Karnataka Assembly

 • ನನಗೆ ಮಾತನಾಡಲು ಅವಕಾಶ ಕೊಡಿ; ಸ್ಪೀಕರ್ v/s ರಾಮಲಿಂಗಾ ರೆಡ್ಡಿ ಜಟಾಪಟಿ

  ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಳೆ ವಂದನಾ ನಿರ್ಣಯ ಚರ್ಚೆ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ವಿಚಾರದಲ್ಲಿ ಅಸಮಾಧಾನಗೊಂಡ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ನಡೆಯಿತು. ತನಗೆ ಮಾತನಾಡಲು…

 • ಶಾಸಕರೇ, ಸದನದ ಗೌರವ ಕಾಪಾಡಿ

  ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್‌ ಪೀಠ ಅಲಂಕರಿಸಿದ ರಮೇಶ್‌ ಕುಮಾರ್‌, ಸದನದ ಎಲ್ಲಾ ಶಾಸಕರಿಗೂ ಮೊದಲ ದಿನವೇ ನೀತಿ ಪಾಠ ಹೇಳಿ, ಸದನದ ಗೌರವ ಕಾಪಾಡುವಂತೆ ಮನವಿ ಮಾಡಿದರು. ರಾಜಪ್ರಭುತ್ವವನ್ನು ಹೊಡೆದು ಹಾಕಿದ ಜನತೆ, ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ. ಶಾಸಕರು…

 • ರಮೇಶ್‌ ಕುಮಾರ್‌ ಸ್ಪೀಕರ್‌ ಸರ್ವಾನುಮತದಿಂದ ಆಯ್ಕೆ

  ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಕಾಂಗ್ರೆಸ್‌ನ  ಶ್ರೀನಿವಾಸಪುರ ಶಾಸಕ ರಮೇಶ್‌ಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಸುರೇಶ್‌ಕುಮಾರ್‌ ಕೊನೇ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಪರಿಣಾಮ ರಮೇಶ್‌ಕುಮಾರ್‌ ಸರ್ವಾನುಮತದಿಂದ ಆಯ್ಕೆಯಾದರು. ಶುಕ್ರವಾರ ವಿಧಾನಸಭೆಯಲ್ಲಿ ಹಂಗಾಮಿ ಸ್ಪೀಕರ್‌…

 • ಬಹುಮತ ಸಾಬೀತು ಪ್ರಕ್ರಿಯೆಯ ಲೈವ್‌ ಸ್ಟ್ರೀಮಿಂಗ್‌: ಸುಪ್ರೀಂ ಆದೇಶ

  ಹೊಸದಿಲ್ಲಿ : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಶನಿವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ ನಡೆಯುವ ಬಹುಮತ ಸಾಬೀತು ಪ್ರಕ್ರಿಯೆಯ ಲೈವ್‌ ಸ್ಟ್ರೀಮಿಂಗ್‌ ಗೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ. ಬಹುಮತ ಸಾಬೀತು ಪ್ರಕ್ರಿಯೆಯ ಪಾರದರ್ಶಕತೆಯನ್ನು…

 • ಬಿಎಸ್‌ವೈ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ

  ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ.ಎಸ್‌. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಬುಧವಾರ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರನ್ನು ಮುಧೋಳ ಶಾಸಕ ಗೋವಿಂದ ಕಾರಜೋಳ ಸೂಚಿಸಿದರು. ಶಿರಸಿ ಶಾಸಕ…

 • ಬೆಳಗ್ಗೆ ಬಿಜೆಪಿ, ಸಂಜೆ ಕಾಂಗ್ರೆಸ್‌ಗೆ ಜೈ! 

  ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಕೆಪಿಜೆಪಿ ಶಾಸಕ ಶಂಕರ್‌ ಸಂಜೆ ವೇಳೆಗೆ ಕೆಪಿಸಿಸಿ ಕಚೇರಿಯಲ್ಲಿ ಪ್ರತ್ಯಕ್ಷರಾಗಿ ಕುತೂಹಲ ಮೂಡಿಸಿದರು. ಬೆಳಗ್ಗೆ  ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಬಿ.ಎಸ್‌. ಯಡಿಯೂರಪ್ಪ…

 • ಜೆಡಿಎಸ್‌ ಶಾಸಕರಿಗೆ 100 ಕೋಟಿ ಆಮಿಷ 

  ಬೆಂಗಳೂರು: ಜೆಡಿಎಸ್‌ ಶಾಸಕರಿಗೆ ಬಿಜೆಪಿಯವರು 100 ಕೋಟಿ ರೂ.ಜತೆಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಆಮಿಷವೊಡ್ಡುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಧಿಕಾರ…

 • ಸಿದ್ದರಾಮಯ್ಯ ಕೈ ಕುರುಬ ಸಮುದಾಯವೂ ಹಿಡಿದಿಲ್ಲ

  ಮೈಸೂರು: ಸಿದ್ದರಾಮಯ್ಯ ಸ್ಪರ್ಧಿಸಿದ್ದಾರೆ ಎಂಬ ಕಾರಣಕ್ಕೆ ಜಿದ್ದಾಜಿದ್ದಿನ ಕಣ ಎಂದು ಬಿಂಬಿತವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪರಂಪರಾಗತ ಮತಬ್ಯಾಂಕ್‌, ಕುರುಬ ಸಮುದಾಯ ಮತ್ತು ಅಹಿಂದ ವರ್ಗಗಳ ಮತಬುಟ್ಟಿಗೂ ಕೈ ಹಾಕಿದ್ದ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ, ಭಾರೀ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು ಎಂದು…

 • ಆಹ್ವಾನ ಬರದಿದ್ದರೆ ಸುಪ್ರೀಂಗೆ ಮನವಿ

  ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ವಿ.ಆರ್‌.ವಾಲಾ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟಕ್ಕೆ ಆಹ್ವಾನ ನೀಡದೇ ಇದ್ದಲ್ಲಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ಚಿಂತನೆ ನಡೆಸುತ್ತಿದೆ. ಅದಕ್ಕಾಗಿಯೇ ಚಂಡೀಗಢ ಪ್ರವಾಸದಲ್ಲಿದ್ದ ರಾಜ್ಯಸಭಾ ಸದಸ್ಯ ಅಭಿಷೇಕ್‌ ಮನು ಸಿಂಘ್ವಿಯವರನ್ನು ತುರ್ತಾಗಿ ನವದೆಹಲಿಗೆ ಕಾಂಗ್ರೆಸ್‌ ವರಿಷ್ಠ ಮಂಡಳಿ ಕರೆಸಿಕೊಂಡಿದೆ. “ಈಗಾಗಲೇ ರಾಜ್ಯಪಾಲರನ್ನು…

 • ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ

  ಬೆಂಗಳೂರು: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಹಿನ್ನೆಲೆಯಲ್ಲಿ ಯಾರಿಗೆ ಸರ್ಕಾರ ರಚನೆಗೆ ಅವಕಾಶ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು ಸರ್ಕಾರ ರಚನೆಗೆ ಅತಿ ದೊಡ್ಡ ಪಕ್ಷವಾದ ಬಿಜೆಪಿಗೆ ರಾಜ್ಯಪಾಲ ವಜೂಭಾಯ್‌ ವಾಲಾ ಆಹ್ವಾನ ನೀಡಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಹದಿನೈದು ದಿನ ಕಾಲಾವಕಾಶ ನೀಡಲಾಗಿದೆ. ಈ ನಿಟ್ಟಿನಲ್ಲಿ…

 • ಕಾಂಗ್ರೆಸ್‌ ನಾಯಕನ ಆಯ್ಕೆ ಕುತೂಹಲ

  ಬೆಂಗಳೂರು: ಸರ್ಕಾರ ರಚನೆಯಲ್ಲಿ ಪಾತ್ರ ವಹಿಸಲು ಮುಂದಾಗಿರುವ ಕಾಂಗ್ರೆಸ್‌ ಇದುವರೆಗೂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಶಾಸಕಾಂಗ ಪಕ್ಷದ ನಾಯಕರ ರೇಸ್‌ನಲ್ಲಿ ಹಿರಿಯ ನಾಯಕರಾದ ಆರ್‌.ವಿ.ದೇಶಪಾಂಡೆ, ಎಚ್‌.ಕೆ. ಪಾಟೀಲ್‌, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್‌ ಹಾಗೂ ಡಿ. ಕೆ.ಶಿವಕುಮಾರ್‌ ಇದ್ದಾರೆ. ಜೆಡಿಎಸ್‌ನೊಂದಿಗೆ ಸರ್ಕಾರ ರಚನೆ ಮಾಡಿದರೆ,…

