸೇರಿ ಈಗಾಗಲೇ 160ಕ್ಕೂ ಹೆಚ್ಚು ಟಿಎಂಸಿ ಅಡಿ ನೀರು ಬಳಕೆಯಾಗಿದೆ. ಮಾ.31ರೊಳಗಾಗಿ 177.539 ಟಿಎಂಸಿ ನೀರು…

 • ಪಾಲಿಕೆ ಚುನಾವಣೆ ಮುಂದೂಡಿಕೆಗೆ ಒತ್ತಡ?

  ಬಳ್ಳಾರಿ: ನಗರದಲ್ಲಿ ಕೆಲವೊಂದು ವಾರ್ಡ್‌ಗಳ ಮೀಸಲಾತಿ ಸಮಸ್ಯೆಯಿಂದ ಮುಂದೂಡಲಾಗುತ್ತಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಖಂಡರೇ ಒತ್ತಡ ಹೇರಿ ಮುಂದೂಡುತ್ತಿದ್ದಾರಾ? ಇಂಥಹದ್ದೊಂದು ಗುಮಾನಿ ಬಳ್ಳಾರಿ ಮಹಾನಗರ ಪಾಲಿಕೆ ಆವರಣದಲ್ಲಿ ಕೇಳಿಬರುತ್ತಿದೆ. ಪಾಲಿಕೆ ಸದಸ್ಯರ ಅಧಿ ಕಾರಾವಧಿ  ಮುಗಿದು ಒಂದು…

 • ಬಂಜಾರಾ ಸಮುದಾಯ ಮುಖ್ಯವಾಹಿನಿಗೆ ಬರಲಿ

  ಬಳ್ಳಾರಿ: ಬಂಜಾರಾ ಸಮುದಾಯದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಮೂಲಕ ಮುಖ್ಯವಾಹಿನಿಗೆ ಬರಬೇಕು. ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಕಡೆಗಣಿಸದೇ ಅವರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ತಹಶೀಲ್ದಾರ್‌ ಯು.ನಾಗರಾಜ ಹೇಳಿದರು. ನಗರದ ಜೋಳದರಾಶಿ…

 • ಫಲಾನುಭವಿಗಳಿಗೆ ಯೋಜನೆ ತಲುಪಲಿ

  ಬಳ್ಳಾರಿ: ಸರ್ಕಾರದ ವಿವಿಧ ಇಲಾಖೆಯ ಸೌಲಭ್ಯಗಳನ್ನು ಕಾರ್ಯ ಸುಲಭಗೊಳಿಸುವಲ್ಲಿ ಸಾಮಾನ್ಯ ಸೇವಾ ಕೇಂದ್ರವನ್ನು (ಸಿಎಸ್‌ಸಿ) ಮಾಧ್ಯಮವಾಗಿ ಬಳಸಲಾಗುತ್ತಿದ್ದು, ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಗ್ರಾಮೀಣ ಮಟ್ಟದ ಸ್ವಉದ್ಯಮ ವ್ಯವಸ್ಥಾಪಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಪರ ಜಿಲ್ಲಾಧಿಕಾರಿ…

 • ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

  ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್‌, ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಪ್ರತಿಭಟನೆ ಎರಡನೇ ದಿನ ಬುಧವಾರ ನಗರದ ವಾಲ್ಮೀಕಿ ಭವನದಲ್ಲಿ ಮುಂದುವರೆಯಿತು. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಈಚೆಗೆ ಹೊಸದಾಗಿ…

 • ವಿಜೃಂಭಣೆಯ ಕೋಟೆ ಮಲ್ಲೇಶ್ವರ ಬ್ರಹ್ಮರಥೋತ್ಸವ

  ಬಳ್ಳಾರಿ: ಗಣಿನಗರಿ ಬಳ್ಳಾರಿ ಆರಾಧ್ಯ ದೈವ ಶ್ರೀಕೋಟೆ ಮಲ್ಲೇಶ್ವರ ವಾರ್ಷಿಕ ಜಾತ್ರಾ ಬ್ರಹ್ಮ ರಥೋತ್ಸವವು ಸಾವಿರಾರು ಜನರ ಭಕ್ತ ಸಮೂಹದ ನಡುವೆ ಅತ್ಯಂತ ವಿಜೃಂಭಣೆಯಿಂದ ಭಾನುವಾರ ಸಂಜೆ ನಡೆಯಿತು. ನಗರದ ಕೋಟೆ ಪ್ರದೇಶದಲ್ಲಿರುವ ಮಲ್ಲೇಶ್ವರ ದೇವಸ್ಥಾನದಲ್ಲಿ ಕಳೆದ ಒಂದು…

