Haveri

 • ಸಕಲ ಸರ್ಕಾರಿ ಗೌರವಗಳೊಂದಿಗೆ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅಂತ್ಯಕ್ರಿಯೆ

  ಹಾವೇರಿ: ಹಿರಿಯ ಪತ್ರಕರ್ತ, ಅಪ್ರತಿಮ ಹೋರಾಟಗಾರ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಸ್ವಗ್ರಾಮವಾದ ರಾಣಿಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಮಂಗಳವಾರ ಸಂಜೆ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು, ಶಿಷ್ಯರು, ಶ್ರೀಗಳು, ಗಣ್ಯರು, ಅಧಿಕಾರಿಗಳು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ…

 • 24 ಗಂಟೆಗಳಲ್ಲಿ ರೈತರಿಗೆ ಸಾಲ ಮನ್ನಾ ಸೌಲಭ್ಯ: ಸಿಎಂ

  ಹಾವೇರಿ: ಈ ಹಿಂದಿನ ಮೈತ್ರಿ ಸರಕಾರ ಮಾಡಿದ ಸಾಲ ಮನ್ನಾಕ್ಕೆ ಸಂಬಂಧಿಸಿ ರೈತರ ಅರ್ಹತಾ ಪತ್ರಗಳ ಪರಿಶೀಲನೆ ನಡೆದಿದೆ. ರೈತರು ದಾಖಲೆ ಕೊಟ್ಟ 24 ಗಂಟೆಗಳಲ್ಲೇ ಸಾಲ ಮನ್ನಾ ಸೌಲಭ್ಯ ಕೊಡಿಸುತ್ತೇವೆ.ಈ ಬಗ್ಗೆ ಯಾರೂ ಅನುಮಾನ ಪಡುವ ಅಗತ್ಯವಿಲ್ಲ…

 • ವಿಷ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

  ಹಾವೇರಿ: ಇಲ್ಲಿಯ ಜಿ.ಎಚ್.ಕಾಲೇಜಿನ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಕಾಲೇಜಿನ ಮೈದಾನದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ದೇವಗಿರಿ ಗ್ರಾಮದ ಜಗದೀಶ ಯಲ್ಲಾಪುರ (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಪ್ರೇಮ ಪ್ರಕರಣ ವಿಫಲಗೊಂಡ ಹಿನ್ನೆಲೆಯಲ್ಲಿ ಬೇಸತ್ತು ಕ್ರಿಮಿನಾಶಕ ಸೇವಿಸಿ…

 • ಹಾವೇರಿ: ಕೈಕೊಟ್ಟ ಹತ್ತಿ ಬೆಳೆ, ವಿಷ ಸೇವಿಸಿ ರೈತ ಆತ್ಮಹತ್ಯೆ

  ಹಾವೇರಿ: ಸಾಲ ಬಾಧೆಗೆ ಬೇಸತ್ತು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಣಿಬೆನ್ನೂರು ತಾಲೂಕಿನ ಚೌಡಯ್ಯದಾನಪುರದಲ್ಲಿ ನಡೆದಿದೆ. ಹನುಮಂತಪ್ಪ ನೀಲಪ್ಪ ಬನ್ನಿಮಟ್ಟಿ(61) ಮೃತ ರೈತ. ತಾಲೂಕಿನ ಹೊನ್ನತ್ತಿ ಕೆವಿಜಿ ಬ್ಯಾಂಕ್‍ನಲ್ಲಿ ಇಪ್ಪತ್ತು ಸಾವಿರ ರೂ. ಹಾಗೂ ಬೇರೆ…

 • ಮಲೆನಾಡಿನ ಮಳೆಗೆ ಹಾವೇರಿಯಲ್ಲಿ ನೆರೆ

  ಹಾವೇರಿ: ನೆರೆಯ ಮಲೆನಾಡು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಹರಿದಿರುವ ಪ್ರಮುಖ ನದಿಗಳಾದ ತುಂಗಭದ್ರಾ, ವರದಾ ಹಾಗೂ ಧರ್ಮಾ, ಕುಮದ್ವತಿ ನದಿಗಳು ಅಪಾಯಮಟ್ಟಕ್ಕೆ ತಲುಪುತ್ತಿದ್ದು, ನದಿ ಪಾತ್ರದ ಜನರಲ್ಲಿ ಭೀತಿ ಮೂಡಿಸಿವೆ. ಪಕ್ಕದ ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ…