 • ವಿಧಾನಸಭೆ ಪ್ರವೇಶಿಸಿದ ಸಪ್ತ ಮಹಿಳಾ ಮಣಿಗಳು

  ಬೆಂಗಳೂರು: ಮಹಿಳೆಯರೇ ಮುನ್ನಡೆಸುತ್ತಿರುವ ಆಲ್‌ ಇಂಡಿಯಾ ಮಹಿಳಾ ಎಂಪವರ್‌ವೆುಂಟ್‌ ಪಾರ್ಟಿ (ಎಂಇಪಿ) ಹಾಗೂ ಭಾರತೀಯ ಜನಶಕ್ತಿ ಕಾಂಗ್ರೆಸ್‌ ಪಾರ್ಟಿಗಳು ಈ ಬಾರಿಯ ಚುನಾವಣಾ ಕಣದಲ್ಲಿ ಸಾಕಷ್ಟು ಸದ್ದು ಮಾಡಿದ್ದವು. ಆದರೆ, 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದು ಕೇವಲ ಏಳು ಮಂದಿ ಮಹಿಳೆಯರು…

 • ಚುಟುಕು ವಿಶ್ಲೇಷಣೆ 

  ಮುಖ್ಯಮಂತ್ರಿಯಾಗಿ ಚುನಾವಣೆಯ ನಾಯಕತ್ವ ವಹಿಸಿದ್ದ ಸಿದ್ದರಾಮಯ್ಯ ಅವರ ಅಹಿಂದ ವರ್ಚಸ್ಸು ಮತ್ತು ಸರಕಾರದ ಜನಪ್ರಿಯ ಕಾರ್ಯಕ್ರಮಗಳು ನೆರವಾಗಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದಾಗಿತ್ತು. ಆದರೆ ಅದು ಹುಸಿಯಾಗಿದೆ. ಕಳೆದ ಚುನಾವಣೆಯಲ್ಲಿ 122 ಸ್ಥಾನ ಗಳಿಸಿದ್ದ ಕಾಂಗ್ರೆಸ್‌ 78 ಸ್ಥಾನಗಳಿಗೆ ಕುಸಿದಿದೆ….

 • ಕೈ ಹಿಡಿಯದ ಕನ್ನಡ, ಕಾಪಾಡದ ಧರ್ಮ 

  ಬೆಂಗಳೂರು:  ಐದು ವರ್ಷ ಯಶಸ್ವಿ ಸರಕಾರ ನಡೆಸಿ ಭಾಗ್ಯಗಳ ಕೊಡುಗೆ ನೀಡಿಯೂ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫ‌ಲವಾಗಿದೆ. ಅದಕ್ಕೆ ಪ್ರಮುಖವಾಗಿ ಕಾಂಗ್ರೆಸ್‌ನ ಸಾಧನೆಗಳ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಂಡ ಕೆಲವು ನಿರ್ಧಾರಗಳು ಪಕ್ಷದ ಹಿನ್ನಡೆಗೆ ಪ್ರಮುಖ ಕಾರಣ ಎಂಬ…

 • ಪಾರಮ್ಯ ಮೆರೆದ ಬಿಎಸ್‌ವೈ

  ಶಿವಮೊಗ್ಗ: ಮತ್ತೆ ಯಡಿಯೂರಪ್ಪ ಗೆದ್ದಿದ್ದಾರೆ. ಶಿಕಾರಿಪುರದಲ್ಲಿ ತಮ್ಮ ಹಿಡಿತ ಏನು ಎಂಬುದನ್ನು ಎಂಟನೇ ಬಾರಿ ಗೆಲ್ಲುವ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ. ತಾವು ಮಾತ್ರವಲ್ಲ, ಜಿಲ್ಲೆಯಲ್ಲಿ ದೊಡ್ಡ ತಂಡದೊಂದಿಗೆ ಅರ್ಹ ಗೆಲುವು ಸಾಧಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ ಯಡಿಯೂರಪ್ಪ ಮತ್ತೆ…