 • ಬಿಜೆಪಿ ಟೀಕಿಸುವ ನೈತಿಕತೆ ಕಾಂಗ್ರೆಸ್‌ಗಿಲ್ಲ

  ಬಳ್ಳಾರಿ: ಸಂಘಟನೆ ಕೊರತೆಯಿಂದಾಗಿ ವಿರೋಧ ಪಕ್ಷದಲ್ಲಿ ಕೂರಲು ನಾಲಾಯಕ್‌ ಆಗಿರುವ ಕಾಂಗ್ರೆಸ್‌ ಬಿಜೆಪಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡುವ ನೈತಿಕ ಹಕ್ಕನ್ನು ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಕುಟುಕಿದರು. ನಗರದ ಬಸವ ಭವನದಲ್ಲಿ ಬಿಜೆಪಿ…

 • ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಣಯ

  ಬಳ್ಳಾರಿ: ವಿವಿಧ ಮಹನೀಯರ ಜಯಂತಿಗಳನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಮಹನೀಯರು ನಾಡಿಗೆ ನೀಡಿದ ಕೊಡುಗೆ ಅಪಾರ. ಅದನ್ನು ಗುರುತಿಸಿ ಸರಕಾರ ಜಯಂತಿಗಳನ್ನು ಆಚರಿಸುತ್ತಿದ್ದು,…

 • ಜಿ+2 ಮಾದರಿಯ 5616 ಮನೆಗಳ ನಿರ್ಮಾಣ

  ಬಳ್ಳಾರಿ: ನಗರದ ಹೊರವಲಯದಲ್ಲಿ ಮುಂಡ್ರಿಗಿ ಆಶ್ರಯ ಮಹಾತ್ಮಗಾಂಧಿ  ಟೌನ್‌ ಶಿಪ್‌ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಆಶ್ರಯ ಮನೆಗಳ ನಿರ್ಮಾಣ ಕಾರ್ಯದ ಪ್ರಗತಿಯನ್ನು ಶಾಸಕ ಜಿ. ಸೋಮಶೇಖರ್‌ ರೆಡ್ಡಿ ಭಾನುವಾರ ಪರಿಶೀಲನೆ ನಡೆಸಿದರು. ಈ ವೇಳೆ ನಿರ್ಮಾಣದ ಹೊಣೆಹೊತ್ತಿರುವ ಗುತ್ತಿಗೆದಾರರು,…

 • ಗಮನ ಸೆಳೆದ ಚಾಕ್‌ಪೀಸ್‌ ಕಲಾಕೃತಿ!

  ಬಳ್ಳಾರಿ: ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶನಿವಾರದಿಂದ ಆರಂಭವಾದ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಾಕ್‌ಪೀಸ್‌ನಲ್ಲಿ ಅರಳಿದ ಹಲವಾರು ಸೂಕ್ಷ್ಮಕಲಾಕೃತಿಗಳು (ಮೈಕ್ರೋ ಆರ್ಟ್ಸ್) ಗಮನ ಸೆಳೆದವು. ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಾಗಲೂರು-ಹೊಸಳ್ಳಿ ಗ್ರಾಮದ ರಾಜಶೇಖರ್‌ ಆಚಾರ್‌ ಅವರು…

 • 1ರಿಂದ ಎರಡು ದಿನ ಸಾಹಿತ್ಯ ಸಮ್ಮೇಳನ

  ಬಳ್ಳಾರಿ: ಫೆಬ್ರವರಿ 1,2ರಂದು ಎರಡು ದಿನಗಳ ಕಾಲ 21ನೇ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಡಾ| ಜೆ.ಎಂ.ನಾಗಯ್ಯ ಅವರು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಗಮಿಸಲಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠ ಹೇಳಿದರು….