 • ಪ್ರತಿ ಕುಟುಂಬಕ್ಕಿದೆ 100 ಮಾನವ ದಿನಗಳ ಕೆಲಸ

  ಹಾವೇರಿ: ಯಲಗಚ್ಚ ಗ್ರಾಮದಲ್ಲಿ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೋಜಗಾರ್‌ ಹಾಗೂ 1ನೇ ಸುತ್ತಿನ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ನಡೆಯಿತು. ತಾಲೂಕು ಸಾಮಾಜಿಕ ಲೆಕ್ಕ ಪರಿಶೊಧಕ ಸಂಪತ್ತಕುಮಾರ ಪೂಜಾರ…

 • ಕೃಷ್ಣಮೃಗ ಹಾವಳಿಗೆ ಕಂಗೆಟ್ಟ ಅನ್ನದಾತ

  ಹಾವೇರಿ: ಮುಂಗಾರು ಮಳೆ ಸಕಾಲಕ್ಕೆ ಬಾರದೆ ಕಂಗಾಲಾಗಿದ್ದ ಜಿಲ್ಲೆಯ ರೈತರು, ಇದೀಗಷ್ಟೇ ಸುರಿದ ಮಳೆಯಿಂದಾಗಿ ಬಿತ್ತನೆ ಆರಂಭಿಸಿದ್ದಾರೆ. ಬಿತ್ತನೆ ಮಾಡುತ್ತಿರುವ ಈ ಸಮಯದಲ್ಲಿ ಜಿಂಕೆ ಹಾಗೂ ಕೃಷ್ಣಮೃಗಗಳ ಹಾವಳಿ ರೈತರ ನೆಮ್ಮದಿ ಕೆಡಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಸಮರ್ಪಕ…

 • ಕೌರವನ ಕ್ಷೇತ್ರದಲ್ಲಿ ಅನರ್ಹತೆ ಕಲರವ

  ಹಾವೇರಿ: ಜಿಲ್ಲೆಯ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ ವಿಧಾನಸಭೆ ಸ್ಪೀಕರ್‌ ಅವರಿಂದ ಅನರ್ಹತೆಗೊಳಗಾಗುತ್ತಿದ್ದಂತೆ ಕ್ಷೇತ್ರದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಪಾಟೀಲ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಶಾಸಕ ಸ್ಥಾನದ ಅನರ್ಹತೆ ಪ್ರಶ್ನಿಸಿ ಬಿ.ಸಿ. ಪಾಟೀಲ ಸೇರಿದಂತೆ ಅನರ್ಹತೆಗೊಳಗಾದ ಶಾಸಕರು ನ್ಯಾಯಾಲಯದ ಮೆಟ್ಟಿಲೇರುವ…

 • ಆ್ಯಪ್‌ ಮೂಲಕವೇ ಪ್ರಗತಿ ವಿವರ ನೀಡಿ

  ಹಾವೇರಿ: ಪ್ರತಿ ತಿಂಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಯೋಜನೆಯಡಿ ಸಾಧಿಸಿರುವ ಪ್ರಗತಿಯ ಆರ್ಥಿಕ ಮತ್ತು ಭೌತಿಕ ಸಾಧನೆ ವಿವರವನ್ನು ಆ್ಯಪ್‌ ಮೂಲಕವೇ ಮಾಹಿತಿ ನೀಡಬೇಕು ಎಂದು ಅನುಷ್ಠಾನಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚಿಸಿದರು. ಜಿಲ್ಲಾಧಿಕಾರಿಗಳ…

 • ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

  ಹಾವೇರಿ: ಡೆಂಘೀ, ಮಲೇರಿಯಾ ಒಳಗೊಂಡಂತೆ ಸಾಂಕ್ರಾಮಿಕ ರೋಗಗಳ ತಡೆಗೆ ಸೊಳ್ಳೆಗಳ ನಿಯಂತ್ರಣ, ಗಟಾರಗಳ ಸ್ವಚ್ಛತೆ ಹಾಗೂ ನಿಯಮಿತವಾಗಿ ಧೂಮೀಕರಿಸುವ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಾಂಕ್ರಾ ಮಿಕ ರೋಗಗಳ ತಡೆ…

 • ಬ್ಯಾಡಗಿ ‘ಜಲಶಕ್ತಿ’ಗೆ ಅಳವಡಿಸಲು ಕೋರಿಕೆ

  ಹಾವೇರಿ: ಜಿಲ್ಲೆಯ ಅತ್ಯಂತ ಬರಪೀಡಿತ ಒಣ ಭೂಮಿ ಹೊಂದಿರುವ ಹಾಗೂ ಎತ್ತರ ಭೂ ಪ್ರದೇಶವಾಗಿರುವ ಬ್ಯಾಡಗಿ ತಾಲೂಕನ್ನು ಜಲಶಕ್ತಿ ಯೋಜನೆಗೆ ಅಳವಡಿಸುವಂತೆ ಕೇಂದ್ರದ ಜಲಶಕ್ತಿ ಅಭಿಯಾನದ ಅಧಿಕಾರಿಗಳಿಗೆ ಕೋರಲಾಗುವುದು ಎಂದು ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ…

 • ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗದಿರಲಿ ಟಿವಿ-ಮೊಬೈಲ್

  ಹಾವೇರಿ: ಪ್ರಸ್ತುತ ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಮಟ್ಟದಲ್ಲಿ ಪ್ರೌಢಶಾಲೆಯನ್ನು ಅಂದಿನ ಕಾಲದಲ್ಲಿ ಸ್ಥಾಪಿಸಿ ಶಿವಬಸಪ್ಪ ಬಶೆಟ್ಟಿಯವರು ಬಡ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದಾರೆ ಎಂದು ಮಾಜಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು. ತಾಲೂಕಿನ ಕುರುಬಗೊಂಡ ಗ್ರಾಮದ…

 • ಬೋಧನೆಗೆ ಹೊಸ ತಂತ್ರಜ್ಞಾನ ಬಳಸಿ

  ಹಾವೇರಿ: ಹೊಸ ಹೊಸ ತಂತ್ರಜ್ಞಾನಗಳು ಆವಿಷ್ಕಾರವಾಗುತ್ತಿದ್ದು ಉಪನ್ಯಾಸಕರು ಅವುಗಳ ಬಳಕೆ ಮೂಲಕ ಮಕ್ಕಳಿಗೆ ಶಿಕ್ಷಣನೀಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹೇಳಿದರು. ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಿಜ್ಞಾನ ಉಪನ್ಯಾಸಕರ ಸಂಘ ವತಿಯಿಂದ ವಿಜ್ಞಾನ…

 • ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

  ಹಾವೇರಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ಹಾಸ್ಟೆಲ್ಗಳು ಅವ್ಯವಸ್ಥೆಯ ಆಗರವಾಗಿದ್ದು, ಸರ್ಕಾರದ ಹಣ ಈ…

 • ಸಾಲಮನ್ನಾ ಫಲಾನುಭವಿ ಖಾತೆಗೆ ಹಣ ಜಮೆ ಮಾಡಿ

  ಹಾವೇರಿ: ರಾಜ್ಯ ಸರ್ಕಾರದ ಸಾಲಮನ್ನಾ ಘೋಷಣೆಯಿಂದ ಜಿಲ್ಲೆಯ ಬಹುತೇಕ ರೈತರಿಗೆ ಏನೂ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಸಾಲಮನ್ನಾ ಫಲಾನುಭವಿ ರೈತರ ಖಾತೆಗೆ ಹಣ ಜಮೆ ಮಾಡಬೇಕು. ಇಲ್ಲದಿದ್ದರೆ ಆಗಸ್ಟ್‌ 19ರಂದು ಜಿಲ್ಲಾಡಳಿತಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರಾಜ್ಯ…

 • ರೈತರ ಸಾಲಮನ್ನಾ ಮರೀಚಿಕೆ!