 • ‘ಕೈ’ಗೆ ಸೀಟು ಕಡಿಮೆಯಾದ್ರೂ ಮತ ಹಂಚಿಕೆಯಲ್ಲಿ ಹೆಚ್ಚಳ

  ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದ ಸ್ಥಾನಗಳ ಸಂಖ್ಯೆ ಗಣನೀಯವಾಗಿ ಕುಸಿದರೂ, ಮತ ಹಂಚಿಕೆಯಲ್ಲಿ ಹೆಚ್ಚಳವಾಗಿರುವುದು ಪಕ್ಷದ ನಾಯಕರಿಗೆ ಸ್ವಲ್ಪ ನಿರಾಳತೆ ತಂದಿದೆ. 103 ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿಗಿಂತಲೂ ಶೇ.2ರಷ್ಟು ಹೆಚ್ಚು ಮತಗಳನ್ನು ಕಾಂಗ್ರೆಸ್‌ ಪಡೆದುಕೊಂಡಿದೆ. ಅಷ್ಟೇ ಅಲ್ಲ, 2013ರ ಚುನಾವಣೆಯಲ್ಲಿ ಶೇ.36.6ರಷ್ಟು ಇದ್ದ…

 • ನೋಟಾ ಅಭಿಯಾನಕ್ಕೆ ನೋ ಎಂದ ಮತದಾರ 

  ಬೆಂಗಳೂರು: ರಾಜ್ಯಾದ್ಯಂತ ಹಲವೆಡೆ ನೋಟಾ ಅಭಿಯಾನ ನಡೆಸಲಾಗುತ್ತದೆ ಎಂದು ಹೇಳಿಕೊಂಡಿದ್ದರೂ, ಆ ಮಟ್ಟಿಗೆ ಚಲಾವಣೆಯಾಗಿದ್ದು ಕಂಡುಬರುತ್ತಿಲ್ಲ. ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರರನ್ನು…

 • ಮ್ಯಾಜಿಕ್‌ ಸಂಖ್ಯೆ ತಲುಪದ ಬಿಜೆಪಿ

  ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ ರಾಜ್ಯ ವಿಧಾನಸಭೆ ಚುನಾವಣೆ ಫ‌ಲಿತಾಂಶ ಪ್ರಕಟವಾಗಿದ್ದು, ಸಮೀಕ್ಷೆಗಳು ಹೇಳಿದಂತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಬಿಜೆಪಿ 103 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ…

 • ಚಿಕ್ಕಮಗಳೂರಲ್ಲಿ  ಕಮಲ ಕಮಾಲ್‌

  ಚಿಕ್ಕಮಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯ ಅಲೆಯ ಎದುರು ಜೆಡಿಎಸ್‌ ಜಿಲ್ಲೆಯಲ್ಲಿ ಕೊಚ್ಚಿ ಹೋಗಿದ್ದರೆ, ಕೇವಲ 1 ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾದ ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಕಳೆದ…

 • ಉತ್ತರ ಕನ್ನಡ : ಬಿಜೆಪಿ 4, ಕಾಂಗ್ರೆಸ್‌ 2ರಲ್ಲಿ  ತೃಪ್ತಿ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕರಾವಳಿಯ ಮೂರು ಕ್ಷೇತ್ರಗಳನ್ನು ಬಿಜೆಪಿ ತನ್ನ ಮಡಿಲಿಗೆ ಹಾಕಿಕೊಂಡಿದೆ. ಭಟ್ಕಳ ಮತ್ತು ಕುಮಟಾ, ಕಾರವಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹಿಂದಿಕ್ಕಿದೆ. ಕುಮಟಾದಲ್ಲಿ ಎಲ್ಲಾ ಬಂಡಾಯವನ್ನು ಮೀರಿ ಹುಬ್ಬೇರಿಸುವ ಅಂತರದಿಂದ…

ಹೊಸ ಸೇರ್ಪಡೆ