 • ಇ-ಸ್ಪಂದನ ಕೇಂದ್ರಕ್ಕೆ ಚಾಲನೆ

  ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಆರಂಭಿಸಲಾಗಿರುವ ಇ-ಸ್ಪಂದನೆ ಕೇಂದ್ರವನ್ನು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಚಾಲನೆ ನೀಡಿದರು. ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಈ ಕಂಟ್ರೋಲ್‌ ರೂಂ ಆರಂಭಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಸಾರ್ವಜನಿಕ…

 • ಒಂದೇ ದಿನ 175 ನೌಕರರ ಸಯಂ ನಿವೃತ್ತಿ

  ಬಳ್ಳಾರಿ: ಕಳೆದ ಹಲವು ವರ್ಷಗಳಿಂದ ನಷ್ಟದ ಸುಳಿಗೆ ಸಿಲುಕಿರುವ ಭಾರತ್‌ ಸಂಚಾರ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ಬಳ್ಳಾರಿ ಜಿಲ್ಲಾ ವಿಭಾಗದ 175 ಜನ ನೌಕರರು ಇದೇ ಜ.31 ರಂದು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ. 50 ವರ್ಷ ಮೇಲ್ಪಟ್ಟ ನೌಕರರಿಗೆ…

 • ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಆದ್ಯತೆ

  ಬಳ್ಳಾರಿ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಇದನ್ನು ವಾಟರ್‌ಶೆಡ್‌ ಮೂಲಕ ಹೆಚ್ಚಿಸಲು 4.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಡಿಸಿಎಂ, ಕೃಷಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದಲ್ಲಿ…

 • ಜಿಲ್ಲಾದ್ಯಂತ ಗಣರಾಜ್ಯೋತ್ಸವ ಸಂಭ್ರಮ

  ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 71ನೇ ಗಣರಾಜ್ಯೋತ್ಸವದಲ್ಲಿ ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ಗೌರವಂದನೆ ಸ್ವೀಕರಿಸಿದರು. ನಂತರ ಪೊಲೀಸ್‌, ಗೃಹರಕ್ಷಕದಳ ಸೇರಿದಂತೆ ವಿವಿಧ ಶಾಲಾ…

 • ಸಂವಿಧಾನಬದ್ಧ ಹಕ್ಕನ್ನು ಯೋಗ್ಯರಿಗೆ ಚಲಾಯಿಸಿ

  ಬಳ್ಳಾರಿ: ಮತದಾನ ಸಂವಿಧಾನ ನೀಡಿರುವ ಹಕ್ಕು. ಅದನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಯೋಗ್ಯರಿಗೆ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಆ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕಾರಣೀಕರ್ತರಾಗಬೇಕು ಎಂದು ಜಿಲ್ಲಾ ಹಿರಿಯ ಸಿವಿಲ್‌ ನ್ಯಾಯಾಧೀಶ ಅರ್ಜುನ್‌ ಮಲ್ಲೂರ್‌ ಹೇಳಿದರು….

 • ರೈತರ ಆದಾಯ ಹೆಚ್ಚಿಸಿದ ಜೆಎಸ್‌ಡಬ್ಲ್ಯೂ ಫೌಂಡೇಶನ್‌

  ಬಳ್ಳಾರಿ: ಕೈಗಾರಿಕೆಗಳು ಎಂದಾಕ್ಷಣ ಕೇವಲ ವ್ಯವಹಾರ, ಲಾಭಗಳಿಕೆ ಮಾತ್ರವಲ್ಲ. ಅವುಗಳಿಗೂ ಸಾಮಾಜಿಕ ಜವಾಬ್ದಾರಿಯಿದೆ ಎಂಬುದಕ್ಕೆ ಜಿಲ್ಲೆಯ ಜೆಎಸ್‌ಡಬ್ಲೂ ಸಂಸ್ಥೆಯೇ ಕಾರಣವಾಗಿದೆ. ಭೂಮಿಯಲ್ಲಿ ಫಲವತ್ತತೆಯ ಕೊರತೆ, ಮಳೆ ಅಭಾವದಿಂದ ಕೈಚೆಲ್ಲಿ ಕುಳಿತಿದ್ದ ರೈತರಿಗೆ ಜಿಂದಾಲ್‌ನ ಜೆಎಸ್‌ ಡಬ್ಲೂ ಫೌಂಡೇಶನ್‌ ಮಧ್ಯಸ್ಥಿಕೆ…

ಹೊಸ ಸೇರ್ಪಡೆ