  ಹಾವೇರಿ: ರಾಜ್ಯದ ಸಮ್ಮಿಶ್ರ ಸರ್ಕಾರ ರೈತರಿಗಾಗಿ ಘೋಷಿಸಿದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಎರಡು ಲಕ್ಷ ರೂ. ವರೆಗಿನ ಸಾಲಮನ್ನಾ ಯೋಜನೆಯ ಲಾಭ ಜಿಲ್ಲೆಯ ಎಲ್ಲ ರೈತರಿಗೆ ಸಿಗದೆ ಸಾಲಮನ್ನಾ ಇನ್ನೂ ಮರೀಚಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1.12 ಲಕ್ಷ ರೈತರು ವಿವಿಧ…

 • ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಮೌನ ಸೇವಕ ಕರಿಯಪ್ಪ !

  ಹಾವೇರಿ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳು, ಹೋರಾಟಕ್ಕೆ ರೂಪಕೊಟ್ಟ ಮೌಲ್ಯಗಳು ಜಿಲ್ಲೆಯಲ್ಲಿ ಸಮೃದ್ಧವಾಗಿವೆ. ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದವರ ಆತ್ಮಾರ್ಪಣೆಯ ರೋಮಾಂಚಕ ಕಥೆಗಳಲ್ಲಿ ಸಂಗೂರ ಕರಿಯಪ್ಪನವರ ಹೋರಾಟ ವಿಶಿಷ್ಟವಾಗಿದ್ದು, ರೋಮಾಂಚನಕಾರಿಯಾಗಿದೆ. ಸಂಗೂರಿನ ಕರಿಯಪ್ಪ ಯರೇಶಿಮೆ ಅವರು ತಿಲಕರ ‘ಕೇಸರಿ’ ಪತ್ರಿಕೆ ಹಾಗೂ…

 • ಉರ್ದು ಶಾಲೆ ನಿವೇಶನಕ್ಕೆ ಪ್ರಸ್ತಾವನೆ ಸಲ್ಲಿಸಿ

  ಹಾವೇರಿ: ಜಿಲ್ಲೆಯಲ್ಲಿರುವ ಉರ್ದು ಶಾಲೆಗಳಿಗೆ ಹಾಗೂ ಮೌಲಾನಾ ಆಜಾದ್‌ ಶಾಲೆಗಳಿಗೆ ಬೇಕಾಗಿರುವ ನಿವೇಶನ ಕುರಿತಂತೆ ವಾರದೊಳಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಧಾನಮಂತ್ರಿಗಳ…

 • ಕ್ಷಯರೋಗ ಪತ್ತೆಗೆ ಮನೆ ಮನೆಗೆ ಭೇಟಿ: ಲೀಲಾವತಿ

  ಹಾವೇರಿ: ಕ್ಷಯರೋಗ ಪತ್ತೆ ಹಚ್ಚಲು ಮನೆ ಮನೆಗೆ ಭೇಟಿ ನೀಡುವ ಮೂಲಕ ಸಮೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ ಹೇಳಿದರು. ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ…

 • ಸಹಕಾರ ಕ್ಷೇತ್ರ ಸುಧಾರಣೆ ಅಗತ್ಯ

  ಹಾವೇರಿ: ಸಹಕಾರ ಕ್ಷೇತ್ರದ ಆರ್ಥಿಕ ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರು ನಮ್ಮನ್ನು ಬಿಟ್ಟು ಹೋಗುವ ಕಾಲ ದೂರವಿಲ್ಲ. ಈ ಹಿನ್ನೆಲೆಯಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ…

ಹೊಸ ಸೇರ್ಪಡೆ